ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Posted by Vidyamaana on 2023-03-09 07:37:57 |

Share: | | | | |


ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

ಪುತ್ತೂರು: ರಾಜ್ಯ ಸರಕಾರದ 2018ನೇ ಸಾಲಿನ ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿಗೆ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹಾಗೂ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ ಡಾ. ಯು.ಪಿ. ಶಿವಾನಂದ್ ಆಯ್ಕೆಯಾಗಿದ್ದಾರೆ.

ಇವರಿಗೆ ಮಾರ್ಚ್ 13ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ‌.

ವಿವಿಧ ಆಂದೋಲನಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿರುವ ಡಾ. ಯು.ಪಿ. ಶಿವಾನಂದ್ ಅವರು, ಕೃಷಿ ಜಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ಶಿಕ್ಷಣ ಮತ್ತು ಉದ್ಯೋಗ ಮಾಹಿತಿ ಕೇಂದ್ರವನ್ನು ಆರಂಭಿಸಿರುವುದಲ್ಲದೇ, ಇಂತಹ ಹಲವು ಪ್ರಥಮಗಳಿಗೆ ನಾಂದಿ ಹಾಡಿದ್ದಾರೆ. ಬಲಾತ್ಕಾರದ ಬಂದ್ ವಿರುದ್ಧದ ಹೋರಾಟ, ಭ್ರಷ್ಟಾಚಾರ ವಿರುದ್ಧದ ಹೋರಾಟ, ವಾರಾಂತ್ಯ ಕರ್ಫ್ಯೂ, ಶುದ್ಧ ಕುಡಿಯುವ ನೀರಿಗಾಗಿ ಅಭಿಯಾನ ಮೊದಲಾದ ಹೋರಾಟಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದು, ರಾಜ್ಯ ಮಟ್ಟದಲ್ಲಿ ಶ್ಲಾಘನೆಗೆ ಪಾತ್ರವಾಗಿದ್ದಾರೆ.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ: ಸದಾನಂದ ಗೌಡ

Posted by Vidyamaana on 2024-03-21 11:41:25 |

Share: | | | | |


ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ: ಸದಾನಂದ ಗೌಡ

ಬೆಂಗಳೂರು: ಕಾಂಗ್ರೆಸ್‌ ನಿಂದ ನನಗೆ ಆಹ್ವಾನ ಬಂದಿರುವುದು ನಿಜ. ಆದರೆ ನಾನು, ಕಾಂಗ್ರೆಸ್‌ ಸೇರಲ್ಲ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದರು.


ಬೆಂಗಳೂರಿನ ಸಂಜಯ ನಗರ ನಿವಾಸದಲ್ಲಿ ಗುರುವಾರ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಪಕ್ಷ ಶುದ್ದೀಕರಣ ಮಾಡುವತ್ತ ಗಮನ ಹರಿಸುತ್ತೇನೆ’ ಎಂದು ಹೇಳಿದರು. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ ಎಂದರು

ಲಕ್ಷದ್ವೀಪದಿಂದ ಮಂಗಳೂರಿಗೆ ಬಂತು ಹೈಸ್ಪೀಡ್ ಪ್ಯಾಸೆಂಜರ್ ಹಡಗು: ಟಿಕೆಟ್ ದರ ಕೇಳಿದ್ರೆ ಅಚ್ಚರಿ ಪಡ್ತೀರಾ

Posted by Vidyamaana on 2024-05-03 21:42:15 |

Share: | | | | |


ಲಕ್ಷದ್ವೀಪದಿಂದ ಮಂಗಳೂರಿಗೆ ಬಂತು ಹೈಸ್ಪೀಡ್ ಪ್ಯಾಸೆಂಜರ್ ಹಡಗು: ಟಿಕೆಟ್ ದರ ಕೇಳಿದ್ರೆ ಅಚ್ಚರಿ ಪಡ್ತೀರಾ

ಕೋವಿಡ್ 19 ಸಾಂಕ್ರಾಮಿಕ ರೋಗದ ನಂತರ ಸ್ಥಗಿತಗೊಂಡಿದ್ದ ಮಂಗಳೂರಿನಿಂದ ಲಕ್ಷದ್ವೀಪ ಪ್ರಯಾಣಿಕ ಹಡಗು ಪುನರಾರಂಭಗೊಂಡಿದೆ. ಇದರ ಅಂಗವಾಗಿ, ಲಕ್ಷದ್ವೀಪದಿಂದ ಮಂಗಳೂರಿನ ಹಳೆ ಬಂದರಿಗೆ ಮೊದಲ ಹೈಸ್ಪೀಡ್ ಪ್ರಯಾಣಿಕ ಹಡಗು ಎಂಎಸ್‌ವಿ ಪ್ಯಾರಾಲಿ ಮೇ 2ರಂದು ಗುರುವಾರ ಆಗಮಿಸಿದೆ.ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಪ್ರಯಾಣಿಕ ಹಡಗು ಸಂಚಾರ ಸ್ಥಗಿತಗೊಂಡಿತ್ತು. ಸೇವೆಯನ್ನು ಪುನರಾರಂಭಿಸುವ ಭರವಸೆ ಪ್ರವಾಸಿಗರಲ್ಲಿತ್ತು.


ಲಕ್ಷದ್ವೀಪದಿಂದ ಹಳೆ ಬಂದರಿಗೆ 150 ಪ್ರಯಾಣಿಕರು, 8 ಕಾರ್ಮಿಕರು ಮತ್ತು 3 ಸಿಬ್ಬಂದಿ ಪ್ರಯಾಣಿಕ ಹಡಗಿನಲ್ಲಿ ಬಂದರು. ಮಾಜಿ ಶಾಸಕ ಜೆ.ಆರ್.ಲೋಬೊ ಬಂದರಿನಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದರು.

ಈ ಹಡಗು ಶನಿವಾರ ಲಕ್ಷದ್ವೀಪಕ್ಕೆ ಮರಳಲಿದೆ. ಈ ಮೊದಲು ಲಕ್ಷದ್ವೀಪದಿಂದ ಹಳೆ ಬಂದರಿಗೆ ಹಡಗಿನ ಪ್ರಯಾಣಕ್ಕೆ 13 ಗಂಟೆ ಸಮಯ ತೆಗೆದುಕೊಳ್ಳುತ್ತಿತ್ತು ಆದರೆ ಈಗ ಹೈ-ಸ್ಪೀಡ್ ಹಡಗು ಕೇವಲ 7 ಗಂಟೆ ತೆಗೆದುಕೊಳ್ಳುತ್ತದೆ. ಪ್ರಯಾಣದ ದರ 450 ರೂ. ಇದೆ.

ಶಾಸಕರ ಇಂದಿನ ಕಾರ್ಯಕ್ರಮ ಜು 23

Posted by Vidyamaana on 2023-07-22 23:25:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 23

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 23 ರಂದು.

ಬೆಳ್ಳಗೆ 10:30 ಯುವ ಬಂಟರ ಸಂಘ ಇದರ ವತಿಯಿಂದ ತುಳುನಾಡ ಬಂಟರ ಪರ್ಬ  ಕಾರ್ಯಕ್ರಮ


ಮದ್ಯಾಹ್ನ 12:00 ಕುಲಾಲ ಸಮಾಜ ಸೇವಾ ಸಂಘ ಇವರಿಂದ ಶಾಸಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ 


ಸಂಜೆ  5 :00

ಬಲ್ನಾಡುವಿನಲ್ಲಿ ಕೆಸರು ಗದ್ಧೆ ಕಾರ್ಯಕ್ರಮ 

ಇತರೆ ಖಾಸಗಿ ಕಾರ್ಯಕ್ರಮಗಳು


ಬೆಳ್ಳಗ್ಗೆ ನಿಡ್ಪಳ್ಳಿ ಹಾಗು ಆರ್ಯಪುವಿನಲ್ಲಿ ಚುನುವನ ಮತ ಗಟ್ಟೆಗೆ ಭೇಟಿ ಮಾಡಲಿದ್ದಾರೆ

ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

Posted by Vidyamaana on 2024-01-22 09:05:12 |

Share: | | | | |


ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

ಶಿವಮೊಗ್ಗ, (ಜನವರಿ 22): ಯುವತಿಯೋರ್ವಳಿಗೆ ಮದುವೆ (Marriage) ನಿಶ್ಚಯವಾಗಿತ್ತು. ಇನ್ನೇನು ಮದುವೆಗೆ ಎರಡು ವಾರ ಬಾಕಿ ಉಳಿದಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದ್ರೆ, ಮದುವೆಯಾಗಬೇಕಿದ್ದ ಯುವತಿಯೇ ಸಾವಿನ ಮನೆ ಸೇರಿದ್ದಾಳೆ. ಹೌದು…ಮದುವೆಗೆ 13 ದಿನಗಳು ಇರುವಾಗ ಯುವತಿಯೊಬ್ಬಳು‌ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. 13 ದಿನದಲ್ಲಿ ಹಸೆಮಣೆ ಏರಬೇಕಿದ್ದ ಚೈತ್ರಾ(26) ನೇಣಿಗೆ ಶರಣಾಗಿದ್ದಾಳೆ.ಚೈತ್ರಗೆ ಮುಂದಿನ ಫೆಬ್ರವರಿ 4 ರಂದು ವಿವಾಹ ನಿಶ್ಚಯವಾಗಿತ್ತು. ಆದ್ರೆ, ಇದೀಗ ಏಕಾಏಕಿ ಚೈತ್ರ ಆತ್ಮಹತ್ಯೆಗೆ ಶರಣಾಗಿದ್ದು,ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಎಂಕಾಂ ಪದವಿ ಪಡೆದಿದ್ದ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಆದರೆ ಮನೆಯವರು ಮನವೊಲಿಸಿದ್ದರು ಎನ್ನಲಾಗಿದೆ.


ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮೈಸೂರು:ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಸಂಸದಗೆ ಘೇರಾವ್, ವಾಪಸ್ ತೆರಳಿದ ಸಿಂಹ

Posted by Vidyamaana on 2024-01-23 07:20:40 |

Share: | | | | |


ಮೈಸೂರು:ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಸಂಸದಗೆ ಘೇರಾವ್, ವಾಪಸ್ ತೆರಳಿದ ಸಿಂಹ

ಮೈಸೂರು, ಜ 23: ಸಂಸದ ಪ್ರತಾಪ್ ಸಿಂಹ ಅವರಿಗೆ  ದಲಿತ ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ.


ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ವಿರೋಧಿ ಘೋಷಣೆ ಕೂಗಿ ಘೇರಾವ್ ಹಾಕಿದ್ದಾರೆ


ಇದರಿಂದ ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿಯೇ ಇದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂಬುದು ಇವರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ


ಮಾಜಿ ತಾಪಂ ಸದಸ್ಯ ಹಾರೋಹಳ್ಳಿ ಸುರೇಶ್ ಮಾತನಾಡಿ, ನೀವೊಬ್ಬ ದಲಿತ ವಿರೋಧಿ. ನಿಮ್ಮ ನಡವಳಿಕೆಯಿಂದ ದಲಿತರ ಭಾವನೆಗೆ ಧಕ್ಕೆಯುಂಟಾಗಿದೆ. ಮಹಿಷ ದಸರಾ ಆಚರಣೆ ಸಂದರ್ಭದಲ್ಲಿ ದಲಿತರನ್ನು ತುಳಿದು ಹಾಕಿ ಬಿಡುತ್ತೇನೆ, ಹೊಸಕಿ ಹಾಕಿ ಬಿಡುತ್ತೇನೆ ಎಂದು ಬೆದರಿಸಿದ್ದ ನೀವು ದಲಿತರ ಜಮೀನಿಗೆ ಏಕೆ ಬರುತ್ತೀರಿ? ಇಲ್ಲಿಂದ ಹೊರ ನಡೆಯಿರಿ ಎಂದು ಹೇಳಿದರು.


ಈ ವೇಳೆ ಸಂಸದ ಪ್ರತಾಪ್ ಸಿಂಹ, "ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ದಲಿತ ವಿರೋಧಿಯಲ್ಲ" ಎಂದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನ ಮಾಡಿದರು. ಆದರೆ ಇದರಿಂದ ಸಮಾಧಾನಗೊಳ್ಳದ ಗ್ರಾಮಸ್ಥರು, "ನೀವು ಏನು ಹೇಳುವುದು ಬೇಡ, ಇಲ್ಲಿಂದ ವಾಪಸ್ ಹೋಗಿ" ಪಟ್ಟು ಹಿಡಿದರು.


ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್ ಗ್ರಾಮಸ್ಥರ ಮನವೊಲಿಸಲು ಪ್ರಯತ್ನಪಟ್ಟರಾದರೂ ಗ್ರಾಮಸ್ಥರು ಮಾತ್ರ ಅದಕ್ಕೆ ಬಗ್ಗಲಿಲ್ಲ. ನಂತರ ಸಂಸದ ಪ್ರತಾಪ್ ಸಿಂಹ ಅವರನ್ನೇ ಅಲ್ಲಿಂದ ವಾಪಸ್ ಹೋಗುವಂತೆ ಶಾಸಕರು ವಿನಂತಿಸಿದರು.


ಇದರಿಂದ ಬೇಸರಗೊಂಡ ಸಂಸದ ಪ್ರತಾಪ್ ಸಿಂಹ ಅಲ್ಲಿಂದ ಹೊರಟು ಹೋದರು. ಆ ಬಳಿಕ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.



Leave a Comment: