ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಪುತ್ತೂರು ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Posted by Vidyamaana on 2023-08-23 07:32:14 |

Share: | | | | |


ಪುತ್ತೂರು  ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಪುತ್ತೂರು: ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಅಸ್ವಸ್ಥಗೊಂಡ ಮಹಿಳೆಯರಿಬ್ಬರನ್ನು ಪುತ್ತೂರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಡಗನ್ನೂರು ನಿವಾಸಿ ಸುಲೇಖ ಮತ್ತು ಅವರ ಮನೆಗೆ ಕೆಲಸಕ್ಕೆ ಬಂದ ಗಿರಿಜಾ ಹಲ್ಲೆಗೊಳಗಾದವರು. ಸುರೇಶ್ ನಾಯ್ಕ ಎಂಬಾತ ಹಲ್ಲೆ ಮಾಡಿದ ಆರೋಪಿ.

ಮಹಿಳೆಯರಿಬ್ಬರು ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸುಲೇಖ ಅವರ ದೂರದ ಸಂಬಂಧಿ ಸುರೇಶ್ ನಾಯ್ಕ ಬಂದು ಸುಲೇಖ ಅವರ ಕುತ್ತಿಗೆ ಬಟ್ಟೆ ಸುತ್ತಿ ಕೊಲೆಗೆ ಯತ್ನಿಸಿದ್ದಾರೆನ್ನಲಾಗಿದೆ. ಇದನ್ನು ನೋಡಿದ ಕೆಲಸಾಕೆ ಗಿರಿಜಾ ಅವರಿಗೂ ಆತ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಗಾಯಾಳುಗಳಿಬ್ಬರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಸಕರ ಇಂದಿನ ಕಾರ್ಯಕ್ರಮ(ಜೂ 9)

Posted by Vidyamaana on 2023-06-09 00:42:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ(ಜೂ 9)

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 9 ರಂದು  ಬೆಳಿಗ್ಗೆ 10 ಗಂಟೆಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಘಟಕ ಉದ್ಘಾಟನೆ ಕಾರ್ಯಕ್ರಮ ಭಾಗಿ.

ಅಪರಾಹ್ನ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಭಾಗಿಯಾಗುವರು.

ಮುಂಬೈ ಹೋರ್ಡಿಂಗ್‌ ದುರಂತ: ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯ ಬಂಧಿಸಿದ ಪೊಲೀಸರು

Posted by Vidyamaana on 2024-05-17 22:41:35 |

Share: | | | | |


ಮುಂಬೈ ಹೋರ್ಡಿಂಗ್‌ ದುರಂತ: ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯ ಬಂಧಿಸಿದ ಪೊಲೀಸರು

ಮುಂಬೈ ನಲ್ಲಿ ಜಾಹೀರಾತು ಫಲಕ ಬಿದ್ದು 16 ಜೀವಗಳನ್ನು ಬಲಿ ಪಡೆದಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮುಂಬೈನ ಘಾಟ್ಕೋಪರ್ ಹೋರ್ಡಿಂಗ್(Hoarding)​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮುಂಬೈನಲ್ಲಿ ಸೋಮವಾರ ಬೀಸಿದ ಬಿರುಗಾಳಿಗೆ ಘಾಟ್ಕೋಪರ್​ನ ಪೆಟ್ರೋಲ್​ ಬಂಕ್ ಮೇಲೆ ಬೃಹತ್ ಗಾತ್ರದ ಹೋರ್ಡಿಂಗ್​ ಬಿದ್ದಿತ್ತು. ಇದರ ಕೆಳಗೆ ಸಾಕಷ್ಟು ಮಂದಿ ಸಿಲುಕಿಕೊಂಡಿದ್ದರು. ಇವರ ರಕ್ಷಣೆಗೆ ಕೇಂದ್ರ ವಿಪತ್ತು ನಿರ್ವಹಣಾ ತಂಡ ಧಾವಿಸಿತ್ತು. ಸುಮಾರು 66 ಗಂಟೆಗಳ ಕಾರ್ಯಾಚರಣೆ ಗುರುವಾರ ಅಂತ್ಯಗೊಂಡಿದ್ದು, 16 ಮಂದಿ ಶವಗಳು ಪತ್ತೆಯಾಗಿದೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

Posted by Vidyamaana on 2023-04-11 09:40:23 |

Share: | | | | |


ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ

ಸಕಲೇಶಪುರ ಮೂಲದ ಧರ್ಮಯ್ಯ ಕಡಬದಲ್ಲಿ ನದಿಗೆ ಜಿಗಿದು ಆತ್ಮಹತ್ಯೆ

Posted by Vidyamaana on 2023-06-25 03:20:26 |

Share: | | | | |


ಸಕಲೇಶಪುರ ಮೂಲದ ಧರ್ಮಯ್ಯ ಕಡಬದಲ್ಲಿ ನದಿಗೆ ಜಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ಸಕಲೇಶಪುರ ಮೂಲದ ವ್ಯಕ್ತಿಯೊಬ್ಬರು ಕಡಬದ ಕೋಡಿಂಬಾಳ ಸಮೀಪ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ. 


ಸಕಲೇಶಪುರ ಬಾಳಗದ್ದೆ ನಿವಾಸಿ ಧರ್ಮಯ್ಯ (40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿರುತ್ತಾರೆ. ಧರ್ಮಯ್ಯ ಮೂರು ದಿನಗಳ ಹಿಂದೆ ಕಡಬದ ಕೋಡಿಂಬಾಳ ಬಳಿ ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಬಂದಿದ್ದರು. ಶುಕ್ರವಾರ  ಕೆಲಸಕ್ಕೆ ಬಾರದೇ ಇವರು ನಾಪತ್ತೆಯಾಗಿದ್ದರು. ಶನಿವಾರ ಬೆಳಗ್ಗೆ ಅವರ ಅವರ ಶೂ ಕುಮಾರಧಾರಾ ನದಿಯ ಕೋರಿಯಾರ್ ಬಳಿ ನದಿ ಬದಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಮತ್ತು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಅನುಮಾನಗೊಂಡ ಕಡಬ ಪೊಲೀಸರು ಹಾಗೂ ಸ್ಥಳೀಯ ಶೌರ್ಯ ತಂಡ, ಆಪತ್ಬಾಂದವ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.  

 ಕಡಬ ಪೊಲೀಸರು ಹಾಗೂ ಸ್ಥಳೀಯ ಶೌರ್ಯ ತಂಡದ ಸದಸ್ಯರು ನದಿಗಿಳಿದು ಕಾರ್ಯಚರಣೆ ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ.


ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಉಪ ನಿರೀಕ್ಷಕ ಆಂಜನೇಯ ರೆಡ್ಡಿ,ಎಎಸ್ಐ ಸುರೇಶ್,ಎಎಸ್ಐ ಶಿವರಾಮ್, ಸಿಬ್ಬಂದಿ ಭವಿತ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಫಝಲ್ ಕೋಡಿಂಬಾಳ ಹಾಗೂ ಸ್ಥಳೀಯ ಶೌರ್ಯ ತಂಡದ ಸದಸ್ಯರಾದ ಮುರಳಿ, ಸೋಮಪ್ಪ, ಆನಂದ, ಅಪರ್ಣಾ, ಆಪತ್ಬಾಂದವ ತಂಡದ ಸದಸ್ಯರಾದ ರಫೀಕ್, ನಾಸಿರ್‌, ಹಮೀದ್, ಅಬ್ಬಾಸ್‌, ಮನೋಜ್, ಅನಿಲ್ ಸೇರಿದಂತೆ ಸ್ಥಳಿಯರು ಮೃತದೇಹ ಪತ್ತೆಹಚ್ಚಲು ಸಹಕರಿಸಿದರು.ಮೃತರ ಪತ್ನಿ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದೂ, ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಮೃತರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

Posted by Vidyamaana on 2024-02-28 07:52:06 |

Share: | | | | |


ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

ಮಂಗಳೂರು : ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.ಗಾಂಜಾ ಪ್ರಕರಣದ ಆರೋಪಿ, ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವುದು ಸ್ಪಷ್ಟವಾಗಿದೆ ಎನ್ನಲಾಗುತ್ತಿದೆ.ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು ಫೆ.17ರಂದು ರೈಲಿನಲ್ಲಿ ಶಾರೂಕ್ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ಇಲಾಖೆ ತೀವ್ರ ತನಿಖೆ ನಡೆಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಆಕೆಯನ್ನು ಕರೆತರಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದರು.


ಶಾರುಕ್ ಶೇಖ್ ಕತಾರಿನಲ್ಲಿದ್ದಾಗ ಪ್ರಕರಣ ಒಂದರಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಎನ್ನಲಾಗಿದೆ. ಆನಂತರ ಊರಿಗೆ ಬಂದು ಡ್ರಗ್ಸ್ ಪೆಡ್ಲರ್ ಆಗಿ ಹಲವು ಯುವ ಜನತೆಯನ್ನು ಡ್ರಗ್ಸ್ ಜಾಲಕ್ಕೆ ಸಿಲುಕಿಸುತ್ತಿದ್ದ ಎನ್ನಲಾಗಿದೆ.ಯಾವುದೇ ಉದ್ಯೋಗ ಇಲ್ಲದ ಶಾರೂಖ್ ಗಾಂಜಾ ವ್ಯವಹಾರದ ಹಣದಲ್ಲೇ ಬದುಕುತಿದ್ದ ಎನ್ನಲಾಗಿದೆ.


ಠಾಣಾಧಿಕಾರಿ ಜೊತೆ ಮಾತನಾಡಿದ ಪುತ್ತಿಲ, ಡ್ರಗ್ ಪೆಡ್ಲರ್ ಶಾರೂಕ್ ನನ್ನು ಶೀಘ್ರ ಬಂಧಿಸಿ ಈತನ ಜಾಲದ ಹಿಂದಿನ ಕಾಣದ ಕೈಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.ಈಗಾಗಲೇ ಉಳ್ಳಾಲದಲ್ಲಿ ಡ್ರಗ್ಸ್ ಜಾಲದಲ್ಲಿ ಯುವತಿಯರನ್ನು ಸಿಲುಕಿಸಿ ಲವ್ ಜಿಹಾದ್ ಮೂಲಕ ಭಯೋತ್ಪಾದನೆಗೆ ಸಿಲುಕಿಸಿರುವುದು ಗೊತ್ತಿರುವಾಗ ಈ ಪ್ರಕರಣವನ್ನು ಗಂಭೀರ ಪ್ರಕರಣವೆಂದು ಪರಿಗಣಿಸಬೇಕು ಎಂದರು. ಉಳ್ಳಾಲದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿರುವುದು ಇಡೀ ಜಿಲ್ಲೆಗೆ ಅಪಾಯಕಾರಿ ಬೆಳವಣಿಗೆ, ಇದನ್ನು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮಾರಕವಾಗಲಿದೆ ಎಂದು ಅರುಣ್ ಪುತ್ತಿಲ ಠಾಣಾಧಿಕಾರಿಗಳಲ್ಲಿ ಹೇಳಿದರು.


ಶಿಕ್ಷಣ ಕಾಶಿಯಾಗಿರುವ ತುಳುನಾಡಿನಲ್ಲಿ ಕೆಲಸ ಇಲ್ಲದ ಕೆಲ ಯುವಕರು ಗಾಂಜಾ ಡ್ರಗ್ಸ್ ವ್ಯವಹಾರ ಮೂಲಕ ವಿದ್ಯಾರ್ಥಿಗಳ ಜೀವನವನ್ನೇ ಹಾಳು ಮಾಡುತ್ತಿದ್ದಾರೆ. ಕೆಲಸ ಇಲ್ಲದೆ ಶೋಕಿ ಮಾಡುವ ಕೆಲವರ ಬಗ್ಗೆ ಇಲಾಖೆ ಗಮನಿಸಬೇಕು ಹಾಗೂ ಪಿಜಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರುಪೊಲೀಸ್ ಇಲಾಖೆಯವರು ಇದಕ್ಕೆ ಸೂಕ್ತ ರೀತಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಆಕೆ ಆಗಮಿಸಿದ ಕೂಡಲೇ ಸೂಕ್ತ ಹಾಸ್ಟೇಲ್ ವ್ಯವಸ್ಥೆಗೆ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಬೇಕೆಂದು ಪುತ್ತಿಲರ ಜೊತೆ ಠಾಣಾಧಿಕಾರಿ ಹೇಳಿದರು.


ಉಳ್ಳಾಲದ ಹಿಂದೂ ಮುಖಂಡ ಅರುಣ್ ಉಳ್ಳಾಲ, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.



Leave a Comment: