ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

Posted by Vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ

Posted by Vidyamaana on 2023-05-15 15:49:26 |

Share: | | | | |


ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಲಿ ಸಿಎಂ ಆಗೋದು ಬಹುತೇಕ ಖಚಿತ ಎನ್ನಲಾಗಿದೆ.

ದೆಹಲಿಯಲ್ಲಿ ತಮ್ಮ ಆಪ್ತ ಶಾಸಕರ ಜೊತೆ ಸಿದ್ದು ಸಭೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೂತನ ಸಿಎಂ ಆಗೋದು ಖಚಿತ ಎನ್ನಲಾಗಿದೆ.

ಇನ್ನು ಸಿದ್ದರಾಮಯ್ಯ ನೂತನ ಸಿಎಂ ಎಂಬುವುದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕೆಲವೇ ಹೊತ್ತಲ್ಲೇ ಉತ್ತರ ಸಿಗಲಿದೆ.

ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ ಈದ್ ಶುಭಾಶಯ

Posted by Vidyamaana on 2024-04-11 15:51:49 |

Share: | | | | |


ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ ಈದ್ ಶುಭಾಶಯ

ನವದೆಹಲಿ : ದೇಶದ ಅನೇಕ ಭಾಗಗಳಲ್ಲಿ ಕಂಡುಬರುವ ಶವ್ವಾಲ್ ತಿಂಗಳ ಚಂದ್ರ ದರ್ಶನವಾಗಿದ್ದು, ನಾಳೆ ದೇಶಾದ್ಯಂತ ಆಡಂಬರದಿಂದ ಈದ್ ಆಚರಿಸಲಾಗುವುದು. ಸಧ್ಯ ದೇಶದ ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದಾರೆ.ಟ್ವೀಟ್ ಮೂಲಕ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ಈದ್-ಉಲ್-ಫಿತರ್ ಶುಭಾಶಯಗಳು

ಬಂಟ್ವಾಳ: ಮೀನು ವ್ಯಾಪಾರದಲ್ಲಿ ನಷ್ಟ ಸಜೀಪ ಪಡು ನಿವಾಸಿ ಸನತ್ ಆತ್ಮಹತ್ಯೆ

Posted by Vidyamaana on 2023-10-24 06:41:54 |

Share: | | | | |


ಬಂಟ್ವಾಳ: ಮೀನು ವ್ಯಾಪಾರದಲ್ಲಿ ನಷ್ಟ   ಸಜೀಪ ಪಡು ನಿವಾಸಿ ಸನತ್ ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.


ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ.


ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.


ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ‌ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದ.


ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. 


ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೈಬರ್ ವಂಚಕರಿಂದ ಪ್ರಾಧ್ಯಾಪಕರಿಗೆ ಪಂಗನಾಮ!

Posted by Vidyamaana on 2024-01-31 15:20:24 |

Share: | | | | |


ಸೈಬರ್ ವಂಚಕರಿಂದ ಪ್ರಾಧ್ಯಾಪಕರಿಗೆ ಪಂಗನಾಮ!

ಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಎಂ.ಶಂಕರ್ ಸೈಬರ್ ವಂಚಕರನ್ನು ನಂಬಿ ಮೋಸ ಹೋಗಿದ್ದಾರೆ. ಪೇಸ್‍ಬುಕ್ ಖಾತೆಯಲ್ಲಿದ್ದ ಲಿಂಕ್‍ನ್ನು ತೆರೆದು ಕ್ರೆಡಿಟ್ ಕಾರ್ಡ್‍ಗೆ ಅಪ್ಲೈ ಮಾಡಿದ್ದಾರೆ.ಟ್ಯಾಕ್ಸ್ ಮತ್ತು ಬ್ಯಾಂಕಿನ ಇತರೆ ಫೀಗಳೆಂದು 40,776 ರೂಪಾಯಿಗಳನ್ನು ಆನ್‍ಲೈನ್‍ನಲ್ಲಿ ಪಡೆದು ನಂತರ ಕ್ರೆಡಿಟ್ ಕಾರ್ಡ್ ನೀಡದೆ, ಹಣವನ್ನು ವಾಪಸ್ಸು ನೀಡದೆ, ಪ್ರಾಧ್ಯಾಪಕರಿಗೆ ಸೈಬರ್ ವಂಚಕರು ಪಂಗನಾಮ ಹಾಕಿದ್ದಾರೆ. ಇದರಿಂದ ಪ್ರಾಧ್ಯಾಪಕರಿಂದ ಶಂಕರ್ ಎಂ, ಚಿಕ್ಕಬಳ್ಳಾಪುರದ ಸಿಇಎನ್ ಪೊಲಸ್​ ಠಾಣೆಯಲ್ಲಿ ಐಪಿಸಿ ಕಲಂ 419, 420 ಸೇರಿದಂತೆ ಐ.ಟಿ.ಆಕ್ಟ್ 66ಡಿ ರಡಿ ದೂರು ದಾಖಲಿಸಿದ್ದಾರೆ.

ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2024-04-08 15:19:41 |

Share: | | | | |


ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ರಾಜ್ಯದಲ್ಲಿ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಎಂದಿಗೂ ಬಡವರ ಹಾಗೂ ನೊಂದವರ ಪರವಾಗಿಯೇ ಕೆಲಸ ಮಾಡಲಿದೆ. ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಗ್ಯಾರಂಟಿ ಫಲಾನುಭವಿಗಳು ಕಾಂಗ್ರೆಸ್ ಗೆ ವೋಟು ಹಾಕುತ್ತಾರೆ ಎಂಬ ಪೀರ್ಣ ನಂಬಿಕೆ ನಮ್ಮಲ್ಲಿದೆ ಎಂದು ಅವರು ಹೇಳಿದರು.

Recent News


Leave a Comment: