ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಯು.ಟಿ ಖಾದರ್ ನೂತನ ಸ್ಪೀಕರ್

Posted by Vidyamaana on 2023-05-22 23:27:47 |

Share: | | | | |


ಯು.ಟಿ ಖಾದರ್ ನೂತನ ಸ್ಪೀಕರ್

ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. 

ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ಕೊನೆ ಗಳಿಗೆಯಲ್ಲಿ ಯು ಟಿ ಖಾದರ್ ಅವರನ್ನು ವಿಧಾನ ಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ. 


ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಪ್ರಧಾನ್ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಅಲ್ಪಸಂಖ್ಯಾತರಿಗೆ ಪ್ರಮುಖ ಹುದ್ದೆ ನೀಡಬೇಕು ಎಂದು ರಾಹುಲ್ ಗಾಂಧಿ ತೀರ್ಮಾನಿಸಿದ್ದು ಸ್ಪೀಕರ್ ರಂತಹ ಪ್ರತಿಷ್ಠಿತ ಹಾಗು ಅತ್ಯಂತ ಜವಾಬ್ದಾರಿಯುತ ಹುದ್ದೆಗೆ ನೀವೇ ಸೂಕ್ತ ಎಂದು ಪಕ್ಷ ತೀರ್ಮಾನಿಸಿದೆ. ನೀವು ಇದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದಕ್ಕೆ ಖಾದರ್ ಒಪ್ಪಿಗೆ ಸೂಚಿಸಿದ್ದು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು  ಕೆಪಿಸಿಸಿ ಅಧ್ಯಕ್ಷ , ಡಿಸಿಎಂ  ಡಿ ಕೆ ಶಿವಕುಮಾರ್  ಅವರ ಜೊತೆಗೂ ಖಾದರ್ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. 

ಮಂಗಳವಾರ 11. 30ಕ್ಕೆ ಯು ಟಿ  ಖಾದರ್ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ  ಡಿ ಕೆ ಶಿವಕುಮಾರ್  ಅವರು ನಾಮಪತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ. 

ಎರಡು ವರ್ಷಗಳ ಬಳಿಕ ಸಂಪುಟ ಪುನಾರಚನೆಯಲ್ಲಿ  ಖಾದರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಪಕ್ಷ ಭರವಸೆ ನೀಡಿದೆ ಎಂದು ತಿಳಿದು ಬಂದಿದೆ.

ಮಂಗಳೂರು ಕ್ಷೇತ್ರದಿಂದ ಸತತ 5 ನೇ ಬಾರಿ ಗೆಲುವು ಸಾಧಿಸಿ ಈ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. ಅವರು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಆರೋಗ್ಯ, ಆಹಾರ ಹಾಗೂ  ಕುಮಾರಸ್ವಾಮಿ ಸರಕಾರದಲ್ಲಿ ವಸತಿ, ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕರಾಗಿ ಕಾರ್ಯನಿರ್ವಹಿಸಿದ್ದರು.

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Posted by Vidyamaana on 2023-11-12 11:32:57 |

Share: | | | | |


ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ, ನ.12: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ.


ಕೊಲೆಯಾದವರನ್ನು ಹಸೀನಾ ಅವರ ಮಕ್ಕಳಾದ ಅಫ್ಘಾನ್(23), ಅಯಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿದೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.


ಈಗಾಗಲೇ ಪೊಲೀಸರು ಸ್ಥಳಕ್ಕಾಗಮಿಸಿ ಡಿವೈಎಸ್ಪಿ ದಿನಕರ ಸ್ಥಳಕ್ಕಾಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ

ನೆಲಮಂಗಲ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್: ಆರೋಪಿ ಆನಂದ್ ಅರೆಸ್ಟ್

Posted by Vidyamaana on 2024-01-12 12:49:05 |

Share: | | | | |


ನೆಲಮಂಗಲ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್: ಆರೋಪಿ ಆನಂದ್  ಅರೆಸ್ಟ್

ನೆಲಮಂಗಲ, ಜ.12: ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ (Rape) ಎಸಗಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ದೊಡ್ಡಬಳ್ಳಾಪುರದ ಆನಂದ್​ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಪೋಷಕರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಸಿದ್ದರು. ಮೊಬೈಲ್ ಕರೆ ಆಧಾರದ ಮೇಲೆ ಯಲಹಂಕ ಬಳಿ ಬಾಡಿಗೆ ಮನೆಯಲ್ಲಿರಿಸಿದ್ದ 14 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಂತ್ರಸ್ತ ಬಾಲಕಿ ದಾಬಸ್ ಪೇಟೆಯಿಂದ ತ್ಯಾಮಗೊಂಡ್ಲುನಲ್ಲಿರುವ ಶಾಲೆಗೆ ದಿನನಿತ್ಯ ಖಾಸಗಿ ಬಸ್​ನಲ್ಲಿ ಬಾಲಕಿ ಹೋಗಿ ಬರುತ್ತಿದ್ದಳು.ದಿನನಿತ್ಯ ಖಾಸಗಿ ಬಸ್ ದಾಬಸ್ ಪೇಟೆ-ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಬಸ್​ನಲ್ಲಿ ಅರೋಪಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು. 2021ರಲ್ಲಿ ಬ್ಯಾಡರಹಳ್ಳಿ ಠಾಣೆಯಲ್ಲಿ ಇದೇ ರೀತಿ ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದನು.

ಆತ್ರೇಯ ಮಲ್ಟಿಸ್ಟೆಷಾಲಿಟಿ ಕ್ಲಿನಿಕ್ ಹಾಗೂ ನಂದಿಕೇಶ್ವರ ಭಜನಾ ಮಂದಿರ ವತಿಯಿಂದ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Posted by Vidyamaana on 2023-12-12 20:25:26 |

Share: | | | | |


ಆತ್ರೇಯ ಮಲ್ಟಿಸ್ಟೆಷಾಲಿಟಿ ಕ್ಲಿನಿಕ್ ಹಾಗೂ ನಂದಿಕೇಶ್ವರ ಭಜನಾ ಮಂದಿರ ವತಿಯಿಂದ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಪುತ್ತೂರು : ಆತ್ರೇಯ ಮಲ್ಟಿಸ್ಟೆಷಾಲಿಟಿ ಕ್ಲಿನಿಕ್ ಹಾಗೂ ನಂದಿಕೇಶ್ವರ ಭಜನಾ ಮಂದಿರ ವತಿಯಿಂದ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಡಿ. 10ರಂದು ಶ್ರೀ ನಂದಿಕೇಶ್ವರ ಭಜನಾ ಮಂದಿರದಲ್ಲಿ ನಡೆಯಿತು.ಬ್ರಹ್ಮಶ್ರೀ ಕೇಮ್ಮಿಂಜೆ ಲಕ್ಷೀಶ ತಂತ್ರಿಗಳು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ಮಾಡಿದರು   ಅರುಣ್ ಜೈನ ಅವರು ಸಭಾಧ್ಯಕ್ಷತೆ ವಹಿಸಿದರು ವೇದಿಕೆಯಲ್ಲಿ ಬ್ರಹ್ಮಶ್ರೀ ಉದಯ ತಂತ್ರಿಗಳು ಉಪಸ್ಥಿತರಿದ್ದರು ಹಾಗೂ ಶಿಬಿರದ ಸದುಪಯೋಗವನ್ನು ಭಜನಾ ಮಂದಿರದ ಭಕ್ತರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಹಾಗೂ ಆರೋಗ್ಯದ ವಿಚಾರದಲ್ಲಿ ಯಾರೂ ಕಡೆಗಣಿಸದೆ ಇಂತಹ ಶಿಬಿರದ ಮುಖಾಂತರ ಈಸಿಜಿ, ರಕ್ತದ ಒತ್ತಡ, ಮಧುಮೇಹ ತಪಾಸಣೆ ಮಾಡಬೇಕು ಎಂದು ಹಿತ ನುಡಿಗಳನ್ನಡಿದರು. ವೇದಿಕೆಯಲ್ಲಿ ಶ್ರೀ ಸುಧೀಂದ್ರ ತಂತ್ರಿ, ಕೆಮ್ಮಿಂಜೆ ಮತ್ತು ಶ್ರೀ ಚಂದ್ರ ಕೂಡಮಾರಾ ಉಪಸ್ಥಿತರಿದ್ದರು.ಇದೇ ವೇಳೆ ಬೇಸಿಕ್ ಹೆಲ್ತ್ ಚೆಕಪ್ ಪ್ಯಾಕೇಜನ್ನು ಅನಾವರಣ ಗೊಳಿಸಲಾಯಿತು. ಕೇವಲ ರೂ 1200ಕ್ಕೆ ಕಿಡ್ನಿ ಲಿವರ್ ಹಾರ್ಟ್ ಮಧುಮೇಹ ಕೆ ಸಂಬಂಧಿಸಿದ ವಿವಿಧ ರಕ್ತ ಮತ್ತು ಮೂತ್ರ ಪರೀಕ್ಷೆ ಹಾಗೂ ಈ ಸೀ ಜಿ ಒಳಪ್ಪಟ್ಟಿರುತ್ತದೆ. 70ಕೂ ಅಧಿಕ ಜನ ಸದುಪಯೋಗ ಪಡಿಸಿಕೊಂಡರು  ಎಂದು ಡಾ  ಸುಜಯ್ ತಂತ್ರಿ ಕೆಮ್ಮಿಂಜೆ  ತಿಳಿಸಿದ್ದಾರೆ

ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

Posted by Vidyamaana on 2023-02-20 06:19:00 |

Share: | | | | |


ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

ಪುತ್ತೂರು: ಬೆಂಗಳೂರು, ಮಂಗಳೂರಿನಲ್ಲಿ ಲಭ್ಯವಿರುವ ಅತ್ಯಾಧುನಿಕ ಶಸ್ತ್ರಚಿಕಿತ್ಸೆಯ ಮಾದರಿಯ ಶಸ್ತ್ರಚಿಕಿತ್ಸೆಯನ್ನು ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. 25ರ ಮಹಾಶಿವರಾತ್ರಿಯ ಶುಭಗಳಿಗೆಯಲ್ಲಿ ನೆರವೇರಿಸಲಾಯಿತು.

ಉತ್ತಮ, ಅತ್ಯಾಧುನಿಕ ಪರಿಕರಗಳನ್ನು ಒಳಗೊಂಡ ಮಾಡ್ಯುಲರ್ ಆಪರೇಷನ್ ಥಿಯೇಟರ್ ಇತ್ತೀಚೆಗಷ್ಟೇ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿತ್ತು.ಜಿಲ್ಲಾ ಕೇಂದ್ರದ ಸಿದ್ಧತೆಯಲ್ಲಿರುವ ಪುತ್ತೂರಿಗೆ ಮಾಡ್ಯುಲರ್ ಆಪರೇಷನ್ ಥಿಯೇಟರ್ ಪ್ರಮುಖ ಆದ್ಯತೆಗಳಲ್ಲೊಂದು. ರೋಗಿಗಳ ದೇಹಸೂಕ್ಷ್ಮತೆಗೆ ಅನುಗುಣವಾಗಿ ಆಪರೇಷನ್ ಥಿಯೇಟರ್ ಅನ್ನು ರಚಿಸಲಾಗಿರುತ್ತದೆ. ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಆಪರೇಷನ್ ನಡೆಸುವುದು ಇಲ್ಲಿನ ವಿಶೇಷತೆ

ಖಾಸಗಿ‌ ಬಸ್- ಬೈಕ್ ಡಿಕ್ಕಿ; ಗೋಳ್ತಮಜಲು ನಿವಾಸಿ ಲತೀಶ್ ಮೃತ್ಯು

Posted by Vidyamaana on 2023-07-30 15:16:23 |

Share: | | | | |


ಖಾಸಗಿ‌ ಬಸ್- ಬೈಕ್ ಡಿಕ್ಕಿ;  ಗೋಳ್ತಮಜಲು ನಿವಾಸಿ ಲತೀಶ್ ಮೃತ್ಯು

ಬಂಟ್ವಾಳ: ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ( 28) ಮೃತಪಟ್ಟ ಯುವಕ .


ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ರವಿವಾರ ರಜಾದಿನವಾದ ಕಾರಣ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ .


ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿ ಯಾಗಿದೆ.ಡಿಕ್ಕಿಯ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು.ಈತನನ್ನು ಕೂಡಲೇ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.


ಚಿಂತಾಜನಕ ಸ್ಥಿತಿಯಲ್ಲಿದ್ದ ಈತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಲತೀಶ್ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.


ಟ್ರಾಫಿಕ್ ಎಸ್. ಐ.ಸುತೇಶ್ ಸ್ಥಳಕ್ಕೆ ಬೇಟಿ ನೀಡಿದ್ದು,ಪ್ರಕರಣ ದಾಖಲಾಗಿದೆ.



Leave a Comment: