ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಬೆದ್ರಾಳ: ಕಾವು ಹೇಮನಾಥ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಅಪಾಯದಿಂದ ಪಾರು

Posted by Vidyamaana on 2024-02-26 07:06:34 |

Share: | | | | |


ಬೆದ್ರಾಳ: ಕಾವು ಹೇಮನಾಥ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಅಪಾಯದಿಂದ ಪಾರು

ಪುತ್ತೂರು:  ಬೆದ್ರಾಳ  ಸಮೀಪ ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ  ಇನ್ನೋವಾ ಕಾರು  ಅಪಘಾತ ಸಂಭವಿಸಿದ ಘಟನೆ ಫೆ 24 ರ ತಡ ರಾತ್ರಿ ನಡೆದಿದೆ.

   ಪುರುಷರಕಟ್ಟೆ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮುಂಬಾಗದಿಂದ  ಅಡ್ಡಾದಿಡ್ಡಿಯಾಗಿ ಚಲಿಸುತ್ತಾ ಬಂದ ಕಾರನ್ನು ಗಮನಿಸಿ ಅಪಘಾತ ತಪ್ಪಿಸಲು ಇನ್ನೋವಾ ಕಾರು ಚಾಲಕ  ರಸ್ತೆ ಬದಿಯಲ್ಲಿರುವ ಸೇಫ್ ರೂಟಿಗೆ ಚಲಾಯಿಸುವ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿರುವ  ಕಲ್ಲಿನ ಕಟ್ಟೆಗೆ ಇನ್ನೋವಾ ಕಾರು ಬಡಿದಿದ್ದು ಈ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದ್ದು ಎದುರಿಂದ ಬಂದ ಫೋರ್ಡ್ ಕಾರು ಕೂಡ ಅಲ್ಪ ಸ್ವಲ್ಪ ಜಖಂಗೊಂಡಿದೆ ಎನ್ನಲಾಗಿದೆ.

ಇನ್ನೋವಾ ಕಾರಿನಲ್ಲಿಪ್ರಯಾಣಿಸುತಿದ್ದ ಹೇಮನಾಥ ಶೆಟ್ಟಿ ಹಾಗೂ ಅವರ ಬಳಗದವರಿಗೆ  ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ವ್ಯಕ್ತಿಯ ಮೇಲೆ ತಲವಾರು ದಾಳಿ:ಚರಣ್ ರಾಜ್ ಸಹಿತ ಮೂವರ ಬಂಧನ

Posted by Vidyamaana on 2023-08-22 10:50:41 |

Share: | | | | |


ಮಂಗಳೂರು  ವ್ಯಕ್ತಿಯ ಮೇಲೆ ತಲವಾರು ದಾಳಿ:ಚರಣ್ ರಾಜ್ ಸಹಿತ ಮೂವರ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನ್ಯ ಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಮೂವರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚರಣ್ ರಾಜ್ ( 23), ಸುಮಂತ್ ಬರ್ಮನ್ (24), ಅವಿನಾಶ (24) ಬಂಧಿತ ಆರೋಪಿಗಳು.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್.ವಿ.ಶೆಟ್ಟಿ ಕಾಲೇಜು ರೋಡ್ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಮನೆಗೆ ಹೋಗುತ್ತಿರುವಾಗ ಉರುಂದಾಡಿ ಗುಡ್ಡೆಯ ಚರಣ್, ಸುಮಂತ್ ಬರ್ಮನ್ ಹಾಗೂ ಕೋಡಿಕಲ್ ನ ಅವಿನಾಶ್ ಎಂಬವರು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ತಡೆದು ತಲವಾರು ಬಿಸೀದ್ದಾರೆ. ಈ ವೇಳೆ ವ್ಯಕ್ತಿಯು ತಪ್ಪಿಸಿಕೊಂಡಿದ್ದಾರೆ. ಆದರೆ ಮುಖಕ್ಕೆ ಗಾಯವಾಗಿದೆ.


ಇನ್ನು ಕಾವೂರು ಪೊಲೀಸರು ಕಾರ್ಯಪ್ರವತ್ತರಾಗಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

Posted by Vidyamaana on 2023-12-14 17:39:51 |

Share: | | | | |


ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.


ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಸಕರಿಗೆ ಮೊಬೈಲ್ ಕರೆ ಮಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪೃವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.

ಮಳೆಗಾಲದಲ್ಲಿ ರಸ್ತೆ ಬದಿ, ಕೆಲವು ಕಡೆಗಳಲ್ಲಿ ರಸ್ತೆ ಮಧ್ಯೆತನಕವೂ ಹುಲ್ಲು, ಪೊದೆಗಳು ಬೆಳೆಯುತ್ತದೆ, ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ. ರಸ್ತೆ ಬದಿಯಲ್ಲಿರುವ ಪೊದೆಗಳನ್ನು ತೆರವು ಮಾಡುವಂತೆ ನಗರಸಭೆಗೆ ಸೂಚನೆ ನೀಡಿದ್ದೇನೆ, ನಗರಸಭಾ ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲೂ ತೆರವು ಕಾರ್ಯಾಚರಣೆ ನಡೆಯಲಿದೆ.

ಅಶೋಕ್‌ರೈ ಶಾಸಕರು ಪುತ್ತೂರು

20 ಅಡಿ ಎತ್ತರಕ್ಕೆ ಹಾರಿ ಮರಕ್ಕೆ ಅಪ್ಪಳಿಸಿದ ಕಾರು! ಮೂವರು ಭಾರತೀಯ ಮಹಿಳೆಯರ ಸಾವು

Posted by Vidyamaana on 2024-04-28 06:19:08 |

Share: | | | | |


20 ಅಡಿ ಎತ್ತರಕ್ಕೆ ಹಾರಿ ಮರಕ್ಕೆ ಅಪ್ಪಳಿಸಿದ ಕಾರು! ಮೂವರು ಭಾರತೀಯ ಮಹಿಳೆಯರ ಸಾವು

ನ್ಯೂಯಾರ್ಕ್​: ಅಮೆರಿಕಾದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ (Ro

non

Accident) ಭಾರತದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಮೃತ ದುರ್ದೈವಿಗಳಾಗಿದ್ದಾರೆ.ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯ ಸೇತುವೆಯೊಂದರ ಮೇಲಿಂದ ಎಸ್‌ಯುವಿ ಉರುಳಿದ ಬಿದ್ದಿದ್ದರಿಂದ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ದಾಖಲಾಗಿದ್ದಾರೆ

ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

Posted by Vidyamaana on 2024-04-11 15:29:45 |

Share: | | | | |


ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

ಪುತ್ತೂರು :ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಯಿಂದ ದ ಕ ಲೋಕ ಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ರಮಾನಾಥ ರೈ ಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯನ್ನು ರಚಿಸಲಾಗಿದ್ದು, ಮಹಮ್ಮದ್ ಬಡಗನ್ನೂರು  ರವರನ್ನು ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

Expressway ನಲ್ಲಿ ದರೋಡೆ ನಡೆಯುತ್ತಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ರಾಮನಗರ SP ಸೂಚನೆ

Posted by Vidyamaana on 2023-08-12 17:55:28 |

Share: | | | | |


Expressway ನಲ್ಲಿ ದರೋಡೆ ನಡೆಯುತ್ತಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ರಾಮನಗರ SP ಸೂಚನೆ

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ಅಡ್ಡ ಹಾಕಿ ದರೋಡೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾದ ವಿಚಾರ ಶುದ್ಧ ಸುಳ್ಳು ಇಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆಈ ಕುರಿತು ಸ್ಪಷ್ಟನೆ ನೀಡಿದ ಅವರು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ತಡೆದು ದರೋಡೆ ನಡೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ಪ್ರೆಸ್‌ ವೇ ದರೋಡೆಕೋರರ ಹಾವಳಿ ಎಂದು ಪೋಸ್ಟ್ ಮಾಡಲಾಗಿತ್ತು ಇದು ಸತ್ಯಕ್ಕೆ ದೂರವಾದ ವಿಚಾರ ಇಲ್ಲಿ ಒಂದು ಘಟನೆ ನಡೆದಿದ್ದು ಬಿಟ್ಟರೆ ಬೇರೆ ಯಾವುದೇ ಪ್ರಕರಣ ನಡೆದಿಲ್ಲ ಹಾಗಾಗಿ ಯಾರು ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಹೇಳಿದ್ದಾರೆ.ಜಾಲತಾಣದಲ್ಲಿ ಹಾಕಿರುವ ಸುಳ್ಳು ಸುದ್ದಿ‌ ಅಲ್ಲದೆ ಈ ಪೋಟೋದಲ್ಲಿರುವ ರಸ್ತೆ ಭಾರತಕ್ಕೆ ಸಂಬಂಧಿಸಿದ್ದಲ್ಲ ಇದು ಹೊರ ದೇಶಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ. ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಯಾವುದೇ ದರೋಡೆಗಳು ಆಗುತ್ತಿಲ್ಲ. ಅಲ್ಲದೆ ಹೈವೇ ಪ್ಯಾಟ್ರೋಲ್ ಇಪ್ಪತ್ತನಾಲ್ಕು ಗಂಟೆ ಕೆಲಸ ಮಾಡುತ್ತಿದೆ. ಈ ಹಿಂದೆ ಆಗಿದ್ದ ದರೋಡೆಗಳ ಪ್ರಕರಣಕ್ಕೆ‌ ಸಂಬಂಧಿಸಿದ ಆರೋಪಿಗಳನ್ನ ಈಗಾಗಲೇ ಬಂಧಿಸಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವುದು ಸುಳ್ಳು ಸುದ್ದಿ ಇದಕ್ಕೆ ಯಾರು ಕಿವಿಗೊಡಬೇಡಿ ಎಂದು ಹೇಳಿದ್ದಾರೆ



Leave a Comment: