ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

Posted by Vidyamaana on 2023-08-18 10:36:47 |

Share: | | | | |


ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು,  ಅವುಗಳಲ್ಲೂಂದು ತೆಂಗಿನಕಾಯಿಯ ಗೆರಟೆಯಿಂದ ಉತ್ಪನ್ನಗಳ ತಯಾರಿಸುವುದು. ಈ ಕುರಿತು ತರಬೇತಿಗಳನ್ನು ಸಂಸ್ಥೆಯು ನೀಡುತ್ತಿದ್ದು ತರಬೇತಿಯ ಪ್ರಗತಿ ಪರಿಶೀಲನಾ ಸಭೆ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ಆ. 16ರಂದು ನಡೆದಿದೆ.

ಈ ಸಂದರ್ಭ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತದ ಅಧಿಕಾರಿಗಳು ಉಪಸ್ಥಿತರಿದ್ದರು. 

ಸಭೆಯಲ್ಲಿ ನಬಾರ್ಡ್ ನ ಎಜಿಎಂ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್.ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ., NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ ನಳಿನಿ ಉಪಸ್ಥಿತರಿದ್ದರು.

ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರು ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

Posted by Vidyamaana on 2024-06-29 14:22:27 |

Share: | | | | |


ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

ಪುತ್ತೂರು: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

Posted by Vidyamaana on 2024-08-12 07:05:50 |

Share: | | | | |


ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35)ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ(ಆಗಸ್ಟ್ 11) ವೇಳೆ ನಡೆದಿದೆ.

ಶಮೀರ್ ಕಾರಿನಲ್ಲಿ ತಾಯಿ ಮತ್ತು ಕುಟುಂಬದ ಸದಸ್ಯರೊಂದಿಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಶಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಶಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ ನಿಂದ ಸುಮಾರು 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

ಪುತ್ತೂರಿನ ರೀಮಾ ಪೂಟ್ ವೇರ್ ಮಾಲಕ ಖಾಸೀಂ ನಿಧನ

Posted by Vidyamaana on 2023-10-05 20:33:27 |

Share: | | | | |


ಪುತ್ತೂರಿನ ರೀಮಾ ಪೂಟ್ ವೇರ್ ಮಾಲಕ ಖಾಸೀಂ ನಿಧನ


ಪುತ್ತೂರು: ಇಲ್ಲಿನ ಪಡೀಲ್ ನಿವಾಸಿ, ರೀಮಾ ಪುಟ್ ವೇರ್ ಮಾಲಕ ಖಾಸೀಂ ಅವರು ಹೃದಯಾಘಾತದಿಂದ ನಿಧನರಾದರು.

ನಾಳೆ (ಅ. 6) ಖಾಸಿಂ ಅವರ ಮನೆಯಲ್ಲಿ ಮೌಲೀದ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕೆ ಆಮಂತ್ರಿಸಲು ನೆರೆಹೊರೆ, ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರ ಸಲಹೆಯಂತೆ ಮಂಗಳೂರಿಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇವರು ಹಲವಾರು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಕಟ್ಲೇರಿ ಅಂಗಡಿ ವ್ಯಾಪಾರಸ್ತರಾಗಿದ್ದ ಮರ್ಹೂಮ್ ಇಸ್ಮಾಯಿಲ್ ಅವರ ಮಗ. ಖಾಸೀಂ ಅವರು ಪುತ್ತೂರಿನ  ಶ್ರೀಧರ ಭಟ್ ಬ್ರದರ್ಸ್ ಮೆಡಿಕಲ್‌ ಶಾಪ್ ನ ಮುಂಭಾಗ ರೀಮಾ ಪುಟ್ ವೇರ್ ನಡೆಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 5

Posted by Vidyamaana on 2023-09-05 01:36:36 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 5

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 5 ರಂದು


ಬೆಳಿಗ್ಗೆ 10 ಗಂಟೆಗೆ ಬಂಟರ ಭವನದಲ್ಲಿ ಶಿಕ್ಷಕರ ದಿನಾಚರಣೆ

12.30 ಕ್ಕೆ ಮಿತ್ತೂರು ದಾರುಲ್ ಇರ್ಷಾದ್ ಸ್ಕೂಲ್ ಗೆ ಸಚಿವರ ಭೇಟಿ, ಸಭಾ ಕಾರ್ಯಕ್ರಮ

2 ಗಂಟೆಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ 

ಸಭೆಯಲ್ಲಿ  ಭಾಗವಹಿಸಲಿದ್ದಾರೆ

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

Posted by Vidyamaana on 2023-08-25 15:23:01 |

Share: | | | | |


ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಹರಡದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಆಫ್ರಿಕನ್ ಹಂದಿ ಜ್ವರವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ದೇಶೀಯ ಮತ್ತು ಕಾಡು ಹಂದಿಗಳಿಂದ ಹರಡುತ್ತದೆ. ಈ ಕಾಯಿಲೆಯಿಂದ ಹಂದಿಗಳು ಸಾಯುತ್ತವೆ. ಈ ಜ್ವರಕ್ಕೆ ಯಾವುದೇ ನಿರ್ದಿಷ್ಟ ವ್ಯಾಕ್ಸಿನೇಷನ್ ಲಭ್ಯವಿಲ್ಲ. ಜ್ವರ ದೃಢಪಟ್ಟ ಸ್ಥಳದ ಒಂದು ಕಿ.ಮೀ. ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ಹಂದಿಗಳನ್ನು ಕೊಲ್ಲುವುದು ಮಾತ್ರ ಸದ್ಯ ಅನುಸರಿಸುವ ವಿಧಾನವಾಗಿದೆ. ಇದರಿಂದ ಹಂದಿ ಸಾಕಾಣಿಕೆದಾರರಿಗೆ ಭಾರಿ ಆರ್ಥಿಕ ನಷ್ಟವಾಗುತ್ತದೆ.


ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಪಶುಸಂಗೋಪನಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕೇರಳದ ಗಡಿಯಲ್ಲಿರುವ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕ ಚೆಕ್ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸಲಾಗಿದೆ. ದಕ್ಷಿಣ ಕನ್ನಡದಿಂದ ಕೇರಳಕ್ಕೆ ಹಂದಿ ಮಾಂಸವನ್ನು ಹೆಚ್ಚಿನ ಪ್ರಮಾಣದಲ್ಲಿ ಕಳುಹಿಸಲಾಗುತ್ತದೆ. ಕೇರಳಕ್ಕೆ ಹಂದಿ ಮಾಂಸ ಪೂರೈಸಿ ಹಿಂತಿರುಗುತ್ತಿರುವ ವಾಹನಗಳಿಗೆ ರಾಸಾಯನಿಕ ಸಿಂಪಡಿಸಲಾಗುತ್ತದೆ. ಹಂದಿಗಳು ಮತ್ತು ಹಂದಿ ಸಾಗಣೆಯ ಮೇಲೂ ನಿಗಾ ವಹಿಸಲಾಗಿದೆ. ಎಲ್ಲಾ ಪಶುವೈದ್ಯರು ತಮ್ಮ ವ್ಯಾಪ್ತಿಯ ಹಂದಿ ಸಾಕಣೆ ಕೇಂದ್ರಗಳಿಗೆ ಭೇಟಿ ನೀಡಿ ಹಂದಿ ಸಾಕಣೆದಾರರಿಗೆ ಸೂಕ್ತ ಸಲಹೆ ನೀಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಆಫ್ರಿಕನ್ ಹಂದಿ ಜ್ವರ ಹಂದಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಇದು ಮನುಷ್ಯರಿಗೆ ಹರಡುವುದಿಲ್ಲ. ಈ ವಿಷಯದಲ್ಲಿ ಹಲವರಿಗೆ ಗೊಂದಲವಿದೆ. ಸ್ಥಳೀಯವಾಗಿ ಹಂದಿ ಸಾಕಾಣಿಕೆ ಮಾಡುವವರು ಪಶುಸಂಗೋಪನಾ ಇಲಾಖೆ ಸೂಚಿಸಿದ ಮುನ್ನೆಚ್ಚರಿಕೆ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಸೂಚನೆ ನೀಡಿದ್ದಾರೆ.


ಮೈಸೂರು ವ್ಯಾಪ್ತಿಯ ಕೇರಳ ಗಡಿಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ವಿಶೇಷ ತಂಡ ರಚನೆ ಮಾಡಿ, ತಪಾಸಣೆ ಮಾಡಲಾಗುತ್ತಿದೆ

Recent News


Leave a Comment: