ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

Posted by Vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ತೀರ್ಥದಲ್ಲಿ ನಿದ್ರೆಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ಚಾನೆಲ್ ನಿರೂಪಕಿಯ ರೇಪ್!

Posted by Vidyamaana on 2024-05-16 20:27:47 |

Share: | | | | |


ತೀರ್ಥದಲ್ಲಿ ನಿದ್ರೆಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ಚಾನೆಲ್ ನಿರೂಪಕಿಯ ರೇಪ್!

ಚೆನ್ನೈ: ಪಾರಿಸ್ ಕಾರ್ನರ್‌ನಲ್ಲಿರುವ ಜನಪ್ರಿಯ ದೇವಸ್ಥಾನದ ಅರ್ಚಕರ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ.

ಟಿವಿ ನಿರೂಪಕಿಯೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆದಿರುವುದರ ಬಗ್ಗೆ ವಿರುಗಂಬಾಕ್ಕಂ (Virugambakkam) ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅತ್ಯಾಚಾರದ ಆರೋಪದ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸದ್ಯಕ್ಕೆ ಇಬ್ಬರ ವಿಚಾರಣೆಯನ್ನು ನಡೆಸಲಾಗುತ್ತಿದೆ.


ಮಹಿಳೆ ನೀಡಿದ ದೂರಿನ ಪ್ರಕಾರ, ‘ಅರ್ಚಕ ಕಾರ್ತಿಕ್ ಮುನುಸಾಮಿ 2022ರ ಕೊನೆಯಲ್ಲಿ ಮತ್ತು 2023ರ ಆರಂಭದಲ್ಲಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ತೀರ್ಥಕ್ಕೆ ಅಮಲು ಬರುವ ಔಷಧಿ ಹಾಕಿ ಅದನ್ನು ನೀಡಿದ ಬಳಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಅವರೊಂದಿಗೆ ಜಗಳವಾಡಿದ ನಂತರ ಆತ ನನಗೆ ತಾಳಿ ಕಟ್ಟಿ ಮದುವೆಯಾಗುವ ಮೂಲಕ ಒಟ್ಟಿಗೆ ಜೀವನ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಮದುವೆಯಾಗಬೇಕೆಂದು ನಿನ್ನ ಹೊಟ್ಟೆಯಲ್ಲಿರುವ ಭ್ರೂಣವನ್ನು ಗರ್ಭಪಾತ ಮಾಡುವಂತೆ ಒತ್ತಾಯಿಸಿದರು. ಆದರೆ, ಹಣಕ್ಕಾಗಿ ಇನ್ನೊಬ್ಬ ಪುರುಷನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸಿ ಈಗ ಹಿಂಸೆ ನೀಡುತ್ತಿದ್ದಾರೆ ಎಂದು ಆ ಮಹಿಳೆ ದೂರು ನೀಡಿದ್ದಾರೆ

ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ: ಬಾವ

Posted by Vidyamaana on 2024-03-18 15:32:01 |

Share: | | | | |


ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ: ಬಾವ

ಮಂಗಳೂರು: ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿಯನ್ನು ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲಾ ಸಿದ್ಧಾಂತಗಳಿಗೆ ಸಹಮತ ಇಲ್ಲ. ಸಿಎಎ, ಹಿಜಾಬ್, ಆಝಾನ್ ಗೆ ವಿರೋಧದ ಬಿಜೆಪಿಯ ಸಿದ್ಧಾಂತಗಳನ್ನು ನಾನು ವಿರೋಧಿಸುತ್ತೇನೆ ಎಂದರು.

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವ ನಿಟ್ಟಿನಲ್ಲಿ ನನ್ನ ಬೆಂಬಲಿಗರು ಇಚ್ಛೆ ವ್ಯಕ್ತಪಡಿಸಿದ್ದಾರೆ. ನಾನು ಯಾವುದೇ ನಿರ್ಧಾರ ಇನ್ನೂ ಮಾಡಿಲ್ಲ. ಮಾ.28ರಂದು ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಬಾವ ಹೇಳಿದರು.

ನಮ್ಮವರು ಇರಬಹುದು ಮೆಲ್ಲನೆ ಅಗೆಯಿರಿ: ಯುವಕನ ಮನಮಿಡಿಯುವ ಮನವಿಗೆ ಹಿಟಾಚಿ ಚಾಲಕ ಭಾವುಕ

Posted by Vidyamaana on 2024-08-07 06:59:20 |

Share: | | | | |


ನಮ್ಮವರು ಇರಬಹುದು ಮೆಲ್ಲನೆ ಅಗೆಯಿರಿ: ಯುವಕನ ಮನಮಿಡಿಯುವ ಮನವಿಗೆ ಹಿಟಾಚಿ ಚಾಲಕ ಭಾವುಕ

ವಯನಾಡ್: ಭೂಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ ದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿರುವವರ ತಂಡ ಅಲ್ಲಿನ ಮನಕಲಕುವ ಅನುಭವಗಳನ್ನು ತೆರೆದಿಟ್ಟಿದ್ದಾರೆ. ಮಣ್ಣಿನಡಿ ಏನಿದೆ ಎಂದು ತಿಳಿಯದ ಕಾರಣ ಹಿಟಾಚಿ ಸೇರಿದಂತೆ ಇತರ ಯಂತ್ರಗಳನ್ನು ಎಚ್ಚರಿಕೆಯಿಂದ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

BREAKING : ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ : ಲ್ಯಾಬ್ ರಿಪೋರ್ಟ್‌ ಬಿಡುಗಡೆ ಮಾಡಿದ ಆಹಾರ ಇಲಾಖೆ

Posted by Vidyamaana on 2024-07-31 20:48:56 |

Share: | | | | |


BREAKING : ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ : ಲ್ಯಾಬ್ ರಿಪೋರ್ಟ್‌ ಬಿಡುಗಡೆ ಮಾಡಿದ ಆಹಾರ ಇಲಾಖೆ

ಬೆಂಗಳೂರು : ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಲ್ಯಾಬ್ ರಿಪೋರ್ಟ್ ನಲ್ಲಿ ಮೇಕೆ ಮಾಂಸ ಅನ್ನೋದು ಇದೀಗ ದೃಢವಾಗಿದೆ. ಈ ಕುರಿತು ಆಹಾರ ಇಲಾಖೆಯು ಮಾಂಸದ ಸ್ಯಾಂಪಲ್ ಟೆಸ್ಟಿಂಗ್ ವರದಿಯನ್ನು ಪ್ರಕಟಿಸಿದೆ.

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಮಾಂಸ ವಶಕ್ಕೆ ಪಡೆದು ಪರಿಶೀಲನೆ ಮಾಡಿದ ಆಹಾರ ಸುರಕ್ಷತಾ ಇಲಾಖೆಯು ಎಲ್ಲ ಬಾಕ್ಸ್‌ನಲ್ಲಿರುವುದು ಕುರಿ ಮಾಂಸ ಎಂದು ಪರೀಕ್ಷಾ ವರದಿ ನೀಡಿದೆ.

ಅರುಣ್ ಕುಮಾರ್ ಪುತ್ತಿಲ : ಪಕ್ಷೇತರ ಅಭ್ಯರ್ಥಿಯ ಅಧಿಕೃತ ಚಿಹ್ನೆ ಪ್ರಕಟ

Posted by Vidyamaana on 2023-04-24 11:35:31 |

Share: | | | | |


ಅರುಣ್ ಕುಮಾರ್ ಪುತ್ತಿಲ : ಪಕ್ಷೇತರ ಅಭ್ಯರ್ಥಿಯ ಅಧಿಕೃತ ಚಿಹ್ನೆ ಪ್ರಕಟ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಮ್ಮ ಚುನಾವಣಾ ಚಿಹ್ನೆಯನ್ನು ಪ್ರಕಟಗೊಳಿಸಿದ್ದಾರೆ.

ಪುತ್ತಿಲ ರವರು ಚುನಾವಣಾ ಚಿಹ್ನೆಯಾಗಿ ಕ್ರಿಕೆಟ್ ‘ಬ್ಯಾಟ್’ ಅನ್ನು ಆಯ್ದುಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪುತ್ತಿಲ ರವರು ತಮ್ಮ ಚಿಹ್ನೆಯಾಗಿ ಯಾವುದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಬಗ್ಗೆ ಭಾರೀ ಕುತೂಹಲವಿತ್ತು.

Recent News


Leave a Comment: