ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ

Posted by Vidyamaana on 2021-11-10 18:50:09 |

Share: | | | | |


ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮ ಜರಗಿತು.

ಮಂಗಳೂರು ವಿಶ್ವವಿದ್ಯಾಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಪುತ್ತೂರು ಅಕ್ಷಯ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಟಿಪಳ್ಳ ಶ್ರೀ ನಾರಾಯಣಗುರು ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್ ಅವರು ನಾರಾಯಣಗುರುಗಳ ಸಾಮಾಜಿಕ ಸುಧಾರಣೆ ಹಾಗೂ ಅವರ ಚಿಂತನೆಗಳ ಬಗ್ಗೆ ಉಪನ್ಯಾಸ ನೀಡಿದರು. ನಾರಾಯಣಗುರು ಅಧ್ಯಯನ ಪೀಠದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು, ನಾರಾಯಣಗುರುಗಳ ತತ್ವದ ಮಹತ್ವವನ್ನು ತಿಳಿಸಿದರು. 

ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಸದಸ್ಯ ಭೋಜ ಅಂಚನ್ ಮಧ್ಯ, ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ, ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿ. ಉಪಸ್ಥಿತರಿದ್ದರು.

ಗ್ರಂಥಾಪಾಲಕಿ ಪ್ರಭಾವತಿ ಸ್ವಾಗತಿಸಿ, ಉಪನ್ಯಾಸಕಿ ರಶ್ಮಿ ಕೆ. ವಂದಿಸಿದರು. ಉಪನ್ಯಾಸಕಿ ಆಶಿಕಾ ಫರ್ಝಾನ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.

ದಿಢೀರ್ ಅಂತ ಕುಸಿದ ವೇದಿಕೆ; ರಾಹುಲ್ ಗಾಂಧಿ ಬಚಾವ್, ವಿಡಿಯೋ ನೋಡಿ

Posted by Vidyamaana on 2024-05-28 08:00:50 |

Share: | | | | |


ದಿಢೀರ್ ಅಂತ ಕುಸಿದ ವೇದಿಕೆ; ರಾಹುಲ್ ಗಾಂಧಿ ಬಚಾವ್, ವಿಡಿಯೋ ನೋಡಿ

ಬಿಹಾರ: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಪರ ಮತಯಾಚನೆ ಮಾಡಲು ರಾಹುಲ್‌ ಗಾಂಧಿ ಪಟ್ನಾಕ್ಕೆ ಬಂದಿದ್ದರು.

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Posted by Vidyamaana on 2023-11-12 11:32:57 |

Share: | | | | |


ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ, ನ.12: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ.


ಕೊಲೆಯಾದವರನ್ನು ಹಸೀನಾ ಅವರ ಮಕ್ಕಳಾದ ಅಫ್ಘಾನ್(23), ಅಯಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿದೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.


ಈಗಾಗಲೇ ಪೊಲೀಸರು ಸ್ಥಳಕ್ಕಾಗಮಿಸಿ ಡಿವೈಎಸ್ಪಿ ದಿನಕರ ಸ್ಥಳಕ್ಕಾಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ

ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

Posted by Vidyamaana on 2023-11-15 05:50:17 |

Share: | | | | |


ಮಗನ ಸಾವಿನ ನೋವಲ್ಲಿ ತಾಯಿ ಸಹೋದರಿ ಆತ್ಮಹತ್ಯೆ ; ದೀಪಾವಳಿ ಮಧ್ಯೆ ಕುಟುಂಬಕ್ಕೆ ಆಘಾತ

ಕಾರವಾರ, ನ.15: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ. 


ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು.‌ ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ.‌‌ ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.‌


ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ‌ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ.‌ ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 


ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐ.ಜಿ.ಡಾ. ಚಂದ್ರಗುಪ್ತ ಭೇಟಿ

Posted by Vidyamaana on 2023-04-04 12:50:07 |

Share: | | | | |


ವಿಟ್ಲ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐ.ಜಿ.ಡಾ. ಚಂದ್ರಗುಪ್ತ  ಭೇಟಿ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ.ಚಂದ್ರಗುಪ್ತ ಹೇಳಿದರು.

ಚುನಾವಣಾ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ ಮಂಗಳವಾರ ಭೇಟಿ ನೀಡಿ ಸಾರ್ವಜನಿಕರ ಸಭೆಯನ್ನು ನಡೆಸಿ, ವಿವಿಧ ಗಡಿ ಭಾಗದ ತಪಾಸಣಾ ಕೇಂದ್ರಗಳನ್ನು ಪರಿಶೀಲನೆ ನಡೆಸಿ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದರು.ಠಾಣೆ ಅಥವಾ ಹೊರ ಠಾಣೆಯನ್ನು ಸ್ಥಾಪನೆ ಮಾಡಿದ ಮೇಲೆ ಸಾರ್ವಜನಿಕರ ಅನುಕೂಲಕ್ಕೆ

ನಿತ್ಯ ತೆರೆಯಲಾಗುತ್ತದೆ. ನೆಲ್ಲಿಕಟ್ಟೆ ಹಾಗೂ ಆನೆಕಲ್ಲು ಭಾಗದಲ್ಲಿ ಚೆಕ್ ಪೋಸ್ಟ್ ಇದ್ದು, ಸಿಬ್ಬಂದಿಗಳು ಮಾತ್ರ ಕನ್ಯಾನದಲ್ಲಿ ತಪಾಸಣೆ ಮಾಡುವ ಕಾರ್ಯ ಮಾಡಬಾರದು.ಕನ್ಯಾನ ಹೊರ ಠಾಣೆಯ ಸ್ಥಾಪನೆಯ ಉದ್ದೇಶ ಹಾಗೂ ತಪಸಣಾ ಕೇಂದ್ರದ ಪ್ರತ್ಯೇಕ ಸ್ಥಳದಲ್ಲಿ ಸ್ಥಾಪನೆಯಾಗಿರುವ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿಕ್ರಂ ಅಮಟೆ ಉಪಸ್ಥಿತರಿದ್ದರು 

ಇಂದು ಸಿದ್ದರಾಮಯ್ಯ 15ನೇ ಬಜೆಟ್‌: ಬೆಳಗ್ಗೆ 10.15ರಿಂದ ಮಂಡನೆ

Posted by Vidyamaana on 2024-02-16 09:14:05 |

Share: | | | | |


ಇಂದು ಸಿದ್ದರಾಮಯ್ಯ 15ನೇ ಬಜೆಟ್‌: ಬೆಳಗ್ಗೆ 10.15ರಿಂದ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2024-25ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. ಇದು ಅವರ ದಾಖಲೆಯ 15ನೇ ಬಜೆಟ್‌. ಬಜೆಟ್‌ ಗಾತ್ರ 3.75 ಲಕ್ಷ ಕೋಟಿ ರೂ.ಗಳಿಂದ 3.80 ಲಕ್ಷ ಕೋಟಿ ರೂ. ವರೆಗೆ ಇರಲಿದೆ ಎನ್ನಲಾಗಿದೆ.


ರಾಹುಕಾಲದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್‌ ಮಂಡಿಸಲಿದ್ದಾರೆ. ಅಂದರೆ 15 ನಿಮಿಷಗಳ ಮೊದಲೇ ವಿಧಾನಸಭೆಗೆ ಅವರು ಆಗಮಿಸಲಿದ್ದಾರೆ. 10.30ರಿಂದ ಆರಂಭವಾಗಲಿರುವ ಬಜೆಟ್‌ ಭಾಷಣ ಮಧ್ಯಾಹ್ನ 12.30ರ ವರೆಗೆ ಮುಂದುವರಿಯಲಿದೆ.

ಬಜೆಟ್‌ ನಿರೀಕ್ಷೆಗಳು ಏನು?

ಸುವರ್ಣ ಸಂಭ್ರಮ ನಿಮಿತ್ತ ಹೊಸ ಯೋಜನೆಗಳು

ರೈತರಿಗೆ ಶೂನ್ಯ ಬಡ್ಡಿದರಲ್ಲಿ 5 ಲಕ್ಷ ರೂ.ಗಳಿಂದ 7 ಲಕ್ಷ ರೂ.ವರೆಗೆ ಸಾಲ

ತೆರಿಗೆ ಹೊರೆ ಬದಲು 50 ಸಾವಿರ ಕೋ.ರೂ. ಸಾಲ

ಗ್ಯಾರಂಟಿ ಯೋಜನೆಗಳಿಗೆ 55-65 ಸಾವಿರ ಕೋಟಿ ರೂ. ಮೀಸಲು

ಕೇಂದ್ರದ ಅನುದಾನ ಹಂಚಿಕೆ ತಾರತಮ್ಯ ಅಂಕಿಅಂಶ ಸಹಿತ ಬಹಿರಂಗ

Recent News


Leave a Comment: