ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಮಾದಕ ವ್ಯಸನಿಯಿಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ

Posted by Vidyamaana on 2023-11-16 20:37:43 |

Share: | | | | |


ಮಾದಕ ವ್ಯಸನಿಯಿಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ

ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನ.16 ರಂದು ಸಂಜೆ ನಡೆದಿದೆ.

ಹಲ್ಲೆ ನಡೆಸಿದ ವ್ಯಕ್ತಿ ಬಡಗನ್ನೂರು ಮೂಲದ ಹರೀಶ್ ಎಂದು ಗುರುತಿಸಲಾಗಿದೆ.

ಕುಡಿದ ನಶೆಯಲ್ಲಿ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಗ್ಗೆ ಠಾಣೆಗೆ ಮಾಹಿತಿ ನೀಡಲಾಗಿತ್ತು. ಈ ಸಂದರ್ಭ 112 ತುರ್ತು ಸೇವೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು.

ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ನಶೆಯಲ್ಲಿದ್ದ ವ್ಯಕ್ತಿಯನ್ನು ಸಂಭಾಳಿಸುತ್ತಿದ್ದ ಸಂದರ್ಭ, ವ್ಯಕ್ತಿ ಏಕಾಏಕೀ‌ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

Posted by Vidyamaana on 2024-03-18 09:42:56 |

Share: | | | | |


ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

ಬೈಂದೂರು: ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಭೂಪ ಬೈಂದೂರು ಪೊಲೀಸರ ಅತಿಥಿಯಾಗಿದ್ದಾನೆ.

ಬೈಂದೂರು ಠಾಣೆಯ ಪೊಲೀಸ್‌ ಉಪನಿರೀಕ್ಷಕ ತಿಮ್ಮೇಶ ಬಿ.ಎನ್‌. ಠಾಣೆಯಲ್ಲಿರುವಾಗ ಬಾಗಲ ಕೋಟೆಯ ಪಕೀರಪ್ಪ ಯಲ್ಲಪ್ಪ (30) ಬಂದು ಯಡ್ತರೆ ಗ್ರಾಮದ ಮಧ್ದೋಡಿ ಗೇರು ಹಾಡಿಯಲ್ಲಿ ತಲೆ ಇಲ್ಲದ ಮನುಷ್ಯನ ದೇಹ ಬಿದ್ದಿದೆ ಎಂದನು. ಪೊಲೀಸರು ಆತನ ಜತೆಯಲ್ಲಿ ಹೋಗಿ ಸಾರ್ವಜನಿಕರ ಸಹಕಾರದೊಂದಿಗೆ ಗೇರು  ಹಾಡಿಯಲ್ಲಿ ದಿನವಿಡೀ ಹುಡುಕಿದರೂ ಎಲ್ಲಿಯೂ ಮೃತದೇಹ ಕಂಡು ಬರಲಿಲ್ಲ.

ಆತನು ಬೇರೆ ಬೇರೆ ಕಡೆಯಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇದೆ, ಇಲ್ಲಿ ಇದೆ ಎಂದು ಹೇಳಿದ್ದು ಎಲ್ಲಿ ಹುಡುಕಿದರೂ ಮೃತ ದೇಹ ಕಾಣಿಸಲಿಲ್ಲ. ಮರು ದಿನವೂ ಹುಡುಕಿದ ಪೊಲೀಸರು ಸುಸ್ತಾದರು. ಸುಳ್ಳು ಮಾಹಿತಿ ನೀಡಿದ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪುತ್ತೂರಿನಲ್ಲಿ ಮತ್ತೆ ಪಿಲಿ ಗೊಬ್ಬು ವಿಗೆ ವೇದಿಕೆ ಸಿದ್ಧ

Posted by Vidyamaana on 2024-09-03 11:44:35 |

Share: | | | | |


ಪುತ್ತೂರಿನಲ್ಲಿ ಮತ್ತೆ ಪಿಲಿ ಗೊಬ್ಬು ವಿಗೆ ವೇದಿಕೆ ಸಿದ್ಧ

ಪುತ್ತೂರು : ಶ್ರೀ ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ವತಿಯಿಂದ ಪುತ್ತೂರಿನಲ್ಲಿ ನಡೆದ ಮೊದಲನೇ ಸೀಸನ್ ಪಿಲಿಗೊಬ್ಬು ಕಾರ್ಯಕ್ರಮ ಹಾಗೂ ಆಹಾರ ಮೇಳ ವು ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಗಮನ ಸೆಳೆದಿದ್ದು. ಗ್ರಾಮೀಣ ಪ್ರದೇಶಗಳನ್ನೊಳಗೊಂಡ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ದಸರಾ ಸಂದರ್ಭ ಅಕ್ಟೋಬರ್ 5ರಂದು ಫುಡ್ ಫೆಸ್ಟ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ, 6ರಂದು ಎರಡನೇ ಸೀಸನ್‌ನ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವು ಅದ್ದೂರಿ ಹಾಗೂ ವೈಭವಯುತವಾಗಿ ಜರುಗಲಿದೆ, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.01 ರಂದು ಪುತ್ತೂರು ಮಹಾವೀರ ಆಸ್ಪತ್ರೆಯ ವೈದ್ಯರಾದ ಡಾ. ಸುರೇಶ ಪುತ್ತೂರಯಾ ನೆರವೇರಿಸಿದರು.


ವರದಕ್ಷಿಣೆ ಕಿರುಕುಳ; ಪತಿ ಮನೆ ಮುಂದೆಯೇ ನವವಿವಾಹಿತೆಯ ಅಂತ್ಯಕ್ರಿಯೆ ಮಾಡಿದ ಕುಟುಂಬ

Posted by Vidyamaana on 2024-08-26 12:44:28 |

Share: | | | | |


ವರದಕ್ಷಿಣೆ ಕಿರುಕುಳ; ಪತಿ ಮನೆ ಮುಂದೆಯೇ ನವವಿವಾಹಿತೆಯ ಅಂತ್ಯಕ್ರಿಯೆ ಮಾಡಿದ ಕುಟುಂಬ

ಕೋಲಾರ: ನಗರ ಹೊರವಲಯದ ಸಹಕಾರ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಮಾನಸಾ (24) ಅವರ ಪೋಷಕರು, ಭಾನುವಾರ ಅಳಿಯ ಉಲ್ಲಾಸ್‌ಗೌಡ ಮನೆ ಮುಂದೆ ಪುತ್ರಿಯ ಶವವಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ಆತನ ಮನೆ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಿದರು.

ಅಳಿಯ ಹಾಗೂ ಆತನ ಪೋಷಕರು ನೀಡಿದ ವರದಕ್ಷಿಣೆ ಕಿರುಕುಳದಿಂದಲೇ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿದರು.

ಮಾನಸಾ ಪತಿ ಉಲ್ಲಾಸ್‍ಗೌಡ ಅವರ ತೂರಾಂಡಹಳ್ಳಿ ಗ್ರಾಮದ ನಿವಾಸದ ಗೇಟ್‌ ಮುಂದೆಯೇ ಅಂತ್ಯಕ್ರಿಯೆ ನಡೆಸಲು ಮುಂದಾದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳು ಹೋರಾಟಗಾರರೂ ಇದ್ದರು. ಈ ಹಂತದಲ್ಲಿ ಪೊಲೀಸರು ಹಾಗೂ ಮಾನಸಾ ಕಡೆಯವರ ನಡುವೆ ವಾಗ್ವಾದ ನಡೆಯಿತು, ಕ್ರಮಕ್ಕೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಉಲ್ಲಾಸ್‌ಗೌಡ ಹಾಗೂ ಅವರ ಕುಟುಂಬದವರು ಇರಲಿಲ್ಲ. ನ್ಯಾಯ ಕೊಡಿಸುವ ಭರವಸೆಯನ್ನು ಪೊಲೀಸರು ನೀಡಿದ ಬಳಿಕ ಪತಿ ಮನೆಯ ಪಕ್ಕದಲ್ಲಿ ಅಂತ್ಯಸಂಸ್ಕಾರ ನಡೆಸಿದರು.

ಸಾಲು ಮರದ ತಿಮ್ಮಕ್ಕನವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ : ಸಿಎಂ ಸಿದ್ದರಾಮಯ್ಯ ಆದೇಶ

Posted by Vidyamaana on 2023-05-30 16:17:22 |

Share: | | | | |


ಸಾಲು ಮರದ ತಿಮ್ಮಕ್ಕನವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ : ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು : ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಮುಂದುವರಿಸಿ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. 

ಅಲ್ಲದೇ, ಪರಿಸರ ರಾಯಭಾರಿಯಾಗಿ ಸಾಲುಮರದ ತಿಮ್ಮಕ್ಕ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಲಂಡನ್ ಡಾಕ್ಟರ್ ಎಂದು ಹೇಳಿ ಮಲ್ಪೆಯ ಮಹಿಳೆಗೆ 4.96 ಲಕ್ಷ ವಂಚನೆ

Posted by Vidyamaana on 2024-02-24 04:42:25 |

Share: | | | | |


ಲಂಡನ್ ಡಾಕ್ಟರ್ ಎಂದು ಹೇಳಿ ಮಲ್ಪೆಯ ಮಹಿಳೆಗೆ 4.96 ಲಕ್ಷ ವಂಚನೆ

ಉಡುಪಿ, : ಲಂಡನ್ ಮೂಲದ ಡಾಕ್ಟರ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಮಲ್ಪೆಯ ಮಹಿಳೆಯೊಬ್ಬರನ್ನು ಯಾಮಾರಿಸಿ 4.96 ಲಕ್ಷ ರೂಪಾಯಿ ಪೀಕಿಸಿದ ಘಟನೆ ನಡೆದಿದೆ. ಹಣ ಕಳಕೊಂಡ ಮಹಿಳೆ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದಾರೆ.


ಮಲ್ಪೆ ನಿವಾಸಿ ವಿನಿತಾ ಎಂಬ ಮಹಿಳೆಗೆ ಜನವರಿ 24ರಂದು ವಾಟ್ಸಪ್ ನಲ್ಲಿ ವ್ಯಕ್ತಿಯೊಬ್ಬ ಪರಿಚಯ ಆಗಿದ್ದು ನಿಮ್ಮ ಬಿಸಿನೆಸ್ನಲ್ಲಿ ಪಾಲುದಾರಿಕೆ ಮಾಡ್ತೀನಿ ಎಂದಿದ್ದ. ಅಲ್ಲದೆ, ತಾನು ಲಂಡನ್ನಲ್ಲಿ ಡಾಕ್ಟರ್ ಆಗಿದ್ದು, ಸದ್ಯದಲ್ಲೇ ಭಾರತಕ್ಕೆ ಬರಲು ಪ್ಲಾನ್ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದ. ಫೆ.2ರಂದು ಬೇರೊಂದು ನಂಬರಲ್ಲಿ ಫೋನ್ ಬಂದಿತ್ತು. ದೆಹಲಿ ಏರ್ಪೋರ್ಟ್ ಕಚೇರಿಯಿಂದ ಫೋನ್ ಮಾಡುತ್ತಿದ್ದೇನೆಂದು ಹೇಳಿದ್ದ ಆ ವ್ಯಕ್ತಿ, ಲಂಡನ್ ಡಾಕ್ಟರಿನ ಫ್ರೆಂಡ್ ಎಂದು ಹೇಳಿದ್ದ. ಡಾಕ್ಟರನ್ನು ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರನ್ನು ಬಿಡಿಸಿ ತರಲು ದಂಡ ಕಟ್ಟಬೇಕಾಗಿದೆ ಎಂದಿದ್ದ.


ಆನಂತರವೂ ಫೋನ್ ಬಂದಿದ್ದು, ಡಾಕ್ಟರ್ ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದಾರೆ. ದಂಡ ಕಟ್ಟಲು ಹಣ ಇಲ್ಲ, ಸಹಾಯ ಮಾಡಬಹುದೇ ಎಂದು ಆ ವ್ಯಕ್ತಿ ಕೇಳಿಕೊಂಡಿದ್ದ. ಅದರಂತೆ, ವಿನಿತಾ ಅವರು ಫೆ.16ರಿಂದ 20ರ ನಡುವೆ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಫೋನ್ ಪೇ ಮೂಲಕ 4.96 ಲಕ್ಷ ರೂ. ಹಣ ಕಳಿಸಿದ್ದರು. ಹಣ ಕಳಿಸಿದ ಬಳಿಕ ಫೋನ್ ಸಂಪರ್ಕ ಕಡಿತ ಆಗಿತ್ತು. ಇದರಿಂದ ಮೋಸದ ಅರಿವಾದ ಮಹಿಳೆ ಮಲ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ.

Recent News


Leave a Comment: