ಉಳಾಯಿಬೆಟ್ಟು ದರೋಡೆ ಪ್ರಕರಣ ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ, ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಸುದ್ದಿಗಳು News

Posted by vidyamaana on 2024-07-05 07:31:37 |

Share: | | | | |


ಉಳಾಯಿಬೆಟ್ಟು ದರೋಡೆ ಪ್ರಕರಣ  ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ,  ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.

ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.


ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.

ಮೊದಲೇ ಕೇಸ್ ಇತ್ತು

ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.

ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.

ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್‌ ಬೆಡ್‌ರೂಮ್‌ನ ಟೈಲ್ಸ್‌ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 Share: | | | | |


ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ

Posted by Vidyamaana on 2023-08-03 05:13:52 |

Share: | | | | |


ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ

ಬೆಳ್ತಂಗಡಿ : ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರು ಊರಿಗೆ ಲಗೇಜ್ ಜೊತೆ ತೆರಳಲು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ಹಾಕಿ ಹಲ್ಲೆ ನಡೆಸಿದ್ದಾರೆ.ಯುವಕ ಸಾಧ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಅಶೀಕ್(22) ಮೇಲೆ ಆ‌.2 ರಂದು ರಾತ್ರಿ ಸುಮಾರು9 ಗಂಟೆಗೆ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದ ಮುಂದೆ ಹಲ್ಲೆದ್ದು . ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್‌ ಕುಮಾರ್ ತಂಡದಿಂದ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರದ ಸಹಾಯದಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

Posted by Vidyamaana on 2024-04-16 13:37:56 |

Share: | | | | |


ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು.

ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು. ಪುತ್ತೂರು ಪೇಡೆಯಾದ್ಯಂತ ಸಂಚರಿಸಿದ ರೋಡ್ ಶೋ, ವಿಟ್ಲ ಬಸ್ ನಿಲ್ದಾಣದಲ್ಲಿ ಸಮಾಪನಗೊಂಡಿತು. ಬಳಿಕ ವಿಟ್ಲ ಸಂತೆ ಮಾರುಕಟ್ಟೆಗೆ ತೆರಳಿ ಮತ ಯಾಚನೆ ನಡೆಸಿದರು.

ರೋಡ್ ಶೋ ಉದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಭ್ಯರ್ಥಿಗೆ ಸಾಥ್ ನೀಡಿದರು.



ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

Posted by Vidyamaana on 2024-02-11 21:30:15 |

Share: | | | | |


ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು, ಫೆ.11: ಬಿಜೆಪಿ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಕರ್ನಾಟಕದಿಂದ ಬಾಗಲಕೋಟೆ ಮೂಲದ ನಾರಾಯಣ ಬಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ನಿರಾಸೆಗೊಂಡಿದ್ದಾರೆ.


ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ.ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ.


1.ಧರ್ಮಶೀಲಾ ಗುಪ್ತಾ: ಬಿಹಾರ

2.ಡಾ.ಭೀಮ್ ಸಿಂಗ್: ಬಿಹಾರ

3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್

4.ಸುಭಾಷ್ ಬರಲಾ: ಹರಿಯಾಣ

5.ನಾರಾಯಾಣ ಭಾಂಡಗೆ: ಕರ್ನಾಟಕ

6.ಆರ್​​ಪಿಎನ್​​​ ಸಿಂಗ್: ಉತ್ತರ ಪ್ರದೇಶ

7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ

8.ಚೌಧರಿ ತೇಜ್​ವೀರ್ ಸಿಂಗ್: ಉತ್ತರ ಪ್ರದೇಶ

9.ಸಾಧನಾ ಸಿಂಗ್: ಉತ್ತರ ಪ್ರದೇಶ

10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ

11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ

12.ನವೀನ್ ಜೈನ್: ಉತ್ತರ ಪ್ರದೇಶ

13.ಮಹೇಂದ್ರ ಭಟ್: ಉತ್ತರಾಖಂಡ್

14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ

ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Posted by Vidyamaana on 2024-05-20 04:44:23 |

Share: | | | | |


ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

ಬೆಂಗಳೂರು : ಬೈಕ್‌ನ ಪೆಟ್ರೋಲ್ ಟ್ಯಾಂಕ್‌ ಮೇಲೆ ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡಿದ್ದ ಆರೋಪದಡಿ ಸಿಲಂಬರಸನ್ (21) ಎಂಬುವವರನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಲಹಂಕದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಯುವತಿ ಜೊತೆ ಆರೋಪಿ ಬೈಕ್‌ನಲ್ಲಿ ಸಂಚರಿಸಿದ್ದ

ಹೃದಯಾಘಾತದಿಂದ ಆಟೋ ಚಾಲಕ ಅಶ್ರಫ್ ನಿಧನ

Posted by Vidyamaana on 2024-05-04 14:40:31 |

Share: | | | | |


ಹೃದಯಾಘಾತದಿಂದ ಆಟೋ ಚಾಲಕ  ಅಶ್ರಫ್ ನಿಧನ

ವಿಟ್ಲ: ಇಲ್ಲಿನ ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38 ವ.) ಮೇ 3ರಂದು ಹೃದಯಾಘಾತದಿಂದ ನಿಧನರಾದರು.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು.

ಮೆಸ್ಕಾಂ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Posted by Vidyamaana on 2023-08-15 15:25:16 |

Share: | | | | |


ಮೆಸ್ಕಾಂ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಪುತ್ತೂರು: ಇಲ್ಲಿನ ಮೆಸ್ಕಾಂ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನಡೆಯಿತು.

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆಯ ಸಹಾಯಕ ಅಭಿಯಂತರ ರಾಜೇಶ್ ಕೆ. ಧ್ವಜಾರೋಹಣ ನೆರವೇರಿಸಿದರು. 

ವಕೀಲರಾದ ಜಗನ್ನಾಥ್ ರೈ, ಮಹಾಬಲ ಗೌಡ, ವಿರೂಪಾಕ್ಷ ಭಟ್, ಸಂಕಪ್ಪ ಗೌಡ, ಬಿಲ್ಡಿಂಗ್ ವ್ಯವಸ್ಥಾಪಕ ಜಯಂತ್ ಕುಮಾರ್, ಮೆಸ್ಕಾಂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸಂತೋಷ್ ಜಾಧವ್ ಅವರು ಧ್ವಜಾರೋಹಣ ಕಾರ್ಯಕ್ರಮ ನಡೆಸಿಕೊಟ್ಟರು, ನಬಿಸಾಬ್ ನದಾಫ್ ಅವರು ಕಾರ್ಯಕ್ರಮವನ್ನು ವಂದಿಸಿದರು.

Recent News


Leave a Comment: