ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಮೊಬೈಲ್‌ನಲ್ಲಿ ಬೇರೆ ವ್ಯಕ್ತಿಯ ಜೊತೆ ಸಂಭಾಷಣೆ; ಪ್ರೀತಿಸಿ ಮದುವೆಯಾದವಳನ್ನೇ ಗುಂಡಿಕ್ಕಿ ಕೊಂದ ಗಂಡ

Posted by Vidyamaana on 2024-07-21 07:23:05 |

Share: | | | | |


ಮೊಬೈಲ್‌ನಲ್ಲಿ ಬೇರೆ ವ್ಯಕ್ತಿಯ ಜೊತೆ ಸಂಭಾಷಣೆ; ಪ್ರೀತಿಸಿ ಮದುವೆಯಾದವಳನ್ನೇ ಗುಂಡಿಕ್ಕಿ ಕೊಂದ ಗಂಡ

ಕೊಡಗು,: ಪತ್ನಿಯನ್ನೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ(Virajpet)ತಾಲ್ಲೂಕಿನ ಬೆಟೋಳಿ ಎಂಬ ಗ್ರಾಮದಲ್ಲಿ ನಡೆದಿದೆ. ಶಿಲ್ಪ (34) ಮೃತ ರ್ದುದೈವಿ. ಪ್ರೀತಿಸಿ ಮದುವೆಯಾದ ಗಂಡನಿಂದಲೆ ಕೊಲೆಯಾಗಿ ಹೋಗಿದ್ದಾಳೆ. 18 ವರ್ಷದ ಹಿಂದೆ ಶಿಲ್ಪ ಹಾಗೂ ಬೋಪಣ್ಣ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯ ಸಂಕೇತ ಎಂಬಂತೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಅದ್ಯಾಕೋ ಗೊತ್ತಿಲ್ಲ ಅವರ ಕುಟುಂಬದಲ್ಲಿ ಬಿರುಗಾಳಿ ಎದ್ದಿತ್ತು. ಇದರಿಂದ ಇಬ್ಬರೂ ಕೂಡ ಬೇರೆ ಬೇರೆ ಆಗಿದ್ದರಂತೆ. ಆದರೆ, ಒಂದೆ ವಾಸವಾಗಿದ್ದ ಅವರು, ಪ್ರತ್ಯೇಕ ಒಲೆಯಲ್ಲಿ ಅಡುಗೆ ಮಾಡುತ್ತಿದ್ದರು. ಬಳಿಕ ಇಬ್ಬರ ಕಟುಂಬದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನಕ್ಕೆ ಅರ್ಜಿಕೂಡ ಹಾಕಿ ಕಾಯುತ್ತಿದ್ದರು.

ಇನ್ನು ನಿನ್ನೆ(ಶುಕ್ರವಾರ) ರಾತ್ರಿ ಮೃತ ಶಿಲ್ಪ ಮೊಬೈಲ್​ನಲ್ಲಿ ಬೇರೆ ವ್ಯಕ್ತಿಯ ಜೊತೆಯಲ್ಲಿ ಸಂಭಾಷಣೆ ನಡೆಸುತ್ತಿದ್ದಳಂತೆ, ಮಾರನೇ ದಿನವೂ ಬೆಳಗ್ಗೆ 8.45ರ ಸಮಯದಲ್ಲಿ ಮತ್ತೆ ಆ ವ್ಯಕ್ತಿಯ ಜೊತೆಯಲ್ಲಿ ಮಾತುಕತೆ ನಡೆಸಿದ್ದಳಂತೆ. ಅದೇ ಸಮಯದಲ್ಲಿ ಅಡಿಗೆ ಮನೆಗೆ ಹೋದ ಗಂಡ ಬೋಪಣ್ಣ, ಕೋವಿ ಸಮೇತ ಆಗಮಿಸಿ ಶಿಲ್ಪಾಳ ಎದೆಗೆ ಗುಂಡು ಹಾರಿಸಿ ಕೊಂದು ಹಾಕಿದ್ದಾನೆ.

ಅಕ್ಷಯ ಕಾಲೇಜಿನಲ್ಲಿ ವೈವಿಧ್ಯಮಯ ಓಣಂ ಶ್ರಾವಣೋತ್ಸವ ಹಬ್ಬ ಆಚರಣೆ

Posted by Vidyamaana on 2023-08-31 10:28:45 |

Share: | | | | |


ಅಕ್ಷಯ ಕಾಲೇಜಿನಲ್ಲಿ ವೈವಿಧ್ಯಮಯ ಓಣಂ ಶ್ರಾವಣೋತ್ಸವ ಹಬ್ಬ ಆಚರಣೆ


ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆ.30 ರಂದು IQAC ಮತ್ತು ಸಾಂಸ್ಕೃತಿಕ ಸಂಘದ ಜಂಟಿ ಆಶ್ರಯದಲ್ಲಿ ಓಣಂ ‘ಶ್ರಾವಣೋತ್ಸವ’ ಹಬ್ಬವನ್ನು ಆಚರಿಸಲಾಯಿತು.  ಕಾರ್ಯಕ್ರಮವನ್ನು ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷ  ಗೋಕುಲ್‌ನಾಥ್ ದೀಪಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಬಳಿಕ  ಮಾತನಾಡಿ ಎಲ್ಲಾ ಹಬ್ಬಗಳನ್ನು ಆಚರಿಸುವ ಮೂಲಕ ವಿದ್ಯಾಸಂಸ್ಥೆಯಲ್ಲಿ ಆಚರಿಸಿ ಸೌಹಾರ್ಧತೆಯ ಸಂದೇಶವನ್ನು ಸಾರಬಹುದು. ವೃತ್ತಿಪರ ಕೋರ್ಸ್‌ಗಳ ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳಿಗೆ ಈ ಸಂಸ್ಥೆ ಆಶಾಕಿರಣವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ವಹಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಜಯಕುಮಾರ್ ಆರ್ ನಾಯಕ್, ಕಾಲೇಜಿನ ಆಡಳಿತ ನಿದೇಶಕಿ ಕಲಾವತಿ ನಡುಬೈಲು, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರಕೃತಿ ಪ್ರಾರ್ಥಿಸಿ, ಉಪನ್ಯಾಸಕಿ ರಶ್ಮಿ ಕೆ ಇವರು ಸ್ವಾಗತಿಸಿ, ಉಪನ್ಯಾಸಕರಾದ ರೋಶನ್ ಅಂಟೋನಿ ವಂದಿಸಿದರು. ಉಪನ್ಯಾಸಕ ರಾಕೇಶ್ ಕುಲದಪಾರೆ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಮೆರಗು:

ಕೇರಳದ ವಿವಿಧ ಬಗೆಯ ನೃತ್ಯ ರೂಪಕಗಳು ವಿದ್ಯಾರ್ಥಿಗಳಿಂದ ಮೂಡಿಬಂದವು.

ಕಾರ್ಯಕ್ರಮದ ನಂತರ ಕೇರಳದ ಓಣಂ ‘ಸದ್ಯ’ ಏರ್ಪಡಿಸಿದ್ದು, ಎಲ್ಲಾ ವಿದ್ಯಾರ್ಥಿಗಳು, ನೆಲದಲ್ಲಿ ಕುಳಿದು ಬಾಳೆಯಲ್ಲಿ ಓಣಂ ‘ಸದ್ಯವನ್ನು ಸವಿದರು. 

ಕಲಾರೂಪದೊಂದಿಗೆ ಆಕರ್ಷಣೀಯ ಮೆರವಣಿಗೆ:

ಅಕ್ಷಯ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಅಕ್ಷಯ ಕಾಲೇಜಿನಿಂದ ಸಂಪ್ಯ ಪೊಲೀಸ್ ಸ್ಟೇಷನ್‌ವರೆಗೆ ಕೇರಳ ಶೈಲಿಯ ಉಡುಗೆಯಲ್ಲಿ ಚೆಂಡೆ- ಸಿಂಗಾರಿ ಮೇಳದೊಂದಿಗೆ ವೈಭವೇತವಾಗಿ ಮೆರವಣಿಗೆ ನಡೆಯಿತು.

ವಾಮನ ಮತ್ತು ಮಹಾಬಲಿ ಚಕ್ರವರ್ತಿ, ಮೋಹಿಣಿಯಾಟ್ಟಂ ಮೊದಲಾದ ಕಲಾರೂಪದೊಂದಿಗೆ ಆಕರ್ಷಣೀಯ ಮೆರವಣಿಗೆ ನಡೆಯಿತು.

ಅಗ್ನಿವೀರ್ ಗೆ ಆಯ್ಕೆಯಾದ ಭವೀಶ್ ಗೆ ಮುಳಿಯ ಜ್ಯುವೆಲ್ಲರ್ಸ್‌ ವತಿಯಿಂದ ಅಭಿನಂದನೆ

Posted by Vidyamaana on 2024-06-18 13:17:16 |

Share: | | | | |


ಅಗ್ನಿವೀರ್ ಗೆ ಆಯ್ಕೆಯಾದ ಭವೀಶ್ ಗೆ ಮುಳಿಯ ಜ್ಯುವೆಲ್ಲರ್ಸ್‌ ವತಿಯಿಂದ ಅಭಿನಂದನೆ

ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿನಿ ಕುಸುಮಿತಾ ಮೃತ್ಯು

Posted by Vidyamaana on 2024-02-02 21:32:38 |

Share: | | | | |


ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿನಿ  ಕುಸುಮಿತಾ ಮೃತ್ಯು

ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.



ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸುಮಿತಾ (21) ಇಂದು ಬೆಳಗ್ಗೆ 8.30ಕ್ಕೆ ಕಾಲೇಜಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.


ಕೂಡಲೇ ಅವರನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ

ಹಿಂದು ಯುವತಿಗೆ ಲವ್‌ ಪ್ರಪೋಸ್‌ ಮಾಡ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

Posted by Vidyamaana on 2024-01-10 20:31:12 |

Share: | | | | |


ಹಿಂದು ಯುವತಿಗೆ ಲವ್‌ ಪ್ರಪೋಸ್‌ ಮಾಡ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಚಿಕ್ಕಮಗಳೂರು: ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕ ಮತ್ತು ಅತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿರುವ ಘಟನೆ (Moral Policing) ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಯುವತಿಗೆ ಚಾಕೋಲೆಟ್ ನೀಡಿ‌ ಪ್ರೀತಿ ನಿವೇದನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆದಿದೆ.ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಯುವತಿಗೆ ಲವ್‌ ಪ್ರಪೋಸ್‌ ಮಾಡುತ್ತಿದ್ದಾಗ ಯುವಕನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಹಲ್ಲೆ ನಡೆಸಿದವರು ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರು ಎನ್ನಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾದ ಮುನೀರ್, ಸಮೀರ್‌ನನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ನಗರಸಭೆ ಬೈ ಎಲೆಕ್ಷನ್ ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

Posted by Vidyamaana on 2023-12-14 20:49:14 |

Share: | | | | |


ಪುತ್ತೂರು ನಗರಸಭೆ ಬೈ ಎಲೆಕ್ಷನ್  ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ರನ್ನು., ಅದೇ ರೀತಿ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.



Leave a Comment: