ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಸುದ್ದಿಗಳು News

Posted by vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

 Share: | | | | |


ಎಚ್.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು

Posted by Vidyamaana on 2024-05-14 04:36:31 |

Share: | | | | |


ಎಚ್.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು

ಬೆಂಗಳೂರು, ಮೇ 13: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. 

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದರು.

ಕಮಲ-ದಳ ಮೈತ್ರಿ ಫಿಕ್ಸ್‌: ಬಿಜೆಪಿ ಶಾಸಕಾಂಗ ಪಕ್ಷಕ್ಕೆ ಎಚ್‌.ಡಿ. ಕುಮಾರಸ್ವಾಮಿ ನಾಯಕ?

Posted by Vidyamaana on 2023-07-16 23:19:51 |

Share: | | | | |


ಕಮಲ-ದಳ ಮೈತ್ರಿ ಫಿಕ್ಸ್‌: ಬಿಜೆಪಿ ಶಾಸಕಾಂಗ ಪಕ್ಷಕ್ಕೆ ಎಚ್‌.ಡಿ. ಕುಮಾರಸ್ವಾಮಿ ನಾಯಕ?

ಬೆಂಗಳೂರು: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕರ್ನಾಟಕದ ಮಟ್ಟಿಗೆ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿಯಾಗುವುದು  ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗಾಗಲೆ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ, ಲೋಕಸಭೆಯಲ್ಲೂ ಇದೇ ಫಲಿತಾಂಶ ಹೊರಬಂದರೆ ಎಂಬ ಆತಂಕ ಆರಂಭವಾಗಿದೆ.ಅದಕ್ಕಿಂತಲೂ ಹೆಚ್ಚಾಗಿ ದೇಶದ ವಿವಿಧೆಡೆ ಸಣ್ಣ ಪಕ್ಷಗಳು ಕಾಂಗ್ರೆಸ್‌ ನೇತೃತ್ವದಲ್ಲಿ ಒಗ್ಗೂಡುತ್ತಿವೆ. ಬಿಜೆಪಿಯೂ ಈಶಾನ್ಯ ಭಾರತ ಹಾಗೂ ಉತ್ತರ ಭಾರತದಲ್ಲಿ ಅನೇಕ ಸಣ್ಣಪುಟ್ಟ ಪಕ್ಷಗಳನ್ನು ಎನ್‌ಡಿಎಗೆ ಸೇರಿಸಿಕೊಂಡು ಶಕ್ತಪ್ರದರ್ಶನ ಮಾಡುವ ನಿರ್ಧಾರಕ್ಕೆ ಬಂದಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಒಂದಷ್ಟು ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇರುವುದು ಕರ್ನಾಟಕದಲ್ಲೆ. ಇಲ್ಲಿ ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡರೆ ತಮ್ಮ ಜತೆಗೂ ಒಂದಷ್ಟು ಪಕ್ಷಗಳಿವೆ ಎಂದು ತೋರಿಸಬಹುದು. ಕರ್ನಾಟಕದಲ್ಲಿ ಜೆಡಿಎಸ್‌ ಪಕ್ಷವನ್ನೇ ಬಿಜೆಪಿಗೆ ವಿಲೀನ ಮಾಡಿಕೊಳ್ಳಲೂ ಬಿಜೆಪಿ ನಾಯಕರು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.ನಿರಾಕರಿಸಿದ ಕುಮಾರಸ್ವಾಮಿ

ಜೆಡಿಎಸ್‌ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡುವ ಪ್ರಸ್ತಾವನೆಯನ್ನು ಕುಮಾರಸ್ವಾಮಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ವಿಲೀನ ಮಾಡಿದರೆ ತಮ್ಮ ಸ್ವತಂತ್ರ ಅಸ್ತಿತ್ವವೇ ಹೋಗಿಬಿಡುತ್ತದೆ ಎಂದಿದ್ದಾರೆ. ಆದರೆ ಈಗ ಅತ್ಯಂತ ಹೀನಾಯವಾಗಿ ಸೋತಿರುವುದರಿಂದ, ಹೆಚ್ಚು ಸಮಯ ಅಧಿಕಾರದಿಂದ ದೂರವಿರುವುದೂ ಕಷ್ಟದ ಕೆಲಸ. ಹಾಗಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕೇಂದ್ರದಲ್ಲಿ ಸಚಿವನಾಗುವ ಸಾಧ್ಯತೆಗೆ ಕುಮಾರಸ್ವಾಮಿ ಹೆಚ್ಚು ಒಲವು ತೋರಿದ್ದಾರೆ ಎನ್ನಲಾಗಿದೆ. ಆದರೆ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ.ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಮಾಡಿದರೆ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವುದರ ಮೂಲಕ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನವನ್ನೂ ನೀಡುವುದಾಗಿ ಬಿಜೆಪಿ ತಿಳಿಸಿದೆ. ಇದೇ ಕಾರಣಕ್ಕೆ ಇಲ್ಲಿವರೆಗೂ ಬಿಜೆಪಿಗೆ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡದೆ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಜುಲೈ 18 ರಂದು ಎನ್‌ಡಿಎ ಸಭೆ ದೆಹಲಿಯಲ್ಲಿ ನಡೆಯಲಿದ್ದು, ಎಚ್‌.ಡಿ. ದೇವೇಗೌಡರು ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರಿಗೂ ಆಹ್ವಾನ ನೀಡಲಾಗಿದೆ. ಈ ಸಭೆಯಲ್ಲಿ ಜೆಡಿಎಸ್‌ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲವೂ ಅವಲಂಬನೆಯಾಗಿದೆ ಎಂದು ಮೂಲಗಳು ತಿಳಿಸಿವೆ.ಮೈತ್ರಿ ಸುಳಿವು ನೀಡಿದ ಬೊಮ್ಮಾಯಿ

ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ನಡುವೆ ಮಾತುಕತೆ ನಡೆದಿದೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ‌. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದರು. ವಿಪಕ್ಷ ನಾಯಕನ ಸ್ಥಾನ ಜುಲೈ 18ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ ಎಂದು ತಿಳಿಸಿದರು.


ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಪ್ರತಿಕ್ರಿಯಿಸಿ, ನನಗೆ ಬಂದ ಮಾಹಿತಿ ಪ್ರಕಾರ ದೇವೇಗೌಡರು, ಕುಮಾರಸ್ವಾಮಿ ಅವರು ದೆಹಲಿಗೆ ಹೋಗಬಹುದು. ಇಬ್ಬರಿಗೂ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಆಹ್ವಾನ ಕೊಟ್ಟಿರಬಹುದು. ಏನೇ ನಿರ್ಣಯ ಇದ್ದರೂ ನಮ್ಮ ಹೈಕಮಾಂಡ್ ನಾಯಕರು ತೆಗೆದುಕೊಳ್ಳುತ್ತಾರೆ.2047 ಕ್ಕೆ ಭಾರತವನ್ನು ನಂಬರ್ ಒನ್ ಮಾಡುವುದು ಮೋದಿಯವರ ಉದ್ದೇಶ. ನಂಬರ್ ಒನ್ ಪಾರ್ಟಿ ಮಾಡೋದಲ್ಲ. ವೋಟ್ ಬ್ಯಾಂಕ್ ಮಾಡುವುದು ಮೋದಿ ಉದ್ದೇಶವಲ್ಲ. ಅಭಿವೃದ್ಧಿಯ ದೇಶ ಮಾಡುವುದು ಮೋದಿ ಉದ್ದೇಶ. ಇದರಲ್ಲಿ ಯಾವುದೇ ಸ್ವಾರ್ಥವಿಲ್ಲ. ಮೋದಿಯನ್ನು ದೇಶದ ಜನತೆ ಮತ್ತೊಮ್ಮ ಪ್ರಧಾನಿಯನ್ನಾಗಿ ಮಾಡುವುದು ನಿಶ್ಚಿತ ಎಂದರು.


ಆಯನೂರುಗೆ ಕಿರಿಕಿರಿ

ಜೆಡಿಎಸ್‌ ಜತೆಗೆ ಬಿಜೆಪಿ ಮೈತ್ರಿಯಾಗುವುದಕ್ಕೆ ಮಾಜಿ ಸಂಸದ ಆಯನೂರು ಮಂಜುನಾಥ್ ಪ್ರತಿಕ್ರಿಯಿಸಿದ್ದಾರೆ. ಜು.18ರ ನಂತರ ರಾಜಕೀಯ ಸ್ಥಿತ್ಯಂತರ ನಡೆಯುವ ಸಾಧ್ಯತೆ ಇದೆ. ಎಚ್‌. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಆಗಲೂಬಹುದು. ಬಿಟ್ಟು ಬಂದವರನ್ನೇ ಅಪ್ಪಿಕೊಳ್ಳುವ ಪರಿಸ್ಥಿತಿ ಬರುತ್ತಾ? ನನಗಂತೂ ಕಷ್ಟದ ಕೆಲಸ. ಸಂಪರ್ಕ ಕಳಕೊಂಡವರ ಜೊತೆ ಮತ್ತೆ ಸಂಬಂಧ ಬೆಳೆಸುವ ಸ್ಥಿತಿ ಬಾರದಿರಲಿ. ನಾನಂತೂ ಮತ್ತೆ ಎಂಎಲ್‌ಸಿ ಆಗಬೇಕೆಂದಿದ್ದೇನೆ. ಮಾಜಿ ಶಾಸಕ ಕೆ. ಬಿ.ಪ್ರಸನ್ನಕುಮಾರ್ ಮತ್ತೆ ಶಾಸಕರಾಗಲಿ ಎಂದಿದ್ದಾರೆ

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

Posted by Vidyamaana on 2023-06-09 08:52:56 |

Share: | | | | |


ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಉಸ್ತುವಾರಿ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಗಮನಿಸಿ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!

Posted by Vidyamaana on 2024-06-21 14:41:56 |

Share: | | | | |


ಗಮನಿಸಿ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ!

ಬೆಂಗಳೂರು  : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದವರ ಪಟ್ಟಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್‌ ಸೈಟ್‌ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು.

ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:-

ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ

Posted by Vidyamaana on 2023-06-14 15:44:21 |

Share: | | | | |


ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ (Uniform Civil Code) ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ.ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿ ಕುರಿತು 22ನೇ ಭಾರತೀಯ ಕಾನೂನು ಆಯೋಗವು ಜನರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ದೇಶದ ನಾಗರಿಕರು, ಪ್ರಮುಖ ಧಾರ್ಮಿಕ ಸಂಸ್ಥೆಗಳು ಏಕರೂಪ ನಾಗರಿಕ ಸಂಹಿತೆ ಕುರಿತು 30 ದಿನಗಳಲ್ಲಿ ಅಭಿಪ್ರಾಯ ಸಲ್ಲಿಸಬೇಕು ಎಂದು ಕಾನೂನು ಆಯೋಗ ಸೂಚಿಸಿದೆ.


ದೇಶದ ನ್ಯಾಯಾಲಯಗಳು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿಯೇ ಸಿದ್ಧ ಎಂದು ಈಗಾಗಲೇ ಹೇಳಿದ್ದಾರೆ. ಇದರ ಬೆನ್ನಲ್ಲೇ, ಕಾನೂನು ಆಯೋಗವು ಸಾರ್ವಜನಿಕರಿಂದ, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವುದು ಪ್ರಮುಖ ವಿಷಯವಾಗಿದೆ. ಜನ ಹಾಗೂ ಧಾರ್ಮಿಕ ಸಂಸ್ಥೆಗಳ ಸಹಮತದೊಂದಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಆಯೋಗ ಮುಂದಾಗಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಜಾತಿ, ಧರ್ಮ, ಪಂಥಗಳ ಭೇದ-ಭಾವ ಇಲ್ಲದೆ, ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬುದೇ ಏಕರೂಪ ನಾಗರಿಕ ಸಂಹಿತೆಯಾಗಿದೆ. ಸಂವಿಧಾನದ 44ನೇ ವಿಧಿಯು ಕೂಡ ಏಕರೂಪ ನಾಗರಿಕ ಸಂಹಿತೆ ಇರಬೇಕು ಎಂದು ಹೇಳುತ್ತದೆ. ಹಾಗಾಗಿ, ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು 2019ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಎಲ್ಲರಿಗೂ ಒಂದೇ ಕಾನೂನು ಜಾರಿಗೆ ಬರುತ್ತದೆ. ಇದಕ್ಕಾಗಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬಾರದು ಎಂದು ಹಲವು ಧಾರ್ಮಿಕ ಸಂಸ್ಥೆಗಳು, ರಾಜಕಾರಣಿಗಳ ಒತ್ತಾಯವಾಗಿದೆ.ಜನರು ಹಾಗೂ ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯ ಪಡೆದುಕೊಂಡೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ತೀರ್ಮಾನಿಸಿದ ಕಾರಣ ಸಾಮಾನ್ಯ ಜನರು ಕೂಡ ಸಂಹಿತೆ ಜಾರಿ ಕುರಿತಂತೆ ಅಭಿಪ್ರಾಯ ಸಲ್ಲಿಸಬಹುದಾಗಿದೆ. ಭಾರತೀಯ ಕಾನೂನು ಆಯೋಗದ membersecretary-lci@gov.inಗೆ ಇ-ಮೇಲ್‌ ಮಾಡುವ ಮೂಲಕ ನಿಮ್ಮ ಅಭಿಪ್ರಾಯವನ್ನೂ ದಾಖಲಿಸಬಹುದು. ಅಂದಹಾಗೆ, ನೀವು ಅಭಿಪ್ರಾಯ ತಿಳಿಸಲು 30 ದಿನ ಮಾತ್ರ ಕಾಲಾವಕಾಶವಿದೆ. ಅಧಿಸೂಚನೆ ಹೊರಡಿಸಲಾದ 30 ದಿನಗಳೊಳಗೆ ಅಭಿಪ್ರಾಯ ಸಲ್ಲಿಸಬಹುದು.

ಸುಳ್ಯ ಪೈಚಾರ ನಿವಾಸಿ ಇಸಾಕ್ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-03-04 14:42:34 |

Share: | | | | |


ಸುಳ್ಯ ಪೈಚಾರ ನಿವಾಸಿ ಇಸಾಕ್  ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾ :04 ರಂದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ  ಪೈಚಾರ್‌ ಮೂಲದ ನಿವಾಸಿ ಲಾರಿ ಚಾಲಕ ಇಸಾಕ್ ಎಂದು ಗುರುತಿಸಲಾಗಿದೆ.   ಮಾ ೨ ರಂದು ರೆಸಿಡೆನ್ಸಿಗೆ ಬಂದಿದ್ದರು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent News


Leave a Comment: