ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಬಿಜೆಪಿ ಟಿಕೆಟ್ ಹಂಚಿಕೆ ಅಸಮಾಧಾನ, ಪಟ್ಟಿ ಪ್ರಕಟಕ್ಕೂ ಮುನ್ನವೇ ಬೆಂಗಳೂರಿಗೆ ಹೊರಟ ಬಿಎಸ್‌ವೈ!

Posted by Vidyamaana on 2023-04-10 16:01:11 |

Share: | | | | |


ಬಿಜೆಪಿ ಟಿಕೆಟ್ ಹಂಚಿಕೆ ಅಸಮಾಧಾನ, ಪಟ್ಟಿ ಪ್ರಕಟಕ್ಕೂ ಮುನ್ನವೇ ಬೆಂಗಳೂರಿಗೆ ಹೊರಟ ಬಿಎಸ್‌ವೈ!

ನವದೆಹಲಿ (ಏ.10): ಟಿಕೆಟ್ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ನಡೆಯುತ್ತಿರುವ ವರಿಷ್ಟರ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೇಸರಗೊಂಡಿದ್ದಾರೆ. ಹೀಗಾಗಿ ಪಟ್ಟಿ ಪ್ರಕಟಕ್ಕೂ ಮುನ್ನವೇ ದೆಹಲಿಯಿಂದ ಬಿಎಸ್‌ವೈ ಬೆಂಗಳೂರಿಗೆ ಹೊರಟಿದ್ದಾರೆ.ಸಂಜೆ 5:15 ವಿಮಾನದಲ್ಲಿ ಬೆಂಗಳೂರಿಗೆ ಹೊರಟಿದ್ದಾರೆ. ಹೈಕಮಾಂಡ್ ಗೆ ನಾನು ಹೇಳುವುದೆಲ್ಲಾ ಮುಗಿದಿದೆ ಹಾಗಾಗಿ ಹೊರಡುವೆ ಎಂದು ಆಪ್ತರ ಬಳಿ ಬಿಎಸ್ ವೈ ಹೇಳಿಕೊಂಡಿದ್ದಾರೆ. ತಮ್ಮ ಮನೆಯಿಂದ ಹೊರಡುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾರಿನ ತನಕ ಬಂದು ಬಿಟ್ಟು ಹೋಗಿದ್ದಾರೆ. ನಡ್ಡಾ ಮನೆಗೆ ಬಂದು ಕೇವಲ 10 ನಿಮಿಷದಲ್ಲೇ ಯಡಿಯೂರಪ್ಪ ತೆರಳಿದ್ದಾರೆ.ಸಿಎಂ ಹೋದ ಬಳಿಕ ನಡ್ಡಾ ಮನೆಗೆ ಬಂದ ಬಿಎಸ್ ವೈ

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಳಿಕ ಕರ್ನಾಟಕ ನಾಯಕರ ಪ್ರತ್ಯೇಕ ಸಭೆಗಳಲ್ಲಿ ಬಿಎಸ್ ಯಡಿಯೂರಪ್ಪ ಭಾಗಿಯಾಗಿರಲಿಲ್ಲ ಎಂದು ತಿಳಿದುಬಂದಿದೆ. ಪ್ರತ್ಯೇಕ ಸಭೆಯೇ ಈ ಬೇಸರಕ್ಕೆ ಕಾರಣ ಎನ್ನಲಾಗಿದೆ. ನಿನ್ನೆ ಸಭೆಯ ಬಳಿಕ ಬಿಎಸ್ ವೈ ಬೇಸರದಿಂದ ಹೊರ ಹೋಗಿದ್ದರು. ಹೀಗಾಗಿ ಇಂದಿನ ಸಭೆಗೆ ಸಿಎಂ ಬೊಮ್ಮಾಯಿ ಹೋದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸಕ್ಕೆ ಬಿಎಸ್ ವೈ ಬಂದಿದ್ದರು. 

ಯಡಿಯೂರಪ್ಪ ಬೇಸರಗೊಂಡಿದ್ದರು ಎಂಬ ಚರ್ಚೆಯ ನಡುವೆಯೇ ಜೆಪಿ ನಡ್ಡಾ ಮನೆಯಿಂದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತೆರಳುವಾಗ ಗೇಟಿನವರೆಗೂ ಬಂದು ಜೆಪಿ ನಡ್ಡಾ ಬಿಟ್ಟು ಹೋದರು. ನಡ್ಡಾ ಮನೆಗೆ ಬಂದು ಕೇವಲ 10 ನಿಮೀಷದಲ್ಲೇ ಯಡಿಯೂರಪ್ಪ ತೆರಳಿದರು.ಇನ್ನು ಬಿಜೆಪಿ ಸಭೆ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ನಿನ್ನೆ ಎಲ್ಲಾ ಕ್ಷೇತ್ರದ ಬಗ್ಗೆ ಆಗಿತ್ತು. ಆದರೆ ಕೆಲವೊಂದು ಕ್ಷೇತ್ರದ ಬಗ್ಗೆ ಗೊಂದಲವಾಗಿತ್ತು. ಅದರ ಬಗ್ಗೆ ಅಧ್ಯಕ್ಷರು ವಿವರ ಕೇಳಿದ್ರು ಹಾಗಾಗಿ ವಿವರ ನೀಡಿ ಬಂದಿದ್ದೇನೆ. ಇಂದು ರಾತ್ರಿ ಅಥವಾ ನಾಳೆ ಟಿಕೆಟ್ ಹಂಚಿಕೆ ಲಿಸ್ಟ್ ಬಿಡುಗಡೆಯಾಗಲಿದೆ. ನಾನು ಕೊಟ್ಟಿರೋ ಎಲ್ಲಾ ಅಭಿಪ್ರಾಯಗಳನ್ನು ನಾಯಕರು ಕೇಳಿದ್ದಾರೆ ಎಂದರು.

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಹೆತ್ತವರ ಆಶೀರ್ವಾದ ಪಡೆದ ಪುತ್ತಿಲ

Posted by Vidyamaana on 2023-04-18 12:40:41 |

Share: | | | | |


ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಹೆತ್ತವರ  ಆಶೀರ್ವಾದ ಪಡೆದ  ಪುತ್ತಿಲ

ಪುತ್ತೂರು : ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮಂಗಳೂರು ಜಿಲ್ಲಾ ಘಟಕದ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ರವರ ಮನೆಗೆ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿದರು.ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಪುತ್ತಿಲ ರವರು ಪ್ರವೀಣ್ ತಂದೆ-ತಾಯಿಯ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಹಲವು ಮಂದಿ ಉಪಸ್ಥಿತರಿದ್ದರು.

ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಬಂಧನ

Posted by Vidyamaana on 2023-08-12 06:01:05 |

Share: | | | | |


ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಬಂಧನ

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ (Goond Act) ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು (CCB Police) ಆತನನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಸಮಾಜದಲ್ಲಿ ಶಾಂತಿ‌ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲೆ ಮೇಲಿಂದ‌ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪುನೀತ್ ಕೆರೆಹಳ್ಳಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ  ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.


ಜಾಮೀನಿನ ಮೇಲೆ ಹೊರಗೆ ಬಂದಿದ್ದ ಪುನೀತ್ ಕೆರೆಹಳ್ಳಿ

ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಸಾಯಿಸಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿತ್ತು.

ಏನಿದು ಗೂಂಡಾ ಕಾಯ್ದೆ?

1985ರಲ್ಲಿ ಆಗಿನ ಜನತಾ ಪಕ್ಷದ ಸರ್ಕಾರ ಗೂಂಡಾ ಚಟುವಟಿಕೆ ನಿಯಂತ್ರಿಸಲು ಈ ಕಾಯ್ದೆಯನ್ನು ಜಾರಿಗೆ ತಂದಿತ್ತು. ಜೂಜುಕೋರರು, ಕಳ್ಳ ಬಟ್ಟಿ ವ್ಯಾಪಾರಿಗಳು, ಮಾದಕ ವಸ್ತು ಸಾಗಾಣಿಕೆ ಮತ್ತು ಮಾರಾಟಗಾರರ ವಿರುದ್ಧ ಈ ಕಾಯ್ದೆಯ ಮೂಲಕ ಕ್ರಮಕೈಗೊಳ್ಳಬಹುದಾಗಿತ್ತು. ಈ ಕಾಯ್ದೆಯಡಿ ಬಂಧಿಸಲಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯವಿರುವುದಿಲ್ಲ. ಅಲ್ಲದೇ ಪೊಲೀಸ್‌ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೆ ನೇರವಾಗಿ ಜೈಲಿಗೆ ಕಳುಹಿಸಬಹುದು. ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿತನಾದಲ್ಲಿ ಅಪರಾಧಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ.


ಗೂಂಡಾ ತಡೆ ಕಾಯ್ದೆಯನ್ನು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಪೊಲೀಸ್‌ ಆಯುಕ್ತರಿಗೆ ಮ್ಯಾಜಿಸ್ಟೀರಿಯಲ್‌ ಅಧಿಕಾರವಿರುತ್ತದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅಥವಾ ಪೊಲೀಸ್‌ ಆಯುಕ್ತರಿಗೆ ಈ ಅಧಿಕಾರವಿದೆ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಚಟುವಟಿಕೆಗಳ ಬಗ್ಗೆ ಕೆಳಹಂತದ ಪೊಲೀಸ್‌ ಅಧಿಕಾರಿಗಳು ನೀಡುವ ವರದಿಯನ್ನು ಪರಿಶೀಲಿಸಿ ಪೊಲೀಸ್‌ ಆಯುಕ್ತರು ಅಥವಾ ಜಿಲ್ಲಾಧಿಕಾರಿ ಕಾಯ್ದೆಯನ್ನು ಜಾರಿಗೊಳಿಸುತ್ತಾರೆ

ಪುತ್ತೂರಿನಲ್ಲಿ ಇತಿಹಾಸ ಸೃಷ್ಟಿಸಿದ ಸಸ್ಯ ಜಾತ್ರೆ : ಸುದ್ದಿ ಮಾಹಿತಿ ಟ್ರಸ್ಟ್ ಸಾರಥ್ಯ

Posted by Vidyamaana on 2023-01-11 13:06:29 |

Share: | | | | |


ಪುತ್ತೂರಿನಲ್ಲಿ ಇತಿಹಾಸ ಸೃಷ್ಟಿಸಿದ ಸಸ್ಯ ಜಾತ್ರೆ : ಸುದ್ದಿ ಮಾಹಿತಿ ಟ್ರಸ್ಟ್ ಸಾರಥ್ಯ

  1. ಪುತ್ತೂರು: ಸುದ್ದಿ ಮಾಹಿತಿ ಟ್ರಸ್ಟ್ ನೇತೃತ್ವದಲ್ಲಿ ..ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿನ ಕಿಲ್ಲೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಸಸ್ಯಜಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ.ಪುತ್ತೂರಿನಲ್ಲಿ ಇದೇ ಪ್ರಥಮ ಬಾರಿಗೆ ನಡೆದ ಸಸ್ಯಜಾತ್ರೆ ಹೊಸ ಕ್ರಾಂತಿಯನ್ನುಂಟು ಮಾಡಿದೆ ಮಾತ್ರವಲ್ಲದೆ ಪುತ್ತೂರಿನಲ್ಲಿ ಚರಿತ್ರೆ ಸೃಷ್ಟಿಸಿದೆ ಎಂದು ಸಸ್ಯಜಾತ್ರೆಯಲ್ಲಿ ಪಾಲ್ಗೊಂಡವರಿಂದ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತವಾಗಿದೆ.ಎರಡನೇ ದಿನ ಜಾತ್ರೋಪಾದಿಯಲ್ಲಿ ಜನರು ಆಗಮಿಸಿದ್ದು `ಸುದ್ದಿಯವರು ಆಯೋಜಿಸಿರುವ ಕಾರ್ಯಕ್ರಮ ಅದ್ಭುತ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 

ನಾಸೀರ್ ತುಂಬೆ ಹೃದಯಾಘಾತದಿಂದ ನಿಧನ

Posted by Vidyamaana on 2023-10-28 17:15:24 |

Share: | | | | |


ನಾಸೀರ್ ತುಂಬೆ ಹೃದಯಾಘಾತದಿಂದ ನಿಧನ


ತುಂಬೆ :- ತುಂಬೆ ನಿವಾಸಿಯಾಗಿರುವ ಹಾಗೂ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ರವರ ಸಹೋದರ ನಾಸೀರ್ ತುಂಬೆ ರವರು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅ 28 ರಂದು ನಿಧನರಾದರು_*

ಮಲ್ಪೆ: ಲಾರಿಯೊಳಗೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

Posted by Vidyamaana on 2023-09-14 16:12:25 |

Share: | | | | |


ಮಲ್ಪೆ: ಲಾರಿಯೊಳಗೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು

ಮಲ್ಪೆ, ಸೆ.14: ಕಂಟೈನರ್ ಲಾರಿಯಿಂದ ಗ್ರಾನೈಟ್ ಇಳಿಸುತ್ತಿದ್ದ ವೇಳೆ ಮೈಮೇಲೆ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.


ಮೃತರನ್ನು ಒರಿಸ್ಸಾದ ಕಾರ್ಮಿಕರಾದ ಬಾಬುಲ್ಲ(35) ಮತ್ತು ಭಾಸ್ಕರ (35) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ನಿರ್ಮಾಣವಾಗುತ್ತಿರುವ ಮನೆ ಯೊಂದಕ್ಕೆ ಕಂಟೈನರ್ ಲಾರಿಯಲ್ಲಿ ತಂದಿದ್ದ ಗ್ರಾನೈಟ್ ಇಳಿಸುತ್ತಿದ್ದಾಗ ಲಾರಿಯೊಳಗೆ ಗ್ರಾನೈಟ್ ಜಾರಿ ಮೈಮೇಲೆ ಬಿದ್ದಿದೆ ಎನ್ನಲಾಗಿದೆ.


ಗಂಭೀರವಾಗಿ ಗಾಯಗೊಂಡ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

Recent News


Leave a Comment: