ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಎಲ್ಲೂ ಹೇಳದ ತನ್ನ ಎಂಗೇಜ್ಮೆಂಟ್ ರಿಂಗ್ ಕಥೆ ಬಿಚ್ಚಿಟ್ಟ ನಟಿ ಪ್ರಿಯಾಮಣಿ

Posted by Vidyamaana on 2024-02-22 17:43:09 |

Share: | | | | |


ಎಲ್ಲೂ ಹೇಳದ ತನ್ನ ಎಂಗೇಜ್ಮೆಂಟ್ ರಿಂಗ್ ಕಥೆ ಬಿಚ್ಚಿಟ್ಟ ನಟಿ ಪ್ರಿಯಾಮಣಿ

ಪುತ್ತೂರು: ಚಿನ್ನಾಭರಣ ಹಾಗೂ ಡೈಮಂಡ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್’ನ 10ನೇ ಮಳಿಗೆ ಪುತ್ತೂರಿನ ಏಳ್ಮುಡಿಯಲ್ಲಿ ಫೆ. 22ರಂದು ಉದ್ಘಾಟನೆಗೊಂಡಿತು.

ಮಳಿಗೆ ಉದ್ಘಾಟಿಸಿ ಮಾತನಾಡಿದ ಬಹುಭಾಷಾ ತಾರೆ ಪ್ರಿಯಾಮಣಿ ಅವರು, 6 ವರ್ಷಗಳ ಹಿಂದೆ ತನ್ನ ಗಂಡನ ಜೊತೆ ಖರೀದಿಸಿದ ತನ್ನ ಎಂಗೇಜ್ಮೆಂಟ್ ರಿಂಗಿನ ಕಥೆಯನ್ನು ಬಿಚ್ಚಿಟ್ಟರು.

ಇದುವರೆಗೆ ತಾನು ಎಲ್ಲೂ ಈ ವಿಚಾರವನ್ನು ಹೇಳಿಕೊಂಡಿರಲಿಲ್ಲ. ಇದೀಗ ಮೊದಲ ಬಾರಿಗೆ ಹೇಳುತ್ತಿದ್ದೇನೆ. 6 ವರ್ಷಗಳ ಹಿಂದೆ ನನ್ನ ಗಂಡನ ಜೊತೆ ಎಂಗೇಜ್ಮೆಂಟ್ ರಿಂಗ್ ಖರೀದಿಸಿದ್ದು, ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್’ನಲ್ಲಿ. ಈಗಲೂ ಅದೇ ರಿಂಗನ್ನು ನಾನು ಧರಿಸಿಕೊಂಡಿದ್ದೇನೆ ಎಂದು ಹೇಳಿದರು.

ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್ ಚಿನ್ನಾಭರಣಕ್ಕೆ ಹೆಸರುವಾಸಿ. ಇದೀಗ 10ನೇ ಮಳಿಗೆ ಪುತ್ತೂರಿನಲ್ಲಿ ಶುಭಾರಂಭಗೊಳ್ಳುತ್ತಿದೆ. ಇದು ಇನ್ನಷ್ಟು ಅಭಿವೃದ್ಧಿಯಾಗಿ 100ನೇ ಮಳಿಗೆ ತೆರೆಯುವಂತಾಗಲಿ ಎಂದು ಶುಭಹಾರೈಸಿದರು.

ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ಎಸ್.ಡಿ.ಪಿ.ಐ. ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಮೌಂಟೇನ್ ವ್ಯೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಪಿ. ಅಹಮದ್ ಹಾಜಿ ಆಕರ್ಷಣ್, ಸುದಾನ ವಸತಿಯುತ ಶಾಲಾ ಸಂಚಾಲಕ ರೆವರೆಂಡ್ ವಿಜಯ್ ಹಾರ್ವಿನ್, ಲಯನ್ಸ್ ಜಿಲ್ಲಾ 317ಡಿ ಲಿಯೋ ಅಧ್ಯಕ್ಷೆ ಡಾ. ರಂಜಿತಾ ಎಚ್. ಶೆಟ್ಟಿ ಕಾವು, ಕಾವು ಹೇಮನಾಥ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿ, ಅಶ್ರಫ್ ಕಲ್ಲೇಗ, ಶಕೂರ್ ಹಾಜಿ, ನೂರುದ್ದೀನ್ ಸಾಲ್ಮರ, ಇಬ್ರಾಹಿಂ ಗೋಳಿಕಟ್ಟೆ, ಟಿ.ಎಂ. ಶಹೀದ್ ಮೊದಲಾದವರು ಶುಭಹಾರೈಸಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅಬ್ದುಲ್ ರಹೂಫ್, ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹೀಮ್, ಜನರಲ್ ಮ್ಯಾನೇಜರ್ ಉಣ್ಣಿತ್ತನ್, ಬ್ರಾಂಚ್ ಮ್ಯಾನೇಜರ್ ಕೆ.ಎಸ್. ಮುಸ್ತಫಾ ಕಕ್ಕಿಂಜೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಟ್ಲ : ಹೊಟೇಲ್ ಬಳಿಯಲ್ಲಿ ಕುಡಿದು ಬಿದ್ದು ವ್ಯಕ್ತಿ ಮೃತ್ಯು

Posted by Vidyamaana on 2024-01-31 15:13:50 |

Share: | | | | |


ವಿಟ್ಲ : ಹೊಟೇಲ್ ಬಳಿಯಲ್ಲಿ ಕುಡಿದು ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ: ಮಂಗಳೂರು ರಸ್ತೆಯ ವಿಜಯ ಹೊಟೇಲ್ ಬಳಿಯಲ್ಲಿ ವ್ಯಕ್ತಿಯೋರ್ವರು ಕುಡಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.


ಮೃತ ಪಟ್ಟ ವ್ಯಕ್ತಿ ಅಪ್ಪೇರಿಪಾದೆ ನಿವಾಸಿ ಸಂದೀಪ್ (45).


ಕೂಲಿ ಕೆಲಸ ಮಾಡುತ್ತಿದ್ದ ಸಂದೀಪ್ ರವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ವಿಪರೀತ ಕುಡಿತದ ಚಟವಿದ್ದು, ಇದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರಿಂದ ತಿಳಿದು ಬಂದಿದೆ,

BREAKING: ಈಶ್ವರಪ್ಪನ ಪುತ್ರನಿಗೂ ಶುರುವಾಯ್ತು ಅಶ್ಲೀಲ ಸಿಡಿ ಭಯ!:ಅಶ್ಲೀಲ ವಿಡಿಯೊ ಪ್ರಸಾರಕ್ಕೆ ಕೋರ್ಟ್ ನಿರ್ಬಂಧ

Posted by Vidyamaana on 2024-05-01 04:35:20 |

Share: | | | | |


BREAKING: ಈಶ್ವರಪ್ಪನ ಪುತ್ರನಿಗೂ ಶುರುವಾಯ್ತು ಅಶ್ಲೀಲ ಸಿಡಿ ಭಯ!:ಅಶ್ಲೀಲ ವಿಡಿಯೊ ಪ್ರಸಾರಕ್ಕೆ ಕೋರ್ಟ್ ನಿರ್ಬಂಧ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.

ಬೆಳ್ತಂಗಡಿ, ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ; ರೊಚ್ಚಿಗೆದ್ದ ಆಟಗಾರರಿಂದ ಮೈದಾನದಲ್ಲೇ ಫೈಟಿಂಗ್

Posted by Vidyamaana on 2023-02-22 04:33:01 |

Share: | | | | |


ಬೆಳ್ತಂಗಡಿ, ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ; ರೊಚ್ಚಿಗೆದ್ದ ಆಟಗಾರರಿಂದ ಮೈದಾನದಲ್ಲೇ ಫೈಟಿಂಗ್

ಬೆಳ್ತಂಗಡಿ: ಕಬಡ್ಡಿ ಪಂದ್ಯಾವಳಿಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನಗೊಂಡ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಆಟಗಾರರ ಮಧ್ಯೆ ಗಲಾಟೆ ನಡೆದಿದ್ದು, ಸದ್ಯ ಹೊಡೆದಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದ ಆಡೂರು ಮೈದಾನದಲ್ಲಿ ಫೆ. 19ರಂದು . ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಕಬಡ್ಡಿ ವಂದ್ಯಾವಳಿ ಆಯೋಜಿಸಿದ್ದರು. ಇದರಲ್ಲಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಹಾಗೂ ಆಟಗಾರರ ಮಧ್ಯೆ ನಡೆದ ಹೊಡೆದಾಟವಾಗಿದೆ.

ಬೆಳ್ತಂಗಡಿ : ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ-2023

Posted by Vidyamaana on 2023-09-16 20:07:30 |

Share: | | | | |


ಬೆಳ್ತಂಗಡಿ : ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ-2023

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ಬ್ಲಾಕ್ ಸಮಿತಿ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳನ್ನು ಭೇಟಿಯಾಗಿ ಮುಕ್ತ ಚರ್ಚೆಯನ್ನು ನಡೆಸಿದರು.

         ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಗಮಿಸಿದ್ದರು.

        ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಪಕ್ಷದ ಕಾರ್ಯ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ  ಪದಾಧಿಕಾರಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಅವರು ಸಮಾರೋಪ ಭಾಷಣ ಮಾಡಿದರು.

ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಅವರು ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

        ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಕುವೆಟ್ಟು ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

     ಕುವೆಟ್ಟು ಬ್ಲಾಕ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ,

ಜೊತೆ ಕಾರ್ಯದರ್ಶಿ ಆಸೀಫ್ ಬಂಗೇರುಕಟ್ಟೆ ಧನ್ಯವಾದಗೈದರು.

ವಾರ್ ರೂಂ ಆದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿ

Posted by Vidyamaana on 2023-07-24 15:38:28 |

Share: | | | | |


ವಾರ್ ರೂಂ ಆದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿ

ಮಂಗಳೂರು: ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ.

ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ ನೆರವಿನ ಸಹಾಯ ಹಸ್ತಕ್ಕಾಗಿ ಈ ಕೆಳಕಂಡ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ ರೂಮ್ (ಲ್ಯಾಂಡ್ ಲೈನ್): 0824-2448888 ಮೊ: 9606595356/9606595394

Recent News


Leave a Comment: