ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಜಿಗಿದ ಕಾರು..ಚಾಲಕ ಪವಾಡಸದೃಶ ಪಾರು.!

Posted by Vidyamaana on 2024-07-07 08:18:56 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಜಿಗಿದ ಕಾರು..ಚಾಲಕ ಪವಾಡಸದೃಶ ಪಾರು.!

ವಿಟ್ಲ : ಆಕ್ಟಿವಾ ಸವಾರನ ಬದುಕಿಸಲು ಹೋದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಬಿದ್ದ ಘಟನೆ ವಿಟ್ಲದ ಅರಮನೆ ರಸ್ತೆಯ ಭಗವತಿ ದೇವಸ್ಥಾನದ ಮುಂಭಾಗ ಎಂಬಲ್ಲಿ ನಡೆದಿದೆ.

ಪುತ್ತೂರು ಪೇಟೆಡ್ ಇಡೀ ಕರೆಂಟ್ ಇಜ್ಜಿಗೆ

Posted by Vidyamaana on 2023-11-04 04:48:05 |

Share: | | | | |


ಪುತ್ತೂರು ಪೇಟೆಡ್ ಇಡೀ ಕರೆಂಟ್ ಇಜ್ಜಿಗೆ


ಪುತ್ತೂರು : ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ನ.4ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ಹಾರಾಡಿ, ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಕೆಎಸ್‌ಆರ್‌ಟಿಸಿ ಬಸ್‌ ಸ್ಟ್ಯಾಂಡ್, ಕಲ್ಲಾರೆ, ದರ್ಬೆ ಮತ್ತು ಏಳ್ಳುಡಿ ಪರಿಸರದ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

Posted by Vidyamaana on 2024-03-02 07:21:16 |

Share: | | | | |


ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆ ಬಂದಿದ್ದಾನೆ.

ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಕ್ಯಾಪ್ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ.ಬ್ಯಾಗ್ ಇಟ್ಟು ಒಂದು ಘಂಟೆಯ ನಂತರ ಬ್ಲಾಸ್ಟ್ ಆಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ಯಾರೆಂದು ಆಲ್ ಮೋಸ್ಟ್ ಗೊತ್ತಾಗಿದೆ. ಆರೋಪಿ ಪತ್ತೆಗಾಗಿ ಸಿಸಿಬಿಯಿಂದ ಕಾರ್ಯಾಚರಣೆ ನಡೆಸಿದ್ದು, ಕೆಲವೇ ಘಂಟೆಗಳಲ್ಲಿ ಆರೋಪಿಯನ್ನ ಬಂಧನ ಮಾಡಲಾಗತ್ತದೆ ಎಂದು ಅವರು ಹೇಳಿದರು.

ಶಂಕಿತ 28-30 ವರ್ಷ ವಯಸ್ಸಿನವನಾಗಿದ್ದು, BMTC ಬಸ್‌ನಲ್ಲಿ ರಾಮೇಶ್ವರಂ ಕೆಫೆಗೆ ಬಂದು ಕೂಪನ್ ಖರೀದಿಸಿ, ರವಾ ಇಡ್ಲಿ ಆರ್ಡರ್ ಮಾಡಿ, ಬ್ಯಾಗ್ ಇಟ್ಟು ಹೊರಟುಹೋಗಿದ್ದಾನೆ. ಶೋಧ ಕಾರ್ಯಕ್ಕಾಗಿ 8 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆತನ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ.

ವಿಟ್ಲ : ಶೆಡ್ ನಲ್ಲಿ ನಿಲ್ಲಿಸಿದ್ದ ಪಿಕಪ್ ಕದ್ದ ಪ್ರಕರಣ

Posted by Vidyamaana on 2023-10-15 11:29:31 |

Share: | | | | |


ವಿಟ್ಲ : ಶೆಡ್ ನಲ್ಲಿ ನಿಲ್ಲಿಸಿದ್ದ ಪಿಕಪ್ ಕದ್ದ  ಪ್ರಕರಣ

ವಿಟ್ಲ : ಕುಡ್ತಮುಗೇರು ಎಂ.ಎಚ್. ಶಾಮಿಯಾನ ಮಾಲಕರೊಬ್ಬರಿಗೆ ಸೇರಿದ ಪಿಕಪ್ ವಾಹನ ಕಳುವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರೀಸ್, ಮೊಹಮ್ಮದ್ ಅಯೂಬ ಖಾನ್ ಎಂಬವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.


ಸೆ.23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಿನಲ್ಲಿ ಶಾಮಿಯಾನ ಸಾಮಾಗ್ರಿಯ ಜೊತೆಗೆ ನಿಲ್ಲಿಸಿದ್ದ ವಾಹನವನ್ನು ಕಳವುಗೈಯಲಾಗಿದ್ದು, ಪಿಕಪ್ ವಾಹನ ಇನ್ನೂ ಪತ್ತೆಯಾಗಿಲ್ಲ.


ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಎಚ್. ಇ. ನಾಗರಾಜ್ ಅವರ ಮಾರ್ಗದರ್ಶನದಂತೆ ಸಬ್ ಇನ್ಸ್ಪೆಕ್ಟರ್ ವಿದ್ಯಾ ಕೆ.ಜೆ ಹಾಗೂ ಸಿಬ್ಬಂದಿಗಳಾದ ರಕ್ಷಿತ್ ರೈ,ಅಶೋಕ್, ಹೇಮರಾಜ್ ಪಾಲ್ಗೊಂಡಿದ್ದರು.

ಮಂಗಳೂರು: ಲೋಕಾಯಯಕ್ತ ಪೊಲೀಸರ ಭರ್ಜರಿ ಬೇಟೆ

Posted by Vidyamaana on 2023-07-07 13:11:28 |

Share: | | | | |


ಮಂಗಳೂರು: ಲೋಕಾಯಯಕ್ತ ಪೊಲೀಸರ ಭರ್ಜರಿ ಬೇಟೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಲೋಕಾಯಯಕ್ತ ಪೊಲೀಸರು ಇಂದು ದೊಡ್ಡ ಬೇಟೆಯಾಡಿದ್ದು. ಶಾಲಾ ಸಂಚಾಲಕಿ ತನ್ನ ಶಾಲೆಯ ನಿವೃತ್ತಿಯಾಗುತ್ತಿರುವ ಶಿಕ್ಷಕಿಯೊಬ್ಬರಿಂದ ಪೆಂಕ್ಷನ್ ಸಿಗುವ ದಾಖಲೆಗೆ ಸಹಿ ಹಾಕಲು 20 ಲಕ್ಷ ಹಣ ಲಂಚಕ್ಕೆ ಬೇಡಿಕೆಯಿಟ್ಟಿದ್ದು. ಈ ಬಗ್ಗೆ ಶಾಲಾ ಶಿಕ್ಷಕಿ ಲೋಕಾಯಯಕ್ತಕ್ಕೆ ದೂರು ನೀಡಿದ್ದರು. ಜುಲೈ 7 ರಂದು (ಇಂದು) 5 ಲಕ್ಷ ಹಣ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಸ್ವೀಕಾರಿಸುತ್ತಿದ್ದಾಗ ಲೋಕಾಯಯಕ್ತ ಪೊಲೀಸರು ಬೇಟೆಯಾಡಿ ಆರೋಪಿ ಜ್ಯೋತಿ ಪೂಜಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಂಗಳೂರು ಹೊರವಲಯದ ಬಜಪೆ ಶ್ರೀ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲೆ ಸುಂಕದಕಟ್ಟೆಯ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಯಕ್ತ ಬಲೆಗೆ ಬಿದ್ದ ಆರೋಪಿ. ಅದೆ ಶಾಲೆಯ ಶಿಕ್ಷಕಿ ಶೋಭಾರಾಣಿ ನಿವೃತ್ತಿ ಪೆಂಕ್ಷನ್ ಹಣ ಸಿಗುವ ದಾಖಲೆಗೆ ಶಾಲಾ ಸಂಚಾಲಕರು ಸಹಿ ಮಾಡಿ ಅದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಅದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿಯ ಸಹಿ ಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಬಂಧನವಾಗಿದ್ದಾಳೆ.


ಲೋಕಾಯಯಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್, ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್

Posted by Vidyamaana on 2023-06-02 10:11:01 |

Share: | | | | |


ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.

ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಸಂಪೂರ್ಣ ವಿವರ ನೀಡಿದರು.


ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು.  12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​  ಎಂದು ತಿಳಿಸಿದರು.

Recent News


Leave a Comment: