ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2023-07-26 04:57:12 |

Share: | | | | |


ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಎರಡನೇ ಸ್ಥಾನ ಪಡೆದುಕೊಂಡಿದ್ದು, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ನಿಡ್ಪಳ್ಳಿಯ ವಾರ್ಡ್ 1ರಲ್ಲಿ ಒಟ್ಟು 607 ಮತದಾರರಿದ್ದು, ಒಟ್ಟು 529 ಮತ ಚಲಾವಣೆಯಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಜಯ ಗಳಿಸಿದ್ದರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಎರಡನೇ ಸ್ಥಾನ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ. ಚಂದ್ರಶೇಖರ್ ಪ್ರಭು ಗೋಳಿತ್ತಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ನಿಡ್ಪಳ್ಳಿ ಗ್ರಾಪಂನ ಚುನಾವಣಾಧಿಕಾರಿಯಾಗಿದ್ದ ತಾ.ಪಂ. ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ಸಂಧ್ಯಾಲಕ್ಷ್ಮೀ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

Posted by Vidyamaana on 2023-07-25 08:33:03 |

Share: | | | | |


ಮಿತ್ತೂರು : ಇನ್ನೋವಾ - ಟಿಪ್ಪರ್ ನಡುವೆ ಅಪಘಾತ: ನಾಲ್ವರು ಆಸ್ಪತ್ರೆಗೆ

ವಿಟ್ಲ: ಇನ್ನೋವಾ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರಿನ ಪರ್ಲೋಟ್ಟು ಎಂಬಲ್ಲಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ

ಬೆಳ್ತಂಗಡಿ :ಸೋಮಾವತಿ ನದಿ ನೀರಿಗೆ ವಿಷಪ್ರಾಶನ- ಸಾವಿರಾರು ಮೀನುಗಳ ಮಾರಣಹೋಮ

Posted by Vidyamaana on 2023-04-27 03:08:16 |

Share: | | | | |


ಬೆಳ್ತಂಗಡಿ :ಸೋಮಾವತಿ ನದಿ ನೀರಿಗೆ ವಿಷಪ್ರಾಶನ- ಸಾವಿರಾರು ಮೀನುಗಳ ಮಾರಣಹೋಮ

ಬೆಳ್ತಂಗಡಿ: ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದ್ದ ಸೋಮಾವತಿ ನದಿ ನೀರಿಗೆ ಕಿಡಿಕೇಡಿಗಳು ವಿಷ ಪದಾರ್ಥ ಹಾಕಿರುವ ಪರಿಣಾಮ ಸಾವಿರಾರು ಮೀನುಗಳ ಮಾರಹೋಮ ನಡೆದಿದೆ.ಇಂದು ಬೆಳ್ಳಂ ಬೆಳಗ್ಗೆ ಘಟನೆ ವರದಿಯಾಗಿದ್ದು, ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ನದಿಯಲ್ಲಿದ್ದ ಘಟಕಕ್ಕೆ ವಿಷ ಪ್ರಾಶಾನ ಮಾಡಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಸತ್ತುಬಿದ್ದಿವೆ.ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು.  ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ.

ಕಳೆದ ಮೂರು ವರ್ಷ ಇದೇ ಸ್ಥಳದಲ್ಲಿ ಹಿಂದೊಮ್ಮೆ ಈ ರೀತಿಯ ಕೃತ್ಯ ನಡೆಸಲಾಗಿತ್ತು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪಟ್ಟಣ ಪಂಚಾಯತ್ ಕೃತ್ಯದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ.

ನದಿಯಲ್ಲಿ ಸಂಪೂರ್ಣ ನೀರು ಬತ್ತಿ ಕುಡಿಯಲು ನೀರಿನ ಹಾಹಾಕಾರವಿರುವ ಸಮಯದಲ್ಲಿ ಕಿಡಿಗೇಡಿಗಳು ಇಂತಹ ಕೃತ್ಯ ನಡೆಸಿದವರ ವಿರುದ್ಧ ಜನರಿಂದ ಬಹಳಷ್ಟು ಆಕ್ರೋಶ ವ್ಯಕ್ತವಾಗಿದ್ದು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಲಿವಿಂಗ್​ ಟುಗೆದರ್​ನಲ್ಲಿದ್ದ ಯುವತಿಯನ್ನು ಕುಕ್ಕರ್​ನಿಂದ ಹೊಡೆದು ಕೊಂದ ಪ್ರಿಯಕರ ವೈಷ್ಣವ್

Posted by Vidyamaana on 2023-08-28 15:40:44 |

Share: | | | | |


ಕಳೆದ ಮೂರು ವರ್ಷಗಳಿಂದ ಲಿವಿಂಗ್​ ಟುಗೆದರ್​ನಲ್ಲಿದ್ದ ಯುವತಿಯನ್ನು ಕುಕ್ಕರ್​ನಿಂದ ಹೊಡೆದು ಕೊಂದ ಪ್ರಿಯಕರ ವೈಷ್ಣವ್

ಬೆಂಗಳೂರು: ಲಿವಿಂಗ್​ ಟುಗೆದರ್​ನಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಕುಕ್ಕರ್​ನಿಂದ ಹೊಡೆದು ಕೊಲೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 24 ವರ್ಷದ ದೇವಿ ಕೊಲೆಯಾದ ಯುವತಿಯಾಗಿದ್ದು, ವೈಷ್ಣವ್ ಪ್ರೇಮಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಇಬ್ಬರು ಕೇರಳ ದೇವಿ ಮತ್ತು ವೈಷ್ಣವ್​ ಇಬ್ಬರು ಒಟ್ಟಿಗೆ ಶಿಕ್ಷಣ ಪಡೆದುಕೊಂಡಿದ್ದರಂತೆ.


 ಬಾಲ್ಯದಿಂದಲೇ ಗೆಳೆಯರಾಗಿದ್ದ ಇಬ್ಬರು ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಕೆಲಸ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬೇಗೂರು ಪೊಲೀಸ್ ಠಾಣೆಯ ನ್ಯೂ ಮೈಕೋ ಲೇಔಟ್ ನಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Posted by Vidyamaana on 2024-05-26 06:37:52 |

Share: | | | | |


ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು: ಭಾರೀ ಮಳೆಗೆ ಪಂಪ್‌ವೆಲ್ ಜಲಾವೃತ

Posted by Vidyamaana on 2023-07-03 13:58:42 |

Share: | | | | |


ಮಂಗಳೂರು: ಭಾರೀ ಮಳೆಗೆ ಪಂಪ್‌ವೆಲ್ ಜಲಾವೃತ

ಮಂಗಳೂರು: ಸೋಮವಾರ ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಗಳೂರು ನಗರ ಪ್ರದೇಶದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ.


ಭಾರೀ ಮಳೆಗೆ ಪಂಪ್ ವೆಲ್, ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶ ಜಲಾವೃತವಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಪಂಪ್‌ವೆಲ್ ಮೇಲ್ಸೇತುವೆ ಕೆಳಗೆ ಮೊಣಕಾಲು ಎತ್ತರಕ್ಕೆ ನೀರು ನಿಂತಿದ್ದು ನಗರದ ಕಡೆ ಸಂಚರಿಸುವ ವಾಹನಗಳು ಜಂಕ್ಷನ್‌ನಲ್ಲಿ ಸಿಲುಕಿಕೊಂಡಿವೆ.


ನಗರದ ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ದುರಸ್ತಿಗಾಗಿ ಮ್ಯಾನ್ ಹೋಲ್ ಅಗೆದಿಟ್ಟುರುವುದ್ದರಿಂದ ಭಾರೀ ಮಳೆಯಿಂದಾಗಿ ಗಲೀಜು ನೀರಿನ ಜತೆ ಮಳೆ ನೀರು ಸುತ್ತಮುತ್ತಲಿನ ಬ್ಯಾಂಕ್, ಮೆಡಿಕಲ್‌ನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ.


ಇಂಡಿಯನ್ ಬ್ಯಾಂಕ್‌ನೊಳಗೆ ನೀರು ನುಗ್ಗಿ ಬ್ಯಾಂಕ್ ಸಿಬ್ಬಂದಿಗಳು ಕಡತಗಳು ಹಾಗೂ ಇನ್ನು ಪಕ್ಕದಲ್ಲಿದ್ದ ಎಟಿಎಂ ಮಷಿನ್‌ನಲ್ಲಿದ್ದ ಹಣವನ್ನು ಕೂಡ ಸ್ಥಳಾಂತರಿಸಿದ್ದಾರೆ.

ಪಕ್ಕದಲ್ಲಿದ್ದ ಹೋಟೇಲ್ ಹಾಗೂ ಮೆಡಿಕಲ್‌ಗಳಿಗೂ ಗಲೀಜು ನೀರು ನುಗ್ಗಿ ಸಮಸ್ಯೆಯಾಗಿದೆ.

ಕಳೆದ ಹಲವಾರು ದಿನಗಳಿಂದ ಮ್ಯಾನ್ ಹೋಲ್ ದುರಸ್ತಿಯಾಗುತ್ತಿದ್ದು ಇನ್ನು ಕೂಡ ಪೂರ್ಣವಾಗಿಲ್ಲ ಜತೆಗೆ ದಿನನಿತ್ಯ ಈ ಭಾಗದಲ್ಲಿ ಸಂಚರಿಸುವ ಮತ್ತು ವ್ಯಾಪಾರ ವ್ಯವಹಾರ ನಡೆಸುವ ಜನರಿಗೆ ಗಲೀಜು ನೀರಿನ ದುರ್ನಾತದಿಂದ ಸಮಸ್ಯೆಯಾಗುತ್ತಿದೆ.

Recent News


Leave a Comment: