ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

Posted by Vidyamaana on 2023-07-30 15:47:41 |

Share: | | | | |


ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಳಾಡ, ಬೆರಿಪದವು ನಿವಾಸಿ ಸುಕುಮಾರ ಬೆಳ್ಳಾಡ ಬಂಧಿತರಾಗಿದ್ದಾರೆ.ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದು ಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು.ವಿಟ್ಲ ಠಾಣೆಯಲ್ಲಿ ಪೊಕ್ಸ್‌ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಮೂರು ಮಂದಿಯ ಬಂಧನ ಮಾಡಲಾಗಿದೆ

ಬೆಳ್ತಂಗಡಿ ನೇಣು ಬಿಗಿದು ಅರ್ಚಕ ವಿಜಯ್ ಆತ್ಮಹತ್ಯೆ

Posted by Vidyamaana on 2024-05-05 08:14:27 |

Share: | | | | |


ಬೆಳ್ತಂಗಡಿ ನೇಣು ಬಿಗಿದು ಅರ್ಚಕ ವಿಜಯ್ ಆತ್ಮಹತ್ಯೆ

ಬೆಳ್ತಂಗಡಿ: ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ (33) ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 4ರಂದು ನಡೆದಿದೆ.ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.ಎಂದಿನಂತೆ ಶನಿವಾರ ಮುಂಜಾನೆ ಭಕ್ತರು ಆಗಮಿಸುವ ವೇಳೆ ಅರ್ಚಕ ವಿಜಯ್‌ ಹೆಗಡೆ ಬಾರದೇ ಇರುವುದನ್ನು ಕಂಡು ಕ್ಷೇತ್ರದ ಸಿಬಂದಿ ಹಾಗೂ ಭಕ್ತರು ಅವರು ತಂಗುತ್ತಿದ್ದ ವಸತಿಗೃಹಕ್ಕೆ ವಿಚಾರಿಸಲು ತೆರಳಿದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.

ವೈದ್ಯಾಧಿಕಾರಿಣಿ ಗರ್ಭಪಾತಕ್ಕೆ ಕಾರಣವಾದ ಗ್ರಾಮಸಭೆ ಪ್ರಶ್ನೆಗಳ ಸುರಿಮಳೆ!!

Posted by Vidyamaana on 2023-08-15 07:34:22 |

Share: | | | | |


ವೈದ್ಯಾಧಿಕಾರಿಣಿ ಗರ್ಭಪಾತಕ್ಕೆ ಕಾರಣವಾದ ಗ್ರಾಮಸಭೆ ಪ್ರಶ್ನೆಗಳ ಸುರಿಮಳೆ!!

ಗ್ರಾಮಸಭೆಯಲ್ಲಿ ಪ್ರಶ್ನೆಗಳ ಸುರಿಮ

ಪುತ್ತೂರು: ಯುವತಿ ಸಾವಿನ ವಿಚಾರವನ್ನು ಮುಂದಿಟ್ಟುಕೊಂಡು ಗ್ರಾಮಸಭೆಯಲ್ಲಿ ವೈದ್ಯಾಧಿಕಾರಿಯನ್ನು ಗ್ರಾಮಸ್ಥರೋರ್ವರು ತರಾಟೆಗೆತ್ತಿಕೊಂಡ ಘಟನೆಯಿಂದ ಗರ್ಭಿಣಿಯಾಗಿದ್ದ ವೈದ್ಯಾಧಿಕಾರಿ ಕುಸಿದು ಬಿದ್ದು, ಗರ್ಭಪಾತವಾಗಿತ್ತು. ಈ ಪ್ರಕರಣ ಬಗ್ಗೆ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಒತ್ತಾಯಿಸಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಗ್ರಾಮಸ್ಥರ ಮಾನಸಿಕ ಒತ್ತಡದಿಂದ ನೆಲ್ಯಾಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಗರ್ಭಿಣಿ ಡಾ.ಶಿಶಿರಾ ಅವರಿಗೆ ಗರ್ಭಪಾತವಾಗಿದೆ ಅನ್ನುವ ದೂರು ದಾಖಲಾಗಿದೆ. ಮಾನಸಿಕ ಹಿಂಸೆ ನೀಡಿದ್ದಾರೆ. ಡೀಕಯ್ಯ ಪೂಜಾರಿ ಮತ್ತು ಗಣೇಶ್ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಏನಿದು ಘಟನೆ?

ದ.ಕ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾ.ಪಂ ನಲ್ಲಿ ಆ. 9ರಂದು ಗ್ರಾಮ ಸಭೆ ನಡೆದಿತ್ತು. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆ ಅನ್ನುವ ದೂರು ಸಭೆಯಲ್ಲಿ ಕೇಳಿ ಬಂದಿತ್ತು. ಈ ವೇಳೆ ಡಾ.ಶಿಶಿರಾ ಉತ್ತರ ನೀಡಿದರು. ಇದಕ್ಕೆ ಡೀಕಯ್ಯ ಪೂಜಾರಿ ಮತ್ತು ಗಣೇಶ್ ಸಂತೃಪ್ತರಾಗದೆ ಮತ್ತಷ್ಟು ಗದ್ದಲ ಎಬ್ಬಿಸಿದರು. ಈ ವೇಳೆ ಪ್ರಶ್ನೆಗಳಿಗೆ ಉತ್ತರಿಸುತ್ತಲೇ ಡಾ.ಶಿಶಿರಾ ಕುಸಿದು ಬಿದ್ದಿದ್ದರು. ಶಿಶಿರ ಅವರು ತಲೆ ತಿರುಗಿ ಬಿದ್ದ ಬಳಿಕ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಗರ್ಭಪಾತವಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.


ಗ್ರಾಮಸಭೆಯಲ್ಲಿ ವೈದ್ಯಾಧಿಕಾರಿಗೆ ಇಲ್ಲಸಲ್ಲದ ಪ್ರಶ್ನೆ:

ಗ್ರಾಮಸಭೆಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಸಭೆಗಳಾಗುತ್ತಿರುವುದು ಬಹಳ ಬೇಸರದ ಸಂಗತಿ. ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳುವುದಲ್ಲದೇ, ಅಧಿಕಾರಿಗಳಿಗೆ ವೃಥಾ ತೊಂದರೆ ಕೊಡುವ ಪ್ರಯತ್ನಗಳಾಗುತ್ತಿವೆ. ಗೋಳಿತ್ತೊಟ್ಟಿನಲ್ಲಿ ನಡೆದಿದ್ದ ಯುವತಿ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಗ್ರಾಮಸಭೆಯಲ್ಲಿ ಸುಮಾರು‌ 40 ನಿಮಿಷ, ಜಿಲ್ಲೆಯ ಪ್ರಸಿದ್ಧ ವೈದ್ಯಾಧಿಕಾರಿಯೋರ್ವರಿಗೆ ಹಿಂಸೆ ನೀಡಲಾಗಿದೆ. ಇದರಿಂದ ಅವರು ತಲೆತಿರುಗಿ ಬಿದ್ದು, ಗರ್ಭಪಾತವಾಗಿದೆ. ಈಗಲೂ ಅವರು ವೆಂಟಿಲೇಟರಲ್ಲೇ ಇದ್ದಾರೆ. ಗ್ರಾಪಂ ಅಧ್ಯಕ್ಷರು, ಚರ್ಚಾ ನಿಯಂತ್ರಣಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದೇನೆ.

ಡಾ. ದೀಪಕ್ ರೈ, ಅಧ್ಯಕ್ಷರು, ದ.ಕ. ಜಿಲ್ಲಾ ಶಾಖೆ, ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ

9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ: ಹಾಸ್ಟೆಲ್ ವಾರ್ಡನ್ ಅಮಾನತು

Posted by Vidyamaana on 2024-01-11 16:42:11 |

Share: | | | | |


9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ: ಹಾಸ್ಟೆಲ್ ವಾರ್ಡನ್ ಅಮಾನತು

ತುಮಕೂರು: ಇಲ್ಲಿನ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸ್ಟೆಲ್ ವಾರ್ಡನ್ ನಿವೇದಿತಾರನ್ನು (Nivedita) ಜಿಲ್ಲಾ ಪಂಚಾಯತ್ ಸಿಇಒ‌ ಜಿ.ಪ್ರಭು (CEO G.Prabhu) ಅಮಾನತು ಮಾಡಿದ್ದಾರೆ.ತುಮಕೂರು (Tumkur) ಜಿಲ್ಲೆಯ ಮಧುಗಿರಿ (M

non

hugiri) ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೂಲತಃ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ‌ (Bagepalli) ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಹೊಟ್ಟೆ ನೋವೆಂದು ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದಾಗ ಬಾಲಕಿಗೆ ಹೆರಿಗೆ ಆಗಿದೆ.


ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ. ಆದರೆ ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ನಿವೇದಿತ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.

ನಂದಾವರದಲ್ಲಿ ಮನೆಯೊಂದರ ಮೇಲೆ ಕುಸಿದ ಗುಡ್ಡ

Posted by Vidyamaana on 2023-07-07 04:37:35 |

Share: | | | | |


ನಂದಾವರದಲ್ಲಿ ಮನೆಯೊಂದರ ಮೇಲೆ ಕುಸಿದ ಗುಡ್ಡ

ಬಂಟ್ವಾಳ : ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟು, ಯುವತಿಯೋರ್ವಳು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

   ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ. ಮಹಿಳೆ ಮೃತಪಟ್ಟಿದ್ದಾರೆ.

   ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಝರಿನಾ ಅವರು ಮೃತಪಟ್ಟಿದ್ದು,  ಸಫಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕೆಲವು ಗಂಟೆಗಳ ಕಾಲ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದರು. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ, ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಧಾವಿಸಿದ್ದಾರೆ.

ಸಿಡಿಪಿಓ ಶ್ರೀಲತಾ ಉಡುಪಿಗೆ ವರ್ಗ

Posted by Vidyamaana on 2023-10-12 14:27:37 |

Share: | | | | |


ಸಿಡಿಪಿಓ ಶ್ರೀಲತಾ ಉಡುಪಿಗೆ  ವರ್ಗ

ಪುತ್ತೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಅಧಿಕಾರಿಗಳ ವರ್ಗಾವಣೆ ಪರ್ವ ಶುರುವಾಗಿದೆ.

ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿ ಶ್ರೀಲತಾ ಅವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ವರ್ಗಾವಣೆಯಾಗಿದ್ದು, ಸರಕಾರದಿಂದ ಆದೇಶವೂ ಬಂದಿದೆ. ಆದರೆ ಪುತ್ತೂರು ಸಿಡಿಪಿಓ ಹುದ್ದೆಗೆ ಯಾರು ಬರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಜಿ.ಹೆಚ್.ಸರೋಜಮ್ಮ ಆದೇಶ ಪತ್ರ ಹೊರಡಿಸಿದ್ದಾರೆ.

Recent News


Leave a Comment: