ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ವಿಟ್ಲ ಯುವಕನ ಮೇಲೆ ಹಲ್ಲೆ ಪ್ರಕರಣ: ದೂರು-ಪ್ರತಿದೂರು ದಾಖಲು

Posted by Vidyamaana on 2024-04-03 12:03:39 |

Share: | | | | |


ವಿಟ್ಲ  ಯುವಕನ ಮೇಲೆ ಹಲ್ಲೆ ಪ್ರಕರಣ: ದೂರು-ಪ್ರತಿದೂರು ದಾಖಲು

ವಿಟ್ಲ: ಅಡ್ಯನಡ್ಕ ಸಮೀಪದ ನಡೆದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಅಡ್ಯನಡ್ಕ ನಿವಾಸಿ ಮಹಮ್ಮದ್ ಅಲಿ ಎ (36)ಎಂಬವರ ದೂರಿನಂತೆ ಮಧ್ಯಾಹ್ನ, ಗಣೇಶ್ ಎಂಬಾತನು ಮನೆಯ ಬಳಿಗೆ ಬಂದು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದು, ಅವ್ಯಾಚವಾಗಿ ಬೈದು, ತಾನು ತಂದಿದ್ದ ಕತ್ತಿಯಿಂದ ಹಲ್ಲೆ ನಡೆಸಿರುತ್ತಾನೆ. ಈ ವೇಳೆ ಸ್ಥಳೀಯರು ಬರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ಪರಾರಿಯಾಗಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಮಂಗಳೂರು: ನ.16 ರಂದು ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ ನ ಬೆಳ್ಳಿ ಹಬ್ಬದ ಲೋಗೋ ಬಿಡುಗಡೆ

Posted by Vidyamaana on 2023-11-15 13:38:06 |

Share: | | | | |


ಮಂಗಳೂರು: ನ.16 ರಂದು ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ ನ ಬೆಳ್ಳಿ ಹಬ್ಬದ ಲೋಗೋ ಬಿಡುಗಡೆ

ಮಂಗಳೂರು: 25ನೇ ವಾರ್ಷಿಕೋತ್ಸವದ ಪ್ರಯುಕ್ತ ನ.16ರಿಂದ 26ರವರೆಗೆ ನಗರದ ಕಂಕನಾಡಿಯಲ್ಲಿರುವ ಚಿನ್ನಾಭರಣ ಮಳಿಗೆಯಾದ ಸಿಟಿಗೋಲ್ಡ್ ಆ್ಯಂಡ್ ಡೈಮಂಡ್ಸ್ನಲ್ಲಿ ಆ್ಯಂಟಿಕ್ ಫೆಸ್ಟ್ ನಡೆಯಲಿದೆ.


ನ.16ರ ಸಂಜೆ 4ಕ್ಕೆ ಸಂಸ್ಥೆಯ ಬೆಳ್ಳಿಹಬ್ಬದ ಲೋಗೋ ಅನಾವರಣಗೊಳ್ಳಲಿದೆ. ಆ್ಯಂಟಿಕ್ ಫೆಸ್ಟ್ ಕಾರ್ಯಕ್ರಮವನ್ನು ತುಳು ಚಿತ್ರ ನಟ ಹಾಗು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅತಿಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ರಾಮಯ್ಯ, ಉಳ್ಳಾಲ ಸೈಯದ್ ಮದನಿ ದರ್ಗಾ ಮತ್ತು ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಚಾರ್ಮಾಡಿ ಹಸನಬ್ಬ, ಮೀಫ್ ಸಂಸ್ಥೆಯ ಪರವಾಗಿ ಅಧ್ಯಕ್ಷ ಮೂಸಬ್ಬ ಬ್ಯಾರಿ ಹಾಗು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಪೊಸವಣಿಕೆ ಅವರನ್ನು ಸನ್ಮಾನಿಸಲಾಗುವುದು.

ಸಿಟಿ ಗೋಲ್ಡ್ ಸಂಸ್ಥೆಯ 25ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರಿಗೆ ಚಿನ್ನಾಭರಣ ಖರೀದಿಯ ಮೇಕಿಂಗ್ ಚಾರ್ಜ್ ಮೇಲೆ ಶೇ.55ರಷ್ಟು ಹಾಗೂ ವಜ್ರಾಭರಣ ಖರೀದಿಯ ವಜ್ರದ ಮೌಲ್ಯದ ಮೇಲೆ ಶೇ 30ರಷ್ಟು ವಿನಾಯಿತಿ ನೀಡಲಾಗುವುದು.

ಪ್ರತಿ ಖರೀದಿಯ ಗ್ರಾಹಕರಿಗೆ ಸ್ಕ್ರ್ಯಾಚ್ ಆ್ಯಂಡ್ ವಿನ್ ಕೂಪನ್ ವಿತರಿಸಲಾಗುವುದು. ವಿಜೇತರಿಗೆ ಚಿನ್ನದ ನಾಣ್ಯ ಹಾಗು ಇತರೆ ಉಡುಗೊರೆಗಳು ನೀಡಲಾಗುವುದು. ಮದುವೆ ಖರೀದಿಯಲ್ಲಿನ ಪ್ರತಿ ಗ್ರಾಹಕರಿಗೂ ಕೂಪನ್ ವಿತರಿಸಲಾಗುವುದು. ವಿಜೇತ 5 ಜೋಡಿ ನವ ದಂಪತಿಗೆ ಮಲೇಷ್ಯಾ ಪ್ರವಾಸ ಕೈಗೊಳ್ಳುವ ಅವಕಾಶ ದೊರೆಯಲಿದೆ.

ಡೆಲ್ಲಿಗೆ ಬರ್ಲಿಕ್ಕೆ ಹೇಳಿ ಈಶ್ವರಪ್ಪನವರಿಗೆ ಸಿಗದ ಶಾ

Posted by Vidyamaana on 2024-04-04 12:02:54 |

Share: | | | | |


ಡೆಲ್ಲಿಗೆ ಬರ್ಲಿಕ್ಕೆ ಹೇಳಿ ಈಶ್ವರಪ್ಪನವರಿಗೆ ಸಿಗದ ಶಾ

ನವದೆಹಲಿ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದರು.ಆದರೆ ಅಮಿತ್ ಶಾ ಅವರು ಈಶ್ವರಪ್ಪ ಅವರ ಭೇಟಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಅವರು ವಾಪಸ್ ಆಗಿದ್ದಾರೆ.ಅಮಿತ್ ಶಾ ಬೇಟಿಗೆ ಸಮಯ ಸಿಗದ ಕಾರಣ ಇದೀಗ ಈಶ್ವರಪ್ಪ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 6 10ರ ಫ್ಲೈಟ್ ಗೆ ಕೆ ಎಸ್ ಈಶ್ವರಪ್ಪ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ. ಇವಳೆ ಸುದ್ದಿಗಾರನಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರ ಸೋಲಲಿ ಎಂಬ ಪರೀಕ್ಷೆ ಅಮಿತ್ ಶಾ ಅವರಿಗೆ ಇರಬಹುದು ಎಂದು ತಿಳಿಸಿದರು.

ಅನೈತಿಕ ಸಂಬಂಧದ ಶಂಕೆ; ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ

Posted by Vidyamaana on 2024-03-19 20:24:07 |

Share: | | | | |


ಅನೈತಿಕ ಸಂಬಂಧದ ಶಂಕೆ; ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ

ವಿಜಯಪುರ, ಮಾ.19: ಜಿಲ್ಲೆಯ ನಿಡಗುಂದಿ(Nidagundi) ತಾಲೂಕಿನ ಗಣಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಓರ್ವ ಮಹಿಳೆ ಮತ್ತು ಪುರಷನನ್ನ ಕೊಲೆ ಮಾಡಲಾಗಿದ್ದು, ಮೃತರನ್ನ ಗ್ರಾಮದ ಸೋಮಲಿಂಗಪ್ಪ ಕುಂಬಾರ ಹಾಗೂ ಪಾರ್ವತಿ ತಳವಾರ ಎಂದು ಗುರುತಿಸಲಾಗಿದೆ. ಇನ್ನು ಸುದ್ದಿ ತಿಳಿದು ನಿಡಗುಂದಿ ಸಿಪಿಐ ಶರಣ ಗೌಡರ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.ಕೆಲ ಗ್ರಾಮಸ್ಥರು ನೀಡಿದ ಮಾಹಿತಿ ಪ್ರಕಾರ ಮೃತ ಪಾರ್ವತಿ ತಳವಾರ ಹಾಗೂ ಸೋಮಲಿಂಗಪ್ಪ ಪೂಜಾರ ಮಧ್ಯೆ ಕೆಳೆದ ಕೆಲ ವರ್ಷಗಳಿಂದಲೂ ಅಕ್ರಮ ಸಂಬಂಧವಿತ್ತಂತೆ. 13 ವರ್ಷಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದ ಬೋರಮ್ಮ ಜೊತೆಗೆ ಸೋಮಲಿಂಗಪ್ಪ ಮದುವೆಯಾಗಿದ್ದ. ಜೊತೆಗೆ ಇವರಿಗೆ 9 ವರ್ಷದ ಮಗನಿದ್ದಾನೆ. ಇತ ಗಣಿ ಗ್ರಾಮದ ತನ್ನ ಮನೆಯ ಬಳಿ ಹಿಟ್ಟಿನ ಗಿರಣಿ ನಡೆಸುತ್ತಿದ್ದ. ಇತ್ತ ಪಾರ್ವತಿಗೆ, ಭೀಮಪ್ಪ ತಳವಾರ ಜೊತೆಗೆ 22 ವರ್ಷಗಳ ಹಿಂದೆ ಮದುವೆಯಾಗಿತ್ತು. ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಮಗಳಿದ್ದಾಳೆ. ಇಷ್ಟೆಲ್ಲ ಇದ್ದರೂ ಪಾರ್ವತಿ ಹಾಗೂ ಸೋಮಲಿಂಗಪ್ಪ ಮಧ್ಯೆ ಅಕ್ರಮ ಸಂಬಂಧ ಶುರುವಾಗಿದೆ.ಒಬ್ಬರ ಮನೆಗೆ ಒಬ್ಬರು ಬಂದು ಹೋಗುವುದನ್ನು ಮಾಡುತ್ತಿದ್ದರಂತೆ. ನಿನ್ನೆ(ಮಾ.18) ಸೋಮಲಿಂಪ್ಪ, ಕಿಡ್ನಿ ಸ್ಟೋನ್​ ಹಿನ್ನಲೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಪಾರ್ವತಿಯನ್ನು ಕರೆದುಕೊಂಡು ಹೋಗಿದ್ದನಂತೆ. ಆದರೆ, ಸಾಯಂಕಾಲ ಮನೆಗೆ ವಾಪಸ್ ಬಂದಿಲ್ಲ. ಇಂದು(ಮಾ.19) ಬೆಳಿಗ್ಗೆ ಗ್ರಾಮದ ಜನರು ಪಾರ್ವತಿ ಹಾಗೂ ಸೋಮಲಿಂಗಪ್ಪನನ್ನ ಕೊಲೆಯಾದ ಸ್ಥಿತಿಯಲ್ಲಿ ಕಂಡು ಮನೆಯವರಿಗೆ ತಿಳಿಸಿದ್ದಾರೆ. ಆಗಲೇ ಮನೆಯವರಿಗೆ ವಿಚಾರ ಗೊತ್ತಾಗಿದೆಯಂತೆ. ಆದರೆ, ಯಾರು ಕೊಲೆ ಮಾಡಿದರು? ಎಂಬುದು ಗೊತ್ತಿಲ್ಲ ಎಂದಿದ್ದಾರೆ. ಜೊತೆಗೆ ಪಾರ್ವತಿ ಹಾಗೂ ಸೋಮಲಿಂಗಪ್ಪನ ಮಧ್ಯದ ಅಕ್ರಮ ಸಂಬಂಧವೂ ಗೊತ್ತಿಲ್ಲವಂತೆ. ಜೊತೆಗೆ ಯಾರ ಮೇಲೂ ಸಂಶಯವಿಲ್ಲ ಎಂದು ಕೊಲೆಯಾದ ಸೋಮಲಿಂಗಪ್ಪನ ಪತ್ನಿ ಬೋರಮ್ಮ, ಸಹೋದರಿ ಹಾಗೂ ಸಂಬಂಧಿಕರು ಹೇಳಿದ್ದಾರೆ.ಇನ್ನು ಇತ್ತ ಮೃತ ಪಾರ್ವತಿ ಕುಟುಂಬದವರು, ನಿನ್ನೆ ಸೋಮಲಿಂಗಪ್ಪ ಹಾಗೂ ಪಾರ್ವತಿ, ಅನತಿ ದೂರದಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಬಂದಿದ್ದೇವೆ. ನಮ್ಮನ್ನು ಕರೆದುಕೊಂಡು ಹೋಗಲು ಬಾ ಎಂದು ಪಾರ್ವತಿ ತನ್ನ ಪುತ್ರ ಲಕ್ಷ್ಮಣನಿಗೆ ಕರೆ ಮಾಡಿದ್ದಾಳೆ. ಇವರನ್ನು ಕರೆಯಲು ಪಾರ್ವತಿಯ ಮಗಾ ಲಕ್ಷ್ಮಣ ತಳವಾರ ಹೋಗಿದ್ದಾನೆ. ಆದರೆ, ತಡರಾತ್ರಿ ಕಳೆದರೂ ಯಾರೂ ಮನೆಗೆ ಬಂದಿಲ್ಲ. ಪಾರ್ವತಿ ಮನೆಯವರು ಆಕೆಗೆ ಕರೆ ಮಾಡಿದರೂ ಸ್ವೀಕಾರ ಮಾಡಿಲ್ಲ. ಲಕ್ಷ್ಮಣನ ಮೊಬೈಲ್ ಕೂಡ ಸಹ ಸ್ವಿಚ್ ಆಫ್ ಆಗಿದೆ. ಆದರೆ, ಬೆಳಿಗ್ಗೆ ಗ್ರಾಮದ ಜನರು ಪಾರ್ವತಿ ಹಾಗೂ ಸೋಮಲಿಂಪ್ಪನ ಶವ ಕೊಲೆಯಾದ ಸ್ಥಿತಿಯಲ್ಲಿ ಬಿದ್ದಿವೆ ಎಂದಾಗಲೇ ವಿಚಾರ ತಿಳಿದಿದೆ. ಇಬ್ಬರನ್ನು ಕರೆದುಕೊಂಡು ಬರಲು ಹೋದ ಲಕ್ಷ್ಮಣ ಇನ್ನೂ ಮನೆಗೆ ಬಂದಿಲ್ಲ. ಇದು ಬಿಟ್ಟರೆ ನಮಗೆ ಏನೂ ಗೊತ್ತೇ ಇಲ್ಲ ಎನ್ನುತ್ತಿದ್ದಾರೆ.ಸದ್ಯ ನಿಡಗುಂದಿ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಿದ್ದಾರೆ. ಮೇಲ್ಮೋಟಕ್ಕೆ ಪಾರ್ವತಿಯ ಮಗಾ ಲಕ್ಷ್ಮಣ ತನ್ನ ತಾಯಿಯ ಹಾಗೂ ಸೋಮಲಿಂಗಪ್ಪನ ಅಕ್ರಮ ಸಂಬಂಧದಿಂದ ರೋಸಿ ಹೋಗಿದ್ದನಂತೆ. ಹೇಗಾದರೂ ಮಾಡಿ ಇಬ್ಬರನ್ನೂ ಮುಗಿಸಿ ಬಿಡಬೇಕೆಂದು ಪ್ಲ್ಯಾನ್ ಮಾಡಿದ್ದನಂತೆ. ಆತನ ಪ್ಲ್ಯಾನ್ ಗೆ ಪೂರಕವಾಗಿ ನಿನ್ನೆ ಇಬ್ಬರನ್ನು ಕರೆದುಕೊಂಡು ಬರುವ ನೆಪದಲ್ಲಿ ಮಚ್ಚು ಹಾಗೂ ಕೊಡಲಿ ತೆಗೆದುಕೊಂಡು ಹೋಗಿದ್ದಾನೆ. ಇಬ್ಬರೂ ರೈಲು ಇಳಿದ ಬಳಿಕ ಊರಿಗೆ ಕರೆ ತರುವಾಗ ಮಾರ್ಗ ಮಧ್ಯೆ ಯಾರೂ ಇಲ್ಲದ್ದನ್ನು ಕಂಡು ಮಚ್ಚು ಹಾಗೂ ಕೊಡಲಿಯಿಂದ ಇಬ್ಬರನ್ನು ಕೊಚ್ಚಿ ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊಲೀಸರ ತನಿಖೆಯಿಂದಷ್ಟೇ ನಿಖರ ಮಾಹಿತಿ ತಿಳಿದು ಬರಲಿದೆ.

ಮೇ.08 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

Posted by Vidyamaana on 2023-05-07 10:12:49 |

Share: | | | | |


ಮೇ.08 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಮೇ.08ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ನೀಡಿದೆ. ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.

ಸಿಕ್ಸರ್ ಸಿಡಿಸಿದ ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ! ಕಾದು ಸುಸ್ತಾದ ಅಂಪೈರ್ಸ್; ವಿಡಿಯೋ ನೋಡಿ

Posted by Vidyamaana on 2024-01-15 09:29:14 |

Share: | | | | |


ಸಿಕ್ಸರ್ ಸಿಡಿಸಿದ ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ! ಕಾದು ಸುಸ್ತಾದ ಅಂಪೈರ್ಸ್; ವಿಡಿಯೋ ನೋಡಿ

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ (New Zealand Beat Pakistan) ನಡುವೆ ನಡೆಯುತ್ತಿರುವ ಟಿ20 ಸರಣಿಯಲ್ಲಿ ಕಿವೀಸ್ ತಂಡ ಸತತ ಎರಡನೇ ಗೆಲುವು ದಾಖಲಿಸಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಪಂದ್ಯವನ್ನು 21 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯರು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ 194 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 173 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ವಿಡಿಯೋ ನೋಡಲು ಕ್ಲಿಕ್ ಮಾಡಿ

ವಿಡಿಯೋ ನೋಡಲು ಕ್ಲಿಕ್ ಮಾಡಿ


ಪಾಕ್ ಪರ ಬಾಬರ್ (Babar Azam) ಹಾಗೂ ಫಖರ್ ಜಮಾನ್ (Fakhar Zaman) ತಲಾ ಅರ್ಧಶತಕ ಸಿಡಿಸಿ ಗೆಲುವಿಗಾಗಿ ಹೋರಾಡಿದರಾದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಆದರೆ ಈ ಇಬ್ಬರು ಬೌಂಡರಿ ಸಿಕ್ಸರ್​ಗಳ ಸುರಿಮಳೆಗೈಯುವ ಮೂಲಕ ಮೈದಾನದಲ್ಲಿ ನೆರೆದಿದ್ದವರಿಗೆ ಮನರಂಜನೆ ನೀಡುವಲ್ಲಿ ಯಶಸ್ವಿಯಾದರು. ಇದೇ ವೇಳೆ ಪಂದ್ಯಕ್ಕೆ ಬಳಸಿದ್ದ ಬಾಲ್ ಕಳತ್ತನವಾದ ಪ್ರಸಂಗವೂ ನಡೆಯಿತು. ಇದರಿಂದ ಆಟ ಕೊಂಚ ಸಮಯ ಸ್ಥಗಿತ ಕೂಡ ಆಯಿತು.


ಬಾಬರ್ ಮತ್ತು ಫಖರ್ ಅರ್ಧಶತಕ


ವಾಸ್ತವವಾಗಿ ನ್ಯೂಜಿಲೆಂಡ್‌ನ ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲೂ ಮೊದಲ ಪಂದ್ಯದಂತೆ ರನ್ ಮಳೆಯೇ ಹರಿಯಿತು. ಹೀಗಾಗಿ ನ್ಯೂಜಿಲೆಂಡ್ ತಂಡ ಫಿನ್ ಅಲೆನ್ ಅವರ 74 ರನ್​ಗಳ ಕೊಡುಗೆಯಿಂದಾಗಿ 20 ಓವರ್‌ಗಳಲ್ಲಿ 194 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಾಕ್ ತಂಡಕ್ಕೆ ಆರಂಭದಲ್ಲೇ ಎರಡು ವಿಕೆಟ್​ಗಳ ಆಘಾತ ಎದುರಾಯಿತು. ನಂತರ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಬಾಬರ್ ಮತ್ತು ಫಖರ್ ಜಮಾನ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಬ್ಯಾಟ್​ ಬೀಸಿದರು. ಒಂದೆಡೆ ಬಾಬರ್ ಬೌಂಡರಿ ಬಾರಿಸುತ್ತಿದ್ದರೆ, ಮತ್ತೊಂದೆಡೆ ಫಖರ್ ಬಿಗ್ ಬಿಗ್ ಸಿಕ್ಸರ್ ಬಾರಿಸುತ್ತಿದ್ದರು.


ಇದೇ ವೇಳೆ ಪಾಕ್ ಇನ್ನಿಂಗ್ಸ್​ ನಡೆಯುತ್ತಿದ್ದ ಸಮಯದಲ್ಲಿ ಆಟ ನೋಡಲು ಮೈದಾನಕ್ಕೆ ಬಂದಿದ್ದ ಪ್ರೇಕ್ಷಕನೊಬ್ಬ ಬಾಲ್ ಕದ್ದು ಪರಾರಿಯಾದ ಪ್ರಸಂಗವೂ ನಡೆಯಿತು. ವಾಸ್ತವವಾಗಿ ನ್ಯೂಜಿಲೆಂಡ್ ವೇಗಿ ಬೆನ್ ಸಿಯರ್ಸ್ ಬೌಲ್ ಮಾಡಿದ 6ನೇ ಓವರ್​ನಲ್ಲಿ ಫಖರ್ ಜಮಾನ್ ಬಿಗ್ ಸಿಕ್ಸರ್ ಬಾರಿಸಿದರು. ಫಖರ್ ಶಕ್ತಿಯ ಮುಂದೆ ತಲೆಬಾಗಿದ ಚೆಂಡು ನೇರವಾಗಿ ಕ್ರೀಡಾಂಗಣದ ಹೊರಗೆ ಹೋಗಿ ರಸ್ತೆಯಲ್ಲಿ ಬಿದ್ದಿತು. ಇದನ್ನು ನೋಡಿದ್ದ ಅಲ್ಲಿದ್ದ ಕೆಲವು ಅಭಿಮಾನಿಗಳು ಚೆಂಡನ್ನು ಹಿಡಿಯಲು ಓಡಿದರು.ಬಾಲ್ ಕದ್ದು ಪರಾರಿಯಾದ ಪ್ರೇಕ್ಷಕ


ಈ ವೇಳೆ ಒಬ್ಬ ಪ್ರೇಕ್ಷಕ ಆ ಚೆಂಡನ್ನು ಎತ್ತಿಕೊಂಡು ಮೈದಾನದೊಳಕ್ಕೆ ಎಸೆಯದೆ, ರಸ್ತೆಯಲ್ಲಿ ಓಡಲಾರಂಭಿಸಿದನು. ಎಲ್ಲರೂ ಆತ ವಾಪಸ್ ಬರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಬಾಲನ್ನು ಎತ್ತಿಕೊಂಡ ಆ ವ್ಯಕ್ತಿ ಮತ್ತೆ ಮೈದಾನಕ್ಕೆ ಬರಲೇ ಇಲ್ಲ. ಹೀಗಾಗಿ ಮೈದಾನದಲ್ಲಿದ್ದ ಅಂಪೈರ್ ಮತ್ತೊಂದು ಬಾಲ್‌ ತರಿಸಿಕೊಂಡು ಪಂದ್ಯವನ್ನು ಮತ್ತೆ ಪ್ರಾರಂಭಿಸಿದರು. ಇದೀಗ ಪ್ರೇಕ್ಷಕ ಬಾಲ್ ಕದ್ದು ಓಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.ಪಾಕ್ ತಂಡಕ್ಕೆ ಮತ್ತೊಂದು ಸೋಲು


ಪಂದ್ಯದ ಮಟ್ಟಿಗೆ ಹೇಳುವುದಾದರೆ, ಪಾಕಿಸ್ತಾನ ಸತತ ಎರಡನೇ ಸೋಲನ್ನು ಎದುರಿಸಬೇಕಾಯಿತು. ನ್ಯೂಜಿಲೆಂಡ್ ನೀಡಿದ 195 ರನ್‌ಗಳ ಗುರಿಯನ್ನು ಸಾಧಿಸುವ ಯತ್ನದಲ್ಲಿ ಇಡೀ ತಂಡವು 19.3 ಓವರ್‌ಗಳಲ್ಲಿ ಕೇವಲ 173 ರನ್‌ಗಳಿಗೆ ಕುಸಿದು 21 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಪಾಕಿಸ್ತಾನ ಪರ ಬಾಬರ್ ಆಝಂ (66) ಮತ್ತು ಫಖರ್ ಜಮಾನ್ (50) ಅರ್ಧಶತಕ ಸಿಡಿಸಿದರು. ಆದರೆ ಅವರನ್ನು ಹೊರತುಪಡಿಸಿ ಇತರ ಬ್ಯಾಟ್ಸ್‌ಮನ್‌ಗಳು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

Recent News


Leave a Comment: