ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಇನ್ಮುಂದೆ SP-DCP-IG ಗಳು ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸೂಚನೆ

Posted by Vidyamaana on 2024-07-06 16:17:31 |

Share: | | | | |


ಇನ್ಮುಂದೆ SP-DCP-IG ಗಳು ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ: ಸಿಎಂ ಸೂಚನೆ

ಬೆಂಗಳೂರು : ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಎಚ್ಚರಿಸಿದರು.

ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕುಶ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು.

ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ: ಇಲ್ಲಾಂದ್ರೆ ಕ್ರಮ ಎದುರಿಸಿ: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಎಚ್ಚರಿಸಿದರು.

ನನ್ನ ಬಳಿ ಇರೋದು ನಕಲಿ ಹುಲಿ ಉಗುರು: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

Posted by Vidyamaana on 2023-10-25 14:56:33 |

Share: | | | | |


ನನ್ನ ಬಳಿ ಇರೋದು ನಕಲಿ ಹುಲಿ ಉಗುರು: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ತಮ್ಮ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ಈ ಆರೋಪವನ್ನು ನಿರಾಕರಿಸಿದ್ದು, ಅದು ಅಸಲಿ ಹುಲಿ ಉಗುರಲ್ಲ, ನಕಲಿ ಉಗುರು ಎಂದು ಹೇಳಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿದ ಅವರು, “ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ” ಎಂದಿದ್ದಾರೆ.

“ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ

Posted by Vidyamaana on 2023-10-27 17:30:36 |

Share: | | | | |


ಮಂಗಳೂರು:  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ

ಬೆಳ್ತಂಗಡಿ : ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಯಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.


2022 ಜುಲೈ 26 ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತ ಆರೋಪಿ ನಂಬರ್ 23 ಅಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.


ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿರಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದ್ದಾರೆ.

ಸೌಜನ್ಯ ಸಮಾಧಿಗೆ ನಮಿಸಿ ತಾಯಿಗೆ ಆಮಂತ್ರಣ

Posted by Vidyamaana on 2023-08-11 11:51:00 |

Share: | | | | |


ಸೌಜನ್ಯ ಸಮಾಧಿಗೆ ನಮಿಸಿ ತಾಯಿಗೆ ಆಮಂತ್ರಣ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರ ಹೆಸರಿನಲ್ಲಿ ಹುಟ್ಟಿಕೊಂಡ ಪುತ್ತಿಲ‌ ಪರಿವಾರ ಇದೀಗ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ದಿಶೆಯಲ್ಲೂ ಹೋರಾಟ ಹಮ್ಮಿಕೊಂಡಿದೆ.

ಹಿಂದೂ ಪರವಾದ ಹಲವು ಹೋರಾಟಗಳನ್ನು ಹಮ್ಮಿಕೊಂಡು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸಿ ಸೈ ಎನಿಸಿಕೊಂಡಿರುವುದು ಪುತ್ತಿಲ ಬಳಗದ ಹೆಚ್ಚುಗಾರಿಕೆ. ಚುನಾವಣೆ ಬಳಿಕ ಪುತ್ತಿಲ ಪರಿವಾರ ಸಂಘಟನೆ‌ ಅಸ್ತಿತ್ವಕ್ಕೆ ಬಂದಿದ್ದು, ಅದರ ಮೂಲಕ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗುತ್ತಿದೆ. ಇದೀಗ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಪುತ್ತೂರಿನಲ್ಲಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪಾದಯಾತ್ರೆ ಹಾಗೂ ರಸ್ತೆ ತಡೆ ಆಯೋಜಿಸಲಾಗಿದೆ. ಈ ಹೋರಾಟಕ್ಕೆ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಪುತ್ತಿಲ ಪರಿವಾರದ ವತಿಯಿಂದ ಆಹ್ವಾನಿಸಲಾಗಿದೆ.

ಸೌಜನ್ಯ ಸಮಾಧಿ ಬಳಿ ಪ್ರಾರ್ಥನೆ ಸಲ್ಲಿಸಿ, ತಾಯಿಗೆ ಮೊದಲ ಆಮಂತ್ರಣ ನೀಡಲಾಯಿತು.

ತಾಯಿ ಕುಸುಮಾವತಿ ಅವರ ಬಳಿ ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ವೀರಮಂಗಲ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. 2013ರಲ್ಲೂ ಅರುಣ್ ಕುಮಾರ್ ಪುತ್ತಿಲರು ಹೋರಾಟ ನಡೆಸಿದ್ದಾರೆ. ಈಗ ಮರುತನಿಖೆಗೆ ಆಗ್ರಹಿಸಿ ಪುತ್ತೂರಿನಲ್ಲಿ ಹೋರಾಟ ನಡೆಸಲಿದ್ದೇವೆ. ಈ ಹೋರಾಟದ ಮೊದಲ ಆಮಂತ್ರಣ ನಿಮಗೆ ನೀಡಿ ಆಮಂತ್ರಿಸುತ್ತಿದ್ದೇವೆ ಎಂದರು.

ಈ ಸಂದರ್ಭ ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ಮನೀಶ್, ಶನ್ಮಿತ್ ರೈ, ಶರತ್ ಎನ್.ಎಸ್. ವಿಟ್ಲ ಮೊದಲಾದವರು ಹಾಜರಿದ್ದರು.


ಆ.14ರಂದು ಬೆಳಿಗ್ಗೆ 9.30ರಿಂದ ದರ್ಬೆಯಿಂದ ಬಸ್ ನಿಲ್ದಾಣದವರೆಗೆ ಜಾಥಾ ಹಾಗೂ ರಸ್ತೆ ತಡೆ ನಡೆಯಲಿದೆ.


10 ಗಂಟೆಯಿಂದ 11 ಗಂಟೆಯವರೆಗೆ ಪುತ್ತೂರಿನ ಅಂಗಡಿ ಮಾಲೀಕರು 1 ಗಂಟೆ ಸ್ವಯಂಪ್ರೇರಿತ ಬಂದ್ ನಡೆಸಿ ಸೌಜನ್ಯಾ ಪ್ರಕರಣದ ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ಭಾಗವಹಿಸುವಂತೆ ಕೇಳಿಕೊಳ್ಳಲಾಗಿದೆ.

ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

Posted by Vidyamaana on 2024-06-13 08:11:33 |

Share: | | | | |


ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ ವ್ಯಕ್ತಿಗತ ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

BREAKING: ಮೈಸೂರು ದಸರಾ ಖ್ಯಾತಿಯ ಆನೆ ಅಶ್ವತ್ಥಾಮ ಇನ್ನಿಲ್ಲ

Posted by Vidyamaana on 2024-06-11 16:20:39 |

Share: | | | | |


BREAKING: ಮೈಸೂರು ದಸರಾ ಖ್ಯಾತಿಯ ಆನೆ ಅಶ್ವತ್ಥಾಮ ಇನ್ನಿಲ್ಲ

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ, ಮೃತಪಟ್ಟಿರೋದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು, ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ.

Recent News


Leave a Comment: