ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಪ್ರದ್ವಿನ್ ಪರಿಸರ ಪ್ರೇಮಕ್ಕೆ ಬರ್ತ್ ಡೇ ಗಿಫ್ಟ್ ಕೊಟ್ಟ ಮರ

Posted by Vidyamaana on 2023-06-26 10:43:10 |

Share: | | | | |


ಪ್ರದ್ವಿನ್ ಪರಿಸರ ಪ್ರೇಮಕ್ಕೆ ಬರ್ತ್ ಡೇ  ಗಿಫ್ಟ್ ಕೊಟ್ಟ ಮರ

ಪುತ್ತೂರು: ಎರಡು ವರ್ಷದ ಹಿಂದೆ ತನ್ನ ಹುಟ್ಟುಹಬ್ಬದಂದು ನೆಟ್ಟ ಗಿಡದ ಅಡಿಯಲ್ಲೇ ಈ ಬಾರಿ ಮತ್ತೆ ಹುಟ್ಟು ಹಬ್ಬ ಆಚರಿಸುವ ಮೂಲಕ ಪುತ್ತೂರು ಅಂಬಿಕಾ ವಿದ್ಯಾಲಯದ ನಾಲ್ಕನೇ ತರಗತಿ ವಿದ್ಯಾರ್ಥಿ ಪ್ರದ್ವಿನ್ ಎಲ್ಲರಿಗೂ ಮಾದರಿಯಾಗಿದ್ದಾನೆ.

ತನ್ನ ಹುಟ್ಟುಹಬ್ಬದಂದು ಪ್ರತೀ ವರ್ಷವೂ ಒಂದು ಗಿಡ ತನ್ನ ಮನೆಯ ಬಳಿ ನೆಡುವ ಮೂಲಕ ಬರ್ತ್‌ಡೇ ಆಚರಣೆ ಮಾಡುತ್ತಿದ್ದಾನೆ. ತನ್ನ ಏಳನೇ ವರ್ಷದ ಹುಟ್ಟುಹಬ್ಬದಂದು ಮನೆಯ ಅಂಗಳದಲ್ಲಿ ನೆಟ್ಟಿದ್ದ ಕದಂಬ ಗಿಡದ ಬುಡದಲ್ಲೇ ಈ ಬರಿ ತನ್ನ ೯ ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದು ಪರಿಸರ ಪ್ರೇಮಿಗಳಿಗೆ ಈ ಮೂಲಕ ತನ್ನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾನೆ.

ತಾನು ನೆಟ್ಟ ಗಿಡವನ್ನೇ ಹಬ್ಬಕ್ಕಾಗಿ ಬಲೂನ್ ಕಟ್ಟಿ ಶೃಂಗಾರ ಮಾಡಿ ಅದರ ಅಡಿಯಲ್ಲೇ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿ ಈ ಬಾರಿಯ ಹುಟ್ಟುಹಬ್ಬದಂದು ಇನ್ನೊಂದು ಗಿಡವನ್ನು ನೆಟ್ಟಿದ್ದಾನೆ. ಪ್ರದ್ವಿನ್ ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿ ಜಯಪ್ರಕಾಶ್ ಮತ್ತು ವಿನುತಾ ದಂಪತಿಗಳ ಪುತ್ರ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಯಪ್ರಕಾಶ್ ಬದಿನಾರ್ ಪರಿಸರದ ಬಗ್ಗೆ ಮಕ್ಕಳಿಗೆ ಎಳೆಯ ಪ್ರಾಯದಲ್ಲೇ ಪ್ರೀತಿ ಹುಟ್ಟುವಂತೆ ಮಾಡುವ ಏಕೈಕ ಉದ್ದೇಶದಿಂದ ತನ್ನ ಎರಡೂ ಮಕ್ಕಳ ಹುಟ್ಟು ಹಬ್ಬದಂದು ಪ್ರತೀ ವರ್ಷವೂ ಗಿಡ ನೆಡುವ ಮೂಲಕವೇ ಆಚರಣೆ ಮಾಡುತ್ತೇವೆ. ಇದು ಇನ್ನೊಬ್ಬರಿಗೆ ಪ್ರೇರಣೆಯಗಿ ಯಾರಾದರೂ ಒಂದು ಗಿಡ ನೆಟ್ಟರೂ ನಮಗೆ ಅದುವೇ ದೊಡ್ಡ ಸಂತೋಷ ಎಂದು ಹೇಳುತ್ತಾರೆ.

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

Posted by Vidyamaana on 2023-11-24 04:38:20 |

Share: | | | | |


ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

ಬೆಳ್ತಂಗಡಿ : ವಿದ್ಯಾರ್ಥಿಯ  ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23 ರಂದು(ಇಂದು) ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಸಾವನ್ನಪ್ಪಿದ್ದಾನೆ.


ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದ ಉಜಿರೆಯ ಎಸ್.ಡಿ.ಎಮ್ ಖಾಸಗಿ ಕಾಲೇಜಿನ ಮ್ಯಾಕಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಚಿಕಿತ್ಸೆ ಫಲಿಸದೆ ಸಂಜೆ ಮಂಗಳೂರು ಕೆ.ಎಮ್.ಸಿ ಅತ್ತಾವರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಪುತ್ತೂರು ಖಾಸಗಿ ಶಾಲಾ ಬಸ್‌ನಿಂದ ಸರಣಿ ಅಪಘಾತ

Posted by Vidyamaana on 2023-12-07 09:32:53 |

Share: | | | | |


ಪುತ್ತೂರು ಖಾಸಗಿ ಶಾಲಾ ಬಸ್‌ನಿಂದ ಸರಣಿ ಅಪಘಾತ

ಪುತ್ತೂರು: ಪುತ್ತೂರು ನಗರದ ಬೈಪಾಸ್ ನಲ್ಲಿರುವ ಖಾಸಗಿ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಡಿ. 06 ಬುಧವಾರ ಮಧ್ಯಾಹ್ನ ನಡೆದಿದೆ.


 ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದ್ದು ಇದರಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರ ಪುತ್ರ ಬಿಪಿನ್ ರವರ  ಕಾರು,ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ್ ಗೌಡ ಬೆಳ್ಳಿಪ್ಪಾಡಿಯವರ ಅಲ್ಲೋ ಕಾರು ಸೇರಿದೆ.


  ಬಸ್ ನ್ನು ಬೆಳ್ತಂಗಡಿ ಮೊಗ್ರು ಮೂಲದ ಜನಾರ್ದನ ಎಂಬವರು ಚಲಾಯಿಸುತ್ತಿದ್ದರು. ಬಸ್ಸಿನಲ್ಲಿ ಹಲವು ಮಕ್ಕಳು ಪ್ರಯಾಣಿಸುತ್ತಿದ್ದು ಅದೇ ಬಸ್ಸಿನ ಮಾಲಕ ಪಾನಮತ್ತನಾಗಿದದ್ದು ಆತಂಕಕಾರಿ ವಿಚಾರವಾಗಿದೆ.


ಸರಿ ಸುಮಾರು 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಕಾರುಗಳು  ಜಖಂ ಆಗಿದೆ.ಅದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಲು ಅವರು ರಸ್ತೆಗಿಂತ ತುಸು ದೂರದಲ್ಲಿ ಶಾಲೆಯ ಸಮೀಪ ಕಾರು ನಿಲ್ಲಿಸಿದ್ದರು. ಮಕ್ಕಳು ಕಾರಿಗೆ ಹತ್ತಿದ ಕೆಲವೇ ಕ್ಷಣದಲ್ಲಿ ಶಾಲಾ ಬಸ್ಸು ಬಂದು ಕಾರಿನ ಹಿಬ್ಬಂದಿಗೆ ಢಿಕ್ಕಿ ಹೊಡೆದಿದೆ. ಮಕ್ಕಳು ಕಾರಿಗೆ ಹತ್ತಲು ಬಂದ ದಾರಿಯಲ್ಲೆ ಬಂದ ಬಸ್ಸು ಢಿಕ್ಕಿ ಹೊಡೆದಿದ್ದು, ಬಸ್ಸು ಕೆಲವೇ ಸೆಕೆಂಡ್ ಲೇಟಾಗಿ ಬಂದಿದರಿಂದ ಮಕ್ಕಳು ಆಪಾಯದಿಂದ ಪಾರಾದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಅಪಘಾತ ನಡೆದ ಬಳಿಕವು ಬಸ್ಸನ್ನು ನಿಲ್ಲಿಸದ ಚಾಲಕ ಯದ್ವಾತದ್ವಾ ಬಸ್ಸು ಚಲಾಯಿಸಿದ್ದು, ಆಶ್ಮಿ ಕಂಫರ್ಟ್ಸ್ ನಿಂದ ಬರುತ್ತಿದ್ದ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರ ಪುತ್ರ ಬಿಪಿನ್ ಚಲಾಯಿಸುತ್ತಿದ್ದ ಹೋಂಡಾ ಸಿಟಿ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ.  ಬಸ್ಸು ಮುರದ ಸಮೀಪವು ವಾಹನವೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಸ್ಥಳೀಯರು ಬಸ್ಸನ್ನು ತಡೆದು ಚಾಲಕನನ್ನು ಹಿಡಿದು ಸಂಚಾರಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.ಬಸ್ ನಲ್ಲಿ ಮಕ್ಕಳಿದ್ದ ಕಾರಣ ಅವರನ್ನು ಮನೆಗೆ ಬಿಡುವ ನಿಟ್ಟಿನಲ್ಲಿ ಪೊಲೀಸರು ಬಸ್ಸನ್ನು ಅದೇ ವಿದ್ಯಾಸಂಸ್ಥೆಯ ಬೇರೆ ಚಾಲಕನ ಕೈಯಲ್ಲಿ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.  ಅಪಘಾತಕ್ಕಿಡಾದ ಅಲ್ಲೋ ಕಾರು ಹಾಗೂ ಹೋಂಡಾ ಸಿಟಿ ಕಾರನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. .ಶಕುಂತಳಾ ಶೆಟ್ಟಿಯವರ ಪುತ್ರ ಬಿಪಿನ್ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂಬೈನಲ್ಲಿ ಇಂಡಿಗೋ-ಏರ್ ಇಂಡಿಯಾ ವಿಮಾನಗಳು ಒಂದೇ ರನ್ವೇಯಲ್ಲಿ ಟೇಕ್ ಆಫ್

Posted by Vidyamaana on 2024-06-09 14:02:56 |

Share: | | | | |


ಮುಂಬೈನಲ್ಲಿ ಇಂಡಿಗೋ-ಏರ್ ಇಂಡಿಯಾ ವಿಮಾನಗಳು ಒಂದೇ ರನ್ವೇಯಲ್ಲಿ ಟೇಕ್ ಆಫ್

ಮುಂಬೈ :ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುತ್ತಿದ್ದ ರನ್ ವೇಯಲ್ಲಿ ಇಂಡಿಗೋ ವಿಮಾನವೊಂದು ಇಳಿದ ನಂತರ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ತ್ವರಿತ ಪ್ರತಿಕ್ರಿಯೆಯಲ್ಲಿ, ನಾಗರಿಕ ವಿಮಾನಯಾನ ನಿಯಮಿತ ನಿರ್ದೇಶನಾಲಯವು ತನಿಖೆಯನ್ನು ಪ್ರಾರಂಭಿಸಿದೆ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಯನ್ನು ವಜಾಗೊಳಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಹೊರಹೊಮ್ಮಿದ ವೀಡಿಯೊದಲ್ಲಿ, ಎರಡೂ ವಿಮಾನಗಳು ಒಂದೇ ರನ್ವೇಯಲ್ಲಿ ಕಂಡುಬರುತ್ತವೆ. ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ, ಇಂಡಿಗೊ ವಿಮಾನವು ಇಳಿಯುವುದನ್ನು ಕಾಣಬಹುದು. ಇಂಡಿಗೋ ವಿಮಾನವು ಇಂದೋರ್ ನಿಂದ ಮುಂಬೈಗೆ ಹಾರುತ್ತಿದ್ದರೆ, ಏರ್ ಇಂಡಿಯಾ ವಿಮಾನವು ಕೇರಳದ ತಿರುವನಂತಪುರಕ್ಕೆ ಹೊರಟಿತು.

ವಿದ್ಯುತ್ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬೈದು ಕುಮಾರಸ್ವಾಮಿ ಕರೆಂಟ್ ಕದ್ದರೇ??

Posted by Vidyamaana on 2023-11-15 05:56:26 |

Share: | | | | |


ವಿದ್ಯುತ್ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬೈದು ಕುಮಾರಸ್ವಾಮಿ ಕರೆಂಟ್ ಕದ್ದರೇ??

ಬೆಂಗಳೂರು: ದೀಪಾವಳಿ ಹಬ್ಬದ (Diwali Festival) ಪ್ರಯುಕ್ತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ನಿವಾಸಕ್ಕೆ ವಿದ್ಯುತ್ ದೀಪಗಳ ಅಲಂಕಾರ (Decoration of electric lights) ಮಾಡಲಾಗಿತ್ತು. ಆದರೆ, ಇದಕ್ಕೆ ನೇರವಾಗಿ ವಿದ್ಯುತ್‌ ಕಂಬದಿಂದ ಸಂಪರ್ಕ (Connection from electric pole) ಪಡೆದಿರುವುದು ವಿವಾದದ ಸ್ವರೂಪವನ್ನು ಪಡೆದುಕೊಂಡಿದೆ.ಈ ವಿಷಯ ತಿಳಿಯುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಯ ಮೀಟರ್‌ ಬೋರ್ಡ್‌ (Electricity meter board) ಸಂಪರ್ಕವನ್ನು ಪಡೆದರಾದರೂ ಕಾಂಗ್ರೆಸ್‌ ಈ ಬಗ್ಗೆ ಟ್ವೀಟ್‌ ಮಾಡಿ ವ್ಯಂಗ್ಯವಾಡಿದೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಂದು ಹೀಗಳೆದಿದೆ. ಅದರೆ, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಚ್‌.ಡಿ. ಕುಮಾರಸ್ವಾಮಿ, ಇದು ಖಾಸಗಿ ಡೆಕೋರೇಟರ್ ಮಾಡಿದ ಅಚಾತುರ್ಯವಾಗಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.


ಮಾಜಿ ಸಿಎಂಗೆ ವಿದ್ಯುತ್‌ ಕಳ್ಳತನದ ದಾರಿದ್ರ್ಯ ಎಂದ ಕಾಂಗ್ರೆಸ್‌!


ಎಚ್‌.ಡಿ. ಕುಮಾರಸ್ವಾಮಿ ಮನೆಯ ವಿದ್ಯುತ್‌ ದೀಪಾಲಂಕಾರಕ್ಕೆ ಲೈನ್‌ ಕಂಬದಿಂದ ಸಂಪರ್ಕ ಪಡೆದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತಿದ್ದಂತೆ ಅದರ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಕುಟುಕಿದೆ.ಕಾಂಗ್ರೆಸ್‌ ಟ್ವೀಟ್‌ನಲ್ಲೇನಿದೆ?


“ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಎಚ್.ಡಿ. ಕುಮಾರಸ್ವಾಮಿಯವರ ಜೆ.ಪಿ. ನಗರದ ನಿವಾಸದಲ್ಲಿ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!


ಎಚ್.ಡಿ. ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹ ಜ್ಯೋತಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್‌ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ!ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು "ಬರ" ಎದುರಿಸುತ್ತಿದ್ದೀರಾ?


ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು?” ಎಂದು ಕಾಂಗ್ರೆಸ್‌ ಟ್ವೀಟ್‌ ಮೂಲಕ ಪ್ರಶ್ನೆ ಮಾಡಿದೆ.


ತಿಳಿದು ಮಾತನಾಡುವೆ ಎಂದ ಸಿಎಂ ಸಿದ್ದರಾಮಯ್ಯ


ಕುಮಾರಸ್ವಾಮಿ ವಿದ್ಯುತ್ ಕದ್ದಿರುವ ಆರೋಪದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕರೆಂಟ್ ಕದ್ದಿರುವ ಬಗ್ಗೆ ನನಗೆ ಗೊತ್ತಿಲ್ಲ‌. ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.ಇಂಧನ ಇಲಾಖೆಯವರು ಕ್ರಮ ತಗೊಳ್ತಾರೆ ಎಂದ ಡಿಕೆಶಿ


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಮಾಧ್ಯಮಗಳಲ್ಲಿ ನೋಡಿ ನಾನು ವಿದ್ಯುತ್‌ ಕಳ್ಳತನದ ಬಗ್ಗೆ ತಿಳಿದುಕೊಂಡೆ. ನಮ್ಮ ಪಕ್ಷದವರು ಅದನ್ನು ನೋಡಿ ಟ್ವೀಟ್‌ ಮಾಡಿದ್ದಾರೆ. ಕೆಇಬಿಯವರು ಕ್ರಮವನ್ನು ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನನಗೆ ಗೊತ್ತಿಲ್ಲ. ವಿದ್ಯುತ್ ಕಳ್ಳತನ ಮಾಡಬಾರದು. ನಮ್ಮಂತವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಾಡಿದರೆ ತಪ್ಪು ಅಲ್ಲವೇ? ಇಲಾಖೆಯವರು, ಸಚಿವ ಕೆ.ಜೆ. ಜಾರ್ಜ್‌ ಅವರು ಇದ್ದಾರೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅವರಿಗೆ ಬಿಟ್ಟ ವಿಷಯವಾಗಿದೆ.


ಡೆಕೋರೇಟರ್‌ ಮಾಡಿದ ಅಚಾತುರ್ಯ, ದಂಡ ಕಟ್ಟುವೆ: ಎಚ್‌.ಡಿ. ಕುಮಾರಸ್ವಾಮಿ


ಈ ಬಗ್ಗೆ ಸೋಷಿಯಲ್‌ ಮೀಡಿಯಾ ಮೂಲಕ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದು, ದಂಡ ಕಟ್ಟಲು ತಾವು ಸಿದ್ಧರಿರುವುದಾಗಿ ಹೇಳಿದ್ದಾರೆ.


ಎಚ್‌ಡಿಕೆ ಪೋಸ್ಟ್‌ನಲ್ಲೇನಿದೆ?


ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ @INCKarnataka ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.


ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ” ಎಂದು ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿದ್ದ ಹೋರಿ ನಾಪತ್ತೆ

Posted by Vidyamaana on 2024-05-04 21:54:38 |

Share: | | | | |


ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿದ್ದ ಹೋರಿ ನಾಪತ್ತೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿರುತ್ತಿದ್ದ ಸಾಧು ಸ್ವಭಾವದ ‘ಅಣ್ಣು’ ಎಂಬ ಹೆಸರಿನ ಹೋರಿಯೊಂದು ನಾಪತ್ತೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗುತ್ತಿದೆ.ಎ.30ರಿಂದ ಈ ಹೋರಿ ನಾಪತ್ತೆಯಾಗಿದೆ ಎನ್ನಲಾಗುತ್ತಿದೆ.



Leave a Comment: