ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

Posted by Vidyamaana on 2023-07-06 07:04:55 |

Share: | | | | |


ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.


ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ದೀಪಿಕಾ ಸುಳ್ಯದಲ್ಲಿ ಪತ್ತೆ

Posted by Vidyamaana on 2024-05-10 07:20:16 |

Share: | | | | |


ನಾಪತ್ತೆಯಾಗಿದ್ದ ವಿದ್ಯಾರ್ಥಿನಿ  ದೀಪಿಕಾ ಸುಳ್ಯದಲ್ಲಿ ಪತ್ತೆ

ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.

ಕೊಳವೆ ಅಳವಡಿಕೆ:ಜೂನ್‌ 2ರಿಂದ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

Posted by Vidyamaana on 2023-05-30 13:00:44 |

Share: | | | | |


ಕೊಳವೆ ಅಳವಡಿಕೆ:ಜೂನ್‌ 2ರಿಂದ ಎರಡು ದಿನ  ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮಂಗಳೂರು: ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ – ಬೆಂದೂರ್‌ವೆಲ್‌ ಪಣಂಬೂರು 1000 ಎಂಎಂ ವ್ಯಾಸ ಕೊಳವೆಯನ್ನು ಅಡ್ಯಾರ್‌ ಕಟ್ಟೆಯ ಬಳಿ ಬಲಪಡಿಸುವ ಕಾಮಗಾರಿ ಹಾಗೂ ಕೊಟ್ಟಾರಚೌಕಿ ಬಳಿ ಕೆಯುಐಡಿಎಫ್‌ಸಿ ವತಿಯಿಂದ 900 ಎಂಎಂ ವ್ಯಾಸ ಕೊಳವೆ ಮರುಜೋಡಣೆ ಕಾಮಗಾರಿ ಇರುವುದರಿಂದ ಜೂನ್‌ 2ರ ಬೆಳಗ್ಗೆ 6 ಗಂಟೆಯಿಂದ ಜೂನ್‌ 4ರ ಬೆಳಗ್ಗೆ 6 ಗಂಟೆಯವರೆಗೆ ನಗರದ ಕೆಲವು ಕಡೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ನಗರದ ಬೆಂದೂರ್‌ವೆಲ್‌ ಲೋ ಲೆವೆಲ್‌ ಪ್ರದೇಶಗಳಾದ ಪಿವಿಎಸ್‌, ಲೇಡಿಹಿಲ್‌, ಬಂದರು, ಬಿಜೈ, ಸೂಟರ್‌ಪೇಟೆ, ಮೇರಿಹಿಲ್‌, ಪಚ್ಚನಾಡಿ, ಅಶೋಕನಗರ, ದೇರೆಬೈಲ್‌, ಕೊಡಿಯಾಲಬೈಲು, ಕದ್ರಿ, ನಾಗುರಿ, ಸುರತ್ಕಲ್‌, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್‌ ಭಾಗಶಃ, ಕಾನ, ಬಾಳಾ, ಕುಳಾಯಿ, ಮುಕ್ಕ, ಪಂಬೂರು ಮುಂತಾದ ಪ್ರದೇಶಗಳಲ್ಲಿ ಸಂಪೂರ್ಣವಾಗಿ ನೀರು ಸರಬರಾಜು ನಿಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

Posted by Vidyamaana on 2024-05-04 20:42:20 |

Share: | | | | |


ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.

ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ದಾಂಪತ್ಯ ಸರಿ ಹೋಗ್ತಿಲ್ಲಾಂತ ಎರಡನೇ ಹೆಂಡ್ತಿಯನ್ನು ಕೊಲೆಗೈದ ಮೂರನೇ ಗಂಡ

Posted by Vidyamaana on 2023-11-26 12:58:11 |

Share: | | | | |


ದಾಂಪತ್ಯ ಸರಿ ಹೋಗ್ತಿಲ್ಲಾಂತ ಎರಡನೇ ಹೆಂಡ್ತಿಯನ್ನು ಕೊಲೆಗೈದ ಮೂರನೇ ಗಂಡ

ವಿಜಯನಗರ : ಇಬ್ಬರೂ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುವ ನೌಕರರಾಗಿದ್ದಾರೆ. ದಾಂಪತ್ಯದಲ್ಲಿ ಕಲಹ ಉಂಟಾಗಿದ್ದರಿಂದ ಮನೆಯಲ್ಲಿಯೇ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಆರೋಪಿ ಗಂಡ ಪೊಲೀಸರ ಮುಂದೆ ಹಾಜರಾಗಿದ್ದಾನೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಪತಿ -ಪತ್ನಿ ಇಬ್ಬರೂ ಕೆಲಸ ಮಾಡುತ್ತಿದ್ದಾರೆ.ಆದರೆ, ಇಬ್ಬರಿಗೂ ಈ ಮೊದಲೇ ಮದುವೆ ಆಗಿದ್ದರೂ ಕುಟುಂಬಕ್ಕೆ ಹೆಚ್ಚು ಸಮಯ ಕೊಡಲಾಗದಿದ್ದರೊಂದ ಆದರೆ, ಇಬ್ಬರೂ ಬೇರೆ ಬೇರೆ ಗ್ರಾಮಗಳ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರಿಗೂ ಅನುಕೂಲ ಆಗುವಂತೆ ಇಟಗಿ ಗ್ರಾಮದಲ್ಲಿ ವಾಸವಾಗಿದ್ದರು. ಆದರೆ, ಇಬ್ಬರ ನಡುವೆ ದಾಂಪತ್ಯದಲ್ಲಿ ಎಲ್ಲವೂ ಸರಿಯಿರಲಿಲ್ಲ. ಕಳೆದ ಕೆಲವು ದಿನಗಳಿಂದ ದಾಂಪತ್ಯಲ್ಲಿ ಕಲಹ ಆರಂಭವಾಗಿದ್ದು, ಈಗ ಗಂಡನೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.ಕೊಲೆ ಘಟನೆ ಹೂವಿನ ಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಡಿಂಪಲ್ (36) ಚಾಮರಾಜನಗರ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದವಳಾಗಿದ್ದಳು. ಕೆಲಸದ ನಿಮಿತ್ತ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿಗೆ ಆಗಮಿಸಿದ್ದರು. ಆದರೆ, ಇಲ್ಲಿಗೆ ಆಗಮಿಸುವ ಮೊದಲೇ ಆಕೆಗೆ ಮದುವೆ ಆಗಿದ್ದರೂ ಕೆಲಸದ ಸ್ಥಳ ದೂರವಾದ್ದರಿಂದ ಗಂಡನನ್ನು ಬಿಟ್ಟು ಬಂದಿದ್ದರು. ಇನ್ನು ಕೆಲಸದಲ್ಲಿ ಪರಿಚಯವಾದ ಸ್ಥಳೀಯ ಕೋಗಳಿ ತಾಂಡದ ಶ್ರೀಕಾಂತ ಎನ್ನುವ ವ್ಯಕ್ತಿಯೊಂದಿಗೆ ಪ್ರೇಮಾಂಕುರವಾಗಿ ಇಬ್ಬರೂ ಮದುವೆ ಮಾಡಿಕೊಂಡಿದ್ದರು.


ಕೊಲೆಯಾದ ಮಹಿಳೆ ಡಿಂಪಲ್ ಹಡಗಲಿ ತಾಲೂಕಿನ ಉಲವತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಕೊಲೆ ಮಾಡಿದ ವ್ಯಕ್ತಿ ಕೋಗಳಿ ತಾಂಡಾದ ನಿವಾಸಿಯಾಗಿದ್ದು, ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದನು.ಆದರೆ, ಡಿಂಪಲ್‌ಗೆ ಇದು ಮೂರನೇಯ ಮದುವೆಯಾಗಿತ್ತು. ಜೊತೆಗೆ, ಈಕೆಯನ್ನು ಮದುವೆಯಾಗಿದ್ದ ಶ್ರೀಕಾಂತನಿಗೂ ಇದು ಎರಡನೇ ಮದುವೆಯಾಗಿತ್ತು. ಪರಸ್ಪರ ಅನ್ನೋನ್ಯವಾಗಿದ್ದ ದಂಪತಿಗಳು ಏಕಾಏಕಿಯಾಗಿ ಜಗಳ ಆರಂಭವಾಗಿದ್ದು, ಗಂಡನೇ ಹೆಂಡತಿಯ ಕೊಲೆ ಮಾಡಿ ಇಟಗಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಉಡುಪಿ | ಗಗನಸಖಿ ಸಹಿತ ನಾಲ್ವರ ಹತ್ಯೆ ಪ್ರಕರಣ; ಶಂಕಿತ ಆರೋಪಿ ಪ್ರವೀಣ್ ಚೌಗಲೆ ತೀವ್ರ ವಿಚಾರಣೆ: ಎಸ್ಪಿ ಡಾ.ಅರುಣ್

Posted by Vidyamaana on 2023-11-15 11:00:56 |

Share: | | | | |


ಉಡುಪಿ | ಗಗನಸಖಿ ಸಹಿತ ನಾಲ್ವರ ಹತ್ಯೆ ಪ್ರಕರಣ; ಶಂಕಿತ ಆರೋಪಿ ಪ್ರವೀಣ್ ಚೌಗಲೆ ತೀವ್ರ ವಿಚಾರಣೆ: ಎಸ್ಪಿ ಡಾ.ಅರುಣ್

ಉಡುಪಿ: ನೇಜಾರುವಿನಲ್ಲಿ ಗಗನಸಖಿ ಸಹಿತ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದಿರುವ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.


ಉಡುಪಿ ಎಸ್ಪಿ ಕಚೇರಿಯಲ್ಲಿಂದು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ವಿಚಾರಣೆಯಲ್ಲಿ ಈ ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಕಂಡುಬಂದಲ್ಲಿ ಆತನನ್ನು ಬಂಧಿಸಿ ಕಾನೂನು ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.ಪ್ರಕರಣಕ್ಕೆ ಸಂಬಂಧಿಸಿ ಐದು ತಂಡಗಳನ್ನು ರಚನೆ ಮಾಡಿ ವಿವಿಧ ಆಯಮಗಳಲ್ಲಿ ತನಿಖೆ ನಡೆಸಲಾಗಿತ್ತು. ಮಾಹಿತಿಯಂತೆ ಆರೋಪಿಯನ್ನು ಕುಡುಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆದುಕೊಂಡು ಬರಲಾಗಿದೆ. ಇದೀಗ ಆತನನ್ನು ವಿಚಾರಣೆಗೊಳಪಡಿಸಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ ಎಂದರು.


ಕೆಲವೊಂದು ತಾಂತ್ರಿಕ ಹಾಗೂ ಗುಪ್ತಚರ ಮಾಹಿತಿಯಂತೆ ಈ ವ್ಯಕ್ತಿ ಮೇಲೆ ಅನುಮಾನಗೊಂಡು ವಶಕ್ಕೆ ಪಡೆದುಕೊಳ್ಳಲಾಗಿದೆ ಆತನ ವಿಚಾರಣೆಯಿಂದ ಕೊಲೆಗೆ ಕಾರಣ ಸೇರಿದಂತೆ ಹಲವು ಮಾಹಿತಿಗಳು ದೊರೆಯಲಿದೆ. ವಿಚಾರಣೆ ಮುಗಿದ ಬಳಿಕ ಕಾನೂನು ಪ್ರಕಾರ ಆತನನ್ನು ನ್ಯಾಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದರು.ಪ್ರಕರಣದ ತನಿಖಾಧಿಕಾರಿ ವರದಿ ನೀಡಿದ ಬಳಿಕ ಹೆಚ್ಚಿನ ಮಾಹಿತಿ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು. ನಮ್ಮ ಮಾಹಿತಿ ಪ್ರಕಾರ ಆತ ಸಿ.ಐ.ಎಸ್.ಎಫ್. ಹಾಗೂ ಸಿ.ಆರ್.ಪಿ.ಎಫ್.ನಲ್ಲಿ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಆತ ಸಿವಿಲ್ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸಿರಬಹುದು ಎಂಬ ಮಾಹಿತಿ ದೊರೆತಿದೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದವರು ಹೇಳಿದರು.


ಈ ಪ್ರಕರಣದಲ್ಲಿ ನಾವು 15-20 ಮಂದಿ ಶಂಕಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದೆವು. ಅದೇ ರೀತಿ ಪ್ರವೀಣನನ್ನು ಕೂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದರು.


ಪ್ರಕರಣದ ವಿವರ:


ನ. 12ರಂದು ಬೆಳಗ್ಗೆ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಹಸೀನಾ( 48), ಮಕ್ಕಳಾದ ಅಫ್ಘಾನ್ (23), ಅಯ್ತಾಝ್ (20) ಮತ್ತು ಅಸೀಮ್ (14) ಎಂಬವರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಚೂರಿ ಇರಿತಕ್ಕೊಳಗಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ ಹಂತಕನಿಂದ ತಪ್ಪಿಸಿಕೊಂಡು ಶೌಚಾಲಯದೊಳಗೆ ಅವಿತು ಜೀವ ಉಳಿಸಿಕೊಂಡಿದ್ದರು

Recent News


Leave a Comment: