ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ರೈ ಚಾರಿಟೇಬಲ್ ಟ್ರಸ್ಟ್ ನಿಂದ ಕಾರ್ಮಿಕರ ಕಾರ್ಡ್ ವಿತರಣೆ

Posted by Vidyamaana on 2023-12-01 07:03:23 |

Share: | | | | |


ರೈ ಚಾರಿಟೇಬಲ್ ಟ್ರಸ್ಟ್ ನಿಂದ ಕಾರ್ಮಿಕರ ಕಾರ್ಡ್ ವಿತರಣೆ

ಪುತ್ತೂರು: ಬಡ ಜನರ ಸೇವೆಗೆಂದು ಕಳೆದ 11 ವರ್ಷಗಳಿಂದ ರೈ ಎಸ್ಟೇಟ್  ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ರಚನೆ ಮಾಡಲಾಗಿದ್ದು ಮುಂದೆಯೂ ಟ್ರಸ್ಟ್ ನ ಸಮಾಜ ಸೇವೆ ಮುಂದುವರೆಯುತ್ತದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಶಾಸಕ ಅಶೋಕ್ ರೈ ಹೇಳಿದರು.

ಅವರು ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಮಿಕರಬಕಾರ್ಡ್ ವಿತರಿಸಿ ಮಾತನಾಡಿದರು.

ಒಟ್ಟು 5400 ಕಾರ್ಮಿಕ ಕಾರ್ಡುಗಳನ್ನು ವಿತರಿಸಲಾಗಿದೆ.‌ಕಾರ್ಮಿಕರಬಕಾರ್ಡು ನೀಡುವ ಮೂಲಕ ಬಡವರ ಬದುಕಿನಲ್ಲಿ‌ಭರವಸೆ ಮೂಡಿಸುವ ಕೆಲಸ ಟ್ರಸ್ಟಿನಿಂದ ನಡೆಯುತ್ತಿದೆ.

ಮುಂದಿನ‌ದಿನಗಳಲ್ಲಿ‌ಇನ್ನಷ್ಟು ಸಮಾಜ ಸೇವೆಗಳು ಟ್ರಸ್ಟ್ ವತಿಯಿಂದ ನಡೆಯಲಿದ್ದು ಜನರ ಸಹಕಾರವನ್ನು ಬಯಸುವುದಾಗಿ ಹೇಳಿದರು.

ವೇದಿಕೆಯಲ್ಲಿ ಟ್ರಸ್ಟ್ ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ನಿಹಾಲ್ ಶೆಟ್ಟಿ ಕಲ್ಲಾರೆ, ಉಪಸ್ಥಿತರಿದ್ದರು. 

ರಚನಾ ರೈ ಸ್ವಾಗತಿಸಿ ಕಾರ್ಯಕ್ರಮ‌ನಿರೂಪಿಸಿದರು.

BREAKING : ಭಾರತ ಸೇರಿ ವಿಶ್ವದ್ಯಾಂತ ಮೆಟಾದ ಫೇಸ್ಬುಕ್ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ; ಬಳಕೆದಾರರ ಪರದಾಟ

Posted by Vidyamaana on 2024-03-05 21:38:52 |

Share: | | | | |


BREAKING : ಭಾರತ ಸೇರಿ ವಿಶ್ವದ್ಯಾಂತ ಮೆಟಾದ ಫೇಸ್ಬುಕ್ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ; ಬಳಕೆದಾರರ ಪರದಾಟ

ನವದೆಹಲಿ : ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ.ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಸೇರಿದಂತೆ ಕಂಪನಿಯ ಒಡೆತನದ ಇತರ ಸೇವೆಗಳಲ್ಲಿ ಸಮಸ್ಯೆಗಳನ್ನ ವರದಿ ಮಾಡಿದ್ದಾರೆ.

ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಹನಟಿ ವಿದ್ಯಾ ಬರ್ಬರ ಕೊಲೆ

Posted by Vidyamaana on 2024-05-21 14:28:01 |

Share: | | | | |


ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಹನಟಿ ವಿದ್ಯಾ ಬರ್ಬರ ಕೊಲೆ

ಮೈಸೂರು: ಪತಿಯೇ ಪತ್ನಿಯನ್ನು (Husband and Wife) ಬರ್ಬರವಾಗಿ ಕೊಲೆ (Murder Case) ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ಮೈಸೂರು (Mysuru) ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಹತ್ಯೆ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿ

Posted by Vidyamaana on 2023-10-16 20:33:52 |

Share: | | | | |


ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು: ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಎಳನೀರು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾದ ಘಟನೆ ಮೂಡಿಗೆರೆ ಬಳಿಯ ಕೊಟ್ಟಿಗೆಹಾರದಲ್ಲಿ ನಡೆದಿದ್ದು ಚಾರ್ಮಾಡಿ ಘಾಟಿಯಲ್ಲಿ 5 ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್ ಆಗಿದೆ.‌


ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಸೋಮವಾರ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಿಂದ ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ನೂರಾರು ವಾಹನಗಳು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಣಕಲ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮಳೆಯ ನಡುವೆ ಟ್ರಾಫಿಕ್ ಜಾಮ್ ಸರಿಪಡಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಪೋರೇಟರ್ ಚೇತರಿಕೆ

Posted by Vidyamaana on 2024-01-05 07:15:35 |

Share: | | | | |


ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಪೋರೇಟರ್ ಚೇತರಿಕೆ

ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದರು. ಕಾರಿನೊಳಗೆ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಭೇಟಿ‌ ನೀಡಿದ್ದು, ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ.

ಬೆಂಗಳೂರು: ರಸ್ತೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಪತ್ತೆ - ವಿಡಿಯೋ ವೈರಲ್‌

Posted by Vidyamaana on 2024-07-30 07:52:42 |

Share: | | | | |


ಬೆಂಗಳೂರು: ರಸ್ತೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಪತ್ತೆ - ವಿಡಿಯೋ ವೈರಲ್‌

ಬೆಂಗಳೂರು: ಜಾಲಹಳ್ಳಿಯ ಕುವೆಂಪು ವೃತ್ತದ ಕೆಳಸೇತುವೆಯಲ್ಲಿ ರಾಶಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಟ್ರಾಫಿಕ್‌ ಪೊಲೀಸರೇ ಅವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್‌ ಮಾಡುವ ವೀಡಿಯೊ ವೈರಲ್ ಆಗಿದೆ.

ರಸ್ತೆ ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸರು ಆಕ್ಷನ್‌ಗೆ ಇಳಿದಿದ್ದರು. ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದಲೇ ಮೊಳೆಗಳನ್ನು ರಸ್ತೆಯಲ್ಲಿ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಮೊಳೆಗಳನ್ನು ಸಂಗ್ರಹಿಸಿ ಜಾಗವನ್ನು ಪ್ರಯಾಣಕ್ಕೆ ಸುರಕ್ಷಿತಗೊಳಿಸಿದ್ದಾರೆ. ಇನ್ನೂ ಇರಬಹುದಾದ ಮೊಳೆಗಳ ಬಗ್ಗೆ ಹುಷಾರಾಗಿರುವಂತೆ ಎಚ್ಚರಿಕೆ ನೀಡಿದ್ದಾರೆ.

Recent News


Leave a Comment: