ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪುತ್ತೂರು ಗಾಂಧಿ ಕಟ್ಟೆಯ ಬಳಿ ಇತ್ತಂಡಗಳ ನಡುವೆ ಹೊಡೆದಾಟ

Posted by Vidyamaana on 2024-02-02 11:29:07 |

Share: | | | | |


ಪುತ್ತೂರು ಗಾಂಧಿ ಕಟ್ಟೆಯ ಬಳಿ ಇತ್ತಂಡಗಳ ನಡುವೆ ಹೊಡೆದಾಟ

ಪುತ್ತೂರು : ಎರಡು ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಫೆ.1 ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದ ಸಮೀಪದ ಹೂವಿನ ಮಾರುಕಟ್ಟೆ ಬಳಿ ನಡೆದಿದೆ.


ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು-ಹಂಪಲು ವಿತರಣೆಯ ಪಿಕಪ್ ವಾಹನದವರು ಹಾಗೂ ಮಾರುತಿ 800 ಕಾರಿನಲ್ಲಿದ್ದವರ ನಡುವೆ ಹೂವಿನ ಮಾರುಕಟ್ಟೆ ಮುಂಭಾಗ ನಡುರಸ್ತೆಯಲ್ಲೇ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ.


ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಮಂಗಳೂರು : ಬಿಲ್ ಪಾವತಿಗೆ ನಿವೃತ್ತ ಅರಣ್ಯಾಧಿಕಾರಿಯಿಂದ ಒಂದು ಲಕ್ಷ ಲಂಚಕ್ಕೆ ಬೇಡಿಕೆ

Posted by Vidyamaana on 2023-10-21 20:05:45 |

Share: | | | | |


ಮಂಗಳೂರು : ಬಿಲ್ ಪಾವತಿಗೆ  ನಿವೃತ್ತ ಅರಣ್ಯಾಧಿಕಾರಿಯಿಂದ ಒಂದು ಲಕ್ಷ ಲಂಚಕ್ಕೆ ಬೇಡಿಕೆ

ಮಂಗಳೂರು, ಅ.21: ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ವಿಭಾಗದ ಉಪ ನಿರ್ದೇಶಕಿಯಾಗಿರುವ ಮಹಿಳಾ ಅಧಿಕಾರಿ ಲಾಕ್ ಆಗಿದ್ದಾರೆ. ದಕ್ಷಿಣ ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಅಧಿಕಾರಿ.


2023ರ ಆಗಸ್ಟ್ 31ರಂದು ವಲಯ ಅರಣ್ಯ ಅಧಿಕಾರಿಯಾಗಿ ನಿವೃತ್ತರಾಗಿದ್ದ ಪರಮೇಶ್ ಎನ್.ಪಿ ಎಂಬವರು ಈ ಪ್ರಕರಣದಲ್ಲಿ ದೂರುದಾರರು. ಇವರು ನಿವೃತ್ತಿ ಆಗೋದಕ್ಕೂ ಮುನ್ನ ಕೃಷಿ ಇಲಾಖೆ, ಕರ್ನಾಟಕ ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ನಿಯೋಜನೆ ಮೇಲೆ ಕೆಲಸ ಮಾಡಿದ್ದರು. ಇವರು ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ 2022-23 ಮತ್ತು 24ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬಂಟ್ವಾಳ ತಾಲೂಕಿನ ಸಜಿಪ ನಡು, ಸಜಿಪ ಮುನ್ನೂರು, ಸಜಿಪ ಮೂಡ, ಕುರ್ನಾಡು, ನರಿಂಗಾನ, ಬಾಳೆಪುಣಿ, ಮಂಜನಾಡಿ ಗ್ರಾಮಗಳಲ್ಲಿ ಸರ್ಕಾರದ ವತಿಯಿಂದ 50 ಲಕ್ಷ ಮೌಲ್ಯದ ಸಸಿಗಳನ್ನು ವಿತರಣೆ ಮಾಡಿದ್ದರು.


ಇದಕ್ಕಾಗಿ ತೋಟಗಾರಿಕಾ ಸಸಿಗಳನ್ನು ಕಣ್ಣನ್ ನರ್ಸರಿ ಮಾಲಕರಾದ ಧೋರಿ ಮತ್ತು ಶಬರೀಶ್ ನರ್ಸರಿಯ ಭೈರೇ ಗೌಡ ಎಂಬವರಿಂದ ಖರೀದಿಸಿದ್ದು, ಅವರಿಗೆ 18 ಲಕ್ಷ ಮೊತ್ತ ನೀಡಬೇಕಾಗಿತ್ತು. ಇದಲ್ಲದೆ, ಅರಣ್ಯ ಗುತ್ತಿಗೆದಾರರಿಂದ ನಾಟಿ ಮಾಡಿಸಿದ್ದ ಸಸಿಗಳ ಮೊತ್ತ 32 ಲಕ್ಷ ಬಿಲ್ ಬಾಕಿಯಿತ್ತು. ಮುಂಗಡ ಸಸಿಗಳನ್ನು ಪಡೆದು ನಾಟಿ ಮಾಡಿದ್ದು, ಸರಕಾರದಿಂದ ಹಣ ಬಾರದೆ ಹಣ ಪಾವತಿಯಾಗದೆ ಬಾಕಿ ಉಳಿದಿತ್ತು. ಈ ಹಣವನ್ನು ನೀಡುವರೇ ನರ್ಸರಿ ಮಾಲಕರು ಕೇಳುತ್ತಿದ್ದುದರಿಂದ ನಿವೃತ್ತ ಅಧಿಕಾರಿ ಪರಮೇಶ್ ಬಿಲ್ ಪಾಸ್ ಮಾಡುವಂತೆ ಮಂಗಳೂರು ವಿಭಾಗದ ಕೃಷಿ ನಿರ್ದೇಶಕಿ ಭಾರತಮ್ಮ ಅವರಲ್ಲಿ ಕೇಳಿಕೊಂಡಿದ್ದರು. ಬಿಲ್ ಪಾಸ್ ಮಾಡಿಸಲು ಒಟ್ಟು ಮೊತ್ತದ 15 ಶೇಕಡಾ ಲಂಚ ನೀಡಬೇಕೆಂದು ಭಾರತಮ್ಮ ಬೇಡಿಕೆ ಇರಿಸಿದ್ದರು.


ಈ ಬಗ್ಗೆ ಅ.20ರಂದು ಪರಮೇಶ್, ಕೃಷಿ ನಿರ್ದೇಶಕಿ ಭಾರತಮ್ಮ ಅವರ ಕಚೇರಿಗೆ ತೆರಳಿದಾಗ ಒಂದು ಲಕ್ಷ ರೂ. ಲಂಚ ಮೊದಲು ನೀಡುವಂತೆ ಕೇಳಿಕೊಂಡಿದ್ದರು. ಅಧಿಕಾರಿಯ ಭ್ರಷ್ಟಾಚಾರದ ಬಗ್ಗೆ ಪರಮೇಶ್, ಲೋಕಾಯುಕ್ತ ಗಮನಕ್ಕೆ ತಂದಿದ್ದು ಅವರ ಸೂಚನೆಯಂತೆ ಶನಿವಾರ ಒಂದು ಲಕ್ಷ ರೂ. ಲಂಚ ನೀಡುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿ ಮಹಿಳಾ ಅಧಿಕಾರಿ ಭಾರತಮ್ಮ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಹಣವನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜು, ಕಲಾವತಿ, ಇನ್ಸ್ ಪೆಕ್ಟರ್ ಸುರೇಶ್ ಕುಮಾರ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.

ಫೆ 11.ಶಾರ್ಜಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಮಹಬ್ಬ ಫ್ಯಾಮಿಲಿ ಫೆಸ್ಟ್ -24

Posted by Vidyamaana on 2024-02-03 17:37:33 |

Share: | | | | |


ಫೆ 11.ಶಾರ್ಜಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಮಹಬ್ಬ ಫ್ಯಾಮಿಲಿ ಫೆಸ್ಟ್ -24

ದುಬೈ: ಶಾರ್ಜಾದ ಅಲ್ ಬತ್ತೆಯ್ಯ ಪಾರ್ಕ್ ನಲ್ಲಿ ನಡೆಯುವ ಮಹಬ್ಬ ಫ್ಯಾಮಿಲಿ ಫೆಸ್ಟ್ -24ಕ್ಕೆ

ನಫೀಸ್ ಗ್ರೂಪ್ ನ ಚೈರ್ಮನ್ ಜನಾಬ್ ಅಬುಸ್ವಾಲಿ ಹಾಜಿ ಅವರಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.

ಜನಾಬ್ ಅಬುಸ್ವಾಲಿ ಹಾಜಿ ಅವರ ದುಬೈ ನಿವಾಸದಲ್ಲಿ ಕೆ.ಸಿ.ಎಫ್. ನಾಯಕರು ಊರಿನ ಹಾಗೂ ದುಬೈಯಲ್ಲಿರುವ ಎಲ್ಲಾ ಉದ್ಯಮಿಯವರಿಗೆ ಆಮಂತ್ರಣ ಪತ್ರಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಯು.ಎ.ಇ ಕರ್ನಾಟಕ ಕಲ್ಚರಲ್ ಫೌಂಡೇಶನಿನ  ದಶಮಾನೋತ್ಸವ ಪ್ರಯುಕ್ತ ಫೆಬ್ರವರಿ 11ರಂದು ಮಹಬ್ಬ ಫ್ಯಾಮಿಲಿ ಫೆಸ್ಟ್ -24 ನಡೆಯಲಿದೆ.

ಕೆ.ಸಿ.ಎಫ್ ಯು.ಎ.ಇ  ಮಹಬ್ಬ ಸ್ವಾಗತ ಸಮಿತಿ ಅಧ್ಯಕ್ಷ ಝಐನುದ್ದೀನ್ ಹಾಜಿ ಬೆಳ್ಳಾರೆ,

ಕೆ.ಸಿ.ಎಫ್ ಯು.ಎ.ಇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೂಸಹಾಜಿ ಬಸರ, ಕೆ.ಸಿ.ಎಫ್ ಮಹಬ್ಬ ಸ್ವಾಗತ ಸಮಿತಿ ಕೋಶಾಧಿಕಾರಿ ಶುಕೂರ್ ಹಾಜಿ ಉಳ್ಳಾಲ, ಉದ್ಯಮಿಗಳಾದ ಜನಾಬ್ ಅಬುಸ್ವಾಲಿ ಹಾಜಿ, ಜನಾಬ್ ಮನ್ಸೂರ್ ಆಝದ್, ಜನಾಬ್ ಮಮ್ತಾಜ್ ಆಲಿ, ಬ್ಯಾರಿ ಕಲ್ಚರಲ್ ಫೋರಂ ಅಧ್ಯಕ್ಷ ಡಾಕ್ಟರ್ ಯೂಸುಫ್, ಜನಾಬ್ ಲತೀಫ್ ಮುಲ್ಕಿ, ಜನಾಬ್ ಇಬ್ರಾಹಿಂ ಹಾಜಿ ಗಡಿಯಾರ್, ಜನಾಬ್ ಅಬ್ದುಲ್ ಸಮದ್ ಹಾಜಿ, ಜನಾಬ್ ಜಾವೀದ್ ಹಾಜಿ, ಖಯಿರತ್ ಅಲ್ ಶಮ್ಸ್ ಕಾಂಟ್ರಾಕ್ಟ್ಯಿಂಗ್ ಕಂಪನಿ ದುಬೈ ಇದರ ಮಾಲೀಕ ಜನಾಬ್ ಆಶ್ರಫ್ ಶಾ ಮಂತೂರ್ ಉಪಸ್ಥಿತರಿದ್ದರು.

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಣ: ಚಲಾವಣೆಗೆ ಯತ್ನಿಸುತ್ತಿದ್ದ ಕಡಬ ಮೂಲದ ಆಯೂಬ್ ಖಾನ್‌ ಸಹಿತ ನಾಲ್ವರ ಬಂಧನ

Posted by Vidyamaana on 2024-08-20 00:23:32 |

Share: | | | | |


ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಣ:  ಚಲಾವಣೆಗೆ ಯತ್ನಿಸುತ್ತಿದ್ದ ಕಡಬ ಮೂಲದ ಆಯೂಬ್ ಖಾನ್‌ ಸಹಿತ ನಾಲ್ವರ ಬಂಧನ

ಮಂಗಳೂರು, ಆಗಸ್ಟ್‌ 19: ಯೂಟ್ಯೂಬ್ ನೋಡಿ ಖೋಟಾ ನೋಟು ಪ್ರಿಂಟ್ ಮಾಡುವುದನ್ನು ಕಲಿತು 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಅದನ್ನು ಮಂಗಳೂರು ನಗರದಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2.13 ಲಕ್ಷ ಮೌಲ್ಯದ 427 ಖೋಟಾ ನೋಟುಗಳನ್ನು ವಶಪಡಿಸಿದ್ದಾರೆ.

ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಕೊಳತ್ತೂರಿನ ವಿ.ಪ್ರಿಯೇಶ್ (38), ಕಾಸರಗೋಡು ಜಿಲ್ಲೆಯ ಮಲ್ಲ ಗ್ರಾಮದ ‌ಮುಳಿಯಾರಿನ ವಿನೋದ್ ಕುಮಾರ್‌ ಕೆ. (33), ಪೆರಿಯಾದ ಕುನಿಯಾ ವಡಂಕುರದ ಅಬ್ದುಲ್ ಖಾದರ್ ಎಸ್.ಎ (58) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಬೆಳಿಯೂರು ಕಟ್ಟೆಯ ಆಯೂಬ್ ಖಾನ್‌ (51) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 2.13 ಲಕ್ಷ ಮೌಲ್ಯದ 500 ಮುಖಬೆಲೆಯ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ. ಇವರು ಕಾಸರಗೋಡಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ತಂದು ಮಂಗಳೂರು ನಗರದ ಕ್ಲಾಕ್ ಟವರ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿದ್ದು ಚಲಾವಣೆಗೆ ಯತ್ನಿಸುತ್ತಿದ್ದರು. ಎಷ್ಟು ಮೊತ್ತದ ನಕಲಿ ನೋಟು ಚಲಾವಣೆ ಆಗಿದೆ ಮತ್ತು ಎಷ್ಟು ಸಮಯದಿಂದ ಮೋಸದ ಕೃತ್ಯ ನಡೆಯುತ್ತಿದೆ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

Posted by Vidyamaana on 2024-03-18 21:39:28 |

Share: | | | | |


ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ: ದಾಖಲೆ ಸಹಿತ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು: ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೇ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ದಾಖಲೆ ನೀಡಿದ್ದು, ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಕ್ಸ್ ಪೋಸ್ಟ್ ಮಾಡಿರುವಂತ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ ಎಂದು ದಾಖಲೆಯೊಂದಿಗೆ ತಿಳಿಸಿದ್ದಾರೆ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರ ಇರುವುದಲ್ಲ. ಆರು ಆರೋಪಿಗಳಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಆರೋಪಿಗಳಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ ಎಂದು ಹೇಳಿದ್ದಾರೆ

ಮೀಟ‌ರ್, ತಿಂಗಳ ಬಡ್ಡಿ ಸೇರಿದಂತೆ ಬಡ್ಡಿ ವ್ಯವಹಾರ ಬಂದ್ ಮಾಡಬೇಕು : ಪೊಲೀಸ್‌ ಆಯುಕ್ತ ಖಡಕ್ ಎಚ್ಚರಿಕೆ

Posted by Vidyamaana on 2024-08-22 10:39:01 |

Share: | | | | |


ಮೀಟ‌ರ್, ತಿಂಗಳ ಬಡ್ಡಿ ಸೇರಿದಂತೆ ಬಡ್ಡಿ ವ್ಯವಹಾರ ಬಂದ್ ಮಾಡಬೇಕು : ಪೊಲೀಸ್‌ ಆಯುಕ್ತ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಆ.21: ವಾಣಿಜ್ಯ ನಗರಿ ಹುಬ್ಬಳ್ಳಿ(Hubballi)ಯಲ್ಲಿ ದೋ ನಂಬರ್ ದಂಧೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಇವುಗಳನ್ನ ಮಟ್ಟ ಹಾಕಲು ಪೋಲೀಸರು ಎಷ್ಟೇ ಪ್ರಯತ್ನ ಮಾಡಿದರೂ ದಂಧೆಗಳು ಮಾತ್ರ ನಿಲ್ಲುತ್ತಿಲ್ಲ. ಈ ದೋ ನಂಬರ್​ ದಂಧೆಗಿಂತ ಈಗ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತಿರುವುದು ಮೀಟರ್ ಬಡ್ಡಿ ದಂಧೆ. ಈ ದಂಧೆಕೋರರ ಕಾಟಕ್ಕೆ ಅದೆಷ್ಟೋ ಜನರು ಜೀವವನ್ನೇ ಕಳೆದುಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಅದೆಷ್ಟೇ ಬಿಸಿ ಮುಟ್ಟಿಸಿದರೂ ಈ ದಂಧೆಗೆ ಫುಲ್ ಸ್ಟಾಪ್ ಮಾತ್ರ ಬೀಳುತ್ತಿಲ್ಲ.

Recent News


Leave a Comment: