ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪುತ್ತೂರು :ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ- ಕೃತಜ್ಞತಾ ಸಮರ್ಪಣಾ ಸಮಾರಂಭ

Posted by Vidyamaana on 2023-06-03 17:23:57 |

Share: | | | | |


ಪುತ್ತೂರು :ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ- ಕೃತಜ್ಞತಾ ಸಮರ್ಪಣಾ ಸಮಾರಂಭ

ಪುತ್ತೂರು: ಭ್ರಷ್ಟಾಚಾರ ಇಟ್ಟುಕೊಂಡು ಪುತ್ತೂರಿಗೆ ಬರುವ ಯಾವುದೇ ಅಧಿಕಾರಿಗಳು ಜನಸಾಮಾನ್ಯರಲ್ಲಿ ಹಣಕ್ಕಾಗಿ ಕೈಯೊಡ್ಡಿದರೆ ಅವರನ್ನು ಒಂದೇ ವಾರದಲ್ಲಿ ಇಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಲಿದ್ದೇನೆ.

ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.ಪುತ್ತೂರು ಕ್ಷೇತ್ರದಲ್ಲಿ ಯಾವುದೇ ಅಧಿಕಾರಿಗಳಿಂದ ನಾವು ಅಪೇಕ್ಷೆ ಪಡುವುದು ಬಡವರಿಗೆ ಸೇವೆ ನೀಡುವುದನ್ನು. ಅದನ್ನು ಬಿಟ್ಟು ಬಡವರನ್ನು, ಜನಸಾಮಾನ್ಯರ ಕೆಲಸಕ್ಕಾಗಿ ಅಲೆದಾಡಿಸುವ ಪ್ರವೃತ್ತಿ ಇಟ್ಟುಕೊಂಡರೆ ಅವರನ್ನು ತಕ್ಷಣ ಈ ಕ್ಷೇತ್ರದಿಂದ ಕಳುಹಿಸುವ ಕೆಲಸ ಮಾಡಲಾಗುವುದು ಎಂದು ಖಾರವಾಗಿ ಹೇಳಿದರು.

ಮುಂದಿನ ದಿನಗಳಲ್ಲಿ ಲೋಕಸಭೆ, ತಾಪಂ, ಜಿಲ್ಲಾ ಪಂ ಚುನಾವಣೆ ಬರಲಿದ್ದು, ಬೂತ್ ಮಟ್ಟದಿಂದಲೇ ಪಕ್ಷವನ್ನು ಕಟ್ಟಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕಾರ್ಯಕ್ಕೆ ಈಗಿನಿಂದಲೇ ತೊಡಗಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತೀ ಬೂತ್ ಅಧ್ಯಕ್ಷರು ತಮ್ಮ ಜವಾಬ್ದಾರಿ ವಹಿಸಿಕೊಂಡು ಸರಕಾರ ಈಗಾಗಲೇ ನೀಡಿರುವ ಪಂಚ ಗ್ಯಾರಂಟಿಗಳನ್ನು ಜತೆಗೆ 94ಸಿ, 94ಸಿಸಿ, ಅಕ್ರಮ-ಸಕ್ರಮದಲ್ಲಿ ಯಾರಿಗೆಲ್ಲಾ ಇನ್ನೂ ಹಕ್ಕುಪತ್ರ ಸಿಕ್ಕಿಲ್ಲ ಅದರ ಬಗ್ಗೆ ಗಮನ ನೀಡಿ ಅರ್ಜಿಗಳನ್ನು ಪಡೆದು, ಸರಕಾರದ ಗ್ಯಾರಂಟಿಗಳನ್ನು ಪ್ರತೀ ಮನೆಗೆ ತಲುಪಿಸುವ ಕಾರ್ಯ ಭರದಿಂದ ಮಾಡಬೇಕಾಗಿದೆ. ಈ ಮೂಲಕ ಪಕ್ಷವನ್ನು ಬೂತ್ ಮಟ್ಟದಿಂದಲೇ ಭದ್ರವಾಗಿ ಕಟ್ಟಿ ಮುಂದಿನ 25 ವರ್ಷಗಳ ವರೆಗೂ ಕಾಂಗ್ರೆಸ್ ಆಡಳಿತದಲ್ಲಿರುವಂತೆ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.

ಈಗಾಗಲೇ ಬಿಜೆಪಿಯವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಸುಳ್ಳು ಹೇಳುವುದನ್ನು ಬಿಟ್ಟು ಅಭಿವೃದ್ಧಿಯಲ್ಲಿ ನಮ್ಮ ಜತೆ ಕೈಜೋಡಿಸಲಿ ಎಂದ ಅವರು, ಮುಂದಿನ ಮೂರು ವರ್ಷದೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೂ ಕುಡಿಯುವ ನೀರಿನ ಕೊರತೆ ಕಂಡು ಬರಬಾರದು. ಈ ನಿಟ್ಟಿನಲ್ಲಿ 1400 ಕೋಟಿ ಕುಡಿಯುವ ನೀರಿನ ಕೊರತೆ ನೀಗಿಸಲು ವ್ಯಯಿಸಲಾಗುವುದು. ಜತೆಗೆ ಯುವಕರ ಮನಸ್ಸು ಬದಲಾಯಿಸಲು ಉದ್ಯೋಗ ಸೃಷ್ಟಿಗಾಗಿ ಪ್ರತೀ ವರ್ಷ ಉದ್ಯೋಗ ಮೇಳವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ ಅವರು, ಇಂದಿನ ಈ ಅಭಿನಂದನಾ ಸಭೆ ಚುನಾವಣೆ ಸಂದರ್ಭದಲ್ಲಿ ಬಿಸಿಲು, ಮಳೆ ಎನ್ನದೆ ತೊಡಗಿಸಿಕೊಂಡ ಕಾರ್ಯಕರ್ತ ಬಂಧುಗಳಿಗೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಕೆಪಿಸಿಸಿ ವಕ್ತಾರ ಕಾವು ಹೇಮನಾಥ ಶೆಟ್ಟಿ ಮಾತನಾಡಿ,

 ಬಿಜೆಪಿ ಭದ್ರಕೋಟೆ ಎನ್ನಿಸಿರುವ ದ.ಕ. ಹಾಗೂ ಉಡುಪಿ ಜಿಲ್ಲೆಗಳು ಸೇರಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದೆ. ಪುತ್ತೂರಿನಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರ ಆಯ್ಕೆಯಾಗಿ ಜನಸಾಮಾನ್ಯರ ಧ್ವನಿಯಾಗಬೇಕು ಎಂಬ ನಿಟ್ಟಿನಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡುವ ಯೋಜನೆ, ಬೆಳೆಸಿಕೊಂಡಿದ್ದಾರೆ.  ಇದರ ಫಲವಾಗಿ ಇಂದು ಅಶೋಕ್ ಕುಮಾರ್ ರೈ ಅವರು ಶಾಸಕರಾಗಿದ್ದು, ಮೊದಲ ಆಶ್ವಾಸನೆ ಎಂಬಂತೆ ಮೆಡಿಕಲ್ ಕಾಲೇಜು ಸ್ಥಾಪನೆಯ ಎಲ್ಲಾ ಚಟುವಟಿಕೆಗಳಿಗೆ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ, ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಮಾದರಿ ಶಾಸಕರಾಗಿ ಬೆಳೆದು ಬರಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಶಾಂತಿ-ಸೌಹಾರ್ದತೆಗೆ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರಬೇಕು ಎಂಬುದು ಜನರ ಆಶಯ ಇತ್ತು. ಅದು ಸಾಕಾರಗೊಂಡಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಎಂಬ ಬಿಜೆಪಿಯವರ ಕನಸಿಗೆ ತಿಲಾಂಜಲಿ ಹಾಕಲಾಗಿದೆ ಎಂದ ಅವರು, ಮುಂದಿನ 25 ವರ್ಷಗಳ ಸುದೀರ್ಘ ಪ್ರಯಾಣಕ್ಕೆ ಅಡಿಪಾಯ ಹಾಕಲು ಮುಂದಿ ಬಂದ ಧ್ರುವತಾರೆ ಅಶೋಕ್ ರೈ ಎಂದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ರಮೇಶ್ ರೈ ಡಿಂಬ್ರಿ ಹಾಗೂ ಗಿರಿಧರ ಅವರು ಶಾಸಕರಿಂದ ಪಕ್ಷದ ಬಾವುಟ ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಅಶೋಕ್ ರೈಯವರನ್ನು ವಿವಿಧ ಸಂಘಟನೆ, ಕಾರ್ಯಕರ್ತರು, ಪ್ರಮುಖರು ಪೇಟ ತೊಡಿಸಿ, ಹೂಹಾರ ಹಾಕಿ, ಫಲಪುಷ್ಪ ನೀಡಿ ಅಭಿನಂದಿಸಿದರು.

ಸಭೆಯನ್ನುದ್ದೇಶಿಸಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್‍ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ., ಜಿಪಂ ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್ ಮಾತನಾಡಿದರು. ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಎನ್.ಸುಧಾಕರ ಶೆಟ್ಟಿ,  ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಝ್ಲಲ್ ರಹೀಮ್, ಮುರಳೀಧರ ರೈ ಮಠಂತಬೆಟ್ಟು, ಉಲ್ಲಾಸ್ ಕೋಟ್ಯಾನ್, ಪ್ರಸನ್ನ ಕುಮಾರ್ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಕುಂಬ್ರ ದುರ್ಗಾಪ್ರಸಾದ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಅಲ್ಪಸಂಖ್ಯಾತ ಘಟಕದ ಶಕೂರ್ ಹಾಜಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಪಾಣಾಜೆ, ಸುಭಾಶ್ಚಂದ್ರ ಶೆಟ್ಟಿ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ, ಪ್ರಸಾದ್ ಕೌಶಲ್ ಶೆಟ್ಟಿ, ವೇದನಾಥ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.  ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ  ಅಮಲ ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾದಳದ ಅಧ್ಯಕ್ಷ ಜೋಕಿಂ ಡಿ’ಸೋಜಾ ವಂದೇ ಮಾತರಂ ಹಾಡಿದರು. ಚುನಾವಣಾ ಏಜೆಂಟ್ ಭಾಸ್ಕರ ಕೋಡಿಂಬಾಳ ಸ್ವಾಗತಿಸಿದರು. ಸಿದ್ದಿಕ್ ಸುಲ್ತಾನ್ ಕಾರ್ಯಕ್ರಮ ನಿರೂಪಿಸಿದರು.

ಜುಲೈ 29: ಕೆನ್ನೆಡಿಗಳು ಒಂದು ಕಥಾನಕ ಕನ್ನಡ ಅನುವಾದ ಕೃತಿ ಬಿಡುಗಡೆ

Posted by Vidyamaana on 2023-07-28 10:14:00 |

Share: | | | | |


ಜುಲೈ 29: ಕೆನ್ನೆಡಿಗಳು ಒಂದು ಕಥಾನಕ ಕನ್ನಡ ಅನುವಾದ ಕೃತಿ ಬಿಡುಗಡೆ

ಪುತ್ತೂರು: ಆಂಗ್ಲ ಭಾಷೆಯ ಹೆಸರಾಂತ ಅಮೆರಿಕ ಲೇಖಕ ಪೀಟರ್ ಕೊಲ್ಲಿಯರ್ ಹಾಗೂ ಡೇವಿಡ್ ಹೊರೋವಿಟ್ಸ್ ಇವರಿಬ್ಬರು ಜಂಟಿಯಾಗಿ ರಚಿಸಿದ ‘ದಿ ಕೆನ್ನೆಡಿಸ್ ಏನ್ ಅಮೇರಿಕನ್ ಡ್ರಾಮಾ’ ಕೃತಿಯ ಕನ್ನಡ ಅನುವಾದ ‘ಕೆನ್ನೆಡಿಗಳು, ಒಂದು ಕಥಾನಕ’ ಕೃತಿ ಲೋಕಾರ್ಪಣೆ ಜುಲೈ 29 ಶನಿವಾರ ಮಧ್ಯಾಹ್ನ 2:30ಕ್ಕೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ್ ಕೃತಿ ಲೊಕಾರ್ಪಣೆಗೊಳಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಸಹಾಯಕ ಆಯುಕ್ತ ಗಿರೀಶ್ ನಂದನ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.‌, ಮಿತ್ರಂಪಾಡಿ ಜಯರಾಮ ರೈ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಐತಪ್ಪ ನಾಯ್ಕ್ ಭಾಗವಹಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.


ಕರ್ತೃ ಎಂ. ಶಾಂತರಾಮ್ ರಾವ್:

ಆಂಗ್ಲ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದವರು ಎಂ. ಶಾಂತರಾಮ್ ರಾವ್. ಇವರು ಭಾರತ ಸರಕಾರದ ವಾಣಿಜ್ಯ ಇಲಾಖೆಯ ಅಡಿಯ ಎಕ್ಸ್ಪೋರ್ಟ್ ಕ್ರೆಡಿಟ್ ಗ್ಯಾರೆಂಟ್ ಕಾರ್ಪೋರೇಷನ್ ಇಂಡಿಯಾ ಲಿ. (ಇಸಿಜಿಸಿ)ನ ನಿವೃತ್ತ ಅಧಿಕಾರಿ. ಕನ್ನಡದ ಪ್ರಸಿದ್ಧ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಶಿವರಾಮ ಕಾರಂತರ ಸಹೋದರಿ ಶ್ರೀದೇವಿ ಹಾಗೂ ಪುತ್ತೂರಿನ ಖ್ಯಾತ ವಕೀಲರಾಗಿದ್ದ ದಿ. ಸದಾಶಿವರಾಯರ 4ನೆಯ ಪುತ್ರ ಎಂ. ಶಾಂತರಾಮ್ ರಾವ್. ಪುತ್ತೂರಿನ ಹಿರಿಯ ವಕೀಲ ರಾಮ್ ಮೋಹನ್ ರಾವ್ ಅವರ ಸಹೋದರ.


ಕೃತಿ ಕುರಿತು:

ಅಮೆರಿಕ ದೇಶದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿಯೇ ಚುನಾಯಿತ ಹಾಗೂ ಪ್ರಥಮ ಕೆಥೋಲಿಕ್ ಪಂಗಡದ ಅಧ್ಯಕ್ಷನೆಂಬ ಹೆಗ್ಗಳಿಕೆ ಹಾಗೂ ಪ್ರಸಿದ್ಧಿ ಪಡೆದ ಮಹಾನ್ ನಾಯಕ ಜಾನ್.ಎಫ್ ಕೆನ್ನಡಿ. ಇವರ ಕುಟುಂಬ ಅಮೆರಿಕಾದಲ್ಲಿ ನೆಲೆಯಾಗಿ ಯಶಸ್ಸನ್ನು ಕಂಡ  ರೋಚಕ ಕಥೆ ಈ ಕೃತಿಯಲ್ಲಿ ಸೊಗಸಾಗಿ ನಿರೂಪಣೆಗೊಂಡಿದೆ. ಅವರ ಕುಟುಂಬ ರಾಜಕೀಯವಾಗಿ ಹಾಗೂ ವ್ಯಾವಹಾರಿಕವಾಗಿ ಯಶಸ್ವಿಯಾದ ವಿವರ, ಅವರ ರಾಜಕೀಯದಲ್ಲಿನ ಏಳು ಬೀಳುಗಳು, ಕುಟುಂಬದಲ್ಲಿ ನಡೆದ ಅಚ್ಚರಿಯ ಘಟನೆಗಳು, ಅವರ ಯಶಸ್ಸು, ಅನುಭವಿಸಿದ ನೋವು - ನಲಿವು, ಅವರೊಳಗಿನ ಸ್ಪರ್ಧೆ, ಪ್ರಣಯ ಪ್ರಸಂಗಗಳು, ಭೂಗತ ಜಗತ್ತಿನೊಂದಿಗಿನ ಸಂಬಂಧಗಳು, ಮಾದಕ ವ್ಯಸನಕ್ಕೆ ದಾಸರಾದ ವಿಚಾರ, ಷೇರು ವ್ಯವಹಾರದಲ್ಲಿ ಜೋ. ಕೆನ್ನೆಡಿಯು (ಜಾನ್. ಎಫ್. ಕೆನ್ನಡಿಯ ತಂದೆ) ನಡೆಸಿದ ಅವ್ಯವಹಾರ, ಅವರ ಪ್ರತಿಷ್ಠೆಗಾಗಿ ಬುದ್ದಿಮಾಂದ್ಯ ಮಗುವನ್ನು  ಪ್ರಪಂಚದಿಂದ ದೂರವಿರಿಸಿದ ಮನಕಲುಕುವ ವಿಚಾರ, ಮುಂದಿನ ಜನಾಂಗವು ಪೇಚಿಗೆ ಸಿಲುಕಿದ ಘಟನೆಗಳ ವಿಸ್ತೃತ ವಿವರಣೆಯೇ ಈ ‘ಕೆನ್ನಡಿಗಳು ಒಂದು ಕಥಾನಕ’ ಕೃತಿಯ ಕಥಾ ವಸ್ತುವಾಗಿದೆ.

ಈ ಕೃತಿಯನ್ನು ಓದುತ್ತ ಹೋದಂತೆ ರೋಚಕತೆ ಹಾಗೂ ಓದುವ ಹಂಬಲ ಹೆಚ್ಚುತ್ತ ಹೋಗುತ್ತದೆ. ಕೆನ್ನಡಿ ಕುಟುಂಬವು ರಾಜಕೀಯವಾಗಿ ಬೆಳೆದು ಬಂದ ಪರಿ ಹೇಗೆ? ಇತ್ಯಾದಿಗಳು ಇದರಲ್ಲಿ ಸುಂದರವಾಗಿ ಬಿಂಬಿತವಾಗಿದೆ.

ಸುಮಾರು 771 ಪುಟ ಇರುವ ಈ ಕೃತಿಗೆ ಮುನ್ನುಡಿಯನ್ನು ಕ.ಸಾ.ಪ – ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಬರೆದಿದ್ದಾರೆ.

ಪುರುಷರಕಟ್ಟೆ :ಉದಯಭಾಗ್ಯ ಹೋಟೆಲ್ ಮಾಲಕ ಸುರೇಶ್ ಪ್ರಭು ನಿಧನ

Posted by Vidyamaana on 2023-10-01 09:35:46 |

Share: | | | | |


ಪುರುಷರಕಟ್ಟೆ :ಉದಯಭಾಗ್ಯ ಹೋಟೆಲ್ ಮಾಲಕ ಸುರೇಶ್ ಪ್ರಭು   ನಿಧನ

ಉದಯಭಾಗ್ಯ ಹೋಟಲ್ ಮಾಲಕ ಸುರೇಶ್ ಪ್ರಭು ನಿಧನ


ಪುತ್ತೂರು: ಇಲ್ಲಿನ ಪುರುಷರಕಟ್ಟೆ ಉದಯಭಾಗ್ಯ ಹೊಟೇಲ್ ಮಾಲಕ ಸುರೇಶ್ ಪ್ರಭು (72) ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು.

ಪುತ್ತೂರಿನ ಹೊಟೇಲ್ ಉದ್ಯಮಗಳ ಪೈಕಿ ಉದಯಭಾಗ್ಯ ಹೋಟೆಲ್ ಕೂಡ ಒಂದು. ಸುರೇಶ್ ಪ್ರಭು ಉದ್ಯಮದ ಜೊತೆಗೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.

ಪತ್ನಿ, ಒಂದು ಗಂಡು ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

Posted by Vidyamaana on 2023-09-02 02:04:57 |

Share: | | | | |


538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಮುಂಬೈ : 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಕೆನರಾ ಬ್ಯಾಂಕ್ ಗೆ 538 ಕೋಟಿ ರೂ. ವಂಚನೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಬಂಧಿಸಿದೆ.ಕಳೆದ ಮೇ ನಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.


ಗೋಯಲ್ ಅವರ ವಿರುದ್ಧ ವಂಚನೆ, ಕ್ರಿಮಿನಲ್ ಪ್ರೀತೂರಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ ಸಿಬಿಐ ಅಧಿಕಾರಿಗಳು ನರೇಶ್ ಗೊಯಲ್ ಅವರ ನಿವಾಸ, ಕಚೇರಿ ಸೇರಿ ಮುಂಬೈನ 7 ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಈ ನಡುವೆ ಗೋಯಲ್ ಎರಡು ಬಾರಿ ಸಮನ್ಸ್ ಸ್ವೀಕರಿಸಿರಲಿಲ್ಲ. ಕೆನರಾ ಬ್ಯಾಂಕ್ ನಿಂದ 848 ಕೋಟಿ ರೂ. ಸಾಲ ಪಡೆದಿದ್ದ ಜೆಟ್ ವೇಸ್ ನ ನರೇಶ್ ಗೋಯಲ್ 538 ಕೋಟಿ ರೂ. ಸಾಲ ಮರುಪಾವತಿಸಿರಲಿಲ್ಲ. ಈ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದರು. ಈ ಸಂಬಂಧ ಕೆನರಾ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.

ಲೋಕಸಭಾ ಚುನಾವಣೆಗೆ ಬೆಳ್ತಂಗಡಿ ನಗರ ಬ್ಲಾಕ್ ಗೆ ವೀಕ್ಷಕರಾಗಿ ಎಚ್. ಮಹಮ್ಮದ್ ಅಲಿ ನೇಮಕ

Posted by Vidyamaana on 2023-11-24 12:41:28 |

Share: | | | | |


ಲೋಕಸಭಾ ಚುನಾವಣೆಗೆ ಬೆಳ್ತಂಗಡಿ ನಗರ ಬ್ಲಾಕ್ ಗೆ ವೀಕ್ಷಕರಾಗಿ ಎಚ್. ಮಹಮ್ಮದ್ ಅಲಿ ನೇಮಕ

ಪುತ್ತೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು ಹಾಗೂ ಪಕ್ಷ ಸಂಘಟನೆಗಾಗಿ, ಸೂಕ್ತ ಸಲಹೆ ಸೂಚನೆ ನೀಡಿ ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳುವುದಕ್ಕಾಗಿ ಬೆಳ್ತಂಗಡಿ ನಗರ ಬ್ಲಾಕ್ ಗೆ ಚುನಾವಣೆ ವೀಕ್ಷಕರಾಗಿ ಎಚ್ ಮಹಮ್ಮದ್ ಅಲಿಯವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.


ಮಹಮ್ಮದ್ ಅಲಿ ಯವರು ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ ಹಾಗೂ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.

ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು

Posted by Vidyamaana on 2023-04-17 05:59:48 |

Share: | | | | |


ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ದರ್ಬೆ ಜಂಕ್ಷನ್ ನಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಪುತ್ತಿಲ ರವರು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪುತ್ತಿಲ ಪರ ಪ್ರಚಾರ ನಡೆಸಲು ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರು.



Leave a Comment: