ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಮೂರು ಪಿಕಪ್ ನಲ್ಲಿತ್ತು ಎಂಟು ದನಗಳು -ಬಿಜೆಪಿ ಮುಖಂಡರಿಗೆ ಸೇರಿದ ವಾಹನದಲ್ಲಿ ಅಕ್ರಮ ಗೋಸಾಗಾಟ

Posted by Vidyamaana on 2023-07-13 16:08:30 |

Share: | | | | |


ಮೂರು ಪಿಕಪ್ ನಲ್ಲಿತ್ತು ಎಂಟು ದನಗಳು -ಬಿಜೆಪಿ ಮುಖಂಡರಿಗೆ ಸೇರಿದ ವಾಹನದಲ್ಲಿ ಅಕ್ರಮ ಗೋಸಾಗಾಟ

ಬೆಳ್ತಂಗಡಿ : ಅಕ್ರಮವಾಗಿ ಮೂರು ವಾಹನಗಳಲ್ಲಿ ಹಿಂಸ್ಮಾಕ ರೀತಿಯಲ್ಲಿ ಏಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.


*ಪ್ರಕರಣದ ಸಾರಾಂಶ:* ಜುಲೈ 12 ರಂದು ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕನಾದ ಅನೀಲಕುಮಾರ್‌ ಡಿ  ರವರಿಗೆ ಸಿಕ್ಕಿದ ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ಸುಮಾರು 8:45 ಗಂಟೆಗೆ ಉಜಿರೆ  ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್‌ ವಾಹನಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ರಮಾನಂದ ಸಾಲ್ಯಾನ್‌ ಸೇರಿದ ಪಿಕಪ್ ವಾಹನ KA-21B-7389 ಮತ್ತು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್ ಸೇರಿದ ಪಿಕಪ್ ವಾಹನ KA-70-0312 ಹಾಗೂ ಕೃಷ್ಣ ಎಂಬವರಿಗೆ ಸೇರಿದ  KA670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಸದ್ರಿ ವಾಹನದಲ್ಲಿ ಕಪ್ಪು ಮತ್ತು ಕಂದು ಬಣ್ಣದ  ದನ -3, ಬಿಳಿ ಬಣ್ಣದಲ್ಲಿ ಕಂದು ಮಿಶ್ರಿತ ಇರುವ ದನ-1 , ಕಂದು ಬಣ್ಣದ ದನ -2 , ಕಂದು ಬಣ್ಣದ 2 ಗಂಡು ಕರುಗಳು ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ವಾಹನದಲ್ಲಿದ್ದ 1ನೇ ಆರೋಪಿ ಚೆನ್ನಕೇಶವ ಎಂಬತನನ್ನು ವಿಚಾರಿಸಿದಲ್ಲಿ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಜಾನುವಾರುಗಳನ್ನು ಖರೀದಿಸಿ ಹಾಸನ ಕಡೆಗೆ ಮಾರಾಟ ಮಾಡಲು ಮೂರು ವಾಹನಗಳಲ್ಲಿ  ಹಿಂಸಾತ್ಮಕವಾಗಿ ಜಾನುವಾರುಗಳನ್ನು  

ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಕಂಡು ಬಂದ ಮೇರೆಗೆ ವಾಹನಗಳ ಸಹಿತ ಜಾನುವಾರುಗಳನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.


*ಬಂಧಿತ ಆರೋಪಿಗಳು:* 1) ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮರವಳಲು ನಿವಾಸಿ

ಬೇಲೂರಯ್ಯಮ ಮಗನಾದ ಚೆನ್ನಕೇಶವ(33) , 2)ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಒಳಗದ್ದೆ ನಿವಾಸಿ ಉಮೇಶ್ ಗೌಡರ ಮಗ ಪುಷ್ಪರಾಜ್(20) ,3) ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಆನಂದ ಬಂಗೇರ ಮಗನಾದ ಪ್ರಮೋದ್ ಸಾಲ್ಯಾನ್(49),

4) ಹೊಳೆನರಸೀಪುರ ತಾಲೂಕಿನ ಹಳೇಕೋಟೆ ನಿವಾಸಿ ವೀರಭದ್ರಯ್ಯ ಮಗನಾದ ಸಂದೀಪ್‌(27) ಬಂಧಿತ ಆರೋಪಿಗಳು.



*ವಶಪಡಿಸಿಕೊಂಡ ಸಾಮಗ್ರಿಗಳು:* ಜಾನುವಾರುಗಳ ಅಂದಾಜು ಮೌಲ್ಯ 65,000 ಸಾವಿರ ಹಾಗೂ ವಾಹನದ ಅಂದಾಜು ಮೌಲ್ಯ 7,00,000 ರೂಪಾಯಿ ಆಗಬಹುದು. ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂ 7,65,000 ರೂಪಾಯಿ ಅಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ: 8,9,11 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಜೊತೆಗೆ ಕಲಂ:66 ಜೊತೆಗೆ 192(ಎ) ಐ ಎಂ ವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಏ1: ಜಿಎಲ್ ವನ್ ಮಾಲ್ ನಲ್ಲಿ ಚೈನೀಸ್ ಮತ್ತು ಅರೇಬಿಯನ್ ಗ್ರಿಲ್ಡ್ ಹಾಗೂ ಜ್ಯೂಸ್ ಮತ್ತು ಶೇಕ್ಸ್ ಶುಭಾರಂಭ

Posted by Vidyamaana on 2023-03-31 12:47:43 |

Share: | | | | |


ಏ1: ಜಿಎಲ್ ವನ್ ಮಾಲ್ ನಲ್ಲಿ  ಚೈನೀಸ್ ಮತ್ತು ಅರೇಬಿಯನ್ ಗ್ರಿಲ್ಡ್ ಹಾಗೂ ಜ್ಯೂಸ್ ಮತ್ತು ಶೇಕ್ಸ್ ಶುಭಾರಂಭ

ಪುತ್ತೂರು: ಅದ್ದೂರಿಯಾಗಿ ಶುಭಾರಂಭಗೊಳ್ಳುತ್ತಿರುವ ಪುತ್ತೂರಿನ ಜಿಎಲ್ ವನ್ ಮಾಲ್ ನಲ್ಲಿ ಏಪ್ರಿಲ್ 1ರಂದು ಚೈನೀಸ್ ಮತ್ತು ಅರೇಬಿಯನ್ ಗ್ರಿಲ್ಡ್, ಜ್ಯೂಸ್ ಮತ್ತು ಶೇಕ್ಸ್ ಉದ್ಘಾಟನೆಗೊಳ್ಳಲಿದೆ. ಇದರೊಂದಿಗೆ ಜೂಸ್ ಮತ್ತು ಗ್ರಿಲ್ಡ್ ಪ್ರಿಯರಿಗಾಗಿ ವೈವಿಧ್ಯಮಯ ಐಟಂ ಗಳ ಲೋಕವೇ ತೆರೆದುಕೊಳ್ಳಲಿದೆ.

ಜಿಎಲ್ ವನ್ ಮಾಲ್ ನ ಭಾರತ್ ಸಿನಿಮಾಸ್ ಪಕ್ಕದಲ್ಲೇ ಇರುವ, ಗ್ರಿಲ್ಡ್ ಸಂಸ್ಥೆಯನ್ನು ಮಾಯಿದೇ  ದೇಸ್ ಚರ್ಚ್ ನ ಧರ್ಮಗುರುಗಳಾದ ವಂದನೀಯ ಫಾದರ್ ಲಾರೆನ್ಸ್ ಮಸ್ಕರೇನ್ಹಸ್ ಮತ್ತು ಜ್ಯೂಸ್ ಮತ್ತು ಶೇಕ್ಸ್ ಸಂಸ್ಥೆಯನ್ನು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂದನೀಯ ಫಾದರ್  ಪ್ರಕಾಶ್ ಮೊಂತೆರೊ ಉದ್ಘಾಟಿಸಲಿದ್ದಾರೆ.

ಪುತ್ತೂರಿನ ಫಾಸ್ಟ್ ಫುಡ್ ಪ್ರಿಯರಲ್ಲಿ ಹೊಸ ನಿರೀಕ್ಷೆ ಹುಟ್ಟಿಸಲಿದೆ ಈ ಗ್ರಿಲ್ಡ್, ಜ್ಯೂಸ್ ಮತ್ತು ಶೇಕ್ಸ್. ತನ್ನ ಆಹ್ಲಾದಕರ ಸ್ವಾದದಿಂದ ಜನರ ಮೆಚ್ಚುಗೆ ಗಳಿಸಿದೆ.

ಜ್ಯೂಸ್ ಮತ್ತು ಶೇಕ್ಸ್ :

ಫ್ರೆಶ್ ಜೂಸ್ ಗಳಾದ, ಬಾದಾಮ್, ಮೊಜಿತೊ, ಚಿಕ್ಕು, ಪಂಚ್, ಮಾವು, ಚಾಕೊಲೇಟ್, ಕೋಲ್ಡ್ ಕಾಫಿ, ಸ್ಟ್ರಾಬೆರಿ, ಕಿತ್ತಳೆ, ಅನಾರ್, ಕಾಜು, ಡ್ರೈ ಫ್ರೂಟ್, ಬಟರ್‌ಸ್ಕಾಚ್, ಕಿತ್ತಳೆ, ಮಿಶ್ರಣ,  ಕಾಕ್‌ಟೈಲ್, ಲಸ್ಸಿ, ಅನಾನಸ್ ಜ್ಯೂಸ್‌ಗಳು ಮತ್ತು  ಶೇಕ್‌ಗಳ ವೈವಿಧ್ಯಮಯ ರುಚಿಯನ್ನು ಗ್ರಾಹಕರು ಇಲ್ಲಿ ಆಹ್ಲಾದಿಸಬಹುದು.

ಗ್ರಿಲ್ಡ್ :

ಚಿಕನ್ ಸಲಾಡ್, ಗ್ರಿಲ್ಡ್ ಚಿಕನ್ ಕಬಾಬ್ಸ್, ಬಿರಿಯಾನಿ, ಫ್ರೈಡ್ರೈಸ್, ನೂಡಲ್ಸ್ ನಂತಹ ಫಾಸ್ಡ್ ಫುಡ್ ಐಟಂಗಳು ದೊರೆಯಲಿದ್ದು, ನುರಿತ ಪಾಕ ತಜ್ಞರಿಂದ ಸ್ವಾದಿಷ್ಟಕರ ಫುಡ್ ಐಟಂಗಳು ಇಲ್ಲಿ ತಯಾರಾಗಲಿದೆ ಎಂದು ಸಂಸ್ಥೆಯ ಮ್ಹಾಲಕ ಜೀತನ್ ತಿಳಿಸಿದ್ದಾರೆ.

ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ

Posted by Vidyamaana on 2023-12-13 11:24:20 |

Share: | | | | |


ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ

ಬೆಳ್ತಂಗಡಿ; ಬಸ್‌ ಹತ್ತುವಾಗ ಮಹಿಳೆಯ ಚಿನ್ನದ ಸರ ಕಳ್ಳತನ ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ವಾರಿಜ ಅವರು ದಿನಾಂಕ 12.12.2023 ರಂದು ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್ ಆರ್ ಟಿ ಸಿ ಬಸ್ಸು ಹತ್ತುವಾಗ ಯಾರೋ ಅವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದಿದ್ದಾರೆ. ಅಷ್ಟರಲ್ಲಿ ಅವರು ಜೋರಾಗಿ ಕಿರುಚಿದ್ದಾರೆ. ಆದರೆ ಯಾರು ಸರ ಕದ್ದಿದ್ದಾರೆ ಅನ್ನೋದು ಮಾತ್ರ ಗೊತ್ತಾಗಿಲ್ಲ. ಚಿನ್ನದ ಸರ 36 ಗ್ರಾಂ ಇದ್ದು ಅಂದಾಜು ಮೌಲ್ಯ 1.44 ಸಾವಿರ ಇರಬಹುದು ಎನ್ನಲಾಗಿದೆ. ಇನ್ನು ವಾರಿಜ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 120/2023 ಕಲಂ:392 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಸುಳ್ಯ : ಬಸ್‌ ಬೈಕ್ ಅಪಘಾತ ಪ್ರಕರಣ

Posted by Vidyamaana on 2024-03-01 15:38:44 |

Share: | | | | |


ಸುಳ್ಯ : ಬಸ್‌ ಬೈಕ್ ಅಪಘಾತ ಪ್ರಕರಣ

ಸುಳ್ಯ :ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ - ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಂದು ಮಾ 01 ರಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರ ಪತ್ನಿ ಸುಳ್ಯ ಸಿ ಎ ಬ್ಯಾಂಕ್ ಸಿಬ್ಬಂದಿ ಚಂದ್ರಿಕಾ ಮಗಳು ಮನ್ವಿತ ರವರನ್ನು ಅಗಲಿದ್ದಾರೆ


ಬನ್ನೂರು : ಧರೆ ಕುಸಿತ ಮನೆ ಹಾನಿ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ

Posted by Vidyamaana on 2024-06-27 11:47:40 |

Share: | | | | |


ಬನ್ನೂರು : ಧರೆ ಕುಸಿತ ಮನೆ ಹಾನಿ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ

ಪುತ್ತೂರು; ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದ್ದು ಘಟನಾ ಸ್ಥಳಕ್ಮೆ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಶೆಟ್ಟಿ ಸಿಝ್ಲರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕರ ಸೂಚನೆಯ‌ಮೇರೆಗೆ ಪ್ರಸನ್ನ ಅವರು ಭೇಟಿ ನೀಡಿದ್ದು ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಬೆಂಗಳೂರಿಂದ ಆಗಮಿಸಿದ ತಕ್ಷಣ



VIDEO ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ; ಓರ್ವ ಮೃತ್ಯು

Posted by Vidyamaana on 2023-11-05 12:16:41 |

Share: | | | | |


VIDEO  ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ; ಓರ್ವ ಮೃತ್ಯು

ನವದೆಹಲಿ: ವೇಗವಾಗಿ ಬಂದ ದೆಹಲಿ ಸಾರಿಗೆ ಸಂಸ್ಥೆಯ (DTC) ಬಸ್​ವೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.


VIDEO ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ವಿಡಿಯೋ ನೋಡಲು ಕ್ಲಿಕ್ ಮಾಡಿ

 ಅಪಘಾತ ದೆಹಲಿಯ ರೋಹಿಣಿ ನಗರ ಪ್ರದೇಶದಲ್ಲಿ ವರದಿಯಾಗಿದೆ.ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ, ಚಾಲಕ ನಿಯಂತ್ರಣ ಕಳೆದುಕೊಂಡು ಸ್ಥಳದಲ್ಲಿದ್ದ ಕಾರು ಮತ್ತು ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನಗಳು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.

ಅಪಘಾತದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ,

Recent News


Leave a Comment: