KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ನಂದಾವರ : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ

Posted by Vidyamaana on 2023-07-08 16:19:45 |

Share: | | | | |


ನಂದಾವರ : ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ

ಬಂಟ್ವಾಳ : ಗುಡ್ಡ ಕುಸಿತದಿಂದಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಈಗಾಗಲೇ ಸರಕಾರದಿಂದ 6.20 ಲಕ್ಷ ರೂಪಾಯಿ ಮೊತ್ತವನ್ನು ಪರಿಹಾರ ಹಾಗೂ ಮನೆ ದುರಸ್ತಿಗಾಗ  ಸರಕಾರ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿರುವ ಗಾಯಾಳು ಯುವತಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಯವರ ವರದಿ ನೀಡಿದ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹೇಳಿದರು.

ಶನಿವಾರ ಸಂಜೆ ನಂದಾವರ-ಗುಂಪುಮನೆ ಎಂಬಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಮಾತನಾಡಿದ ಅವರು ಗುಡ್ಡ ಕುಸಿತ ಉಂಟಾಗಿ ಮಹಿಳೆ ಮೃತಪಟ್ಟ ಘಟನೆ ಅತ್ಯಂತ ವಿಷಾದನೀಯ ವಾಗಿದ್ದು, ಮುಂದಕ್ಕೆ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ಮರುಕಳಿಸಬಾರದು. ಈ ಬಗ್ಗೆ ಸ್ಥಳೀಯ ಮಟ್ಟದ ಅಧಿಕಾರಿಗೂ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಳೆ ಹಾಗೂ ಪ್ರಾಕೃತಿಕ ವಿಕೋಪದಂತಹ ಸಂದರ್ಭದಲ್ಲಿ ಜನರ ಬೇಡಿಕೆ, ಕರೆಗಳನ್ನು ನಿರ್ಲಕ್ಷಿಸದೆ ಅಧಿಕಾರಿಗಳು ತಕ್ಷಣ ಸ್ಪಂದಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 

ನಂದಾವರ ಪರಿಸರದಲ್ಲಿ ಉಂಟಾಗಿರುವ ಅನಾಹುತಕ್ಕೆ ಕಾರಣ ಕಂಡುಕೊಂಡು ಮುಂದಕ್ಕೆ ಇಂತಹ ಘಟನೆ ಮರುಕಳಿಸದಂತೆ ಶಾಶ್ವತ ಪರಿಹಾರ ಕ್ರಮವನ್ನು ಕೈಗೊಳ್ಳುವಂತೆ ಇದೇ ವೇಳೆ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು. ಎನ್ ಡಿ ಆರ್ ಎಫ್ ಅಥವಾ ಎಸ್ ಡಿ ಆರ್ ಎಫ್ ಯೋಜನೆಗಳಲ್ಲಿ ಒಂದು ವೇಳೆ ಇಂತಹ ದೊಡ್ಡ ಕೆಲಸಕ್ಕೆ ಅವಕಾಶ ಇಲ್ಲದಿದ್ದಲ್ಲಿ ಯಾವುದೇ ಯೋಜನೆಯಡಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಜನರ ಪ್ರಾಣ, ಸೊತ್ತು ಹಾನಿಯಾಗದಂತೆ ಶಾಶ್ವತ ಪರಿಹಾರವನ್ನು ತಕ್ಷಣ ಕೈಗೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗೆ ಸೂಚಿಸಿದರು.

ಇದೇ ವೇಳೆ ಸ್ಥಳೀಯ ನಿವಾಸಿ ಜಲಜಾ ನಾಯಕ್ ಅವರು ತನ್ನ ಮನೆ ತೀರಾ ಶಿಥಿಲಗೊಂಡು ವಾಸಿಸಲು ಅಸಾಧ್ಯ ಎಂದು ಸಚಿವರಲ್ಲಿ ಮನವಿ ಮಾಡಿದರು. ಮನೆ ಪರಿಶೀಲನೆ ನಡೆಸಿದ್ದ ಉಸ್ತುವಾರಿ ಸಚಿವರು ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.


   ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಸುದೀಪ್ ಕುಮಾರ್ ಶೆಟ್ಟಿ, ಬೇಬಿಕುಂದರ್,  ಮಹಮ್ಮದ್ ನಂದಾವರ, ಯೂಸುಫ್ ಕರಂದಾಡಿ, ಸಮದ್ ಕೈಕಂಬ, ಇಬ್ರಾಹಿಂ ನವಾಜ್ ಬಡಕಬೈಲು, ಆರಿಫ್ ನಂದಾವರ, ಶಾಫಿ ನಂದಾವರ, ಮುಸ್ತಾಕ್, ರಮ್ಸಾದ್ ಮೋನು, ಶರೀಫ್ ನಂದಾವರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ತಹಶಿಲ್ದಾರ್ ಎಸ್.ವಿ.ಕೂಡಲಗಿ,  ಡಿ.ವೈ.ಎಸ್.ಪಿ‌. ಪ್ರಥಾಪ್ ಥೋರಾಟ್, ಇನ್ಸ್ಪೆಕ್ಟರ್ ವಿವೇಕಾನಂದ, ಪಿ.ಡಿ.ಒ. ಲಕ್ಷಣ್, ಮತ್ತಿತರರು ಉಪಸ್ಥಿತರಿದ್ದರು

ಇನ್ಸಾಗ್ರಾಮ್ ಪ್ರೀತಿಗೆ ರೋಚಕ ಟ್ವಿಸ್ಟ್: ಒಂದಲ್ಲ, ಎರಡಲ್ಲ..12 ಕೋಟಿ ಒಡತಿಗೆ ಇದು ಮೂರನೇ ಮದುವೆ

Posted by Vidyamaana on 2024-08-01 15:23:48 |

Share: | | | | |


ಇನ್ಸಾಗ್ರಾಮ್ ಪ್ರೀತಿಗೆ ರೋಚಕ ಟ್ವಿಸ್ಟ್: ಒಂದಲ್ಲ, ಎರಡಲ್ಲ..12 ಕೋಟಿ ಒಡತಿಗೆ ಇದು ಮೂರನೇ ಮದುವೆ

ಬೆಳಗಾವಿ, ಆಗಸ್ಟ್ 01: ಇನ್ಸ್ಟಾಗ್ರಾಮ್‌ನಲ್ಲಿ ಪ್ರೀತಿ ಆಯ್ತು. ಮನೆಯ ವಿರೋಧದ ನಡುವೆ ಈತನನ್ನು ಮದುವೆಯಾಗಿದ್ದೇನೆ. 12 ಕೋಟಿ ಆಸ್ತಿ ಇದ್ದರೂ ಅದನೆಲ್ಲಾ ಬಿಟ್ಟು ಈತನಿಗಾಗಿ ಬಂದಿದ್ದೇನೆ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದ ಬೆಂಗಳೂರಿನ ಮಹಿಳೆಗೆ ಇದು ಮೂರನೇ ಮದುವೆ ಎನ್ನುವ ಸತ್ಯ ಸದ್ಯ ಬೆಳಕಿಗೆ ಬಂದಿದೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರೀತಿ ಹುಟ್ಟಿ ಬೆಳಗಾವಿಗೆ ಬಂದು ಖಾನಾಪುರ ತಾಲೂಕಿನ ರೋಹಿತ್ ಕೋಲಕಾರ ಎಂಬಾತನನ್ನು ಪ್ರಿಯಾಂಕಾ ಗೌಡ ( 24 ) ಎನ್ನುವ ಯುವತಿಯೊಬ್ಬಳು ಮದುವೆಯಾಗಿದ್ದಳು. ಬೆಂಗಳೂರಿನಲ್ಲಿ ನನ್ನದು ಸ್ವಂತ ಮನೆ, ಸೈಟ್ ಇದೆ. ಬರೋಬ್ಬರಿ 12 ಕೋಟಿ ಮೌಲ್ಯದ ನನ್ನ ಆಸ್ತಿ ಹೊಡೆಯಲು ನಮ್ಮ ಸಂಬಂಧಿಕರು ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿದ್ದ ಪ್ರಿಯಾಂಕಾ ಬೆಳಗಾವಿ ಎಸ್ಪಿ ಕಚೇರಿಗೆ ಬಂದು ದೂರು ನೀಡಿದ್ದಳು. ಈ ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು. ಈ ಪ್ರಕರಣ ತನಿಖೆ ನಡೆಸಿದ ಪೊಲೀಸರಿಗೆ ಅಚ್ಚರಿ ಕಾದಿದ್ದು, ಪ್ರಿಯಾಂಕಾ ಗೌಡಗೆ ಇದು ಮೂರನೇ ಮದುವೆ ಎನ್ನುವುದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ ಏನು..?

ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Posted by Vidyamaana on 2024-06-07 11:55:37 |

Share: | | | | |


ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸೆ. 7,8 ರಂದು ನಡೆಯಲಿರುವ 39 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕರವರ ಅಧ್ಯಕ್ಷತೆಯಲ್ಲಿ ಬೆಟ್ಟಂಪಾಡಿ ದೇವಾಲಯದ ವಠಾರದಲ್ಲಿ ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಉದ್ಯಮಿ ಮನಮೋಹನ ರೈ ಚೆಲ್ಯಡ್ಕ, ಅಧ್ಯಕ್ಷರಾಗಿ ಪತ್ರಕರ್ತ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ಉಮೇಶ್ ಮಿತ್ತಡ್ಕ,

ಭಟ್ಕಳ | ಕಾರು-ಲಾರಿ ಮುಖಾಮುಖಿ ಢಿಕ್ಕಿ: ಉಡುಪಿ ಮೂಲದ ಮಹಿಳೆ ಮೃತ್ಯು; ಇಬ್ಬರಿಗೆ ಗಾಯ

Posted by Vidyamaana on 2023-10-17 20:18:24 |

Share: | | | | |


ಭಟ್ಕಳ | ಕಾರು-ಲಾರಿ ಮುಖಾಮುಖಿ ಢಿಕ್ಕಿ: ಉಡುಪಿ ಮೂಲದ ಮಹಿಳೆ ಮೃತ್ಯು; ಇಬ್ಬರಿಗೆ ಗಾಯ

ಭಟ್ಕಳ, ಅ 17: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ.ಮೃತರನ್ನು ಉಡುಪಿ ಜಿಲ್ಲೆಯ ಬೇಳೂರು ಗ್ರಾಮದ ರೀಟಾ ಕ್ಸೇವಿಯರ್ ಡಿಸೋಜ(51) ಎಂದು ಗುರುತಿಸಲಾಗಿದೆ.ರೀಟಾರ ಪತಿ ಕ್ಸೇವಿಯರ್ ರಾಜ್ ಡಿಸೋಜ ಮತ್ತು ಪುತ್ರಿ ಇನ್ರಿಕಾ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಕ್ಸೇವಿಯರ್ ರಾಜ್ ಕುಟುಂಬವು ಕಾರಿನಲ್ಲಿ ಉಡುಪಿ ಕಡೆಯಿಂದ ಗೋವಾ ಕಡೆಗೆ ತೆರಳುತ್ತಿತ್ತು. ಇವರ ಕಾರು ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ತಲುಪಿದಾಗ ಮುರ್ಡೇಶ್ವರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ.


ಗಂಭೀರ ಗಾಯಗೊಂಡಿದ್ದ ರೀಟಾ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬನ್ನೂರು ಶಾಲಾ ವಠಾರದಲ್ಲಿ ವನಮಹೋತ್ಸವ

Posted by Vidyamaana on 2023-07-05 11:07:29 |

Share: | | | | |


ಬನ್ನೂರು ಶಾಲಾ ವಠಾರದಲ್ಲಿ ವನಮಹೋತ್ಸವ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್,

ರೋಟರಿ ಕ್ಲಬ್ ಪುತ್ತೂರು ಯುವ, ಇನ್ನರ್ ವೀಲ್ ಕ್ಲಬ್ ಪುತ್ತೂರು, ಬನ್ನೂರು ಸರಕಾರಿ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ, ಬನ್ನೂರು ಸ್ಪೂರ್ತಿ ಯುವ ಸಂಸ್ಥೆ, ಕರ್ನಾಟಕ ರಾಜ್ಯ ಅರಣ್ಯ ಇಲಾಖೆ

ಇದರ ಸಂಯುಕ್ತ ಆಶ್ರಯದಲ್ಲಿ ಬನ್ನೂರು ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರಗಿತು.

ಪುತ್ತೂರು ನಗರಸಭೆಯ ಸದಸ್ಯರಾಗಿದ್ದ ಗೌರಿ ಬನ್ನೂರು ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ವಿ, ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷ ಪಶುಪತಿ ಶರ್ಮ, ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿ ಅಧ್ಯಕ್ಷ ಕುಸುಮಾಧರ್, ಸ್ಫೂರ್ತಿ ಯುವ ಸಂಸ್ಥೆಯ ದಿನೇಶ್ ಸಾಲಿಯಾನ್, ಎಸ್ ಡಿ ಎಂ ಸಿ ಅಧ್ಯಕ್ಷ ಗುರು ಪ್ರಸಾದ್, ಮುಖ್ಯ ಶಿಕ್ಷಕ ರಾಮಚಂದ್ರ, ಶಿಕ್ಷಕ ಕೋಟಿಯಪ್ಪ ಪೂಜಾರಿ, ಅಶ್ರಫ್, ಉಪವಲಯಾರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ರೋಟರಿ ಸೆಂಟ್ರಲ್ ನಿರ್ದೇಶಕ ರಾಕೇಶ್ ಶೆಟ್ಟಿ  ಉಪಸ್ಥಿತರಿದ್ದರು. 

ರೋಟರಿ ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಸ್ವಾಗತಿಸಿ, ಪೂರ್ವಾಧ್ಯಕ್ಷ ರಫೀಕ್ ದರ್ಬೆ ವಂದಿಸಿದರು.

ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಅತ್ತೆ-ಸೊಸೆ ಅರೆಸ್ಟ್! ಕಾರಣ ಹೀಗಿದೆ?

Posted by Vidyamaana on 2024-02-12 15:29:08 |

Share: | | | | |


ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಅತ್ತೆ-ಸೊಸೆ ಅರೆಸ್ಟ್! ಕಾರಣ ಹೀಗಿದೆ?

ತಮಿಳುನಾಡು: ಧರ್ಮಪುರಿ ಜಿಲ್ಲೆಯ ಹರೂರ್ ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಪರಿಶಿಷ್ಟ ಜಾತಿಯ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ನೀಡುತ್ತಿದ್ದ ಗೌಂಡರ್ ಸಮುದಾಯದ ಮಹಿಳೆ ಮತ್ತು ಆಕೆಯ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಬೈನಲ್ಲೂರು ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.ತಾರತಮ್ಯ ಎಸಗಿದ ಆರೋಪದಲ್ಲಿ ಇಬ್ಬರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಮಾರಪ್ಪನಾಯ್ಕನಪಟ್ಟಿ ನಿವಾಸಿಗಳಾದ ಚಿನ್ನತಾಯಿ (60) ಮತ್ತು ಆಕೆಯ ಸೊಸೆ ಬಿ ಧರಣಿ (32) ಬಂಧಿತರು.


ಪೊಲಂಪಾಳ್ಯಂ ಮೂಲದ 50 ವರ್ಷದ ದಲಿತ ಮಹಿಳೆ ಜಿ ಸೆಲ್ಲಿ ನೀಡಿದ ದೂರಿನ ಅನ್ವಯ ಅತ್ತೆ ಸೊಸೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಲ್ಲಿ ಅವರು ಅವರು ಪೊಲಂಪಾಳ್ಯಂ ನಿವಾಸಿಗಳಾದ ಆರ್ ಶ್ರೀಪ್ರಿಯಾ (38), ವಿ ವೀರಮ್ಮಾಳ್ (55) ಮತ್ತು ಕೆ ಮಾರಿಯಮ್ಮಾಳ್ (60) ಜತೆ ಚಿನ್ನತಾಯಿ ಕುಟುಂಬದ ಕೃಷಿ ಭೂಮಿಯಲ್ಲಿ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.


ಈ ದೃಶ್ಯವನ್ನು ಚಿತ್ರೀಕರಿಸಿದ ವಿಡಿಯೋದಲ್ಲಿ ಕೆಲವು ಕೃಷಿ ಕಾರ್ಮಿಕರಿಗೆ ಮಹಿಳೆಯೊಬ್ಬರು ತೆಂಗಿನ ಚಿಪ್ಪಿನಲ್ಲಿ ಚಹಾವನ್ನು ನೀಡುತ್ತಿರುವುದನ್ನು ತೋರಿಸಿದ ನಂತರ ಪೋಲೀಸರ ಕ್ರಮ ಕೈಗೊಂಡಿದ್ದಾರೆ. ಗುರುವಾರದಂದುಅವರಿಬ್ಬರೂ ನಮಗೆ ತೆಂಗಿನ ಗೆರಟೆಯಲ್ಲಿ ಟೀ ನೀಡಿದ್ದರು. ಈ ಹಿಂದೆ ಕೂಡ ಇದೇ ರೀತಿ ನಮಗೆ ಚಹಾ ಕೊಟ್ಟಿದ್ದರು ಎಂದು ಸೆಲ್ಲಿ ಆರೋಪಿಸಿದ್ದಾರೆ.


ಮೂಲಗಳ ಪ್ರಕಾರ, ದಾರಿಯಲ್ಲಿ ಹೋಗುತ್ತಿದ್ದ ಅನಾಮಿಕ ವ್ಯಕ್ತಿಗಳು ಈ ಘಟನೆಯ ವಿಡಯೋವನ್ನು ಚಿತ್ರೀಕರಿಸಿದ್ದಾರೆ. ನಂತರ ಅವರು ಮಹಿಳೆಯರ ಸಾಕ್ಷ್ಯವನ್ನು ದಾಖಲಿಸಿದ್ದಾರೆ. ದಲಿತರಲ್ಲದವರಿಗೆ ಗ್ಲಾಸ್‌ನಲ್ಲಿ ಚಹಾ ಮತ್ತು ದಲಿತರಿಗೆ ತೆಂಗಿನ ಚಿಪ್ಪಿನಲ್ಲಿ (ಅಥವಾ ಪ್ರತ್ಯೇಕ ಪಾತ್ರೆಯಲ್ಲಿ) ಚಹಾವನ್ನು ಬಡಿಸುವ ಅಭ್ಯಾಸವು ಈಗಲೂ ಇದೆ ಎಂದು ತಿಳಿದು ಆಘಾತವಾಯಿತು ಎಂದು ಮಹಿಳೆಯೊಬ್ಬರು ಹೇಳಿದರು.


ಊರಿನಲ್ಲಿ ಜಾತಿ ತಾರತಮ್ಯ ಅಧಿಕ: ಮಾರಪ್ಪನಾಯ್ಕನಪಟ್ಟಿ ಗ್ರಾಮದಲ್ಲಿ ಬಹುತೇಕ ದಲಿತೇತರರು ತಾರತಮ್ಯ ಎಸಗುತ್ತಿದ್ದಾರೆ. ದೇವಸ್ಥಾನ ಹಾಗೂ ಕೆಲಸ ಮಾಡುವ ಜಾಗ ಎರಡೂ ಕಡೆ ನಮ್ಮನ್ನುದೂರವಿಡಲಾಗುತ್ತಿದೆ ಎಂದು ಶ್ರೀಪ್ರಿಯಾ ದೂರಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿರುವ ಗೌಂಡರ್ ಸಮುದಾಯದ ಎಂ ಶಿವ (38), ಇದು ಪ್ರಚಾರದ ತಂತ್ರ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಶುಕ್ರವಾರ ದೂರು ದಾಖಲಾದ ಕೂಡಲೇ ಅಂದೇ ವಿಚಾರಣೆ ನಡೆಸಿದ್ದೆವು ಎಂದು ಕಂಬೈನಲ್ಲೂರು ಪೊಲೀಸ್ ಇನ್‌ಸ್ಪೆಕ್ಟರ್ ಪಿ ಕಾಳಿಯಪ್ಪನ್ ತಿಳಿಸಿದ್ದಾರೆ

Recent News


Leave a Comment: