ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ನ.13 ರೈ ಚಾರಿಟೇಬಲ್ ಟ್ರಸ್ಟ್ ವಾರ್ಷಿಕ ಮಹಾಸಭೆ ಸಮಾವೇಶ

Posted by Vidyamaana on 2023-11-01 15:59:34 |

Share: | | | | |


ನ.13  ರೈ ಚಾರಿಟೇಬಲ್ ಟ್ರಸ್ಟ್  ವಾರ್ಷಿಕ ಮಹಾಸಭೆ ಸಮಾವೇಶ

ಪುತ್ತೂರು: ನವೆಂಬರ್ 13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್  ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು‌ 50 ಸಾವಿರಕ್ಕೂ‌ಮಿಕ್ಕಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದ್ದು‌ ಈಗಾಲಗಲೇ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ ಎಂದು ಟ್ರಸ್ಟಿನ ಅಧ್ಯಕ್ಣರಾದ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಶಾಸಕರ ಸಭಾಭವನದಲ್ಲಿ‌ನಡೆದ ಟ್ರಸ್ಟಿನ ಪ್ರಮುಖರ ಸಭೆಯಲ್ಲಿ ಈ ಮಾಹಿತಿ ನೀಡಿದರು.‌ಸಭೆಯಲ್ಲಿ ಭಾಗವಹಿಸುವ ಎಲ್ಲರಿಗೂ ವಸ್ತ್ರ ವಿತರಣೆ ನಡೆಯಲಿದ್ದು ಅವರ ಜೊತೆ ಸಹಭೋಜನವೂ ನಡೆಯಲಿದೆ. ಗ್ರಾಮ ಗ್ರಾಮಗಳಲ್ಲಿ ಸ್ವಾಗತ ಸಮಿತಿಯನ್ನು‌ರಚಿಸಲಾಗಿದ್ದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು‌ ಭಾಗವಹಿಸುವಂತೆ ಶಾಸಕರು ಮನವಿ ಮಾಡಿದರು. ಸಭೆಯಲ್ಲಿ ಟ್ರಸ್ಟಿನ ಕಾರ್ಯಾಧ್ಯಕ್ಷರಾದ‌ಸುದೇಶ್ ಶೆಟ್ಟಿ.‌ಪ್ರಮಹಖರಾದ ಸುಮಾ ಅಶೋಕ್ ರೈ, ನಿಹಾಲ್ ಶೆಟ್ಟಿ, ರಾಕೇಶ್ ರೈ ಕುದ್ಕಾಡಿ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ ಐವರ್ನಾಡು ಅಡಿಕೆ ಕಳವು ಪ್ರಕರಣ : ಸೊತ್ತು ಸಹಿತ ಮಂಡೆಕೋಲು ನಿವಾಸಿ ಸುಪೀತ್‌ ಪೊಲೀಸ್ ವಶಕ್ಕೆ

Posted by Vidyamaana on 2024-03-23 14:43:43 |

Share: | | | | |


ಸುಳ್ಯ ಐವರ್ನಾಡು ಅಡಿಕೆ ಕಳವು ಪ್ರಕರಣ  : ಸೊತ್ತು ಸಹಿತ ಮಂಡೆಕೋಲು ನಿವಾಸಿ ಸುಪೀತ್‌ ಪೊಲೀಸ್ ವಶಕ್ಕೆ

ಬೆಳ್ಳಾರೆ : ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಎಂಬಲ್ಲಿ ಮಾ.14ರ ಸಂಜೆಯಿಂದ 16ರ ಬೆಳಗ್ಗಿನ ಅವಧಿಯಲ್ಲಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುಳ್ಯ, ಮಂಡೆಕೋಲು ನಿವಾಸಿ ಸುಪೀತ್‌ ಕೆ (20) ಬಂಧಿತ.ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಬೆಳ್ಳಾರೆ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಬಿ.ಪಿ ಸಂತೋಷ್ ಹಾಗೂ ಠಾಣಾ ಸಿಬ್ಬಂದಿಗಳಾದ ನವೀನ ಕೆ , ಕೃಷ್ಣಪ್ಪ, ದೇವರಾಜ್‌, ಸಂತೋಷ್‌ ಕೆ ಜಿ, ಸುಭಾಸ್‌ ಕಿತ್ತೂರ, ಪುರಂದರ ರವರುಗಳ ತನಿಖಾ ತಂಡ ಕಾರ್ಯಚರಣೆ ನಡೆಸಿರುತ್ತಾರೆ.

ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

Posted by Vidyamaana on 2023-06-06 07:41:54 |

Share: | | | | |


ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

ಪುತ್ತೂರು: ಪ್ರಾಕೃತಿಕ ವಿಕೋಪದಿಂದಾಗುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂನ್ 6ರಂದು ಮಧ್ಯಾಹ್ನ 3.30ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ.

ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ- ಡಿಕೆ.ಶಿವಕುಮಾರ್‌

Posted by Vidyamaana on 2023-10-11 16:41:53 |

Share: | | | | |


ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ- ಡಿಕೆ.ಶಿವಕುಮಾರ್‌

ಬೆಂಗಳೂರು: ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.



ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. “ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು ಎಂದರು.


ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.


ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.


ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋದ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ” ಎಂದು ತಿಳಿಸಿದರು.

ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

Posted by Vidyamaana on 2023-10-24 12:44:17 |

Share: | | | | |


ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ

ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ವತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯಕ್ರಮ ಅ.22ರಂದು ಸಂಜೆ ಜೆಪ್ಪು ಸಂತ ಅಂತೋನಿ ಆಶ್ರಮದಲ್ಲಿನ ಸಂಭ್ರಮ ಸಭಾಭವನದಲ್ಲಿ ನಡೆಯಿತು.

ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 12 ವಲಯಗಳಲ್ಲಿನ ವಿವಿಧ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸಂಸ್ಥಾಪಕರಾಗಿ, ಸಂಪಾದಕರಾಗಿ, ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಂಕಣಿ ಕ್ರೈಸ್ತ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಚರಿತ್ರೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕಳೆದ 14 ವರ್ಷಗಳಿಂದ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿಯಾಗಿರುವ ಸಂತೋಷ್ ಮೊಟ್ಟೆತ್ತಡ್ಕ ಸೇರಿದಂತೆ ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 43 ಮಂದಿ ಕ್ರೈಸ್ತ ಪತ್ರಕರ್ತರನ್ನು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ|ಡಾ|ಪೀಟರ್ ಪಾವ್ಲ್ ಸಲ್ದಾನ್ಹಾರವರು ಶಾಲು ಹೊದಿಸಿ ಸನ್ಮಾನಿಸಿದರು. 

ಕಥೋಲಿಕ್ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರುರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಾತ್ಮಿಕ ನಿರ್ದೇಶಕ ವಂ|ಡಾ|ಜೆ.ಬಿ ಸಲ್ದಾನ್ಹಾ, ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕ ವಂ|ಜೆ.ಬಿ ಕ್ರಾಸ್ತಾ, ದಾಯ್ಜಿವಲ್ಡ್೯ ಮೀಡಿಯಾ ಲಿಮಿಟೆಡ್ ನ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಮಹಾರಾಷ್ಟ್ರ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರಾವಳಿ ಸುದ್ದಿ ವಾರಪತ್ರಿಕೆಯ ಸಂಪಾದಕ ಹಾಗೂ ಪ್ರಕಾಶಕ ಭೊನಿಪಾಸ್ ರೋಶನ್ ಮಾರ್ಟಿಸ್, ಕಥೋಲಿಕ್ ಸಭಾ ಕೇಂದ್ರ ಸಮಿತಿಯ ಕಾರ್ಯದರ್ಶಿ ವಿಲ್ಮಾ ಮೊಂತೇರೊ, ಪತ್ರಕರ್ತರ ಸಹಮಿಲನ ಹಾಗೂ ಸನ್ಮಾನ ಕಾರ್ಯದ ಸಂಚಾಲಕ ಪಾವ್ಲ್ ರೋಲ್ಫಿ ಡಿಕೋಸ್ಟರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಸನ್ಮಾನದ ಸಂದರ್ಭದಲ್ಲಿ ಸಂತೋಷ್ ಮೊಟ್ಟೆತ್ತಡ್ಕರವರ ತಾಯಿ ಐರಿನ್ ಮೊರಾಸ್, ಪತ್ನಿ ಪ್ರಮೀಳಾ ಸಿಕ್ವೇರಾ, ಪುತ್ರಿ ಸಿಯೋನಾ ಮೊರಾಸ್, ಪುತ್ರ ಸೇವಿಯನ್ ಮೊರಾಸ್, ತಂಗಿ ಮಗಳು ಕ್ಯಾರಲ್ ಸಿಕ್ವೇರಾ ಉಪಸ್ಥಿತರಿದ್ದರು.

ಪುತ್ತೂರು ತಾಲೂಕಿನ ಕ್ರೈಸ್ತ ಧರ್ಮದ, ಸಂಘ-ಸಂಸ್ಥೆಯ ವರದಿಗಳನ್ನು ಸಕಾಲದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಭಿತ್ತರಿಸಿದ್ದಕ್ಕೆ ಪುತ್ತೂರು ಮಾಯಿದೆ ದೇವುಸ್ ಚರ್ಚ್ ಸಮುದಾಯ ದಿನದಂದು ಡೊನ್ ಬೊಸ್ಕೊ ಕ್ಲಬ್ ನಿಂದ, ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿಯಿಂದ, ಚರ್ಚ್ ನ ಹಲವಾರು ವಾಳೆಗಳಿಂದ ಸನ್ಮಾನ ಜೊತೆಗೆ ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಿಂದ, ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ, ಆರ್ಯಾಪು ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸನ್ಮಾನ ಜೊತೆಗೆ ಹಲವು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರ ಪಡೆದಿರುವ ಸಂತೋಷ್ ಮೊಟ್ಟೆತ್ತಡ್ಕ  ಅವರು ತುಳು ನಾಟಕಗಳಾದ ತಪ್ಪುಗು ತಕ್ಕ ಶಿಕ್ಷೆ, ದೇವೆರೆ ತೀರ್ಪು ಜೊತೆಗೆ ಹಲವಾರು ಕೊಂಕಣಿ ಪ್ರಹಸನಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ.

ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆಯಲ್ಲಿ ಗುಡ್ಡ ಕುಸಿತ : ಪುತ್ತೂರು-ಸುಳ್ಯ ಸಂಚಾರ ಬಂದ್!

Posted by Vidyamaana on 2024-07-30 13:10:03 |

Share: | | | | |


ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆಯಲ್ಲಿ ಗುಡ್ಡ ಕುಸಿತ : ಪುತ್ತೂರು-ಸುಳ್ಯ ಸಂಚಾರ ಬಂದ್!

ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.

Recent News


Leave a Comment: