ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ

ಸುದ್ದಿಗಳು News

Posted by vidyamaana on 2024-07-08 11:07:30 | Last Updated by Vidyamaana on 2024-07-08 11:07:30

Share: | | | | |


ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ

ಮಂಗಳೂರು(ಇಟ್ಟಿಕುಳಂ): ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ನಿಧನರಾಗಿದ್ದಾರೆ. ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಜಳ್ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ ಅನಾರೋಗ್ಯದಿಂದಿದ್ದ ಅವರು ಇಂದು ಬೆಳಿಗ್ಗೆ ನಿಧರಾಗಿದ್ದಾರೆ.

ಮೃತರು ಪತ್ನಿ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಇಂದು ರಾತ್ರಿ 9

ಗಂಟೆ ವೇಳೆಗೆ ಕೂರ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ. ಸುಲ್ತಾನುಲ್ ಉಲಮಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಇಂದು ಸಂಜೆ 5 ಗಂಟೆಗೆ ಕೂರ ಮಸೀದಿಯಲ್ಲಿ ನಡೆಯಲಿರುವ ಜನಾಝಾನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

Posted by Vidyamaana on 2023-12-25 13:07:55 |

Share: | | | | |


ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

ಮಂಗಳೂರು: ಕೇರಳ ಯುವ ಜೋಡಿಯನ್ನು ತಡೆದು ಅವರ ಧರ್ಮದ ಬಗ್ಗೆ ವಿಚಾರಿಸಿ ಮತೀಯ ಗೂಂಡಾಗಿರಿ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಹಂಪನಕಟ್ಟೆಯ ಮಳಿಗೆಯೊಂದರ ಬಳಿ ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ನಿಂತಿದ್ದ ಕೇರಳದ ಯುವಕ ಹಾಗೂ ಆತನ ಜೊತೆಗಿದ್ದ ಯುವತಿಯನ್ನು ಯುವಕರ ಗುಂಪೊಂದು ವಿಚಾರಿಸಿತ್ತು.ಕೇರಳದ ಯುವಕ ಮತ್ತು ಯುವತಿಯ ಧರ್ಮದ ಬಗ್ಗೆ ಪ್ರಶ್ನಿಸಿ, ಗುರುತಿನ ಚೀಟಿ ತೋರಿಸುವಂತೆ ಗುಂಪಿನಲ್ಲಿದ್ದ ಯುವಕನೊಬ್ಬ ಏರುಧ್ವನಿಯಲ್ಲಿ ಸೂಚಿಸಿದ ಹಾಗೂ ಅವರ ಸೊತ್ತುಗಳನ್ನು ಪರೀಶೀಲಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.


ಬಂಟ್ವಾಳ ನಿವಾಸಿ ಸಂದೇಶ (28), ಆತನ ಜೊತೆಗಿದ್ದ ಪ್ರಶಾಂತ್ (31) ಹಾಗೂ ರೋನಿತ್ (31) ಅವರನ್ನು ಬಂಧಿತರು. ಆರೋಪಿಗಳ ವಿರುದ್ಧ ಶಾಂತಿಭಂಗಕ್ಕೆ ಉದ್ದೇಶಪೂರ್ವಕ ಪ್ರಚೋದನೆ ಮತ್ತು ಅಕ್ರಮವಾಗಿ ನಿರ್ಬಂಧ ವಿಧಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್‌ ಅಲರ್ಟ್ ಲಕ್ಷ್ಮಣ ಸವದಿ ಪಕ್ಷ ತೊರೆಯದಂತೆ ಪ್ಲಾನ್

Posted by Vidyamaana on 2024-02-03 22:30:51 |

Share: | | | | |


ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್‌ ಅಲರ್ಟ್ ಲಕ್ಷ್ಮಣ ಸವದಿ ಪಕ್ಷ ತೊರೆಯದಂತೆ ಪ್ಲಾನ್

ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದೆ ಮುನಿಸಿಕೊಂಡು ಕಾಂಗ್ರೆಸ್‌ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ (Jag

non

ish Shettar) ಕೊನೆಗೂ ಬಿಜೆಪಿ ಸೇರಿದ್ದಾರೆ. ಇನ್ನೊಂದೆಡೆ ಶೆಟ್ಟರ್ ಬಿಜೆಪಿ ಸೇರುತ್ತಿದ್ದಂತೆ ಇತ್ತ ಕಾಂಗ್ರೆಸ್ (Congress) ಅಲರ್ಟ್ ಆಗಿದೆ.ಹೌದು.. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಲರ್ಟ್ ಆಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಸೇರ್ಪಡೆಯಾದ ಬೆನ್ನಲ್ಲೇ ಮತ್ತೆ ಯಾವುದೇ ನಾಯಕರು ಬಿಜೆಪಿಯತ್ತ ಮುಖ ಮಾಡದಂತೆ ನೋಡಿಕೊಳ್ಳಲು ಪ್ಲಾನ್ ರೂಪಿಸಿದೆ. ಆ ಮೂಲಕ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಪ್ಲಾನ್ ಮಾಡಲಾಗಿದೆ.


ಈ ಹಿನ್ನೆಲೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮಿಸಿದ ಶಾಸಕ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ನಲ್ಲಿಯೇ ಉಳಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಪ್ಲಾನ್ ರೂಪಿಸಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಲಕ್ಷ್ಮಣ ಸವದಿ ಅವರಿಗೆ ಪಕ್ಷ ಬಿಡದಂತೆ ಸೂಚಿಸಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರು ಲಕ್ಷ್ಮಣ ಸವದಿ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಿದ್ದಾರೆ.ಎಲ್ಲಾ ಬೆಳವಣಿಗೆಗಳ ಮಧ್ಯೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಲಕ್ಷ್ಮಣ ಸವದಿಗೆ ಕರೆ ಮಾಡಿ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಬಿಡದಂತೆ ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲಾ ಮಾತಿನಿಂದ ಸಂತಸಗೊಂಡಿರುವ ಶಾಸಕ ಲಕ್ಷ್ಮಣ ಸವದಿ, ಮುಂದಿನ ವಾರ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.


ಈಗಾಗಲೇ ದೆಹಲಿ ಮಟ್ಟದಿಂದಲೇ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ನಾಯಕರು ಸಂಪರ್ಕ ಮಾಡಿದ್ದು, ಲೋಕಸಭಾ ಚುನಾವಣೆಗೂ ಮುನ್ನವೇ ಅವರನ್ನು ಬಿಜೆಪಿಗೆ ಕರೆತರಿಸಿ ಮತ್ತೆ ಸೂಕ್ತ ಸ್ಥಾನಮಾನ ನೀಡೋದು ಮತ್ತು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಪ್ಲಾನ್ ರೂಪಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡ ಎಚ್ಚರಿಕೆ ವಹಿಸಿದ್ದಾರೆ.ಇನ್ನು ಮುಂದಿನ ವಾರ ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜೊತೆಗೆ ಲಕ್ಷ್ಮಣ ಸವದಿ ಮಾತುಕತೆ ನಡೆಸುವ ವೇಳೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಲಕ್ಷ್ಮಣ ಸವದಿ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ರೈಲಿನಲ್ಲಿ ಕೋಟಿ-ಕೋಟಿ ಹಣ ಸಾಗಾಟ

Posted by Vidyamaana on 2024-04-09 10:55:05 |

Share: | | | | |


ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ರೈಲಿನಲ್ಲಿ ಕೋಟಿ-ಕೋಟಿ ಹಣ ಸಾಗಾಟ

ಚೆನ್ನೈ: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್‌ ಸ್ಕ್ವಾಡ್‌ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.


ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್‌ ನಾಗೇಂದ್ರನ್‌ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮೂವರು ಎಗ್ಮೋರ್‌ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು  ತಿಳಿಸಿದರು.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

Posted by Vidyamaana on 2024-07-08 20:09:58 |

Share: | | | | |


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಮಂಗಳೂರು: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಬಳ್ಳಾರಿ: ಸರಣಿ ಕಳ್ಳತನ, ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-01-13 21:19:22 |

Share: | | | | |


ಬಳ್ಳಾರಿ: ಸರಣಿ ಕಳ್ಳತನ, ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ

ಬಳ್ಳಾರಿ: ನಗರದ ಕಪ್ಪಗಲ್ಲು ರಸ್ತೆಯಲ್ಲಿ ವಾಣಿಜ್ಯ  ಮಳಿಗೆಗಳಲ್ಲಿ ಇಂದು ಬೆಳಗಿನ‌ಜಾವ ಕಳ್ಳರು ಸರಣಿಗಳ್ಳತ ನಡೆಸಿ ಸಾವಿರಾರು ರೂ ನಗದನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಮೆಡ್ ಪ್ಲಸ್ ನಲ್ಲಿ 24880 ರೂ, ಸಾಯಿ ಇಂದಿರಾ ಮೆಡಿಕಲ್ ಸ್ಟೋರ್ ನಲ್ಲಿ 8000 ರೂ, ಕನಕ ದುರ್ಗಮ್ಮ ಪ್ರಾವಿಷನ್ ಸ್ಟೋರ್ ನಲ್ಲಿ ಒಂದು ಸಾವಿರ ರೂ ಮತ್ತು ವಿಜಯ ರಾಮ ಸೂಪರ್ ಮಾರ್ಕೇಟ್ ನಲ್ಲಿ 17 ಸಾವಿರ ರೂ ನಗದು ದೋಚಿದ್ದಾರೆ.ಈ ಬಗ್ಗೆ ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮುಖಕ್ಕೆ ವಾಸ್ಕ್ ಧರಿಸಿಕೊಂಡು, ಬ್ಯಾಟರಿ ಹಿಡಿದುಕೊಂಡು, ಮಳಿಗೆಯ ಷಟರ್ ನಿಂದ ಒಳಗೆ ನುಗ್ಗಿ, ಕ್ಯಾಸ್ ಕೌಂಟರ್ ತೆಗೆದು ಹಣ ಲಪಟಾಯಿಸಿದ್ದಾರೆ.


ಮಳಿಗೆಗಳ ಷಟರ್ ಗಳನ್ನು ಹಾರೆಗಳಿಂದ ಮೀಟಿ ತೆಗೆಯಲಾಗಿದೆ ಇದೆಲ್ಲ ಸಿಸಿ ಕೆಮೆರಾಗಳಲ್ಲಿ ರೆಕಾರ್ಡ್ ಆಗಿದೆ. ಸ್ಥಳಕ್ಕೆ ಪೊಲೀಸರು ಬಂದು ಹೋಗಿದ್ದಾರೆ‌. ಕಳ್ಳರನ್ನು ಪತ್ತೆ ಹಚ್ಚಬೇಕಿದೆ.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನ

Posted by Vidyamaana on 2024-04-13 17:38:35 |

Share: | | | | |


ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಅಹ್ವಾನಿಸಲಾಗಿದೆ


ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ರಾಜ್ಯಪಠ್ಯಕ್ರಮವನ್ನು ಅಳವಡಿಸಿಕೊಂಡು 6 ರಿಂದ 10 ನೇ ತರಗತಿಯವರೆಗೆ ಕಾರ್ಯನಿರ್ವಹಿಸುತ್ತಿರುತ್ತವೆ.

Recent News


Leave a Comment: