ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

Posted by Vidyamaana on 2024-08-04 06:18:29 |

Share: | | | | |


ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

ರಾಮನಗರ : ಮುಡಾ ಪ್ರಕರಣ ವಿರೋಧಿಸಿ ನಡೆಯುತ್ತಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪಾದಯಾತ್ರೆಯಲ್ಲಿ ಹಾಜರಾಗಿ ಹೆಜ್ಜೆ ಹಾಕಿದ್ದಾರೆ.ಪ್ರಜ್ವಲ್​​ ರೇವಣ್ಣ ಪೆನ್​​​​​​​​ಡ್ರೈವ್​​​​ ವಿಚಾರ ಮುಂದಿಟ್ಟು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರೀತಂಗೌಡ ವಿರುದ್ಧ ಆಕ್ರೋಶ ಹೊರಹಾಕಿ ಪಾದಯಾತ್ರೆಗೆ ಬರುವುದನ್ನು ವಿರೋಧಿಸಿದ್ದರು.

KSRTC Bus: ರಾಜ್ಯದಲ್ಲಿ ರೋಡಿಗಿಳಿದ ಪಲ್ಲಕ್ಕಿ ಬಸ್‌ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ ವಿವರ

Posted by Vidyamaana on 2023-10-08 08:40:51 |

Share: | | | | |


KSRTC Bus: ರಾಜ್ಯದಲ್ಲಿ ರೋಡಿಗಿಳಿದ ಪಲ್ಲಕ್ಕಿ ಬಸ್‌ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ ವಿವರ

ಬೆಂಗಳೂರು: ಬಹುನಿರೀಕ್ಷಿತ ನಾನ್‌ ಎಸಿ ಪಲ್ಲಕ್ಕಿ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್‌ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್‌ಗಳೊಂದಿಗೆ 100 ಹೊಸ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಹೊರತಂದಿದೆ.ನೂತನ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಜರಿದ್ದರು.

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಪಲ್ಲಕ್ಕಿ ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್‌ಗಳು ಅಂತರರಾಜ್ಯಗಳಿಗೆ ಹಾಗೂ ರಾಜ್ಯದ ಪ್ರಮುಖ ನಗರಗಳ ನಡುವೆ ಸಂಚರಿಸಲಿವೆ.ಪ್ರಸ್ತುತ ಕರ್ನಾಟಕದ ನಾಲ್ಕು ಬಸ್‌ ಘಟಕಗಳು ರಾಜ್ಯದಾದ್ಯಂತ 23,989 ಬಸ್‌ಗಳನ್ನು ನಿರ್ವಹಿಸುತ್ತವೆ. ದಿನಕ್ಕೆ ಸರಾಸರಿ 65.02 ಲಕ್ಷ ಕಿಲೋಮೀಟರ್ ಓಡುತ್ತವೆ.


ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್‌ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್‌ಗಳಲ್ಲಿ ಮೂವತ್ತು ಬಸ್‌ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್‌ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್‌ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.


ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್‌ಗಳಲ್ಲಿ ಮೂವತ್ತು ಬಸ್‌ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್‌ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ಪಲ್ಲಕ್ಕಿ ಬಸ್‌ಗಳ ವೈಶಿಷ್ಟ್ಯ ತಿಳಿಯಿರಿ

- ಈ ಬಸ್‌ಗಳು 11.3 ಮೀಟರ್ ಉದ್ದವಾಗಿವೆ

- ಎಚ್ಪಿ ಕಂಪನಿಯ ಬಿಎಸ್-6 ತಂತ್ರಜ್ಞಾನವನ್ನು ಬಳಸಿ ಇಂಜಿನ್ ತಯಾರಿಸಲಾಗಿದೆ

- ಇವುಗಳಲ್ಲಿ 28 ಹೈಟೆಕ್ ಸ್ಲೀಪರ್ ಬರ್ತ್ ಸೀಟುಗಳು ಇವೆ

- ಪ್ರತಿ ಆಸನಕ್ಕೂ ಮೊಬೈಲ್ ಸ್ಟ್ಯಾಂಡ್‌ಗಳಿವೆ

- ಮೊಬೈಲ್ ಮತ್ತು ಲ್ಯಾಪ್‌ಟಾಪ್ ಚಾರ್ಜಿಂಗ್ ಸೌಲಭ್ಯಗಳನ್ನು ಈ ಬಸ್‌ಗಳು ಹೊಂದಿವೆ

- ರಾತ್ರಿ ವೇಳೆ ಸೀಟ್‌ಗಳ ಸಂಖ್ಯೆಗಳನ್ನು ಸುಲಭವಾಗಿ ಗುರುತಿಸಲು ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ

- ಪ್ರಯಾಣದ ವೇಳೆ ಓದಲು ಸುಧಾರಿತ ಎಲ್ಇಡಿ ಬೆಳಕಿನ ವ್ಯವಸ್ಥೆ ಇದೆ

- ಪ್ರಯಾಣಿಕರ ಮಾಹಿತಿಗಾಗಿ ಆಡಿಯೋ ರಿಸೀವರ್‌ಗಳನ್ನು ಅಳವಡಿಸಲಾಗಿದೆ

- ಪಲ್ಲಕ್ಕಿ ಬಸ್‌ಗಳಲ್ಲಿ ಡಿಜಿಟಲ್ ಗಡಿಯಾರ ಮತ್ತು ಎಲ್ಇಡಿ ನೆಲಹಾಸಿನ ವ್ಯವಸ್ಥೆಯನ್ನು ಅಳವಡಿಸಲಾಗಿದೆ

- ಚಪ್ಪಲಿ ಅಥವಾ ಬೂಟ್‌ಗಳನ್ನು ಇಡಲು ಪ್ರತಿ ಪ್ರಯಾಣಿಕರಿಗೆ ಅನುಕೂಲಕರ ಸ್ಥಳವನ್ನು ಕಲ್ಪಿಸಲಾಗಿದೆ

- ಪ್ರತಿ ಸ್ಲೀಪರ್‌ ಸೀಟುಗಳಲ್ಲಿ ದಿಂಬಿನ ವ್ಯವಸ್ಥೆ ಮಾಡಲಾಗಿದೆ

- ಚಾಲಕನಿಗೆ ಸಹಾಯ ಮಾಡಲು ಬಸ್‌ನ ಹಿಂಭಾಗದಲ್ಲಿ ಹೈಟೆಕ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ

ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

Posted by Vidyamaana on 2023-08-29 11:09:32 |

Share: | | | | |


ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.



ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ ಹಣ ಸಿಗಲಿದೆ.


ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.


ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

Posted by Vidyamaana on 2023-11-01 17:54:59 |

Share: | | | | |


ಪುತ್ತೂರು : ಅನಾರೋಗ್ಯದಿಂದಾಗಿ ಪ್ರತಿಭಾನ್ವಿತ ವಿದ್ಯಾರ್ಥಿ ಸುಪ್ರೀತ್ ನಿಧನ

ಪುತ್ತೂರು : ಪ್ರಾಥಮಿಕ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸರ್ವೆ ಸಮೀಪ ನಡೆದಿದೆ.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಮೃತ ಬಾಲಕ.ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.


ಸುಪ್ರೀತ್ ರವರು ಮುಂಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.

ಈತ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ

ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Posted by Vidyamaana on 2023-10-02 07:54:25 |

Share: | | | | |


ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC  ಏಜೆಂಟ್ ನಾರಾಯಣ ಕುಲಾಲ್  ಆತ್ಮಹತ್ಯೆ

ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅ 02 ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.


    ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.


  ಅ 2 ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.


   ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.


   ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ.

ಆಡಿಯೋ ವೈರಲ್ ಪ್ರಕರಣ : ಮತ್ತೆ ಠಾಣೆಗೆ ಆಗಮಿಸಿದ ಮಹಿಳೆ

Posted by Vidyamaana on 2024-09-01 08:36:55 |

Share: | | | | |


ಆಡಿಯೋ ವೈರಲ್ ಪ್ರಕರಣ : ಮತ್ತೆ ಠಾಣೆಗೆ ಆಗಮಿಸಿದ ಮಹಿಳೆ

ಪುತ್ತೂರು: ರಾಜಕೀಯ ವಿದ್ಯಮಾನದಲ್ಲಿ ಸಂಚಲನ ಮೂಡಿಸಿದ ಆಡಿಯೋ ಪ್ರಕರಣದ ಮಹಿಳೆ ಶನಿವಾರ ಮತ್ತೆ ನಗರ ಠಾಣೆಗೆ ಆಗಮಿಸಿ ಕುತೂಹಲ ಮೂಡಿಸಿದ್ದಾರೆ.


ಮನೆಯ ಹತ್ತಿರ ಓಡಾಡಿದ ಅನುಭವ ಬರುತ್ತಿದೆ ರಕ್ಷಣೆ ಬೇಕು ಎಂಬ ವಿಚಾರದಲ್ಲಿ ಠಾಣೆಗೆ ಆಗಮಿಸಿದ್ದಾರೆನ್ನಲಾಗಿದೆ. ಠಾಣೆಯಿಂದ ಮನೆಯ ಸುತ್ತ ಭದ್ರತೆಯಲ್ಲಿ ಕಲ್ಪಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸುತ್ತಿದೆ

Recent News


Leave a Comment: