ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಸುದ್ದಿಗಳು News

Posted by vidyamaana on 2024-07-05 17:43:40 |

Share: | | | | |


ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ :ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ.

ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು. 11 ತಂಡವನ್ನು ರಚಿಸಿ ಆರ್ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್‌ಇಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 Share: | | | | |


ಡಿಪ್ಲೋಮಾ ಪದವೀಧರರಿಗೆ ಗುಡ್ ನ್ಯೂಸ್ : ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್

Posted by Vidyamaana on 2023-11-10 12:54:44 |

Share: | | | | |


ಡಿಪ್ಲೋಮಾ ಪದವೀಧರರಿಗೆ ಗುಡ್ ನ್ಯೂಸ್ : ಯುವನಿಧಿ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, 2024 ರ ಜನವರಿಯಿಂದ ಜಾರಿಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


ಈ ಕುರಿತು ಮಾಹಿತಿ ನೀಡಿರುವ ಮಧು ಬಂಗಾರಪ್ಪ ಅವರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿಗೊಳಿಸಲಾಗುತ್ತಿದ್ದು, ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ 1,500 ರೂ. ಪದವಿ ಪೂರ್ಣಗೊಂಡವರಿಗೆ 3,000 ರೂ. ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಶಿಕ್ಷಣ ಮುಗಿಸಿ ಕೆಲಸ ಸಿಗದೆ ಮನೆಯಲ್ಲಿರುವ ವಿದ್ಯಾರ್ಥಿಗಳು ತಂದೆ-ತಾಯಿಗಳಿಗೆ ಹೊರೆಯಾಗದಿರಲೆಂದು ಹಾಗೂ ತಮ್ಮ ಸಣ್ಣ ಪುಟ್ಟ ಖರ್ಚುಗಳು, ಉದ್ಯೋಗ ಹುಡುಕಲು ಅನುಕೂಲವಾಗಲೆಂಬ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದ್ದಾರೆ.

ಸುಳ್ಯ : ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಪಕ್ಷದ ಚಟುವಟಿಕೆ ಸ್ಥಗಿತಗೊಳಿಸಲು ನಿರ್ಧಾರ

Posted by Vidyamaana on 2024-02-04 18:30:52 |

Share: | | | | |


ಸುಳ್ಯ : ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಪಕ್ಷದ ಚಟುವಟಿಕೆ ಸ್ಥಗಿತಗೊಳಿಸಲು ನಿರ್ಧಾರ

ಸುಳ್ಯ :ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಪಕ್ಷದ ಪ್ರಮುಖರು ಸಭೆ ನಡೆಸಿದ್ದಾರೆ.ಕೋರ್ ಕಮಿಟಿ ಶಿಫಾರಸ್ಸು ಮಾಡಿದವರನ್ನು ಅಧ್ಯಕ್ಷರನ್ನಾಗಿ ಮಾಡದಿರುವುದು ಸುಳ್ಯದ ಪ್ರಮುಖರ ಅಸಮಾಧಾನಕ್ಕೆ ಕಾರಣವಾಗಿದ್ದು ಇಂದು ಕ್ಷೇತ್ರದ ಬಿಜೆಪಿ ಪ್ರಮುಖರ ಸಭೆ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕ್ಷೇತ್ರದ ಪ್ರಮುಖರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.ಮಂಡಲ ಸಮಿತಿಯಿಂದ ಅಧ್ಯಕ್ಷ ಸ್ಥಾನಕ್ಕೆ ವಿನಯ ಮುಳುಗಾಡು ಅವರ ಹೆಸರನ್ನು ಜಿಲ್ಲಾ ಸಮಿತಿಗೆ ಕಳುಹಿಸಲಾಗಿತ್ತು. ಆದರೆ ಪಟ್ಟಿಯಲ್ಲಿ ಇಲ್ಲದ ವೆಂಕಟ್ ವಳಲಂಬೆಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷದಲ್ಲಿ ತಲೆದೋರಿರುವ ಭಿನ್ನಮತ ವಿಚಾರ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ

ಪುತ್ತೂರು: ಸದಾಶಿವ ಪೈ ಗೆ ಚೂರಿ ಇರಿತ - ಗುಣಶೇಖರ್ ಶೆಟ್ಟಿಗೂ ಹಲ್ಲೆ ಆಸ್ಪತ್ರೆಗೆ ದಾಖಲು

Posted by Vidyamaana on 2024-06-13 16:10:46 |

Share: | | | | |


ಪುತ್ತೂರು:  ಸದಾಶಿವ ಪೈ ಗೆ  ಚೂರಿ ಇರಿತ - ಗುಣಶೇಖರ್ ಶೆಟ್ಟಿಗೂ ಹಲ್ಲೆ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಪುತ್ತೂರು : ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜುಲೈ 06) ವಿದ್ಯುತ್ ನಿಲುಗಡೆ

Posted by Vidyamaana on 2023-07-05 23:31:45 |

Share: | | | | |


ಪುತ್ತೂರು : ಮೆಸ್ಕಾಂ ತುರ್ತು ಕಾಮಗಾರಿ: ಇಂದು (ಜುಲೈ 06) ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ ಫೀಡರ್‌ನಲ್ಲಿ ಜು 06 ರಂದು . ಪೂರ್ವಾಹ್ನ ಗಂಟೆ 10 ರಿ೦ದ ಅಪರಾಹ್ನ 4:00 ರ ವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ರಾಮಕುಂಜ ಗ್ರಾಮ, ಹಿರೇಬಂಡಾಡಿ ಗ್ರಾಮ, ಬೆಳ್ಳಿಪ್ಪಾಡಿ ಗ್ರಾಮ ಮತ್ತು ಕೋಡಿಂಬಾಡಿ ಗ್ರಾಮದ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ ಮೂವರು ವಿದ್ಯಾರ್ಥಿನಿಯರು ಗಂಭೀರ ಆರೋಪಿ ಅಬೀನ್ ಪೊಲೀಸ್ ವಶಕ್ಕೆ

Posted by Vidyamaana on 2024-03-04 11:14:41 |

Share: | | | | |


ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ  ಮೂವರು ವಿದ್ಯಾರ್ಥಿನಿಯರು ಗಂಭೀರ ಆರೋಪಿ ಅಬೀನ್ ಪೊಲೀಸ್ ವಶಕ್ಕೆ

ಕಡಬ, ಮಾ.04. ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್‌ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿಅಬೀನ್ ನನ್ನು ಪೊಲೀಸ್ ವಶಕ್ಕೆ ಪಡೆದಿದ್ದರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ

ಪೊಲೀಸ್ ಪ್ರಕಟಣೆ

ದಿನಾಂಕ 04.03.2024  ರಂದು ಬೆಳಗಿನ ಸಮಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿರುತ್ತದೆ. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ತನಿಖೆಯ ಪ್ರಗತಿಯನ್ನು ಮುಂದಕ್ಕೆ ನೀಡಲಾಗುವುದು



ಮೆಲ್ಕಾರ್ ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ

Posted by Vidyamaana on 2023-10-27 10:46:59 |

Share: | | | | |


ಮೆಲ್ಕಾರ್ ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ

ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು.

ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

*ಘಟನೆಗೆ ಕಾರಣವೇನು?*


ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ.

ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆಯಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು,ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ,ಚೂರಿಯಿಂದ ಇರಿದು ಪರಾರಿಯಾಗಿದೆ.

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Recent News


Leave a Comment: