ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಸುದ್ದಿಗಳು News

Posted by vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಕನ್ಸರ್ವೇಟಿವ್‌ ಪಕ್ಷ ಕೇವಲ – 81

ಲೇಬರ್ ಪಾರ್ಟಿ - 360

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3

ಲಿಬರಲ್ ಡೆಮೋಕ್ರಾಟ್‌ಗಳು - 49

ರಿಫಾರ್ಮ್‌ ಯುಕೆ - 3

ಇತರೆ - 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?


ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.


ಕನ್ಸರ್ವೇಟಿವ್‌: 131

ಲೇಬರ್ ಪಕ್ಷ: 410

ಲಿಬರಲ್ ಡೆಮೋಕ್ರಾಟ್‌ಗಳು: 61

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10

ರಿಫಾರ್ಮ್ ಯುಕೆ: 13

ಪ್ಲೈಡ್ ಸಿಮ್ರು: 4

ಗ್ರೀನ್ಸ್: 2

ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

 Share: | | | | |


BIG UPDATE: ಗನ್ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿ ಪ್ರಕರಣ: ಪೊಲೀಸರಿಂದ ರಿಯಾಜ್ ವಿಚಾರಣೆ

Posted by Vidyamaana on 2024-04-08 21:58:05 |

Share: | | | | |


BIG UPDATE: ಗನ್ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿ ಪ್ರಕರಣ: ಪೊಲೀಸರಿಂದ ರಿಯಾಜ್ ವಿಚಾರಣೆ

ಬೆಂಗಳೂರು : ಇಂದು ಸಿಎಂ ಸಿದ್ಧರಾಮಯ್ಯ ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಪ್ರಚಾರ ಮಾಡುತ್ತಿದ್ದವೇಳೆಯಲ್ಲಿ ಭದ್ರತಾ ವೈಫಲ್ಯ ಉಂಟಾಗಿತ್ತು. ರಿಯಾಜ್ ಎಂಬಾತ ಗನ್ ಇಟ್ಟುಕೊಂಡು ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿದ್ದನು.ಈ ಸಂಬಂಧ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.


ಬೆಂಗಳೂರಿನ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಸೂಚನೆ ಮೇರೆಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಗನ್ ಇಟ್ಟುಕೊಂಡು ಹಾರ ಹಾಕಿದಂತ ರಿಯಾಜ್ ಎಂಬಾತನನ್ನು ವಿಚಾರಣೆ ನಡೆಸಲಾಗುತ್ತಿದೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ

Posted by Vidyamaana on 2024-04-09 12:01:52 |

Share: | | | | |


ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 9ನೇ ತಿರುವಿನ ಸಮೀಪ ಒಂಟಿ ಸಲಗ ಎ. 8ರಂದು ಮಧ್ಯಾಹ್ನ 12 ರ ಸುಮಾರಿಗೆ ರಾಜಾರೋಷವಾಗಿ ರಸ್ತೆ ದಾಟುತ್ತಿರುವ ವೀಡಿಯೋ ವೈರಲ್‌ ಆಗಿದೆ.


ಎರಡು ತಿಂಗಳ ಹಿಂದೆಯೂ ಕಾಡಾನೆ ನಾಲ್ಕಾರು ಬಾರಿ ಘಾಟಿ ಪರಿಸರದಲ್ಲಿ ಹಗಲಲ್ಲೇ ಸಂಚರಿಸಿ ವಾಹನ ಸವಾರರಲ್ಲಿ ಆತಂಕ ಮೂಡಿಸಿತ್ತು. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಆನೆ ಸ್ವಲ್ಪ ಹೊತ್ತು ರಸ್ತೆ ಬದಿಯಲ್ಲಿ ನಿಂತು ಬಳಿಕ ರಸ್ತೆಯಲ್ಲಿ ಸಾಗಿ ನೆರಿಯ ಕಾಡಿನ ಕಡೆಗೆ ತೆರಳಿದೆ.

ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

Posted by Vidyamaana on 2023-07-07 23:11:51 |

Share: | | | | |


ಇಂದು ಜು.8 ದ.ಕ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್  ತಿಳಿಸಿದ್ದಾರೆ.


ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ

BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

Posted by Vidyamaana on 2024-05-20 09:24:27 |

Share: | | | | |


BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ.ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ಡೊಲ್ಲಿಯನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಬದುಕುಳಿದವರು ಕಂಡುಬಂದಿಲ್ಲ ಎಂದು ಇರಾನಿನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ.

ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

Posted by Vidyamaana on 2024-04-09 17:32:02 |

Share: | | | | |


ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

ಉಡುಪಿ, ಎ.9: ಬಿಜೆಪಿ ಯುವಮೋರ್ಚಾ ಮುಖಂಡನ ಮನೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. 


ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಂಗಳೂರು ಮತ್ತು ಉಡುಪಿ ಅಬಕಾರಿ ವಿಭಾಗದ ಆಯುಕ್ತರ ಸೂಚನೆಯಂತೆ ಪೊಲೀಸ್ ಸಿಬಂದಿ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಬ್ರಹ್ಮಾವರ ಇಂದಿರಾ ನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆಗೆ ದಾಳಿ ನಡೆಸಲಾಗಿದ್ದು ಮನೆಯಲ್ಲಿ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Posted by Vidyamaana on 2023-11-07 21:53:20 |

Share: | | | | |


ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳ್ತಂಗಡಿ : 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜ್ ವಿದ್ಯಾರ್ಥಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷದಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ CC ಹೊರಡಿಸಲಿದೆ.


ಇನ್ನೂ ಸೌಜನ್ಯ ಪ್ರಕರಣದಲ್ಲಿ ನಕಲಿ ಹೋರಾಟ ಮಾಡುವವರಿಗೆ ನಡುಕ ಹುಟ್ಟಿಸಿದೆ. ಈವರೆಗೆ ನಕಲಿ ಹೋರಾಟ ಮಾಡುವವರಿಗೆ ಕರ್ನಾಟಕದಲ್ಲಿ ಇನ್ನೂ ಮುಂದೆ ಹೋರಾಟ ನಿರ್ಬಂಧ ಹೇರಲಾಗುತ್ತೆ ಎನ್ನಲಾಗಿದೆ. ಅದಲ್ಲದೇ ಪ್ರಕರಣ ಯಾವ ರೀತಿಯಲ್ಲಿ ಮುಂದುವರಿಯತ್ತದೆ ಎಂದು ಕಾದು ನೋಡಬೇಕಾಗಿದೆ.

Recent News


Leave a Comment: