ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ

Posted by Vidyamaana on 2024-03-15 19:56:14 |

Share: | | | | |


ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ

ಹಾವೇರಿ: ಮಾಜಿ ಸಿಎಂ, ಶಾಸಕ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದಂತೆ ಗದ್ದಲ ಗಲಾಟೆ ನಡೆದ ಘಟನೆ ಶುಕ್ರವಾರ ನಡೆದಿದೆ.


ಕಚೇರಿಗೆ ಬೊಮ್ಮಾಯಿ ಅವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರ ಹೈ ಡ್ರಾಮಾ ನಡೆಸಿದ್ದಾರೆ.ಹಾವೇರಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅವರನ್ನು ಎಳೆದಾಡಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಗ್ರಾಮೀಣ ಭಾಗದ ಅಧ್ಯಕ್ಷರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ನಗರ ಕಾರ್ಯಕರ್ತರನ್ನ ಗ್ರಾಮೀಣ ಭಾಗದ ಅಧ್ಯಕ್ಷರಾಗಿ ಮಾಡಿದ್ದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ.

ಈ ವೇಳೆ ಬೊಮ್ಮಾಯಿ ಅವರು ಎಲ್ಲ ಸರಿ ಮಾಡುತ್ತೇನೆ, ಕಾರ್ಯಕರ್ತರು ಒಗಟ್ಟು ಪ್ರದರ್ಶಿಸಿ. ಚುನಾವಣೆ ಹತ್ತಿರ ಇದೆ ಗಲಾಟೆ ಸರಿಯಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿ ಕಾರ್ಯಕ್ರಮ ಮೊಟಕುಗೊಳಿಸಿ ಕಚೇರಿಯಿಂದ ಹೊರನಡೆದಿದ್ದಾರೆ.

ಗವರ್ನಮೆಂಟ್ ಸ್ಕೀಂ - ಬ್ಯಾಂಕ್ ಲೋನ್ ಹೆಸ್ರಲ್ಲಿ ಮಹಾ ದೋಖಾ: ಮಹಿಳೆ ಬಂಧನ

Posted by Vidyamaana on 2023-08-23 04:24:23 |

Share: | | | | |


ಗವರ್ನಮೆಂಟ್ ಸ್ಕೀಂ - ಬ್ಯಾಂಕ್ ಲೋನ್ ಹೆಸ್ರಲ್ಲಿ ಮಹಾ ದೋಖಾ: ಮಹಿಳೆ ಬಂಧನ

ವಿಜಯನಗರ; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.


ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.


ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.

2023-24ರ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಅಯ್ಯರ್ ಇಶಾನ್ ಕಿಶನ್ ಹೆಸರು ಕೈಬಿಟ್ಟ BCCI

Posted by Vidyamaana on 2024-02-28 21:51:15 |

Share: | | | | |


2023-24ರ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಅಯ್ಯರ್  ಇಶಾನ್ ಕಿಶನ್ ಹೆಸರು ಕೈಬಿಟ್ಟ BCCI

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2023-24ರ ಋತುವಿಗಾಗಿ ‘ಕೇಂದ್ರ ಗುತ್ತಿಗೆ’ ಪಡೆದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.ಟೀಮ್‌ ಇಂಡಿಯಾದ ಯುವ ಬ್ಯಾಟರ್‌ ಗಳಾದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಬಿಸಿಸಿಐಯ ಸೂಚನೆಯ ಮೇರೆಗೂ ದೇಶಿಯ ಕ್ರಿಕೆಟ್‌ ನಲ್ಲಿ ಭಾಗಿಯಾಗದ ಇಶಾನ್‌ ಹಾಗೂ ಶ್ರೇಯಸ್‌ ಅವರನ್ನು ಗುತ್ತಿಗೆ ಪಟ್ಟಿಯಿಂದ ಹೊರಗಿಡಲಾಗಿದೆಸುತ್ತಿನ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಸಿಸಿಐ ಹೇಳಿದೆ.

ಕಳೆದ ಬಾರಿಯಂತೆ ಈ ಬಾರಿಯೂ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವಿಂದ್ರ ಜಡೇಜಾ ಅವರನ್ನು ಎ+ ಗುತ್ತಿಗೆಯ ಪಟ್ಟಿಯಲ್ಲಿ ಪರಿಗಣಿಸಲಾಗಿದೆ. ಇನ್ನು ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಎ ಗ್ರೇಡ್‌ ಪಟ್ಟಿಗೆ ಭಡ್ತಿ ಹೊಂದಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್‌ಗೆ ಆಯ್ಕೆಯಾಗದಿದ್ದರೂ ಹಾರ್ದಿಕ್ ಪಾಂಡ್ಯ ಗ್ರೇಡ್ ಎ ಪಟ್ಟಿಯಲ್ಲಿ ತಮ್ಮ ಹೆಸರನ್ನು ಉಳಿಸಿಕೊಂಡಿದ್ದಾರೆ. ಹಾರ್ದಿಕ್ 2023 ರಲ್ಲಿ T20I ಕ್ರಿಕೆಟ್‌ನಲ್ಲಿ 11 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು.2023-24ರಲ್ಲಿ 8 ಟಿ20ಐಗಳಲ್ಲಿ ಭಾರತವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಗ್ರೇಡ್ ಬಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.


ಇಂಗ್ಲೆಂಡ್ ವಿರುದ್ಧದ ಭಾರತದ ಸರಣಿ ಗೆಲುವಿನ ಹೀರೋ ಯಶಸ್ವಿ ಜೈಸ್ವಾಲ್ ಅವರು ಬಿ ಗ್ರೇಡ್ ನಲ್ಲಿ ಸ್ಥಾನ ಪಡೆದಿದ್ದಾರೆ.

ನಿಗದಿತ ಅವಧಿಯೊಳಗೆ ಕನಿಷ್ಠ 3 ಟೆಸ್ಟ್‌ಗಳು ಅಥವಾ 8 ODIಗಳು ಅಥವಾ 10 T20I ಗಳನ್ನು ಆಡುವ ಮಾನದಂಡವನ್ನು ಪೂರೈಸುವ ಕ್ರಿಕೆಟಿಗರನ್ನು ಸ್ವಯಂ ಆಗಿ ಗ್ರೇಡ್ ಸಿ ಗೆ ಸೇರುತ್ತಾರೆ. ಎಲ್ಲಾ ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸದ ಅವಧಿಯಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಭಾಗವಹಿಸಲು ಆದ್ಯತೆ ನೀಡಬೇಕು ಎಂದು ಬಿಸಿಸಿಐ ಶಿಫಾರಸು ಮಾಡಿದೆ.

ಇಲ್ಲಿದೆ ಪಟ್ಟಿ..

ಗ್ರೇಡ್ A+ (4 ಆಟಗಾರರು):  ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.

ಗ್ರೇಡ್ A (6 ಆಟಗಾರರು): ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.

ಗ್ರೇಡ್ B (5 ಆಟಗಾರರು):  ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್. ‌

ಗ್ರೇಡ್ C (15 ಆಟಗಾರರು): ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್.

ಆಯ್ಕೆ ಸಮಿತಿಯು ವೇಗದ ಬೌಲಿಂಗ್ ಒಪ್ಪಂದಗಳಿಗಾಗಿ ಆಕಾಶ್ ದೀಪ್, ವಿಜಯ್ ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರ ಹೆಸರನ್ನು ಶಿಫಾರಸು ಮಾಡಿದೆ.

ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Posted by Vidyamaana on 2024-01-07 16:52:05 |

Share: | | | | |


ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.


ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ  ಕಾರಣ ತಿಳಿದು ಬಂದಿಲ್ಲ. ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.


ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಟ್ಲ : ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶಕ್ಕೆ

Posted by Vidyamaana on 2023-05-21 11:14:43 |

Share: | | | | |


ವಿಟ್ಲ : ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶಕ್ಕೆ

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ.ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ವೀಡಿಯೋ ಪ್ರಕರಣ:

Posted by Vidyamaana on 2023-07-28 09:10:24 |

Share: | | | | |


ಉಡುಪಿ ವೀಡಿಯೋ ಪ್ರಕರಣ:

ಉಡುಪಿ: ಉಡುಪಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದಾರೆ.

ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.


ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.


ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.

Recent News


Leave a Comment: