ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನ.. ಆಸೀಸ್​ಗೆ ಚಾಂಪಿಯನ್ ಕಿರೀಟ

Posted by Vidyamaana on 2024-02-11 21:38:49 |

Share: | | | | |


ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನ.. ಆಸೀಸ್​ಗೆ ಚಾಂಪಿಯನ್ ಕಿರೀಟ

ದಕ್ಷಿಣ ಆಫ್ರಿಕಾ: ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಉದಯ್ ಸಹಾರನ್ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ಯುವ ಪಡೆ ನಾಲ್ಕನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದಕ್ಷಿಣ ಆಫ್ರಿಕಾದ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಉದಯ್ ಸಹಾರನ್ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ಯುವ ಪಡೆ ನಾಲ್ಕನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 254 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ತಂಡ ಮತ್ತೊಮ್ಮೆ ಫೈನಲ್ ಭಯಕ್ಕೆ ತುತ್ತಾಗಿ 174 ರನ್​ಗಳಿಗೆ ಆಲೌಟ್ ಆಗುವ ಮೂಲಕ 79 ರನ್​ಗಳ ಹೀನಾಯ ಸೋಲು ಅನುಭವಿಸಿತು. ಈ ಮೂಲಕ ದಾಖಲೆಯ 6ನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶದಿಂದ ವಂಚಿತವಾಯಿತು.

ಇಂದು ಪುತ್ತೂರಿಗೆ ಅಣ್ಣಾಮಲೈ

Posted by Vidyamaana on 2023-04-29 02:42:29 |

Share: | | | | |


ಇಂದು ಪುತ್ತೂರಿಗೆ  ಅಣ್ಣಾಮಲೈ

ಪುತ್ತೂರು:ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರು ಏ.29ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಗಂಟೆ 11.30ಕ್ಕೆ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಮಧ್ಯಾಹ್ನ ಗಂಟೆ 3ಕ್ಕೆ ಕಾವು ಜನಮಂಗಲದಲ್ಲಿ ಕಾರ್ಯಕರ್ತರೊಂದಿಗೆ ಸ೦ವಾದ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ವಿಟ್ಲದಲ್ಲಿ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ತಿಳಿಸಿದೆ.

ಭಾರೀ ಮಳೆಯ ಹಿನ್ನೆಲೆ: ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಜೆ ಘೋಷಣೆ

Posted by Vidyamaana on 2024-07-31 21:19:43 |

Share: | | | | |


ಭಾರೀ ಮಳೆಯ ಹಿನ್ನೆಲೆ: ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ: ಕಂಬಳಕ್ಕೆ ಆಹ್ವಾನ

Posted by Vidyamaana on 2023-11-02 17:05:39 |

Share: | | | | |


ರಾಜ್ಯಪಾಲರಿಗೆ ಕಂಬಳದ ಆಮಂತ್ರಣ: ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು.‌ರಾಜಭಬನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು ಕೂಟ ಹಾಗೂ ಕಂಬಳ ಸಮಿತಿ‌ಪ್ರಮುಖರು ಉಪಸ್ಥಿತರಿದ್ದರು.

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ

Posted by Vidyamaana on 2023-11-16 21:14:49 |

Share: | | | | |


ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ.


ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ.


ತಕ್ಷಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಅವರು ಯಾವುದೇ ತೊಂದರೆಯಿಲ್ಲದೆ., ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ ಸಾವಿರಾರು ರೂ. ಮೌಲ್ಯದ ಗಾಂಜಾ ವಶ

Posted by Vidyamaana on 2023-03-16 15:46:34 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ ಸಾವಿರಾರು ರೂ. ಮೌಲ್ಯದ ಗಾಂಜಾ ವಶ

ಪುತ್ತೂರು: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇರಿಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿದ ಘಟನೆ ಮುಕ್ರಂಪಾಡಿಯ ಬಸ್ ತಂಗುದಾಣದಲ್ಲಿ ನಡೆದಿದೆ.

ಬಂಧಿತ ಆರೋಪಿಯಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಬಂಧಿತ ಆರೋಪಿ.ಆರೋಪಿಯು ಪುತ್ತೂರು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಎಂಬಲ್ಲಿ ಬಸ್‌ತಂಗುದಾಣವೊಂದರಲ್ಲಿ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ ತೂಕದ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ.

ಮಾ.16 ರಂದು ದ.ಕ ಜಿಲ್ಲಾ ಎಸ್ಪಿ ಮತ್ತು ಎಡಿಷನಲ್ ಎಸ್ಪಿ ಹಾಗೂ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಮತ್ತು ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಎ.ಎಸ್ ಐ ಲೋಕನಾಥ್, ಹೆಡ್ ಕಾನ್ಸ್ಟೇಬಲ್ ಸ್ಕರಿಯ, ಉದಯ, ಪ್ರಶಾಂತ್ ರೈ, ಜಗದೀಶ್, ಸುಬ್ರಹ್ಮಣ್ಯ, ಸಿಬ್ಬಂದಿಗಳಾದ ರೇವತಿ, ಶ್ರೀಮಂತ್ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮುಕ್ರಂಪಾಡಿಯ ಬಸ್‌ತಂಗುದಾಣದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಮತ್ತು ಆತನ ಕೈ ಚೀಲವನ್ನು ಪರಿಶೀಲನೆ ನಡೆಸಿದಾಗ ಕೈ ಚೀಲದ ಒಳಗೆ ಒಂದು ಪ್ಲಾಸ್ಟಿಕ್ ಕವರಿನಲ್ಲಿ ಗಾಂಜಾದ ಒಣಗಿದ ಹೂ, ಎಲೆ, ಮೊಗ್ಗು ಮತ್ತು ಬೀಜಗಳು ಇರುವುದು ಕಂಡು ಬಂದಿದ್ದು, ಇದರ ದಟ್ಟವಾದ ವಾಸನೆಯಿಂದ ಇದು ಮಾದಕ ವಸ್ತು ಗಾಂಜಾ ಎಂದು ಖಚಿತ ಪಡಿಸಿ ಆರೋಪಿಯನ್ನು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Recent News


Leave a Comment: