ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ನಿನ್ನೆ ಪ್ರಮಾಣ ವಚನ, ಇಂದು ರಾಜೀನಾಮೆ? ಮೋದಿ ಕ್ಯಾಬಿನೆಟ್ ಬಿಡಲು ಮುಂದಾಗಿದ್ದೇಕೆ ಬಿಜೆಪಿ ಸಂಸದ?

Posted by Vidyamaana on 2024-06-10 13:37:48 |

Share: | | | | |


ನಿನ್ನೆ ಪ್ರಮಾಣ ವಚನ, ಇಂದು ರಾಜೀನಾಮೆ? ಮೋದಿ ಕ್ಯಾಬಿನೆಟ್ ಬಿಡಲು ಮುಂದಾಗಿದ್ದೇಕೆ ಬಿಜೆಪಿ ಸಂಸದ?

ನವದೆಹಲಿ(ಜೂ.10): ಮೋದಿ ಸರಕಾರ 3.0ನಲ್ಲಿ ಸಚಿವ ಸಂಪುಟ ವಿಭಜನೆಯಾಗುವ ಮುನ್ನವೇ ಸಚಿವ ಸ್ಥಾನ ಕೈಬಿಡುವ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸುರೇಶ್ ಗೋಪಿ ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನವನ್ನು ತೊರೆಯಲು ಬಯಸಿದ್ದಾರೆ.

ಮೂಲಗಳನ್ನು ನಂಬುವುದಾದರೆ, ಅವರು ರಾಜೀನಾಮೆ ನೀಡಲು ಬಯಸುತ್ತಾರೆ. ಕೇಂದ್ರ ನಾಯಕತ್ವಕ್ಕೆ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.

ಸುರೇಶ್ ಗೋಪಿ ಅವರು ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಅವರು ಸಚಿವರಾಗಿ ಉಳಿಯಲು ಬಯಸುವುದಿಲ್ಲ ಎಂದು ಹೇಳಿದರು. ಅವರನ್ನು ಸಚಿವ ಸ್ಥಾನದಿಂದ ಮುಕ್ತಗೊಳಿಸಬೇಕು ಎಂಬುದು ಅವರ ಅಪೇಕ್ಷೆ.

ಮನೋರಮಾ ನ್ಯೂಸ್ ಜೊತೆ ಮಾತನಾಡಿದ ಸುರೇಶ್ ಗೋಪಿ, ಸಚಿವ ಸ್ಥಾನ ತೊರೆಯುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಸಂಪುಟದಿಂದ ನನ್ನನ್ನು ಮುಕ್ತಗೊಳಿಸಲಾಗುವುದು ಎಂದು ನಾನು ಭಾವಿಸುತ್ತೇನೆ. ನನ್ನ ಸಿನಿಮಾಗಳನ್ನು ಪೂರ್ಣಗೊಳಿಸಬೇಕು. ಕೇಂದ್ರ ನಾಯಕತ್ವ ನಿರ್ಧರಿಸಲಿ. ಸಂಸದನಾಗಿ ತ್ರಿಶೂರ್‌ನಲ್ಲಿ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ. ನನಗೆ ಕ್ಯಾಬಿನೆಟ್ ಹುದ್ದೆ ಬೇಡ ಎಂದು ಹೇಳಿದ್ದೆ ಎಂದಿದ್ದಾರೆ.

ಜೂ 13 : ವಿಟ್ಲ : The Knowledge Hub ಟ್ಯೂಷನ್ ಸೆಂಟರ್ ಶುಭಾರಂಭ

Posted by Vidyamaana on 2024-06-12 17:22:09 |

Share: | | | | |


ಜೂ 13 : ವಿಟ್ಲ : The Knowledge Hub ಟ್ಯೂಷನ್ ಸೆಂಟರ್ ಶುಭಾರಂಭ

ವಿಟ್ಲ: The Knowledge Hub ಟ್ಯೂಷನ್ ಸೆಂಟರ್ ಜೂನ್ 13 ರಂದು ಗುರುವಾರ 10 ಘಂಟೆಗೆ ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಳ್ಳಲಿದೆ. 

ಇಲ್ಲಿ ಎಲ್ ಕೆ ಜಿ ಯಿಂದ ಪಿಯುಸಿ ವರೆಗಿನ ಮಕ್ಕಳಿಗೆ ಎಲ್ಲಾ ವಿಷಯದ ಬಗ್ಗೆ ಟ್ಯೂಶನ್ ನೀಡಲಾಗುತ್ತದೆ. ಸಂಜೆ 5 ಗಂಟೆಯಿಂದ 7.30 ವರೆಗೆ ಟ್ಯೂಶನ್ ನೀಡಲಾಗುತ್ತದೆ. ವಿವಿಧ ಕಾಲೇಜ್ ಗಳಲ್ಲಿ ವ್ಯಾಸಂಗ ಮಾಡಿ ಅನುಭವ ಇರುವ ಶಿಕ್ಷಕರು ತರಬೇತಿ ನೀಡಲಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ, ವಿಶೇಷ ಹೆಚ್ಚಿನ ಶಿಕ್ಷಕರನ್ನು ನಿಯೋಜಿಸಿ ತರಬೇತಿ ನೀಡಲಾಗುತ್ತದೆ. ಟ್ಯೂಶನ್ ಜತೆಯಲ್ಲಿ ಸ್ಕಿಲ್ ಡೆವಲಂಪ್ ಮೆಂಟ್ ಸೇರಿದಂತೆ  ವಿದ್ಯಾರ್ಥಿಗಳಿಗೆ  ಕಲಿಕೆಗೆ ಪೂರಕವಾಗುವ ವಿಷಯಗಳನ್ನು ತಿಳಿಸಿ ಕೊಡಲಾಗುತ್ತದೆ. 

ಇದ್ರೀಸ್ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

Posted by Vidyamaana on 2023-04-05 08:26:14 |

Share: | | | | |


 ಇದ್ರೀಸ್ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

ಕನಕಪುರ: ಸಾತನೂರು ಸಮೀಪ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರನ್ನೊಳಗೊಂಡ ರಾಮನಗರ ಪೊಲೀಸರ ವಿಶೇಷ ತಂಡಗಳು ಇಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿವೆ.

ಕಳೆದ ಮಾ.31ರ ಮಧ್ಯರಾತ್ರಿ ಸಾತನೂರು ಪೊಲೀಸ್ ಠಾಣೆ ಮುಂಭಾಗ ಜಾನುವಾರುಗಳನ್ನು ತುಂಬಿದ್ದ ಕ್ಯಾಂಟರ್‌ ವಾಹನವನ್ನು ಅಡ್ಡಗಟ್ಟಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ, ಇತರೆ ನಾಲ್ವರು  ಆರೋಪಿಗಳೊಂದಿಗೆ ತಲೆಮರೆಸಿಕೊಂಡಿದ್ದ. ಏ.2 ರಾತ್ರಿ ವಿಡಿಯೊವೊಂದನ್ನು ಹರಿಬಿಟ್ಟಿದ್ದ ಪುನೀತ್‌, ‘ನಾನೇ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಹೇಳಿಕೊಂಡು  ನಾಪತ್ತೆ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ‌ ತಂಡಗಳು ಯಶಸ್ವಿಯಾಗಿವೆ.

ಇದ್ರೀಷ್ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ ಎಸ್‌ ಎಲ್) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ. ಕನಕಪುರದ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ ಎಸ್‌ ಎಲ್‌ ವರದಿಯನ್ನೂ ಪಡೆಯಲಾಗುತ್ತದೆ.

ಮೂರು ಎಫ್‌ಐಆರ್‌: ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ ಐಆರ್‌ ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದ. ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಕ್ಯಾಂಟರ್‌ ಚಾಲಕ ಪ್ರತಿ ದೂರು ನೀಡಿದ್ದರು. ಮರು ದಿನ ಬೆಳಿಗ್ಗೆ 8ರ ಸುಮಾರಿಗೆ ಘಟನೆ ನಡೆದ ಸ್ಥಳದ 100 ಮೀಟರ್‌ ದೂರದಲ್ಲಿ ಇದ್ರೀಷ್‌ ಅವರ ಶವ ಪತ್ತೆ ಆಗಿದ್ದು, ಅವರ ಸಹೋದರ ಯೂನುಸ್‌ ಪಾಷ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ ಐಆರ್‌ ದಾಖಲಿಸಿದ್ದೇವೆ ಎಂದು ಎಸ್ ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ಮುಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ ; ನಿಯಮ ಮೀರಿದ್ರೆ ಭಾರೀ ದಂಡ

Posted by Vidyamaana on 2024-02-21 17:42:45 |

Share: | | | | |


ರಾಜ್ಯದಲ್ಲಿ ಇನ್ಮುಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ ; ನಿಯಮ ಮೀರಿದ್ರೆ ಭಾರೀ ದಂಡ

ಬೆಂಗಳೂರು : ರಾಜ್ಯಾದ್ಯಂತ ಹುಕ್ಕಾ ಬಾರ್ಗಳನ್ನು ನಿಷೇಧಿಸುವ ಮಸೂದೆಯನ್ನ ರಾಜ್ಯ ಸರ್ಕಾರ ಬುಧವಾರ ಅಂಗೀಕರಿಸಿದ್ದು, ನಿಷೇಧವನ್ನ ಉಲ್ಲಂಘಿಸುವವರಿಗೆ ಒಂದರಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ಗಳವರೆಗೆ ದಂಡ ಸೇರಿದಂತೆ ಕಠಿಣ ದಂಡ ವಿಧಿಸಲಾಗುವುದು.ಅಧಿಸೂಚನೆಯ ಪ್ರಕಾರ, ತನ್ನ ನಾಗರಿಕರ ಆರೋಗ್ಯವನ್ನು ರಕ್ಷಿಸಲು ಮತ್ತು ತಂಬಾಕು ಸಂಬಂಧಿತ ರೋಗಗಳ ಉಬ್ಬರವಿಳಿತವನ್ನ ತಡೆಗಟ್ಟುವ ಸಲುವಾಗಿ ಅಸ್ತಿತ್ವದಲ್ಲಿರುವ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ (COTPA)ಗೆ ತಿದ್ದುಪಡಿ ಮಾಡಿದ ನಂತರ ನಿಷೇಧವನ್ನ ವಿಧಿಸಲಾಗಿದೆ.


ಹೆಚ್ಚುವರಿಯಾಗಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನ ಸಹ ರಾಜ್ಯವು ನಿಷೇಧಿಸಿದೆ.


ತಿದ್ದುಪಡಿ ಮಾಡಿದ ಮಸೂದೆಯು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ಮೇಲೆ ಸಂಪೂರ್ಣ ನಿಷೇಧವನ್ನು ಜಾರಿಗೊಳಿಸುತ್ತದೆ, ಹೊಗೆ ಮುಕ್ತ ವಾತಾವರಣವನ್ನ ಸೃಷ್ಟಿಸುವ ಬದ್ಧತೆಯನ್ನ ಒತ್ತಿಹೇಳುತ್ತದೆ.ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನ ನಿಷೇಧಿಸಿದೆ. ನಿಯಮವನ್ನು ಉಲ್ಲಂಘಿಸಿದರೆ 1,000 ರೂ.ಗಳ ದಂಡ ವಿಧಿಸಬಹುದು.

ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

Posted by Vidyamaana on 2024-06-06 18:58:41 |

Share: | | | | |


ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

ಚಂಡೀಗಢ: ನೂತನ ಸಂಸದೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ. ಆ ಬಳಿಕ ವಾಗ್ವಾದ ನಡೆದಿದೆ. ಈ ವೇಳೆಯಲ್ಲಿ ನೂತನ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆ ಕಪಾಳ ಮೋಕ್ಷ ಮಾಡಿರೋದಾಗಿ ತಿಳಿದು ಬಂದಿದೆ.

ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಡಬ : ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗ,ನಗದು ಲೂಟಿ..!

Posted by Vidyamaana on 2024-01-05 08:04:40 |

Share: | | | | |


ಕಡಬ : ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ನಗ,ನಗದು ಲೂಟಿ..!

ಕಡಬ,ಜ 04. ಮನೆಗೆ ಬೀಗ ಹಾಕಿ ಮನೆ ಮಂದಿ ಆತೂರು ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ  ಗುರುವಾರ ತಡರಾತ್ರಿ ನಡೆದಿದೆ.ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು, ನಗದನ್ನು ದೋಚಿದ್ದಾರೆ. ಪಕ್ಕದಲ್ಲಿರುವ ಮನೆಯೊಂದರ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಆಗಮಿಸುವುದನ್ನು ನೋಡಿದ ಕಳ್ಳರು ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

Recent News


Leave a Comment: