ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿಗಳು News

Posted by vidyamaana on 2024-07-08 17:22:55 |

Share: | | | | |


ಉಡುಪಿ: ನಾಳೆ (ಜು.09)ರಂದು ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜು.09 ರಂದು ರೆಡ್ ಅಲರ್ಟ್ ಘೋಷಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

 Share: | | | | |


ಕಡಬ : ಶಾಲೆಯ ಬಳಿಯಲ್ಲಿ ತಂಬಾಕು ಮಾರಾಟ

Posted by Vidyamaana on 2023-10-01 05:00:46 |

Share: | | | | |


ಕಡಬ : ಶಾಲೆಯ ಬಳಿಯಲ್ಲಿ ತಂಬಾಕು ಮಾರಾಟ

ಕಡಬ : ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ. 


ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು. 


ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್​ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ‌ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.

ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

Posted by Vidyamaana on 2023-12-05 13:50:20 |

Share: | | | | |


ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮನೆ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ.


ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿಯಾದರೆ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ. ಜೇಮ್ಸ್ ಹಾಗೂ ಸುಂದರ್ ರಾಜ್ ಅಕ್ಕಪಕ್ಕದ ಮನೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು. ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು.


ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಕೇಂದ್ರದ ಅನುಮೋದನೆ

Posted by Vidyamaana on 2023-12-29 12:46:12 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಕೇಂದ್ರದ ಅನುಮೋದನೆ

ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.


ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ -ಮೈಸೂರು ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ಉಳ್ಳಾಲ: ಗೃಹ ಪ್ರವೇಶ ನಡೆದ ಐದೇ ದಿನದಲ್ಲಿ ಮನೆಯೊಡತಿ ಅಶ್ವಿನಿ ಬಂಗೇರ ಆತ್ಮಹತ್ಯೆ

Posted by Vidyamaana on 2023-06-08 07:03:56 |

Share: | | | | |


ಉಳ್ಳಾಲ: ಗೃಹ ಪ್ರವೇಶ ನಡೆದ ಐದೇ ದಿನದಲ್ಲಿ ಮನೆಯೊಡತಿ ಅಶ್ವಿನಿ ಬಂಗೇರ ಆತ್ಮಹತ್ಯೆ

ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.

ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.

ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.  ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅಶ್ವಿನಿ ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ  ಮನೆಯೊಂದನ್ನು ಖರೀದಿಸಿ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.

ಹಲವು ಸಂಕಷ್ಟಗೊಳಗಾದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

ಪ್ರತಾಪ್ ಸಿಂಹ ಪಾಸ್ ಕೊಟ್ಟಿದ್ದರ ಬಗ್ಗೆ ತನಿಖೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Posted by Vidyamaana on 2023-12-15 08:12:04 |

Share: | | | | |


ಪ್ರತಾಪ್ ಸಿಂಹ ಪಾಸ್ ಕೊಟ್ಟಿದ್ದರ ಬಗ್ಗೆ ತನಿಖೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದು ಲೋಕಸಭೆಗೆ ನುಗ್ಗಿ ಆತಂಕ ಸೃಷ್ಟಿಸಿದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ದೆಹಲಿಯಲ್ಲಿ ಮಾತನಾಡಿದ ಅವರು, ಸಂಸದರು ಯಾವ ಹಿನ್ನೆಲೆಯಲ್ಲಿ ಅವರು ಪಾಸ್ ಕೊಟ್ಟಿದ್ದರು ಎಂಬ ಬಗ್ಗೆ ತನಿಖೆಯಾಗಲಿದೆ. ಯಾವುದೇ ಕಾರಣಕ್ಕೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕ್ಷೇತ್ರದ ಜನರು ಬಂದಾಗ ಪಾಸ್ ಕೊಡುವುದು ಸಹಜ. ಪ್ರತಾಪ ಸಿಂಹ ಪಾಸ್ ಕೊಟ್ಟ ವಿಚಾರ ತನಿಖೆಗೆ ಒಳಪಡಲಿದೆ. ಮೂರು ಬಾರಿ ಪಾಸ್ ಪಡೆದಿರುವ ಬಗ್ಗೆ ಗೊತ್ತಿಲ್ಲ. ಮೈಸೂರಿನವರು ಎನ್ನುವ ಕಾರಣಕ್ಕೆ ಪಾಸ್ ಕೊಟ್ಟೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.


ಈ ಘಟನೆ ವಿಷಾದನೀಯ, ಖಂಡನೀಯ. ಘಟನೆ ನಂತರ ಲೋಕಸಭೆ ಸ್ಪೀಕರ್, ಸಭಾ ನಾಯಕರು ಸಭೆ ನಡೆಸಿ ಸಂಸತ್ ನಲ್ಲಿ ಸುರಕ್ಷಾ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಘಟನೆಯಿಂದ ಪಾಠ ಕಲಿತುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಎಲ್ಲರ ಸಲಹೆ ಪಡೆದು ಸಂಸತ್ ರಕ್ಷಣೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಸಚಿವರು ಹೇಳಿದ್ದಾರೆ.ಇಂತಹ ಘಟನೆಗಳಲ್ಲಿ ಸ್ಪೀಕರ್ ಈ ಹಿಂದೆ ಕೈಗೊಂಡ ಕ್ರಮಗಳಂತೆ ಈ ಬಾರಿಯೂ ಕ್ರಮ ಕೈಗೊಳ್ಳಲಾಗಿದೆ. ಆಯುಧ ಸೇರಿದಂತೆ ಇತರೆ ವಸ್ತು ಪಡೆದು ಗ್ಯಾಲರಿಗೆ ಬರುವುದು ಬೇಡ. ಇಂತಹ ಘಟನೆಯಲ್ಲಿ ಅಂದಿನ ಸ್ಪೀಕರ್ ಕೈಗೊಂಡ ಪರಂಪರೆ ಪರಿಶೀಲಿಸಿ ಅದರಂತೆ ಈ ಬಾರಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವಾಲಯಕ್ಕೆ ಪತ್ರ ಬರೆದು ಉನ್ನತ ಮಟ್ಟದ ತನಿಖೆಗೆ ಸ್ಪೀಕರ್ ಆದೇಶ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ ಡಾ.ಜಿ.ಜಿ ಲಕ್ಷ್ಮಣ ಪ್ರಭು ಹೃದಯಾಘಾತಕ್ಕೆ ಬಲಿ

Posted by Vidyamaana on 2023-11-17 12:33:12 |

Share: | | | | |


ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ ಡಾ.ಜಿ.ಜಿ ಲಕ್ಷ್ಮಣ ಪ್ರಭು ಹೃದಯಾಘಾತಕ್ಕೆ ಬಲಿ

ಮಂಗಳೂರು, ನ.17: ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ (ಮೂತ್ರಶಾಸ್ತ್ರ ವಿಭಾಗ) ತಜ್ಞರಾಗಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನರಾಗಿದ್ದಾರೆ.


61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. 


ಮೂರು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದ ಡಾ. ಜಿ ಜಿ ಲಕ್ಷ್ಮಣ ಪ್ರಭು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು. ಡಾ.ಜಿ.ಜಿ. ಲಕ್ಷ್ಮಣ ಪ್ರಭು ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು, ಹಿರಿಯ , ಕಿರಿಯ ವೈದ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Recent News


Leave a Comment: