ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಟಿ ಪೂನಂ ಪಾಂಡೆ ನಿಧನ

Posted by Vidyamaana on 2024-02-02 12:24:54 |

Share: | | | | |


ನಟಿ ಪೂನಂ ಪಾಂಡೆ ನಿಧನ

ಉತ್ತರಪ್ರದೇಶ :ನಟಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ನಟಿಯ ಸಾವನ್ನು ಅವರ ಮ್ಯಾನೇಜರ್ Instagram ನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ಇವರಿಗೆ 32 ವರ್ಷ ವಯಸ್ಸಾಗಿತ್ತು. ನಟಿ ಹಾಗೂ ಮಾಡೆಲ್‌ ಆಗಿ ತನ್ನ ವೃತ್ತಿ ಜೀವನ ಆರಂಭಿಸಿದ ಪೂನಂ ಪಾಂಡೆ ಅವರು ವಿವಾದಗಳಿಂದಲೇ ಜನಪ್ರಿಯತೆಯನ್ನು ಪಡೆದಿದ್ದರು. ಪೂನಂ ಅವರು ಶುಕ್ರವಾರ (ಫೆ.2) ರಂದು ಮುಂಜಾನೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.


ಬಾಲಿವುಡ್ ನಾಯಕಿ ಹಾಗೂ ರೂಪದರ್ಶಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಅವರಿಗೆ ಗರ್ಭಕಂಠದ ಕ್ಯಾನ್ಸರ್ ಇತ್ತು. ಈ ಮಾಹಿತಿಯನ್ನು ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನೀಡಲಾಗಿದೆ

ಕೆದಿಲ ಜಾಗದ ವಿಚಾರದಲ್ಲಿ ಹಲ್ಲೆ ಪ್ರಕರಣ :ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Posted by Vidyamaana on 2024-02-24 12:10:53 |

Share: | | | | |


ಕೆದಿಲ ಜಾಗದ ವಿಚಾರದಲ್ಲಿ ಹಲ್ಲೆ  ಪ್ರಕರಣ :ಆರೋಪಿಗಳಿಗೆ  ನಿರೀಕ್ಷಣಾ ಜಾಮೀನು

ಪುತ್ತೂರು : ಜಾಗದ ವಿಚಾರದಲ್ಲಿ ಪರಸ್ಪರ ತಕರಾರು ಎತ್ತಿ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣವೊಂದರಲ್ಲಿ ಆರೋಪಿಗಳೆನ್ನಲಾಗಿದ್ದ ಕೆದಿಲ ಗ್ರಾಮದ ಮಾಜಿ ಯೋಧ ಶಿವರಾಮ ಭಟ್ ಮತ್ತು ಸವಿತಾ ರವರಿಗೆ ಪುತ್ತೂರಿನ  ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


 ಕೆದಿಲ ಗ್ರಾಮದಲ್ಲಿ ಫೆಬ್ರವರಿ 11ರಂದು ಸಪ್ರಾಭಿ,ಅವರ ಪತಿ ಹೈದಾರಾಲಿ, ಕೆಲಸಗಾರರಾದ ಆಲಿ ಹೈದರ್, ನಿಜಮುದ್ದೀನ್  ಮತ್ತು ಹಬೀಬ್  ಮುಕ್ಸಿನ್ರೋ ಅವರೊಂದಿಗೆ  ಜಮೀನಿಗೆ ಬೇಲಿ ಹಾಕುತ್ತಿದ್ದಾಗ ಶಿವರಾಮ್ ಭಟ್ ಮತ್ತು ಸವಿತಾ ರವರು ತಕರಾರು ತೆಗೆದು, ಬೇಲಿಯನ್ನು ಕಿತ್ತು ಬಿಸಾಕಿರುತ್ತಾರೆ. ಈ ವೇಳೆ ಬೇಲಿಯ ಕಂಬದ ಕೆಲಸ ಮಾಡುತ್ತಿದ್ದ ಆಲಿ ಎಂಬವರಿಗೆ ತಾಗಿ ಗಾಯವಾಗಿತ್ತು. ಬಳಿಕ  ಆರೋಪಿಗಳು  ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಲ್ಲದೇ,ಅನುಚಿತವಾಗಿ  ವರ್ತಿಸಿ, ಜೀವ ಬೆದರಿಕೆ ಹಾಕಿರುತ್ತಾರೆಂದು  ಅವರುಗಳ ವಿರುದ್ಧ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನಂತರ ಪೊಲೀಸರು ತನಿಖೆ ನಡೆಸಿ, ಭಾರತೀಯ ದಂಡ ಸಂಹಿತೆಯ ಕಲಂ 324,354,504 ಮತ್ತು 34 ರನ್ವಯ ಪ್ರಕರಣವನ್ನು ದಾಖಲಿಸಿದ್ದರು.

         ಹೀಗಿರುವಾಗ,  ಆರೋಪಿಗಳು ತಮ್ಮ ಪರ ವಕೀಲರಾದ ಕಜೆ ಲಾ ಚೇಂಬರ್ಸ್ ನ  ಶ್ರೀ ಮಹೇಶ್ ಕಜೆ ಅವರ ಮುಖಾಂತರ  ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ ಎಂಬುವುದಕ್ಕೆ ಯಾವುದೇ ಪೂರಕವಾದ ಸಾಕ್ಷ್ಯಧಾರಗಳು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ, 

, ಸೂಕ್ತ ದಾಖಲೆಗಳು ಮತ್ತು ಸಾಕ್ಷ್ಯಧಾರಗಳ  ಕೊರತೆ, ಅವರೊಳಗಿನ ಜಾಗದ ವಿಚಾರದ  ಸಿವಿಲ್ ವ್ಯಾಜ್ಯಕ್ಕೆ ಕ್ರಿಮಿನಲ್ ಸ್ವರೂಪ ನೀಡಿರುವುದಾಗಿದೆ ಎಂಬಿತ್ಯಾದಿ  ಅಂಶಗಳನ್ನು ವಾದಿಸಿದ್ದರು. ಸರಕಾರಿ ಅಭಿಯೋಜಕರು ಜಾಮೀನು ಅರ್ಜಿಗೆ ಆಕ್ಷೇಪವನ್ನು ಸಲ್ಲಿಸಿದ್ದರು. ವಾದ -ವಿವಾದವನ್ನು ಆಲಿಸಿದ ಪುತ್ತೂರಿನ ಮಾನ್ಯ ಐದನೇ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆಯಾದ ಶ್ರೀಮತಿ ಸರಿತಾ. ಡಿ ರವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಬಂಟ್ವಾಳ: ಮೀನು ವ್ಯಾಪಾರದಲ್ಲಿ ನಷ್ಟ ಸಜೀಪ ಪಡು ನಿವಾಸಿ ಸನತ್ ಆತ್ಮಹತ್ಯೆ

Posted by Vidyamaana on 2023-10-24 06:41:54 |

Share: | | | | |


ಬಂಟ್ವಾಳ: ಮೀನು ವ್ಯಾಪಾರದಲ್ಲಿ ನಷ್ಟ   ಸಜೀಪ ಪಡು ನಿವಾಸಿ ಸನತ್ ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.


ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ.


ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.


ಅದಕ್ಕಾಗಿ ಟೆಂಪೋ ಕೂಡ ಮಾರಾಟ ಮಾಡಿದ್ದ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದು, ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ‌ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದ.


ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ರೂಮ್ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. 


ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದ್ರೀಸ್ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

Posted by Vidyamaana on 2023-04-05 08:26:14 |

Share: | | | | |


 ಇದ್ರೀಸ್ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

ಕನಕಪುರ: ಸಾತನೂರು ಸಮೀಪ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರನ್ನೊಳಗೊಂಡ ರಾಮನಗರ ಪೊಲೀಸರ ವಿಶೇಷ ತಂಡಗಳು ಇಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿವೆ.

ಕಳೆದ ಮಾ.31ರ ಮಧ್ಯರಾತ್ರಿ ಸಾತನೂರು ಪೊಲೀಸ್ ಠಾಣೆ ಮುಂಭಾಗ ಜಾನುವಾರುಗಳನ್ನು ತುಂಬಿದ್ದ ಕ್ಯಾಂಟರ್‌ ವಾಹನವನ್ನು ಅಡ್ಡಗಟ್ಟಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ, ಇತರೆ ನಾಲ್ವರು  ಆರೋಪಿಗಳೊಂದಿಗೆ ತಲೆಮರೆಸಿಕೊಂಡಿದ್ದ. ಏ.2 ರಾತ್ರಿ ವಿಡಿಯೊವೊಂದನ್ನು ಹರಿಬಿಟ್ಟಿದ್ದ ಪುನೀತ್‌, ‘ನಾನೇ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಹೇಳಿಕೊಂಡು  ನಾಪತ್ತೆ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ‌ ತಂಡಗಳು ಯಶಸ್ವಿಯಾಗಿವೆ.

ಇದ್ರೀಷ್ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ ಎಸ್‌ ಎಲ್) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ. ಕನಕಪುರದ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ ಎಸ್‌ ಎಲ್‌ ವರದಿಯನ್ನೂ ಪಡೆಯಲಾಗುತ್ತದೆ.

ಮೂರು ಎಫ್‌ಐಆರ್‌: ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ ಐಆರ್‌ ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದ. ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಕ್ಯಾಂಟರ್‌ ಚಾಲಕ ಪ್ರತಿ ದೂರು ನೀಡಿದ್ದರು. ಮರು ದಿನ ಬೆಳಿಗ್ಗೆ 8ರ ಸುಮಾರಿಗೆ ಘಟನೆ ನಡೆದ ಸ್ಥಳದ 100 ಮೀಟರ್‌ ದೂರದಲ್ಲಿ ಇದ್ರೀಷ್‌ ಅವರ ಶವ ಪತ್ತೆ ಆಗಿದ್ದು, ಅವರ ಸಹೋದರ ಯೂನುಸ್‌ ಪಾಷ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ ಐಆರ್‌ ದಾಖಲಿಸಿದ್ದೇವೆ ಎಂದು ಎಸ್ ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಇಂದು (ಸೆ 09) ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆ-: ಪುತ್ತೂರಿನಲ್ಲಿ 13ನೇ ವರ್ಷದ ಮೊಸರು ಕುಡಿಕೆ - ಶೋಭಾಯಾತ್ರೆ

Posted by Vidyamaana on 2023-09-09 10:48:09 |

Share: | | | | |


ಇಂದು (ಸೆ 09) ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆ-: ಪುತ್ತೂರಿನಲ್ಲಿ 13ನೇ ವರ್ಷದ ಮೊಸರು ಕುಡಿಕೆ - ಶೋಭಾಯಾತ್ರೆ

ಪುತ್ತೂರು: ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಸೆ.9ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 13ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ.ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಬೆಳಗ್ಗಿನಿಂದಲೇ ವಿವಿಧ ಆಟೋಟ ಸ್ಪರ್ಧೆ ನಡೆಯಲಿದ್ದು, ಸಂಜೆ ವೈಭವದ ಶೋಭಾಯಾತ್ರೆಯೊಂದಿಗೆ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಧಾರ್ಮಿಕ ಸಭೆಯು ನಡೆಯಲಿದೆ.ಶೋಭಾಯಾತ್ರೆ ಉದ್ಘಾಟನೆ:


ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯನ್ನು ಡಾ. ಎಂ.ಕೆ.ಪ್ರಸಾದ್ ಅವರು ಉದ್ಘಾಟಿಸಲಿದ್ದಾರೆ. ಬಜರಂಗದಳ ಮಂಗಳೂರು ವಿಭಾಗದ ಸಹ ಸಂಯೋಜಕ ಪುನಿತ್ ಅತ್ತಾವರ ಅವರು ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ದೊರಕಲಿದೆ. ಶೋಭಾಯಾತ್ರೆಯು ಬೊಳುವಾರು ಓಂ ಶ್ರೀ ಶಕ್ತಿ ಅಂಜನೇಯ ಮಂತ್ರಾಲಯದ ಬಳಿಯಿಂದ ಆರಂಭಂಗೊಂಡು ಮುಖ್ಯರಸ್ತೆಯಾಗಿ ಅಂಚೆಕಚೇರಿ ಬಳಿಯಿಂದ ದೇವಸ್ಥಾನದ ಗದ್ದೆಗೆ ಸಾಗಿ ಸಭಾ ಕಾರ್ಯಕ್ರಮ ಮುಗಿದ ಬಳಿಕ ಅದೇ ರಸ್ತೆಯಾಗಿ ಸಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಾದು ಕಲ್ಲಾರೆಯ ತನಕ ಸಾಗಿ ಅಲ್ಲಿಂದ ಹಿಂದಿರುಗಿ ಅರುಣಾ ಚಿತ್ರಮಂದಿರ ಬಳಿಯಿಂದ ಎಪಿಎಂಸಿ ರಸ್ತೆಯ ಮೂಲಕ ಆದರ್ಶ ಆಸ್ಪತ್ರೆಯ ಬಳಿಯಿಂದ ತೆರಳಿ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಸಮಾಪನೆಗೊಳ್ಳಲಿದೆ.ಧಾರ್ಮಿಕ ಸಭೆ:


ಸಂಜೆ ಬೊಳುವಾರಿನಿಂದ ಹೊರಟ ಶೋಭಾಯಾತ್ರೆಯು ದೇವಳದ ಗದ್ದೆಗೆ ಬಂದ ಬಳಿಕ ಧಾರ್ಮಿಕ ಸಭೆ ನಡೆಯಲಿದೆ. ವಿಶ್ವಹಿಂದೂ ಪರಿಷದ್‌ನ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ವಿಶ್ವಹಿಂದು ಪರಿಷದ್ ಪುತ್ತೂರು ಜಿಲ್ಲೆ ಕಾರ್ಯದರ್ಶಿ ನವೀನ್ ನೆರಿಯ, ನ್ಯಾಯವಾದಿ ಅರುಣ್‌ಶ್ಯಾಮ್, ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮೆಸ್ಕಾಂ ಮಾಜಿ ನಿರ್ದೇಶಕರಾಗಿರುವ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಟಿ ತಿಳಿಸಿದ್ದಾರೆ.ಸೆ.9ಕ್ಕೆ ವಿವಿಧ ಸ್ಪರ್ಧೆಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ ಗಂಟೆ 10 ರಿಂದ 11 ವರ್ಷದಿಂದ 16 ವರ್ಷದ ಒಳಗಿನ ಮಕ್ಕಳಿಗೆ ಭಾರತಮಾತೆಯ ಚಿತ್ರಬಿಡಿಸುವ, ಜಾನಪದ ಗೀತೆ, ಸ್ಮರಣಶಕ್ತಿ ಅಡ್ಡಕಂಬ, ಗುಂಡೆಸೆತ, ಮಡಿಕೆ ಒಡೆಯುವುದು, ದೇಶಭಕ್ತಿಗೀತೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಿಕೆ ಒಡೆಯುವುದು, ಸಂಗೀತ ಸ್ಪರ್ಧೆ, ರಂಗವಲ್ಲಿ, ಗುಂಡೆಸೆತ, ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿದೆ. ಪುರುಷರಿಗೆ ಉದ್ದಕಂಬ ಸ್ಪರ್ಧೆ ನಡೆಯಲಿದೆ.



Leave a Comment: