ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

Posted by Vidyamaana on 2024-04-06 09:46:16 |

Share: | | | | |


ಇನ್ಮುಂದೆ ಹುಡುಗಿಯ ವಿಷಯಕ್ಕೆ ಬಂದ್ರೆ ಕೆರಾಂದೆ ಬುಡ್ಪುಜಿ

ಪುತ್ತೂರು:ಯುವತಿಯೋರ್ವರನ್ನು ಪ್ರೀತಿಸುತ್ತಿದ್ದ ವಿಚಾರದಲ್ಲಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿ, ಜೀವಬೆದರಿಕೆಯೊಡ್ಡಿರುವ ಆರೋಪದ ಘಟನೆ ಕುರಿಯ ಮಲಾ‌ರ್ ಎಂಬಲ್ಲಿಂದ ವರದಿಯಾಗಿದೆ.

ಘಟನೆ ಕುರಿತು ಅಶ್ವಿತ್ ಕುಮಾರ್(24 ವ.)ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ತಾನು ಕುರಿಯ ಗ್ರಾಮದ ಮಲಾರ್ ಎಂಬಲ್ಲಿ ಕಟ್ಟಿಸಿದ ಹೊಸ ಮನೆಗೆ ಏ.3ರಂದು ಸಂಜೆ ನೀರು ಹಾಕುತ್ತಿದ್ದ ಸಮಯ ಪರಿಚಯದ ಸಚಿನ್ ಮುಕ್ವೆ ಎಂಬಾತ ಕರೆ ಮಾಡಿ.ನಿನ್ನಲ್ಲಿ ಮಾತನಾಡುವುದು ಇದೆ ಎಂದು ತಿಳಿಸಿದಾಗ, ತಾನು ಮಲಾರ್‌ನಲ್ಲಿದ್ದು, ದರ್ಬೆಗೆ ಬರುವುದಾಗಿ ತಿಳಿಸಿ, ಮಲಾರ್‌ನಿಂದ ತನ್ನ ಬೈಕ್‌ನಲ್ಲಿ ಹೊರಟು ಆರ್ಯಾಪು ಗ್ರಾಮದ ಕಲ್ಲರ್ಪೆಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ

ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

Posted by Vidyamaana on 2023-08-29 11:09:32 |

Share: | | | | |


ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.



ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ ಹಣ ಸಿಗಲಿದೆ.


ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.


ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ

Posted by Vidyamaana on 2023-12-27 13:57:43 |

Share: | | | | |


ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ

ಪುತ್ತೂರು: ರಾಜ್ಯದ ಎಂಟು ಉಪ ವಿಭಾಗಗಳಿಗೆ ನೂತನ ಸಹಾಯಕ ಆಯಕ್ತರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದ.ಕ. ಜಿಲ್ಲೆಯ ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ,  ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಸಹಾಯಕ ಆಯಕ್ತರಾಗಿ ನಾರ್ವಡೆ ವಿನಾಯಕ ಕರ್ಭರಿ ಅವರನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಹೊಸದಾಗಿ ನೇಮಕಗೊಂಡ ಎಲ್ಲಾ ಎಂಟು ಸಹಾಯಕ ಆಯುಕ್ತರು 2021ನೇ ಬ್ಯಾಚ್ ನ ಐಎಎಸ್‌ ಅಧಿಕಾರಿಗಳಾಗಿದ್ದಾರೆ.

ತುಮಕೂರಿನಲ್ಲಿ ಭೀಕರವಾಗಿ ಹತ್ಯೆಯಾದ ದುರ್ದೈವಿಗಳ ಮನೆಗಳಿಗೆ ಇನಾಯತ್ ಅಲಿ ಭೇಟಿ

Posted by Vidyamaana on 2024-03-24 21:08:22 |

Share: | | | | |


ತುಮಕೂರಿನಲ್ಲಿ ಭೀಕರವಾಗಿ ಹತ್ಯೆಯಾದ ದುರ್ದೈವಿಗಳ ಮನೆಗಳಿಗೆ ಇನಾಯತ್ ಅಲಿ ಭೇಟಿ

ಬೆಳ್ತಂಗಡಿ: ಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಇನಾಯತ್ ಅಲಿ, ಘಟನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿಯೂ ಮನವಿ ಮಾಡಿದ್ದೇನೆ. ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕಳೆದುಕೊಂಡು ತೀವ್ರ ಆಘಾತಕ್ಕೊಳಕ್ಕಾಗಿರುವ ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸುವಂತೆಯೂ ಮುಖ್ಯಮಂತ್ರಿಗಳಲ್ಲಿ ಕೋರಿದ್ದೇನೆಂದು ಎಂದು ತಿಳಿಸಿದ್ದಾರೆ.

ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿ : ಚುನಾವಣೆ ಘೋಷಣೆ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಗೊತ್ತಾ?

Posted by Vidyamaana on 2024-03-16 17:11:08 |

Share: | | | | |


ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿ : ಚುನಾವಣೆ ಘೋಷಣೆ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಗೊತ್ತಾ?

ನವದೆಹಲಿ(ಮಾ.16): 2024ರ ಲೋಕಸಭಾ ಚುನಾವಣೆಗೆ(Lok Sabha Election 2024) ಇಂದು ದಿನಾಂಕ ನಿಗದಿಯಾಗಿದೆ. ಭಾರತದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ(Seven Phase) ಚುನಾವಣೆ ನಡೆಯಲಿದೆ. ಏಪ್ರಿಲ್ 19ರಿಂದ ಮತದಾನ(Voting) ಆರಂಭವಾಗಲಿದ್ದು, ಜೂನ್ 1ಕ್ಕೆ ಮುಕ್ತಾಯಗೊಳ್ಳಲಿದೆ.ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7 ರಂದು 2ನೇ ಹಂತದ ಚುನಾವಣೆ ನಡೆಯಲಿದೆ.


ಇಂದು ಬಹು ನಿರೀಕ್ಷಿತ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಜೊತೆಗೆ ಇಂದಿನಿಂದಲೇ ದೇಶಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದಕ್ಕೂ ಮುನ್ನ ನಾವೆಲ್ಲರೂ ತಿಳಿದುಕೊಳ್ಳಬೇಕಾದ ಬಹುಮುಖ್ಯ ವಿಷಯವೊಂದಿದೆ. ಅದೇನೆಂದರೆ, ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಹೇರಲಾಗುತ್ತದೆ ಎಂಬುದು

ಮಾದರಿ ನೀತಿ ಸಂಹಿತೆ ಎಂದರೇನು?

ಮಾದರಿ ನೀತಿ ಸಂಹಿತೆಯು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಪ್ರಚಾರದಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮಾರ್ಗಸೂಚಿಗಳ ಗುಂಪನ್ನು ಉಲ್ಲೇಖಿಸುತ್ತದೆ. ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪಕ್ಷ ಅಥವಾ ಅಭ್ಯರ್ಥಿಯನ್ನು ಕಂಡುಹಿಡಿದರೆ, ನೈತಿಕ ಮಾನದಂಡಗಳು ಮತ್ತು ಸೂಕ್ತ ನಡವಳಿಕೆಯನ್ನು ಕಾಪಾಡಿಕೊಳ್ಳಲು ಸಂಬಂಧಿಸಿದ ಪಕ್ಷ ಅಥವಾ ಅಭ್ಯರ್ಥಿಯ ವಿರುದ್ಧ ಎಫ್‌ಐಆರ್‌ಗೆ ಆದೇಶ ನೀಡುವ ಎಚ್ಚರಿಕೆಯನ್ನು ನೀಡುವ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಬಹುದು. ಚುನಾವಣಾ ಆಯೋಗದ ಪ್ರಕಾರ, "ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷವು ತನ್ನ ಅಧಿಕೃತ ಸ್ಥಾನವನ್ನು ಪ್ರಚಾರಕ್ಕಾಗಿ ಬಳಸದಂತೆ ನೋಡಿಕೊಳ್ಳಬೇಕು ಎಂದು MCC ಹೇಳುತ್ತದೆ"

1)ಚುನಾವಣೆ ಘೋಷಣೆಯಾದ ನಂತರ, ಸಚಿವರು ಮತ್ತು ಇತರ ಅಧಿಕಾರಿಗಳು ಯಾವುದೇ ಹಣಕಾಸಿನ ಅನುದಾನವನ್ನು ಘೋಷಿಸುವುದನ್ನು ಅಥವಾ ಅದರ ಭರವಸೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಸಮಿತಿಯ ಮಾರ್ಗಸೂಚಿಗಳು ಹೇಳುತ್ತವೆ.

2. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ, ನಾಗರಿಕರನ್ನು ಹೊರತುಪಡಿಸಿ, ಸಚಿವರು ಅಥವಾ ಇತರೆ ಅಧಿಕಾರಿಗಳು ಯಾವುದೇ ರೀತಿಯ ಯೋಜನೆಗಳು ಅಥವಾ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವುದು ಅಥವಾ ಪ್ರಾರಂಭಿಸುವುದನ್ನು ನಿರ್ಬಂಧಿಸಲಾಗಿದೆ.


3. ಅಧಿಕಾರದಲ್ಲಿರುವ ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಯೋಜನೆಯನ್ನು ಘೋಷಿಸುವಂತಿಲ್ಲ. ಪ್ರಚಾರದ ಉದ್ದೇಶಗಳಿಗಾಗಿ ಮಂತ್ರಿಗಳು ಅಧಿಕೃತ ಯಂತ್ರೋಪಕರಣಗಳನ್ನು ಬಳಸುವಂತಿಲ್ಲ.

4.ಮಾದರಿ ನೀತಿ ಸಂಹಿತೆಯ ಜಾರಿಯ ನಂತರ, ಅಧಿಕೃತ ಭೇಟಿಗಳನ್ನು ಯಾವುದೇ ಚುನಾವಣಾ ಚಟುವಟಿಕೆಗಳೊಂದಿಗೆ ಸಂಯೋಜಿಸಲಾಗುವುದಿಲ್ಲ. ಇದಲ್ಲದೆ, ಚುನಾವಣಾ ಉದ್ದೇಶಗಳಿಗಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

5 ಚುನಾವಣೆ ಘೋಷಣೆಯಾದ ನಂತರ ಸಚಿವರು ಮತ್ತು ಇತರ ಅಧಿಕಾರಿಗಳು ವಿವೇಚನಾ ನಿಧಿಯಿಂದ ಅನುದಾನ ಅಥವಾ ಪಾವತಿಗಳನ್ನು ಮಂಜೂರು ಮಾಡುವಂತಿಲ್ಲ.

6 ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಇಸಿಐ(ECI) ಮಾರ್ಗಸೂಚಿಗಳು ಹೇಳುತ್ತವೆ.

7)ಸರ್ಕಾರಿ ವಸತಿಗಳನ್ನು ಚುನಾವಣಾ ಪ್ರಚಾರ ಕಚೇರಿಗಳಾಗಿ ಬಳಸಿಕೊಳ್ಳುವಂತಿಲ್ಲ. ಯಾವುದೇ ಪಕ್ಷದಿಂದ ಚುನಾವಣಾ ಪ್ರಚಾರಕ್ಕಾಗಿ ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳುತ್ತದೆ.

8.ಭಾರತೀಯ ಚುನಾವಣಾ ಆಯೋಗ (ಇಸಿಐ) ಚುನಾವಣಾ ಅವಧಿಯಲ್ಲಿ ಪತ್ರಿಕೆಗಳು ಮತ್ತು ಇತರ ಮಾಧ್ಯಮಗಳಲ್ಲಿ ಸಾರ್ವಜನಿಕ ಖಜಾನೆಯ ವೆಚ್ಚದಲ್ಲಿ ಜಾಹೀರಾತುಗಳನ್ನು ನೀಡುವುದನ್ನು ನಿಷೇಧಿಸುತ್ತದೆ.

9. ರಾಜಕೀಯ ಸುದ್ದಿಗಳ ಪಕ್ಷಪಾತದ ಪ್ರಸಾರಕ್ಕಾಗಿ, ಅಧಿಕೃತ ಸಮೂಹ ಮಾಧ್ಯಮಗಳ ದುರುಪಯೋಗ ಮತ್ತು ಆಡಳಿತ ಪಕ್ಷದ ಪರವಾಗಿ ಸಾಧನೆಗಳ ಬಗ್ಗೆ ಪ್ರಚಾರವನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಚುನಾವಣಾ ಸಮಿತಿಯ ಮಾರ್ಗಸೂಚಿಗಳು ಹೇಳುತ್ತವೆ.

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

Posted by Vidyamaana on 2023-12-02 12:05:19 |

Share: | | | | |


ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ಪ್ರಕರಣ ದಾಖಲು

ಗಂಗಾವತಿ: ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಯುವಕರ ಗುಂಪೊಂದು ಮುಸ್ಲಿಂ ಅಂಧ ವೃದ್ಧನಿಗೆ ಥಳಿಸಿದ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮಹೆಬೂಬನಗರದ ನಿವಾಸಿ ಹುಸೇನಸಾಬ್​ (70) ಎಂಬುವರ ಮೇಲೆ ನವೆಂಬರ್​ 20ರಂದು ಹಲ್ಲೆ ನಡೆದಿದೆ. ಗಂಗಾವತಿಯ ಜಯನಗರದ ಬೈಪಾಸ್ ರಸ್ತೆಯಲ್ಲಿ ನಡೆದು ಹೋಗುತ್ತಿರುವಾಗ ಯುವಕರ ಗುಂಪೊಂದು ತಮ್ಮನ್ನು ಅಡ್ಡಗಟ್ಟಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದೆ. ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದ್ದಾರೆ. ಜೊತೆಗೆ ಗಡ್ಡಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದು, ಬಳಿಕ ತಮ್ಮ ಬಳಿಯಿದ್ದ ಹಣವನ್ನೂ ದೋಚಿಕೊಂಡು ಹೋಗಿದ್ದಾರೆ. ಸಮಯಕ್ಕೆ ಸರಿಯಾಗಿ ಸಮೀಪದಲ್ಲಿದ್ದ ಕುರಿಗಾಹಿ ಯುವಕರು ಸ್ಥಳಕ್ಕೆ ಆಗಮಿಸಿ ತಮ್ಮನ್ನು ರಕ್ಷಣೆ ಮಾಡಿದ್ದಾರೆ ಎಂದು ವೃದ್ಧ ದೂರಿನಲ್ಲಿ ತಿಳಿಸಿದ್ದಾರೆ.


ಜೊತೆಗೆ ವೃದ್ಧನಿಗೆ ಕೀಟಲೆ ಮಾಡಿದ ಅಪರಿಚಿತ ಯುವಕರು ಗುಂಪು ಬೆದರಿಕೆ ಹಾಕಿದ್ದರು. ಹೀಗಾಗಿ ಅವರು ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲ್ಲ ಎನ್ನಲಾಗಿದೆ. ಬಳಿಕ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಕೆಲವರು ಗಂಗಾವತಿಯ ಕೆಲ ಯುವಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಯುವಕರು ವೃದ್ಧನನ್ನು ಹುಡುಕಿ ಘಟನೆಯ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಅಲ್ಲದೇ ಮಾನಸಿಕವಾಗಿ ಕುಗ್ಗಿದ್ದ ವೃದ್ಧನಿಗೆ ಸಮಾಧಾನ ಹೇಳಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಬಂಧನಕ್ಕೆ ಒತ್ತಾಯ: ಘಟನೆ ನಡೆದು ಹತ್ತು ದಿನ ಕಳೆದಿದೆ. ಪ್ರಕರಣ ದಾಖಲಾಗಿ ಒಂದು ವಾರ ಕಳೆದಿದೆ. ಆದರೆ ಇದುವರೆಗೂ ಪೊಲೀಸರು ಆರೋಪಿಗಳ ಪತ್ತೆ ಮಾಡಿಲ್ಲ. ಕೂಡಲೇ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಸ್ಟೂಡೆಂಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಸಲೀಂ ಮನಿಯಾರ ಒತ್ತಾಯಿಸಿದ್ದಾರೆ. ಗಂಗಾವತಿಯಲ್ಲಿ ಎಲ್ಲರೂ ಸಹ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇಂತಹ ಘಟನೆಗಳಿಂದ ಸಮಾಜದ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಕೂಡಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಸಲೀಂ ಒತ್ತಾಯಿಸಿದ್ದಾರೆ.

Recent News


Leave a Comment: