ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

Posted by Vidyamaana on 2023-09-13 16:21:22 |

Share: | | | | |


ವಿಟ್ಲ:ಸಹೋದರಿಬ್ಬರು ವಿಷ ಸೇವನೆ -ಗಂಭೀರ

ವಿಟ್ಲ: ಕುದ್ದುಪದವು ನಿವಾಸಿ ಸಹೋದರರಿಬ್ಬರು

ವಿಷ ಸೇವನೆ ಮಾಡಿ ಗಂಭೀರವಾಗಿ ಅಸ್ವಸ್ಥಗೊಂಡು ವಿಟ್ಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದವರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬಳಿಕ ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

Posted by Vidyamaana on 2024-04-20 20:48:45 |

Share: | | | | |


ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

ಪುತ್ತೂರು:  ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಎ.೨೧ರಿಂದ ೨೮ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ಎ.೨೧ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಪಾಕ ಶಾಲೆ ಉದ್ಘಾಟನೆ, ಲಾಕರ್ ಉದ್ಘಾಟನೆ, ಕಾರ್ಯಾಲಯ ಉದ್ಘಾಟನೆ, ಅತಿಥಿ ಕೊಠಡಿ ಉದ್ಘಾಟನೆ, ಮುಖ್ಯ ವೇದಿಕೆ ಉದ್ಘಾಟನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಕ್ಷೇತ್ರದ ತಂತ್ರಿಗಳು ಹಾಗೂ ಋತ್ವಿಜರಿಗೆ ಸ್ವಾಗತ, ನಂತರ ದೇವತಾ ಪ್ರಾರ್ಥನೆಯೊಂದಿಗೆ ವಿವಿಧ ವೈದಿಕ ತಾಂತ್ರಿಕ ವಿಧಿ ವಿಧಾನಗಳು ಪ್ರಾರಂಭಗೊಳ್ಳಲಿದೆ.

ಧಾರ್ಮಿಕ ಉಪನ್ಯಾಸಗಳು

ಎ.೨೧ ರಂದು ಸಂಜೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಎ.೨೨ ರಂದು ಸಂಜೆ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಎ.೨೩ ರಂದು ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಸ್ವಾಮೀಜಿಯವರು, ಎ.೨೪ ರಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಎ.೨೫ ರಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಗಣ್ಯರ ಉಪಸ್ಥಿತಿಯಲ್ಲಿ ಆಶೀರ್ವಚನ ನೀಡಲಿದ್ದಾರೆ. ಎ.೨೬ ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕೆಮ್ಮಿ೦ಜೆ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಡಿ. ೨೦-೨೫ರಂದು ಅಮರ್ ಅಕ್ಬರ್ ಅಂತೋನಿ ಕ್ರಿಕೆಟ್ ಪಂದ್ಯಾಟ

Posted by Vidyamaana on 2022-12-15 10:50:42 |

Share: | | | | |


ಡಿ. ೨೦-೨೫ರಂದು ಅಮರ್ ಅಕ್ಬರ್ ಅಂತೋನಿ ಕ್ರಿಕೆಟ್ ಪಂದ್ಯಾಟ

ಪುತ್ತೂರು: ೧೨ನೇ ವರ್ಷದ ಅಮರ್ ಅಕ್ಬರ್ ಅಂತೋನಿ ಸೌಹಾರ್ಧ ಕ್ರಿಕೆಟ್ ಪಂದ್ಯಾಟವು ಡಿ. ೨೦ರಿಂದ ೨೬ರತನಕ ೬ ದಿನಗಳ ಕಾಲ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪಂದ್ಯಾಟದ ಸಂಚಾಲಕ ರಝಾಕ್ ಬಪ್ಪಳಿಗೆ ತಿಳಿಸಿದ್ದಾರೆ. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಟಿ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಪುತ್ತೂರು, ಟೆನ್ ಗೈಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಅಬುದಾಬಿ, ಕ್ಲಾಸಿಕ್ ಫ್ರೆಂಡ್ಸ್ ಪುತ್ತೂರು ಮತ್ತು ಸೌದಿ ಆರೇಬಿಯಾ ಇವುಗಳ ಸಹಯೋಗದಲ್ಲಿ ಈ ಪಂದ್ಯಾಟ ನಡೆಯಲಿದೆ. ಯುವ ಸಮುದಾಯದಲ್ಲಿ ಶಾಂತಿ ಮತ್ತು ಸೌಹಾರ್ಧತೆ ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕ್ರಿಕೆಟ್ ಪಂದ್ಯಾಟವು ೬ ದಿನಗಳ ಕಾಲ ಅಹೋರಾತ್ರಿ ನಡೆಯಲಿದ್ದು, ಸುಮಾರು ೧೬೦ ತಂಡಗಳು ಭಾಗವಹಿಸಲು ಈಗಾಗಲೇ ನೋಂದಾವಣೆ ಮಾಡಿಕೊಂಡಿದೆ. `ಅಮರ್ ಅಕ್ಬರ್ ಅಂತೋನಿ ಟ್ರೋಫಿ ಪಂದ್ಯಾಟದ ಜೊತೆಗೆ ಈ ಬಾರಿ ವಿಶೇಷವಾಗಿ ದಿ. ಗಣಪತಿ ನಾಯಕ್ ಅವರ ಸ್ಮರಣಾರ್ಥ ೧೪ರಿಂದ ೧೬ ವರ್ಷದ ಬಾಲಕರಿಗೆ `ಸ್ಟಿಚ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ನಡೆಸಲಾಗುತ್ತಿದೆ. ಇದರೊಂದಿಗೆ ಎನ್.ಎಸ್. ಕಿಲ್ಲೆ ಅವರ ಸ್ಮರಣಾರ್ಥ `ಕಿಲ್ಲೆ ಕಪ್ ಪಂದ್ಯಾಟ ಜರಗಲಿದೆ. ಹಳ್ಳಿಯ ಯುವಕರಿಗೆ ಪ್ರೇರಣೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ `ಹಳ್ಳಿ ಹುಡುಗ್ರು ಪ್ಯಾಟೆ ಕಪ್ ಮತ್ತು ವಿವಿಧ ಇಲಾಖೆಗಳ ಪಂದ್ಯಾಟಗಳು ಹಮ್ಮಿಕೊಳ್ಳಲಾಗಿದೆ ಎಂದರು.

ಸಾಧಕ ಯುವಕರಾಗಿರುವ ಭರತ್ ಪ್ರಿಂರ‍್ಸ್ ಮಾಲಕ ಭರತ್ ಸಾಮೆತ್ತಡ್ಕ ಅವರು ಪಂದ್ಯಾಟವನ್ನು ದ. ೨೦ರಂದು ರಾತ್ರಿ ೭ ಗಂಟೆಗೆ ಉದ್ಘಾಟಿಸಲಿದ್ದಾರೆ. ಎನ್.ಎಸ್.ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್ ರೈ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ರಾಜ್ಯ ಧಾರ್ಮಿಕ ಪರಿಷತ್‌ನ ಮಾಜಿ ಸದಸ್ಯ ಎನ್.ಕೆ. ಜಗನ್ನಿವಾಸ್ ರಾವ್ ಪುತ್ತೂರು ಮಾಯ್ದೇ ದೇವುಸ್ ಚರ್ಚ್ನ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಪುತ್ತೂರು ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಪುತ್ತೂರಿನ ೧೫೦ ವಿದ್ಯುತ್ ಲೈನ್‌ಮೆನ್‌ಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಕಾಮತ್, ಉರೈಸ್ ಪುತ್ತೂರು, ಅರುಣ್ ಕುಮಾರ್, ರೋಶನ್ ಡಿಸೋಜ ಉರ್ಲಾಂಡಿ ಉಪಸ್ಥಿತರಿದ್ದರು.

ಪವಿತ್ರ ಕಅಬಾದಲ್ಲಿ ಭಾರತ್ ಜೋಡೋ ಯಾತ್ರೆಯ ಫಲಕ ಪ್ರದರ್ಶನ: ಯೂತ್ ಕಾಂಗ್ರೆಸ್ ಕಾರ್ಯಕರ್ತನ ಬಂಧನ

Posted by Vidyamaana on 2023-02-07 13:48:38 |

Share: | | | | |


ಪವಿತ್ರ ಕಅಬಾದಲ್ಲಿ ಭಾರತ್ ಜೋಡೋ ಯಾತ್ರೆಯ ಫಲಕ ಪ್ರದರ್ಶನ: ಯೂತ್ ಕಾಂಗ್ರೆಸ್ ಕಾರ್ಯಕರ್ತನ ಬಂಧನ

ಜಿದ್ದಾ: ಯುವ ಕಾಂಗ್ರೆಸ್ ಕಾರ್ಯಕರ್ತನೋರ್ವ ಸೌದಿ ಅರೇಬಿಯಾದ ಪವಿತ್ರ ಕಅಬಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸುವ ಫಲಕವನ್ನು ಹಿಡಿದಿದ್ದಕ್ಕಾಗಿ ಆತನನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಧ್ಯಪ್ರದೇಶದ ಝಾನ್ಸಿ ಬಳಿಯ ನಿವಾರಿ ಜಿಲ್ಲೆಯ ನಿವಾಸಿ ರಝಾ ಖಾದ್ರಿ (26) ಅವರನ್ನು ಮಕ್ಕಾದಲ್ಲಿನ ಪವಿತ್ರ ಕಾಬಾದಲ್ಲಿ ಫಲಕವನ್ನು ಪ್ರದರ್ಶಿಸಿದ್ದಕ್ಕಾಗಿ ಬಂಧಿಸಲಾಗಿದೆ.ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸುವ ಫಲಕವನ್ನು ಹಿಡಿದಿರುವ ಛಾಯಾಚಿತ್ರವನ್ನೂ ಅವರು ತೆಗೆದುಕೊಂಡಿದ್ದರು. ಎರಡು ದಿನಗಳ ನಂತರ, ಮಧ್ಯಪ್ರದೇಶದ ಇತರ ಯಾತ್ರಾರ್ಥಿಗಳೊಂದಿಗೆ ತಂಗಿದ್ದ ಹೋಟೆಲ್ ನಲ್ಲಿ ಅವರನ್ನು ಸೌದಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇಸ್ಲಾಮಿಕ್ ಪವಿತ್ರ ಸ್ಥಳಗಳು ಸೇರಿದಂತೆ ಸೌದಿ ಅರೇಬಿಯಾದಲ್ಲಿ ಯಾವುದೇ ರೀತಿಯ ಧ್ವಜ ಮತ್ತು ಫಲಕವನ್ನು ಪ್ರದರ್ಶಿಸುವುದು ಕಾನೂನುಬಾಹಿರವಾಗಿದೆ.

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಯತ್ನ

Posted by Vidyamaana on 2023-10-14 16:08:14 |

Share: | | | | |


ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಯತ್ನ

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ಚಿಂತಕ ಪ್ರೊ.ಭಗವಾನ್ ನಿವಾಸಕ್ಕೆ ಮುತ್ತಿಗೆ‌ ಹಾಕಲು ಯತ್ನಿಸಿದರು.


ಮಹಿಷಾ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರೊ.ಭಗವಾನ್, ‘ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳೆಂದು ಕುವೆಂಪು ಹೇಳಿದ್ದರು’ ಎಂದು ಹೇಳಿಕೆ ನೀಡಿದ್ದರು.


ಈ ಹೇಳಿಕೆಯಿಂದ ಆಕ್ರೋಶಗೊಂಡ ಮೈಸೂರು ಚಾಮರಾಜನಗರ ಒಕ್ಕಲಿಗರ ಸಂಘದ ಸದಸ್ಯರು ನಗರದ ಕುವೆಂಪು ನಗರದಲ್ಲಿರುವ ಅವರ ಮನೆ ಮುತ್ತಿಗೆಗೆ ಯತ್ನಿಸಿದರು. ಏಕಾಏಕಿ ಓಳನುಗ್ಗಲು ಪ್ರಯತ್ನಿಸಿದಾಗ ಪೊಲೀಸರು ತಡೆದರು. ಎಳೆದಾಟದಲ್ಲಿ ಗಿರೀಶ್ ಅವರಿಗೆ ಮುಖಕ್ಕೆ ಪೆಟ್ಟು ಬಿದ್ದು ರಕ್ತ ಹೊರಬಂತು. ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ, ಧಿಕ್ಕಾರ ಕೂಗಿದರು.


‘ಸಂಸ್ಕೃತಿ ಯಾವುದೆಂದು ಭಗವಾನ್‌ ಅವರು ಒಕ್ಕಲಿಗರಿಗೆ ತಿಳಿಸಲಿ, ಪಾಠ ಕಲಿಯುತ್ತೇವೆ. ಅವರ ಭೇಟಿಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಅವರನ್ನು ಗಡಿಪಾರು ಮಾಡಿ’ ಎಂದು ಪಟ್ಟು ಹಿಡಿದರು. ‘ಷರತ್ತಬದ್ಧ ಅನುಮತಿ ಇದ್ದರೂ ಪ್ರಚೋದನಕಾರಿ ಭಾಷಣ ಮಾಡಿದ್ದರ ವಿರುದ್ಧ, ಮೆರವಣಿಗೆ ನಡೆಸಿದ್ದರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ’ ಎಂದು ಪ್ರಶ್ನಿಸಿದರು. ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಿ ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಎಳ್ಳುನೀರು ಬಿಟ್ಟು ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಪೊಲೀಸರು ಉದಯರವಿ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ, ವಾಹನ ಸಂಚಾರ ನಿರ್ಬಂಧಿಸಿದರು.

ಮನೆಗೆ ನುಗ್ಗಲು ಯತ್ನಿಸಿದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೆ.ವಿ.ಶ್ರೀಧರ್, ಮೈಸೂರು- ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಗಿರೀಶ್, ಚೇತನ್, ಮುಖಂಡರಾದ ಸತೀಶ್ ಗೌಡ, ಸ್ವರೂಪ್ ಹಾಗೂ ಬೆಂಬಲಿಗರನ್ನು ಬಂಧಿಸಿ ಕರೆದೊಯ್ದರು. ಪರಿಸ್ಥಿತಿ ತಿಳಿಯಾದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಗರ ಪೊಲೀಸರು ಹಾಗೂ ರಾಜ್ಯ ಮೀಸಲು ಪಡೆ ಪೊಲೀಸರನ್ನು ಮನೆಯ ಸುತ್ತ ಭದ್ರತೆಗಾಗಿ ನಿಯೋಜಿಸಲಾಗಿದೆ.

ಬಿಯರ್ ರೇಟ್ ಏರಿಕೆ – ಯಾವ ಬ್ರ್ಯಾಂಡಿಗೆ ಎಷ್ಟು ಹೆಚ್ಚಾಯ್ತು?

Posted by Vidyamaana on 2024-02-02 12:12:35 |

Share: | | | | |


ಬಿಯರ್ ರೇಟ್ ಏರಿಕೆ – ಯಾವ ಬ್ರ್ಯಾಂಡಿಗೆ ಎಷ್ಟು ಹೆಚ್ಚಾಯ್ತು?

ಬೆಂಗಳೂರು: ರಾಜ್ಯ ಬಜೆಟ್​ಗೂ ಮೊದಲೇ ಸರ್ಕಾರ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಬಿಗ್ ಶಾಕ್ ನೀಡಿದ್ದು, ಮತ್ತೆ ಬಿಯರ್​ ಬೆಲೆ ಏರಿಕೆಯಾಗಿದೆ.


ಹೌದು, ಸರ್ಕಾರ ಬಿಯ‌ರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.185 ರಿಂದ ಶೇ. 195 ಕ್ಕೆ ಹೆಚ್ಚಳ ಮಾಡಿರುವುದರಿಂದ ಬಿಯರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಗುರುವಾರದಿಂದ (ಫೆ.1) ಪ್ರತಿ ಬಾಟಲ್ ಗೆ 5 ರಿಂದ 12 ರೂ. ವರೆಗೆ ಹೆಚ್ಚಳವಾಗಿದೆ.


ಬ್ರಾಂಡ್‌ಗಳ ಆಧಾರದ ಮೇಲೆ ದರ ಏರಿಕೆಯಾಗಲಿದೆ. ಸಾಮಾನ್ಯ ಬ್ರಾಂಡ್ ಗಳಿಂದ ಪ್ರೀಮಿಯಂ ಬ್ರಾಂಡ್ ಗಳವರೆಗೆ ಎಲ್ಲಾ ಬಗೆಯ ಬಿಯರ್ ಗಳ ದರದಲ್ಲಿ ಹೆಚ್ಚಳವಾಗಲಿದೆ.


ಬಿಯರ್ ಪ್ರಿಯರಿಗೆ ಹೊಸ ರೇಟ್


1. KF ಪ್ರಿಮಿಯಂ

ಹಿಂದಿನ ದರ ₹ 175

ಹೊಸ ದರ ₹185


2. ಕೆಎಫ್ ಸ್ಟ್ರಾಂಗ್

ಹಿಂದಿನ ದರ ₹ 180

ಹೊಸ ದರ ₹190


3. ಟ್ಯೂಬರ್ಗ್

ಹಿಂದಿನ ದರ ₹ 180

ಹೊಸ ದರ ₹190


4. ಬಡ್ ವೈಸರ್

ಹಿಂದಿನ ದರ ₹230

ಹೊಸ ದರ ₹240


5. ಕಾರ್ಲ್ಸ್ ಬರ್ಗ್

ಹಿಂದಿನ ದರ ₹230

ಹೊಸ ದರ ₹240


6. UB ಸ್ಟ್ರಾಂಗ್

ಹಿಂದಿನ ದರ ₹140

ಹೊಸ ದರ ₹150


7. KF ಸ್ಟಾರ್ಮ್

ಹಿಂದಿನ ದರ ₹175

ಹೊಸ‌ ದರ ₹195


8. ಹೆನಿಕೇನ್

ಹಿಂದಿನ ದರ ₹225

ಹೊಸ ದರ ₹240


9. ಆಯಮ್‌ಸ್ಟೆಲ್

ಹಿಂದಿನ ದರ ₹225

ಹೊಸ ದರ ₹240


10. ಪವರ್ ಕೂಲ್

ಹಿಂದಿನ ದರ ₹110

ಹೊಸ ದರ ₹130


ಮೇ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಚುನಾವಣೆ ಗೆದ್ದ ನಂತರ ಜುಲೈ 7 ರಂದು ಮಂಡಿಸಿದ ಮೊದಲ ಬಜೆಟ್ ನಲ್ಲಿ ಸಿದ್ದರಾಮಯ್ಯ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 20 ರಷ್ಟು ಹೆಚ್ಚಿಸಿತ್ತು. ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇದರ ನಂತರ ಇತರ ಮದ್ಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಬಹುದಾದ ಸಾಧ್ಯತೆಯಿದೆ



Leave a Comment: