ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಪುತ್ತೂರು: ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

Posted by Vidyamaana on 2023-04-12 13:51:58 |

Share: | | | | |


ಪುತ್ತೂರು: ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಧಾನ ಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪುತ್ತಿಲ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಹಿನ್ನೆಲೆ ಕೊಟೇಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.ಸಭೆಗೆ ನೂರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದು, ಕೊಟೇಚಾ ಹಾಲ್ ನ ಹೊರಗೆ ಹಾಗೂ ಒಳಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ

ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿತನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ.ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು, ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರುಟಿಕೆಟ್ ಸಿಗದ ಹಿನ್ನೆಲೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗುತ್ತಿದ್ದು, ಮುಂದಿನ ನಡೆ ಯಾವ ರೀತಿಯಾಗಿದೆ ಎಂದು ಕಾದು ನೋಡಬೇಕಿದೆ.

ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಸಿಎಂ ಅಧಿಕೃತ ಚಾಲನೆ

Posted by Vidyamaana on 2023-07-10 13:41:33 |

Share: | | | | |


ಹೆಚ್ಚುವರಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಸಿಎಂ ಅಧಿಕೃತ ಚಾಲನೆ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.

ಇಂದು  ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆವಿಶೇಷ ಅಂದರೆ ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಿಸುತ್ತಿದೆ.

2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ.ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ. ಈ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಪುತ್ತೂರು ನಗರ ಠಾಣಾ ಇನ್ಸ್‌‌ಪೆಕ್ಟರ್‌ ಸುನಿಲ್ ಕುಮಾರ್ ಸಹಿತ 132 ಮಂದಿ‌ ಪೊಲೀಸ್ ಇನ್ಸ್‌‌ಪೆಕ್ಟರ್‌ಗಳ ವರ್ಗಾವಣೆ

Posted by Vidyamaana on 2024-01-30 10:03:18 |

Share: | | | | |


ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಪುತ್ತೂರು ನಗರ ಠಾಣಾ ಇನ್ಸ್‌‌ಪೆಕ್ಟರ್‌ ಸುನಿಲ್ ಕುಮಾರ್ ಸಹಿತ 132 ಮಂದಿ‌ ಪೊಲೀಸ್ ಇನ್ಸ್‌‌ಪೆಕ್ಟರ್‌ಗಳ ವರ್ಗಾವಣೆ

ಪುತ್ತೂರು :ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಬರೋಬ್ಬರಿ 132 ಪೊಲೀಸ್‌ ಇನ್ಸ್‌‌ಪೆಕ್ಟರ್‌ (ಸಿವಿಲ್)‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


ಪುತ್ತೂರು ನಗರ ಠಾಣಾ ಇನ್ಸೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಸುನಿಲ್ ಕುಮಾರ್ ಎಂ ಎಸ್ ಅವರನ್ನು ವರ್ಗಾವಣೆ ಮಾಡಿ  ಪುತ್ತೂರು ಮಹಿಳಾ ಠಾಣಾ ಇನ್ಸೆಕ್ಟರ್ ಆಗಿ ನೇಮಕಗೊಳಿಸಿ ಆದೇಶಿಸಲಾಗಿದೆ.



ಪೊಲೀಸ್‌ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್‌ ಇನ್ಸ್‌ ಪೆಕ್ಟರ್‌‌ಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ

ಮಂಗಳೂರು; ಉಳ್ಳಾಲದಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Posted by Vidyamaana on 2023-08-29 01:48:42 |

Share: | | | | |


ಮಂಗಳೂರು; ಉಳ್ಳಾಲದಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

ಮಂಗಳೂರು; ಕೆರೆಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಉಳ್ಳಾಲದ ತಲಪಾಡಿಯಲ್ಲಿ ನಡೆದಿದೆ.ದುರ್ಗಿಪಳ್ಳ ನಿವಾಸಿ ಹರೀಶ ಯಾನೆ ಹರಿ ಪ್ರಸಾದ್ ಆಚಾರ್ಯ (36) ದುರ್ದೈವಿ.ಅವಿವಾಹಿತರಾಗಿದ್ದ ಹರಿಪ್ರಸಾದ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತ ಚಟ ಹೊಂದಿದ್ದರಂತೆ.ಕಳೆದ ನಾಲ್ಕು ದಿವಸಗಳಿಂದ ಮನೆಗೂ ಹೋಗಿರಲಿಲ್ಲ ಎನ್ನಲಾಗಿದೆ.ಹರಿಪ್ರಸಾದ್ ಯುವರಾಜ್ ಯಾನೆ ಮುನ್ನ ಲೋಹಿತ್, ನವೀನ್ ದೇವಾಡಿಗ, ನಿತೇಶ್ ಉಚ್ಚಿಲ್ ಎಂಬವರೊಂದಿಗೆ ಸಮೀಪದ ಖಾಸಗಿ ಲೇ ಔಟ್ ನಲ್ಲಿರುವ ಕೆರೆಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಅಕಸ್ಮತ್ ಆಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

ವಿಟ್ಲ: ಅನುಮಾನಾಸ್ಪದವಾಗಿ ಬೈಕ್ ನಲ್ಲಿ ಯುವಕರ ಸುತ್ತಾಟ

Posted by Vidyamaana on 2023-12-04 05:11:31 |

Share: | | | | |


ವಿಟ್ಲ: ಅನುಮಾನಾಸ್ಪದವಾಗಿ ಬೈಕ್ ನಲ್ಲಿ ಯುವಕರ ಸುತ್ತಾಟ

ವಿಟ್ಲ:ಸಂಜೆ ಹೊತ್ತಲ್ಲಿ ಸಂಶಯಾಸ್ಪದವಾಗಿ ಐದಾರು ಬಾರಿ ಅತ್ತಿತ್ತ ಬೈಕ್‌ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನು ಸ್ಥಳೀಯರು ತಡೆದು ವಿಚಾರಿಸುತ್ತಿದ್ದಂತೆ ಬೈಕ್‌ ಸವಾರ ಎಸ್ಕೆಪ್ ಆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ಳಾಡು ಗ್ರಾಮದ ಕಾಡುಮಠ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ನಡೆದಿದೆ.


ಮುಸ್ಸಂಜೆ ಹೊತ್ತಲ್ಲಿ ಸಂಶಯಾಸ್ಪದವಾಗಿ ಐದಾರು ಬಾರಿ ಅತ್ತಿತ್ತ ಬೈಕ್‌ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನು ಸ್ಥಳೀಯರು ತಡೆದು ವಿಚಾರಿಸುತ್ತಿದ್ದಂತೆ ಬೈಕ್‌ ಸವಾರ ಎಸ್ಕೆಪ್ ಆಗಿದ್ದು, ಹಿಂಬದಿ ಸವಾರನನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.


ಹಿಂಬದಿ ಸವಾರ ಅಡ್ಯನಡ್ಕ ನಿವಾಸಿ ರಾಕೇಶ್ ಎಂದು ಗುರುತಿಸಲಾಗಿದೆ.


ಪರಾರಿಯಾದ ಬೈಕ್ ಸವಾರನ ಸಾರ್ವಜನಿಕರು ಶೋಧ ನಡೆಸುತಿದ್ದಾರೆ.

ಮಾ.9 : ಪಾಲ್ತಾಡು ಸಮೀಪದ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

Posted by Vidyamaana on 2024-03-07 08:57:44 |

Share: | | | | |


ಮಾ.9 : ಪಾಲ್ತಾಡು ಸಮೀಪದ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು  ನಡೆಯಲಿದೆ.

ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಶ್ರೀ ಮಹಾಗಣಪತಿ ಹೋಮ ನಡೆಯಲಿದೆ.

ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು ,ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.



Leave a Comment: