ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಮೊಟ್ಟೆತ್ತಡ್ಕ - ಪಂಜಳ ರಸ್ತೆಯ ತಿರುವಿನಲ್ಲಿ ಮೋರಿ ಕುಸಿತ

Posted by Vidyamaana on 2024-02-26 21:51:31 |

Share: | | | | |


ಮೊಟ್ಟೆತ್ತಡ್ಕ - ಪಂಜಳ ರಸ್ತೆಯ ತಿರುವಿನಲ್ಲಿ ಮೋರಿ ಕುಸಿತ

ಪುತ್ತೂರು: ಇಲ್ಲಿನ ಮೊಟ್ಟೆತ್ತಡ್ಕ - ಪಂಜಳ ರಸ್ತೆಯಲ್ಲಿ ಮೋರಿಯೊಂದು ಕುಸಿದಿದ್ದು, ಅಪಘಾತಕ್ಕೆ ಆಹ್ವಾನ ನೀಡುತ್ತಿದೆ.

ಗೇರು ಸಂಶೋಧನಾ ನಿರ್ದೇಶನಾಲಯದ ಸಮೀಪದ ತಿರುವಿನಲ್ಲಿ ಮೋರಿ ಕುಸಿದಿದೆ. ತಿರುವಿನಲ್ಲಿ ಈ ಮೋರಿ ಇರುವ ಕಾರಣ, ವಾಹನ ಸವಾರರ ಗಮನಕ್ಕೆ ಈ ಅಪಾಯ ತಕ್ಷಣಕ್ಕೆ ಬರುತ್ತಿಲ್ಲ. ಇದರಿಂದ ಅಪಘಾತ ಸಂಭವಿಸುವ ಲಕ್ಷಣ ಹೆಚ್ಚಿದೆ.

ಮೋರಿ ಕುಸಿದಿರುವ ಬಗ್ಗೆ ಸೂಚನೆ ನೀಡಲು ಕನಿಷ್ಠ ಒಂದು ಸೂಚನಾ ಫಲಕವನ್ನು ಹಾಕಿಲ್ಲ. ಹಾಗಾಗಿ ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ, ಮೋರಿಯನ್ನು ದುರಸ್ತಿ ಮಾಡಬೇಕೆಂದು ಕುರಿಯ ಮುಂಡೂರು ಆಟೋ ಚಾಲಕರು ಮತ್ತು ಸಾರ್ವಜನಿಕರ ಆಗ್ರಹಿಸಿರುತ್ತಾರೆ.

ಮಂಗಳೂರು| ವಕೀಲೆಗೆ ಮಾನಸಿಕ ಕಿರುಕುಳ: ಬಸ್ ಚಾಲಕ ಕಂಡೆಕ್ಟರ್ ಬಂಧನ

Posted by Vidyamaana on 2023-10-13 20:00:19 |

Share: | | | | |


ಮಂಗಳೂರು|  ವಕೀಲೆಗೆ ಮಾನಸಿಕ ಕಿರುಕುಳ: ಬಸ್ ಚಾಲಕ ಕಂಡೆಕ್ಟರ್ ಬಂಧನ

ಮಂಗಳೂರು: ವಕೀಲೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರ ಮುಂದೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕ ಮತ್ತು ಚಾಲಕ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಭರತ್ ಸಾಲಿಯ್ಯಾನ್ ಮತ್ತು ಶಶಿಕುಮಾರ್ ಬಂಧಿತರು. ಇಂದು ಬೆಳಿಗ್ಗೆ ಮಂಗಳೂರು ಪೂರ್ವ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಮಧ್ಯಾಹ್ನ ಮಾನ್ಯ 6 ನೇ ಜೆ ಎಂ ಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇಬ್ಬರಿಗೂ ಮಂಗಳೂರು ಆರನೇ ಜೆಎಂಎಫ್ ಸಿ ನ್ಯಾಯಾಲಯ 14ದಿನ ನ್ಯಾಯಾಂಗ ಬಂಧನ ವಿಧಿಸಿದೆ.



ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳುವ ರೂಟ್ ನಂಬರ್ 19, ಆಶೆಲ್ ಬಸ್ ನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಬಸ್ ಡ್ರೈವರ್ ಎಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಸಾರ್ವಜನಿಕರ ಎದುರೇ ”ನೀಮ್ಮ ಸಮುದಾಯದ ಹೆಂಗಸರಿಗೆ ತುಂಬಾ ಅಹಂಕಾರ, ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತಂತೆ ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

Posted by Vidyamaana on 2023-07-06 07:04:55 |

Share: | | | | |


ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.


ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

ಬೆಳ್ತಂಗಡಿ :App ಮೂಲಕ ಸಾಲ ಕೊಡ್ತೇವೆ ಅಂದವ್ರೇ ಒಟ್ರಾಶಿ ಹಣ ಪೀಕಿದ್ರು..

Posted by Vidyamaana on 2024-04-05 04:38:50 |

Share: | | | | |


ಬೆಳ್ತಂಗಡಿ :App ಮೂಲಕ ಸಾಲ ಕೊಡ್ತೇವೆ ಅಂದವ್ರೇ ಒಟ್ರಾಶಿ ಹಣ ಪೀಕಿದ್ರು..

ಬೆಳ್ತಂಗಡಿ: ಆಪ್‌ ಮೂಲಕ ಸಾಲ ನೀಡುವುದಾಗಿ ಹೇಳಿ ಮಹಿಳೆಗೆ ವಂಚಿಸಿರುವ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ.

ತೆಂಕಕಾರಂದೂರು ಗ್ರಾಮದ ನೆಬಿಸಾ (38) ಎಂಬವರಿಗೆ ಅಪರಿಚಿತರು ಮಾ. 21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂ ಪರ್ಸನಲ್ ಲೋನ್ ಆಪ್ ಮೂಲಕ ಪರಿಚಯಿಸಿಕೊಂಡಿದ್ದರು.

ಬೆಳ್ತಂಗಡಿ : ಸವಣಾಲು ಎರಡು ಬೈಕ್ ಗಳ ನಡುವೆ ಅಪಘಾತ ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

Posted by Vidyamaana on 2023-03-30 08:41:43 |

Share: | | | | |


ಬೆಳ್ತಂಗಡಿ : ಸವಣಾಲು ಎರಡು  ಬೈಕ್ ಗಳ ನಡುವೆ ಅಪಘಾತ  ಹೆನ್ರಿ ಡಿಸೋಜಾ ಸ್ಥಳದಲ್ಲಿಯೇ ಮೃತ್ಯು, ಇನ್ನೊಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೋರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ  ಮಾ 30 ರಂದು ನಡೆದಿದೆ .

ಬೆಳ್ತಂಗಡಿ ತಾಲೂಕಿನ ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇಸ್ಪೆಕ್ಟರ್  ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

Posted by Vidyamaana on 2023-05-13 02:57:54 |

Share: | | | | |


ಅಂಚೆ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆ

ಪುತ್ತೂರು: ಮತಗಟ್ಟೆ ಕೊಠಡಿಯ ಬೀಗ ಮರೆತು ಬಂದದ್ದರಿಂದ ಮತಗಟ್ಟೆ ಕೊಠಡಿಯ ಬೀಗವನ್ನು ಒಡೆದು ಒಳಪ್ರವೇಶಿಸಿದ ವಿಲಕ್ಷಣ ಘಟನೆಗೆ ಮಂಗಳೂರು ಸಾಕ್ಷಿಯಾಯಿತು ಎಂದು ತಿಳಿದುಬಂದಿದೆ,


ಬಳಿಕ ನಡೆದ ಮತ ಎಣಿಕೆಯ ಆರಂಭದಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡರೆ, ನಂತರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ.


ಸುರತ್ಕಲ್ ಎನ್.ಐ.ಟಿ.ಕೆ. ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆಗಾಗಿ ಎಲ್ಲರೂ ಬಂದು ಸೇರಿದ್ದರು. ಅಷ್ಟರಲ್ಲಿ ಅಧಿಕಾರಿಯೋರ್ವರು ಕೀ ಮರೆತು ಬಂದಿರುವುದು ಬೆಳಕಿಗೆ ಬಂದಿತು. ಪುನಃ ಹಿಂದಿರುಗಿ ಕೀ ತರುವಷ್ಟು ಸಮಯ ಇಲ್ಲದೇ ಇರುವುದರಿಂದ ಬಾಗಿಲಿನ ಕೀಯನ್ನು ಮುರಿದು ಒಳಪ್ರವೇಶಿಸಲಾಯಿತು. ಬಳಿಕ ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು ಎಂದು ಹೇಳಲಾಗಿದೆ. ಬಳಿಕ ನಡೆದ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್  ಅಭ್ಯರ್ಥಿ ಅಶೋಕ್ ರೈ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಂತೂ ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯಕ್ಷಮತೆ ಮೆರೆದರು.

Recent News


Leave a Comment: