ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಕಬಕ ಕಲ್ಲಂದಡ್ಕ ರಸ್ತೆಗೆ ಶಾಸಕರಿಂದ ಗುದ್ದಲಿಪೂಜೆ

Posted by Vidyamaana on 2024-01-15 15:49:05 |

Share: | | | | |


ಕಬಕ ಕಲ್ಲಂದಡ್ಕ ರಸ್ತೆಗೆ ಶಾಸಕರಿಂದ ಗುದ್ದಲಿಪೂಜೆ

ಪುತ್ತೂರು: ಹಲವಾರು ವರ್ಷಗಳಿಂದ ರಸ್ತೆ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದ ಕಬಕ ಗ್ರಾಮದ ಕಲ್ಲಂದಡ್ಕಕ್ಕೆ ರೂ. ೨೦ ಲಕ್ಷ ಅನುದಾನವನ್ನು ನೀಡಿದ್ದೇನೆ, ಕಳೆದ ವಿಧಾನಸಭಾ ಚುನಾವಣೆಯ ವೇಳೆ ಚುನಾವಣಾ ಬಹಿಷ್ಕಾರ ಮಾಡುವುದಾಗಿ ನೀವು ಹೆಳದಿದೀರಿ ನಾನು ಭರವಸೆ ಕೊಟ್ಟಿದ್ದೆ ಅದನ್ನು ಈಡೇರಿಸಿದ್ದೇನೆ ಎಂದು ಶಾಶಕರಾದ ಅಶೋಕ್ ರೈ ಹೇಳಿದರು.


ಅವರು ಕಲ್ಲಂದಡ್ಕದಲ್ಲಿ ರೂ. ೨೦ ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ನಾನು ಸುಳ್ಳು ಭರವಸೆಗಳನ್ನು ನೀಡಿ ಹೋಗಿಲ್ಲ, ಕೊಟ್ಟ ಮಾತಿನಂತೆ ಇಲ್ಲಿಗೆ ಬಂದು ನಿಮಗೆ ರಸ್ತೆ ಮಾಡಿಸಿಕೊಟ್ಟಿದ್ದೇನೆ ಮುಂದಿನ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಶಾಸಕರು ಮನವಿ ಮಾಡಿದರು.


ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಡಿ ಕಲ್ಲಂದಡ್ಕದಲ್ಲಿ ರಸ್ತೆ ಇಲ್ಲದೆ ಹಲವಾರು ವರ್ಷಗಳಿಂದ ಜನತೆ ತೊಂದರೆಯಲ್ಲಿದ್ದರು. ರಾಜಕೀಯ ದುರುದ್ದೇಶದಿಂದ ಇಲ್ಲಿ ರಸ್ತೆ ಕಾಮಗಾರಿ ಮಾಡಿರಲಿಲ್ಲ. ಚುನಾವಣೆ ಬಹಿಷ್ಕಾರ ಮಾಡುವುದಾಗಿ ಘೋಷಣೆ ಮಡಿದ್ದ ಇಲ್ಲಿನ ಸುಮಾರು ೪೦ ಕುಟುಂಬಗಳಿಗೆ ಈಗ ಸಂತಸವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು ವಿರೋಧ ಪಕ್ಷದವರಿಗೆ ಸಹಿಸಲು ಸಾಧ್ಯವಾಗದೆ ಕಿರುಚಾಡುತ್ತಿದ್ದಾರೆ ಎಂದು ಹೇಳಿದರು.


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಮಾತನಾಡಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವ ಅರಂಭವಾಗಿದೆ. ಜನರ ನಿರೀಕ್ಷೆಗೂ ಮೀರಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಅನುದಾನವನ್ನು ಹಂಚಿಕೆ ಮಾಡುವ ಮೂಲಕ ರಾಜಧರ್ಮ ಪಾಲನೆ ಮಡುತ್ತಿರುವ ಶಾಸಕರಿಗೆ ಅಭಿನಂದಿಸುವುದಾಗಿ ಹೇಳಿದರು.


ಅಕ್ರಮಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಢರು, ಕಾರ್ಯಕರ್ತರು ಉಪಸ್ಥಿತರಿದ್ದರು.

ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ; ಮೂವರು ಐಪಿಎಸ್ ಅಧಿಕಾರಿಗಳ ಬಂಧನ

Posted by Vidyamaana on 2024-03-26 07:55:28 |

Share: | | | | |


ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ; ಮೂವರು ಐಪಿಎಸ್ ಅಧಿಕಾರಿಗಳ ಬಂಧನ

ಹೈದರಾಬಾದ್, ಮಾ.26: ಲೋಕಸಭೆ ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಪೊಲೀಸ್ ಅಧಿಕಾರಿಗಳ ಫೋನ್‌ ಕದ್ದಾಲಿಕೆ ಪ್ರಕರಣ ರಾಹಕೀಯ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ದಳದ ಮಾಜಿ ಮುಖ್ಯಸ್ಥ ಡಾ. ಟಿ ಪ್ರಭಾಕರ್ ರಾವ್ ಅವರನ್ನು ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮಾಡಿದ್ದು ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ. 

ಪ್ರಭಾಕರ್‌ ರಾವ್‌ ಸದ್ಯ ಅಮೆರಿಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಫೋನ್‌ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು ಸಂಗ್ರಹಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. 

ಹೈದರಾಬಾದ್‌ನಲ್ಲಿ ಪ್ರಭಾಕರ್‌ ರಾವ್ ಅವರ ಮನೆ, ಐ ನ್ಯೂಸ್ ಎಂಬ ತೆಲುಗು ಟಿವಿ ವಾಹಿನಿಯನ್ನು ನಡೆಸುತ್ತಿರುವ ಶ್ರವಣ್ ರಾವ್ ಅವರ ನಿವಾಸ ಸೇರಿದಂತೆ ಸುಮಾರು ಹನ್ನೆರಡು ಇತರ ಸ್ಥಳಗಳನ್ನು ಹುಡುಕಾಟ ನಡೆಸಲಾಗಿದೆ. ಶ್ರವಣ್‌ ರಾವ್‌ ಕೂಡ ದೇಶ ತೊರೆದಿದ್ದಾರೆ ಎಂದು ನಂಬಲಾಗಿದ್ದು, ಇಸ್ರೇಲ್‌ನಿಂದ ಫೋನ್ ಟ್ಯಾಪಿಂಗ್ ಉಪಕರಣಗಳನ್ನು ತರಿಸಿ ಸರ್ವರ್‌ಗಳನ್ನು ಸ್ಥಾಪಿಸಲು ಇವರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ.


ಪ್ರಕರಣದಲ್ಲಿ ಈಗಾಗಲೇ ಮೂವರು ಐಪಿಎಸ್‌ ದರ್ಜೆ ಅಧಿಕಾರಿಗಳನ್ನು ಬಂಧಿಸಲಾಗಿದೆ. ಹೆಚ್ಚುವರಿ ಎಸ್ಪಿಗಳಾದ ಭುಜಂಗ ರಾವ್, ತಿರುಪತಣ್ಣ, ಮತ್ತು ಡಿವೈಎಸ್‌ಪಿ ಪ್ರಣೀತ್ ರಾವ್ ಅವರನ್ನು ಈಗಾಗಲೇ ಬಂಧಿಸಲಾಗಿದೆ. ಭುಜಂಗ ರಾವ್ ಮತ್ತು ತಿರುಪತಣ್ಣ ಖಾಸಗಿ ವ್ಯಕ್ತಿಗಳ ಮೇಲೆ ಅಕ್ರಮವಾಗಿ ನಿಗಾ ವಹಿಸಿ ಸಾಕ್ಷ್ಯ ನಾಶಪಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Posted by Vidyamaana on 2024-05-01 09:29:26 |

Share: | | | | |


ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಉಪ್ಪಿನಂಗಡಿ : ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ

ಮಕ್ಕಳನ್ನು ಗುಂಡಿಟ್ಟು ಕೊಲ್ಲಿ: ಪೊಲೀಸ್‌ ಆಯುಕ್ತರ ಎದುರು ತಂದೆ ಕಣ್ಣೀರು

Posted by Vidyamaana on 2024-08-22 07:41:17 |

Share: | | | | |


ಮಕ್ಕಳನ್ನು ಗುಂಡಿಟ್ಟು ಕೊಲ್ಲಿ: ಪೊಲೀಸ್‌ ಆಯುಕ್ತರ ಎದುರು ತಂದೆ ಕಣ್ಣೀರು

ಹುಬ್ಬಳ್ಳಿ: ನಾನು ಕಳೆದ 40 ವರ್ಷಗಳಿಂದ‌ ಕಷ್ಟಪಟ್ಟು ಬೆಳೆಸಿದ್ದೇನೆ, ಆದರೆ ಅವರು ನಮ್ಮ ಮನೆತನದ ಮಾನ-ಮರ್ಯಾದೆ ಹಾಳು ಮಾಡಿದ್ದಾರೆ. ಅವರನ್ನು ಗುಂಡಿಟ್ಟು ಕೊಲ್ಲಿ. ಬೇಕಾದರೆ ಬರೆದುಕೊಡುವೆ ಎಂದು ನಗರದಲ್ಲಿ ತಂದೆಯೊಬ್ಬ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಎದುರು ಕಣ್ಣೀರು ಹಾಕಿದ್ದಾರೆ.ಈ ವಿಡಿಯೋ ಈಗ ವೈರಲ್ ಆಗಿದೆ.

ಹಳೇಹುಬ್ಬಳ್ಳಿ ಸದರಸೋಪಾ ಬ್ಯಾಹಟ್ಟಿ ಪ್ಲಾಟ್ ನಿವಾಸಿ ಗೌಸಸಾಬ ಕರಡಿಗುಡ್ಡ ಎಂಬವರು ಮಕ್ಕಳಿಬ್ಬರ‌ ನಡತೆ ಬಗ್ಗೆ ಪೊಲೀಸ್ ಆಯುಕ್ತರ ಎದುರು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ್ದಾರೆ.

ರವಿವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗ್ಯಾಂಗ್‌ವಾರ್‌ ಘಟನೆಗೆ ಸಂಬಂಧಿಸಿ ಕಸಬಾಪೇಟೆ ಪೊಲೀಸರು ಸೋಮವಾರ ಬೆಳಗ್ಗೆ ಬುಡರಸಿಂಗಿ ಬಳಿಯ ರಿಂಗ್ ರಸ್ತೆಯಲ್ಲಿ ಗೌಸಸಾಬ್‌ ಅವರ ಮಗನಾದ ಅಫ್ತಾಬ್ ಮತ್ತು ಶಾಹಬಾದ್‌ನನ್ನು ವಶಕ್ಕೆ ಪಡೆಯಲು ಹೋದಾಗ ಅಫ್ತಾಬ್‌ನು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದರು.

ಪುತ್ತೂರು; ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡದಿಂದ ಬೆಂಕಿ - ತಪ್ಪಿದ ಬಾರಿ ದುರಂತ

Posted by Vidyamaana on 2023-12-23 04:37:41 |

Share: | | | | |


ಪುತ್ತೂರು; ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡದಿಂದ ಬೆಂಕಿ - ತಪ್ಪಿದ ಬಾರಿ ದುರಂತ

ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸವಲ್ಲಿ ಯಶಸ್ಸಿಯಾಗಿದೆ.


ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಅಗ್ನಿ ಶಾಮಕ ದಳದ ನೆರವಿನಿಂದ ಬೆಂಕಿ ನಂದಿಸುವ ಕೆಲಸ ವಾಗಿದೆ.


ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ಅವರು, " ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ, ಹವಾನಿಯಂತ್ರಿತ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಕ್ಕೆ ಹಾನಿಯಾಗಿದೆ. ತಿವ್ರ ನಿಗಾ ಘಟಕದಲ್ಲಿ ಇಬ್ಬರು ರೋಗಿಗಳಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಶಾಸಕ ಅಶೋಕ್‌ ರೈಯವರು ಧಾವಿಸಿದ್ದಾರೆ. ಪುತ್ತೂರಿನ ವಿಹಿಂಪ ಕಛೇರಿಯಲ್ಲಿ ತಂಗಿದ್ದ ದತ್ತ ಮಾಲಾಧಾರಿಗಳು, ಹಾಗೂ ಸ್ಥಳೀಯ ಯುವಕರು ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.ತಡ ರಾತ್ರಿ 12:30 ರಿಂದ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ತಕ್ಷಣವೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ದೋಡ್ಡ ಅನಾಹುತ ತಪ್ಪಿತು. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಸ್ಪತ್ರೆ ಅಡಳಿತ ಅಧಿಕಾರಿ ಡಾ.ಅಶಾ ಪುತ್ತೂರಾಯ ಮತ್ತು ಅಸ್ಪತ್ರೆ ಸಿಬಂದಿಗಳು ರೋಗಿಗಳನ್ನು ಬೆಂಕಿ ತಗುಲಿದ ಕೋಠಡಿಯಿಂದ ತೆರವುವಗೊಳಿಸಿದ್ದರು .


ವಿಷಯ ತಿಳಿದ ತಕ್ಷಣವೇ ಪುತ್ತೂರು ವಿಶ್ವಹಿಂದೂ ಪರಿಷದ್‌ ಕಾರ್ಯಲಾಯದಲ್ಲಿ ಇದ್ದ ಬಜರಂಗದಳದ ದತ್ತ ಮಾಲಾದರಿಗಳು ಸ್ಥಳಕ್ಕೆ ಅಗಮಿಸಿ ಇಡಿ ಅಸ್ಪತ್ರೆಯಲ್ಲಿ ಬೂದಿಗಳಿಂದ ಕೂಡಿದ ಕೊಠಡಿಗಳನ್ನು ನೀರಿನಿಂದ ಸ್ವಚ್ಚಗೊಳಿಸಿದ್ದಾರೆ.ಮಂಗಳೂರಿನಲ್ಲಿದ್ದ ಪುತ್ತೂರಿನ ಶಾಸಕರಿಗೆ ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ಪುತ್ತೂರು ಸರಕಾರಿ ಅಸ್ಪತ್ರೆಗೆ ಅಶೋಕ್ ರೈ ದೌಡಯಿಸಿದ್ದಾರೆ

ಕೆ.ಪಿ.ಸಿ.ಸಿ. ವತಿಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಯೋಜಕರಾಗಿ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆ

Posted by Vidyamaana on 2024-04-11 17:34:31 |

Share: | | | | |


ಕೆ.ಪಿ.ಸಿ.ಸಿ. ವತಿಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಯೋಜಕರಾಗಿ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆ

ಬೆಂಗಳೂರು :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿ,ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ ಅಬ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಲು ಮತ್ತು ಗೆಲುವಿಗೆ ಸಹಕಾರಿಯಾಗಲು ಕೆ.ಪಿ.ಸಿ‌.ಸಿ. ಕಾರ್ಯದ್ಯಾಕ್ಷರಾದ ಶ್ರೀ ಮಂಜುನಾಥ ಭಂಡಾರಿ ಶಿಪಾರಸ್ಸಿನ ಮೇರೆಗೆ ಕೆ.ಪಿ.ಸಿ.ಸಿ ಅದ್ಯಕ್ಷರಾದ ಶ್ರೀ. ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಯೋಜಕರಾಗಿ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಯವರನ್ನು ತಕ್ಷಣದಿಂದ ಕಾರ್ಯಪ್ರವರ್ತರಾಗುವಂತೆ ಈ ಮೂಲಕ ಆದೇಶಿಸಿಸಲಾಗಿದೆ..



Recent News


Leave a Comment: