ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಅದ್ವೈತ್ ಜೆಸಿಬಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾ‌ನ

Posted by Vidyamaana on 2023-10-09 16:10:07 |

Share: | | | | |


ಅದ್ವೈತ್ ಜೆಸಿಬಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾ‌ನ


ಮಂಗಳೂರು: ಪ್ರತಿಷ್ಠಿತ ಕಂಪೆನಿಗಳಲ್ಲೊಂದಾದ ಅದ್ವೈತ್ ಜೆಸಿಬಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಸೇಲ್ಸ್ ಎಕ್ಸಿಕ್ಯೂಟಿವ್, ಸೀನಿಯರ್ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾ‌ನೇಜರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಂಗಳೂರು, ಮೈಸೂರು, ಹಾಸನ, ಶಿವಮೊಗ್ಗ, ಕುಮ್ಟ, ಕುಂದಾಪುರದಲ್ಲಿ ಖಾಲಿ ಹುದ್ದೆಗಳಿದ್ದು, ಆಸಕ್ತರು ಸ್ವವಿವರವನ್ನು ಕಳುಹಿಸಿಕೊಡಲು ಪ್ರಕಟಣೆ ತಿಳಿಸಿದೆ.


ಸಂಪರ್ಕಕ್ಕೆ :Mail ID:

non

minho@

non

vaithjcb.com/Call: 7349768734

ಮಂಗಳೂರಿಗೆ ವಂದೇ ಭಾರತ್ ರೈಲು: Xನಲ್ಲಿ ತಿಳಿಸಿದ ಸಂಸದ ನಳಿನ್ ಕುಮಾರ್

Posted by Vidyamaana on 2023-11-08 09:30:21 |

Share: | | | | |


ಮಂಗಳೂರಿಗೆ ವಂದೇ ಭಾರತ್ ರೈಲು: Xನಲ್ಲಿ ತಿಳಿಸಿದ ಸಂಸದ ನಳಿನ್ ಕುಮಾರ್

ಮಂಗಳೂರು: ಮಂಗಳೂರಿಗೆ ವಂದೇ ಭಾರತ್ ಸೆಮಿ-ಹೈ ಸ್ಪೀಡ್ ರೈಲು ಎಕ್ಸ್‌ಪ್ರೆಸ್‌ ಬರಬೇಕು ಎಂಬುದು ಹಲವರ ಬೇಡಿಕೆಯಾಗಿದೆ. ಬೇಕಾದ ವ್ಯವಸ್ಥೆಗಳನ್ನು ಸಹ ಮಂಗಳೂರು ನಿಲ್ದಾಣದಲ್ಲಿ ಮಾಡಲಾಗುತ್ತಿದೆ. ಇದೀಗ ಶೀಘ್ರವೇ ಮಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ದೊರೆಯಲಿದೆ ಎಂದು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ Xನಲ್ಲಿ ಬರೆದಿದ್ದಾರೆ.


ಸಂಸದರು Xನಲ್ಲಿ, ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.


‘ಇನ್ನು ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದೂ ಕಟೀಲ್ ಬರೆದ್ದಾರೆ.

BURNING TRAIN : ಬೆಂಕಿ ಅನಾಹುತ : ಧಗಧಗಿಸಿದ ರೈಲು..! - VIDEO

Posted by Vidyamaana on 2024-06-03 21:20:29 |

Share: | | | | |


BURNING TRAIN : ಬೆಂಕಿ ಅನಾಹುತ : ಧಗಧಗಿಸಿದ ರೈಲು..! - VIDEO

ನವದೆಹಲಿ : ನೋಡ ನೋಡುತ್ತಿದ್ದಂತೆಯೇ ರೈಲೊಂದು ಹೊತ್ತಿ ಉರಿದ ಘಟನೆ ನವದೆಹಲಿಯಲ್ಲಿ ನಡೆದಿದೆ 

ದಕ್ಷಿಣ ದೆಹಲಿಯ ತುಘಲಕಾಬಾದ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪ್ರಯಾಣಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಷ್ಟರಲ್ಲಿ ಪಕ್ಕದಲ್ಲಿದ್ದ ಮತ್ತೊಂದು ರೈಲು ಬೆಂಕಿ ತಗುಲಿದೆ

ಬಲ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಸುಜ್ಞಾನ ರಂಗಮಂದಿರ ಉದ್ಘಾಟನೆ

Posted by Vidyamaana on 2024-02-02 12:31:52 |

Share: | | | | |


ಬಲ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಸುಜ್ಞಾನ ರಂಗಮಂದಿರ ಉದ್ಘಾಟನೆ

ಕಡಬ: ಬಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಹಾಗೂ ಪೂರ್ವ ವಿದ್ಯಾರ್ಥಿಗಳು ಹಾಗೂ ಬಲ್ಯ ಶಾಲೆಯ ಸಮಸ್ತ ವಿದ್ಯಾಭಿಮಾನಿಗಳ ಸಹಕಾರದಿಂದ ಸುಮಾರು ಆರು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲ್ಪಟ್ಟ ನೂತನ ರಂಗಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ  *ಪ್ರತಿಭಾ ಸುಜ್ಞಾನ* ರಂಗಮಂದಿರವನ್ನು  ಶ್ರೀ ಬಿ.ಎಂ ಲಿಂಗಪ್ಪ ಗೌಡ ಬಾಬ್ಲುಬೆಟ್ಟು ಅವರು ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ  ಕುಟ್ರುಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಸುಮನಾರವರು ಸಭಾ ಕಾರ್ಯಕ್ರಮವನ್ನು  ದೀಪ ಬೆಳಗಿಸಿ ಉದ್ಘಾಟಿಸಿದರು, ಈ ಸಂದರ್ಭದಲ್ಲಿ ನೂತನ ರಂಗಮಂದಿರ ನಿರ್ಮಾಣದ ಶ್ರಮಿಕರಿಗೆ ಗೌರವಾರ್ಪಣೆ, ನೂತನ ರಂಗ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಹಾಗೂ ಶಾಲೆಗೆ ವಸ್ತುರೂಪದ ಕೊಡುಗೆ ನೀಡಿದವರಿಗೆ ಗೌರವಾರ್ಪಣೆ ನಡೆಯಿತು. ಪೂರ್ವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ನಡೆದ ಕ್ರೀಡಾಸಂಭ್ರಮ 2023-24 ಕ್ರೀಡಾಕೂಟದ ಬಹುಮಾನ  ವಿತರಣೆ, ಪೂರ್ವ ವಿದ್ಯಾರ್ಥಿ ಸಂಘದ ಅಧಿಕಾರ ಹಸ್ತಾಂತರ  ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ 

ಪೂರ್ವ ವಿದ್ಯಾರ್ಥಿ ಸಂಘ ಹಾಗೂ ನೂತನ ರಂಗಮಂದಿರ ಸಮಿತಿಯ ಅಧ್ಯಕ್ಷರಾದ ಬಿ ಎಂ ಪೂರ್ಣೇಶ್ ಗೌಡ ಬಾಬ್ಲುಬೆಟ್ಟು ರವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.  ಶಾಲೆಯ ಪೂರ್ವ ವಿದ್ಯಾರ್ಥಿ, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಗುಡ್ಡಪ್ಪ ಗೌಡ ನೆಲ್ಲ-ಬಲ್ಯ ಇವರು ದಿಕ್ಸೂಚಿ ಭಾಷಣ ಮಾಡಿದರು.  ಎಸ್ ಡಿ ಎಂ ಸಿ ಅಧ್ಯಕ್ಷ ವಿಲ್ಸನ್ ವಿ. ಟಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಶ್ರೀಮತಿ ಮೀನಾಕ್ಷಿ ನೆಲ್ಲ, ಶ್ರೀ ಪ್ರಕಾಶ್ ಬಾಕಿಲ, ಶ್ರೀಮತಿ ಪುಷ್ಪಾ.ಕೆ, ಶ್ರೀ ತುಕ್ರಪ್ಪ ನೆಲ್ಲ , ಶ್ರೀ ಕೆ.ಆರ್. ಆಚಾರ್ಯ ಪುತ್ತೂರು, ಶ್ರೀ ವಾಣಿ ನಾಗೇಶ್ ಬನಾರಿ, ಶ್ರೀ ರವಿ ಪ್ರಸಾದ್ ಆಲಾಜೆ, ಶ್ರೀ ನಾರಾಯಣ ಕೊಲ್ಲಿಮಾರು,  ಶ್ರೀ ವಿಮಲ್ ಕುಮಾರ್ ನೆಲ್ಯಾಡಿ, ಶ್ರೀ ಸತೀಶ್ಚಂದ್ರ ಶೆಟ್ಟಿ, ಶ್ರೀ ಶೇಖರ ಗೌಡ ದೇರಾಜೆ, ಶ್ರೀ ಕೊರಗಪ್ಪ ಗೌಡ ಪುಳಿತ್ತಡಿ, ಶ್ರೀ ತಿಮ್ಮಣ್ಣ ಭಟ್ ದೇವರಡ್ಕ , ಶ್ರೀಮತಿ ಅಮ್ಮಣಿ , ಶ್ರೀ ಜನಾರ್ದನ ಗೌಡ , ಹಾಗೂ ಶಾಲಾ ನಾಯಕ ಧನುಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 600ಕ್ಕಿಂತ ಹೆಚ್ಚು ಜನ , ಪೂರ್ವ ವಿದ್ಯಾರ್ಥಿಗಳು, ಊರ ಪರ ಊರ ಶಾಲಾ ವಿದ್ಯಾಭಿಮಾನಿಗಳು, ಗಣ್ಯರು ಭಾಗವಹಿಸಿದ್ದರು .ಈ ಹಿಂದೆ ಬಲ್ಯ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಗುರುಗಳಾದ  ರುಕ್ಮಿಣಿ ಪಿಜಕಳ, ಪೆರ್ಗಡೆ ಗೌಡ ದೇರಾಜೆ,  ಅಚ್ಚಮ್ಮ, ಜಿ. ಮಾಯಿಲಪ್ಪ ಇವರನ್ನು ಗೌರವಿಸಲಾಯಿತು. ನೂತನ ರಂಗಮಂದಿರಕ್ಕೆ ಹಾಗೂ ಶಾಲೆಗೆ ವಿಶೇಷವಾಗಿ ಸಹಕರಿಸಿದ ಹಲವಾರು ಜನರನ್ನು ಗೌರವಿಸಲಾಯಿತು.

  ಸಭಾ ಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳಿಂದ ಮತ್ತು ಪೂರ್ವ ವಿದ್ಯಾರ್ಥಿಗಳಿಂದ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲೆಯ 

ಮುಖ್ಯ ಶಿಕ್ಷಕಿ ಪುಷ್ಪಾ. ಕೆ  ಸ್ವಾಗತಿಸಿ, ರಂಗ ಮಂದಿರ ನಿರ್ಮಾಣ ಸಮಿತಿಯ ಕೋಶಾಧಿಕಾರಿ ಗಣೇಶ್ ಭಟ್ ದೇವರಡ್ಕ ವಂದಿಸಿದರು, ಶೇಖರಗೌಡ ಪನ್ಯಾಡಿ  ಕಾರ್ಯಕ್ರಮ ನಿರೂಪಿಸಿದರು, ರಂಗಮಂದಿರ ನಿರ್ಮಾಣ ಸಮಿತಿಯ ಉಪಾಧ್ಯಕ್ಷರಾದ ಉದಯ್ ಕುಮಾರ್ ಪುತ್ತಿಲ ಹಾಗೂ ಶಾಲಾ ಶಿಕ್ಷಕಿಯರು ಸಹಕರಿಸಿದರು.

ಹಳ್ಳಿಗಳಲ್ಲೂ ಕಾಡಿದ ಹುಲಿ ಉಗುರು

Posted by Vidyamaana on 2023-10-26 20:21:57 |

Share: | | | | |


ಹಳ್ಳಿಗಳಲ್ಲೂ ಕಾಡಿದ ಹುಲಿ ಉಗುರು

ಸುಳ್ಯ :ಅ.25: ಸೆಲೆಬ್ರಿಟಿಗಳನ್ನು ಕಾಡುತ್ತಿರುವ ಹುಲಿ ಉಗುರು ಪ್ರಕರಣ ಈಗ ಹಳ್ಳಿಗಳಲ್ಲೂ ಸದ್ದು ಮಾಡತೊಡಗಿದೆ. ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಮಹಿಳೆಯ ಕೊರಳಲ್ಲಿ ಹುಲಿ ಉಗುರು ಮಾದರಿ ಇದ್ದ ಫೋಟೊಗಳು ವೈರಲ್ ಆಗಿದ್ದು ಅರಣ್ಯಾಧಿಕಾರಿಗಳು ತನಿಖೆ ನಡೆಸಿದ್ದಾರೆ. 


ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ತೆಗೆಸಿಕೊಂಡಿದ್ದ ಪೋಟೋ ಒಂದರಲ್ಲಿ ಅಲ್ಲಿನ ಉದ್ಯೋಗಿಯ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಲಾಕೆಟ್ ಇತ್ತು. ಇದರ ಪೋಟೊ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸುಳ್ಯ ಅರಣ್ಯ ಇಲಾಖೆಯವರು ಸುಳ್ಯ ನಗರ ಪಂಚಾಯತ್ ಸಿಬ್ಬಂದಿ   ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು.  ಆ ಲಾಕೆಟ್‌ ನೊಂದಿಗೆ ಸಿಬ್ಬಂದಿ ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಅದನ್ನು ಅಲ್ಲಿ ಒಪ್ಪಿಸಿದ್ದಾರೆ. 


ಇದು ಅಸಲಿ ಹುಲಿ ಉಗುರಿನ ಲಾಕೆಟ್ ಅಲ್ಲ. ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ನಾನು ಕೂಡಾ ಅನೇಕ ವರ್ಷಗಳಿಂದ ಉಪಯೋಗಿಸುತ್ತಿದ್ದೇನೆ. ಫೋಟೋ ವೈರಲ್ ಆಗಿದ್ದರಿಂದ ಅರಣ್ಯ ಇಲಾಖೆಯವರು ಫೋನ್ ಮಾಡಿದಾಗ ಲಾಕೆಟ್ ಕೊಟ್ಟು ಬಂದಿದ್ದೇನೆ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ  ಹುಲಿ ಉಗುರು ಧರಿಸಿರುವ ಪೋಟೋ ವೈರಲ್ ಆಗಿರುವುದರಿಂದ ತನಿಖೆ ನಡೆಸಿದ್ದೇವೆ. ಲಾಕೆಟನ್ನು ಪಡೆದಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಪ್ರತೀಕ್ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-01-11 21:28:13 |

Share: | | | | |


ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಪ್ರತೀಕ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮಾರಿಗುಡಿ ಹೊಸಮನೆ ಎಂಬಲ್ಲಿ ನಡೆದಿದೆ.


ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಉದ್ಯಮಿ ಪ್ರಶಾಂತ್ ಬಾಳಿಗ 

ಎಂಬವರ ಪುತ್ರ ಪ್ರತೀಕ್ (19) ಆತ್ಮಹತ್ಯೆ ಮಾಡಿಕೊಂಡವರು. ಅವರು ಗುರುವಾರ ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


 ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತೀಕ್ ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು . ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. 

Recent News


Leave a Comment: