ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ

ಸುದ್ದಿಗಳು News

Posted by vidyamaana on 2024-07-08 11:07:30 | Last Updated by Vidyamaana on 2024-07-08 11:07:30

Share: | | | | |


ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ

ಮಂಗಳೂರು(ಇಟ್ಟಿಕುಳಂ): ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ನಿಧನರಾಗಿದ್ದಾರೆ. ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಜಳ್ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ ಅನಾರೋಗ್ಯದಿಂದಿದ್ದ ಅವರು ಇಂದು ಬೆಳಿಗ್ಗೆ ನಿಧರಾಗಿದ್ದಾರೆ.

ಮೃತರು ಪತ್ನಿ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಇಂದು ರಾತ್ರಿ 9

ಗಂಟೆ ವೇಳೆಗೆ ಕೂರ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ. ಸುಲ್ತಾನುಲ್ ಉಲಮಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಇಂದು ಸಂಜೆ 5 ಗಂಟೆಗೆ ಕೂರ ಮಸೀದಿಯಲ್ಲಿ ನಡೆಯಲಿರುವ ಜನಾಝಾನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಕಾವಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡು ಕೊಡಿ; ಅಶೋಕ್ ರೈ

Posted by Vidyamaana on 2023-04-27 07:03:32 |

Share: | | | | |


ಕಾವಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡು ಕೊಡಿ; ಅಶೋಕ್ ರೈ

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯಓಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು ಬಿಜೆಪಿಗರ ಮನೆಗಳಿಗೂ ಕಾರ್ಡು ವಿತರಿಸಿ ಯಾವುದೇ ತಾರತಮ್ಯ ಮಾಡಬೇಡಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಕರ್ತವ್ಯದಲ್ಲಿರೋ ಮಾಧ್ಯಮ ಸಿಬ್ಬಂದಿಗೆ ಅಂಚೆ ಪತ್ರದ ಮೂಲಕ ಮತ ಚಲಾವಣೆಗೆ ಅವಕಾಶ : ಚುನಾವಣಾ ಆಯೋಗ

Posted by Vidyamaana on 2024-03-20 10:07:44 |

Share: | | | | |


ಕರ್ತವ್ಯದಲ್ಲಿರೋ ಮಾಧ್ಯಮ ಸಿಬ್ಬಂದಿಗೆ ಅಂಚೆ ಪತ್ರದ ಮೂಲಕ ಮತ ಚಲಾವಣೆಗೆ ಅವಕಾಶ : ಚುನಾವಣಾ ಆಯೋಗ

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಹೊಸ ಅಧಿಸೂಚನೆ ಹೊರಡಿಸಿದೆ. ಚುನಾವಣಾ ಆಯೋಗವು ಈಗ ಮಾಧ್ಯಮ ಸಿಬ್ಬಂದಿಗೆ ಅಂಚೆ ಮತಪತ್ರದ ಸೌಲಭ್ಯವನ್ನ ಒದಗಿಸಿದೆ. ಅಂದ್ರೆ, ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಎಲ್ಲಾ ಅಧಿಕೃತ ಮಾಧ್ಯಮ ಸಿಬ್ಬಂದಿ ಅವರು ಕೆಲಸ ಮಾಡುತ್ತಿರುವ ಸ್ಥಳದಲ್ಲಿ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಸಾಧ್ಯವಾಗುತ್ತದೆ.ಆದಾಗ್ಯೂ, ಚುನಾವಣಾ ಆಯುಕ್ತರು ಮಾಧ್ಯಮ ಪ್ರಸಾರ ಪಾಸ್ ನೀಡುವ ಮಾಧ್ಯಮ ಸಿಬ್ಬಂದಿಗೆ ಮಾತ್ರ ಮತ ಚಲಾಯಿಸಲು ಸಾಧ್ಯವಾಗುತ್ತದೆ. 


ವಾಸ್ತವವಾಗಿ, ಚುನಾವಣಾ ಆಯೋಗವು ಯಾವುದೇ ಚುನಾವಣೆಯಲ್ಲಿ ಹೆಚ್ಚು ಹೆಚ್ಚು ಮತದಾರರನ್ನು ಭಾಗವಹಿಸಲು ಪ್ರಯತ್ನಿಸುತ್ತದೆ. ಆದರೆ ಚುನಾವಣೆಗಳಲ್ಲಿ, ಸಾವಿರಾರು ಮತ್ತು ಲಕ್ಷಾಂತರ ನೌಕರರು ಮತ್ತು ಭದ್ರತಾ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿದ್ದಾರೆ. ಇದಲ್ಲದೆ, ಗಡಿಯಲ್ಲಿ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಜನರು ತಮ್ಮ ಕರ್ತವ್ಯವನ್ನ ಬಿಟ್ಟು ಚುನಾವಣೆಯಲ್ಲಿ ಮತ ಚಲಾಯಿಸಲು ತಮ್ಮ ಮನೆಗೆ ಹೋಗಲು ಸಾಧ್ಯವಾಗುವುದಿಲ್ಲ. ಅಂತಹ ಸಿಬ್ಬಂದಿ ಮತ್ತು ಸೈನಿಕರಿಗೆ, ಚುನಾವಣಾ ಆಯೋಗವು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಅವಕಾಶ ನೀಡುತ್ತದೆ.

ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

Posted by Vidyamaana on 2023-06-06 07:41:54 |

Share: | | | | |


ಉಪ್ಪಿನಂಗಡಿಯಲ್ಲಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ತಡೆ ಸಭೆ

ಪುತ್ತೂರು: ಪ್ರಾಕೃತಿಕ ವಿಕೋಪದಿಂದಾಗುವ ಹಾನಿಯನ್ನು ತಡೆಗಟ್ಟುವ ಸಲುವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂನ್ 6ರಂದು ಮಧ್ಯಾಹ್ನ 3.30ಕ್ಕೆ ಪೂರ್ವಭಾವಿ ಸಭೆ ನಡೆಯಲಿದೆ.

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾಗಿ ಎಚ್. ಮಹಮ್ಮದ್ ಆಲಿ ನೇಮಕ

Posted by Vidyamaana on 2024-04-19 15:04:44 |

Share: | | | | |


ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾಗಿ ಎಚ್. ಮಹಮ್ಮದ್ ಆಲಿ ನೇಮಕ

ಪುತ್ತೂರು : ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಗೊಳಿಸಿದ್ದು, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾಗಿ ಎಚ್. ಮಹಮ್ಮದ್ ಆಲಿಯವರನ್ನು ಮಾಜಿ ಸಚಿವ ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆಯವರು ನೇಮಕ ಗೊಳಿಸಿ ಅದೇಶಿಸಿರುತ್ತಾರೆ.

ಪಕ್ಷ ಸಂಘಟನೆಯಲ್ಲಿ ಅಪಾರ ಅನುಭವ ಇರುವ ಎಚ್. ಮಹಮ್ಮದ್ ಆಲಿ ಯವರು  ದ ಕ ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಯಾಗಿದ್ದು, 

ಮೆಡಿಕಲ್ ಕಾಲೇಜು ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ

Posted by Vidyamaana on 2023-11-01 17:08:34 |

Share: | | | | |


ಮೆಡಿಕಲ್ ಕಾಲೇಜು ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ

ಬೆಂಗಳೂರು, ನ 01: ಮೆಡಿಕಲ್‌ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್‌ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.


ಶರತ್‌ಗೌಡ್‌(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್‌ ರಸ್ತೆಯಲ್ಲಿ "ನೆಕ್ಸಸ್‌ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ. 


ಆ್ಯಪ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ:


ಹೈದ್ರಾಬಾದ್‌ ಮೂಲದ ಶರತ್‌ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್‌ ರಸ್ತೆಯಲ್ಲಿ ನೆಕ್ಸಸ್‌ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್‌ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.


ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್‌ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ಸೈನ್ಸ್‌ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್‌ನ ಆತನ ಅಪಾರ್ಟ್‌ಮೆಂಟ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


18 ಮಂದಿಗೆ 62 ಲಕ್ಷ ರೂ. ವಂಚನೆ:


ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.


ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್‌, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್‌ಕುಮಾರ್‌ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್‌ಸ್ಪೆಕ್ಟರ್‌ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ದುರಂತ ಅಂತ್ಯ ಕಂಡ ಲವ್​ ಮ್ಯಾರೇಜ್​: ಮೊದಲ ರಾತ್ರಿಯಂದೇ ಪತ್ನಿಯ ಮದ್ವೆ ಸೀರೆಗೆ ಕೊರಳೊಡ್ಡಿದ ಯುವಕ

Posted by Vidyamaana on 2023-09-22 07:36:36 |

Share: | | | | |


ದುರಂತ ಅಂತ್ಯ ಕಂಡ ಲವ್​ ಮ್ಯಾರೇಜ್​: ಮೊದಲ ರಾತ್ರಿಯಂದೇ ಪತ್ನಿಯ ಮದ್ವೆ ಸೀರೆಗೆ ಕೊರಳೊಡ್ಡಿದ ಯುವಕ

ಚೆನ್ನೈ: ಮದುವೆಯಾದ ಎರಡೇ ದಿನದಲ್ಲಿ 27 ವರ್ಷದ ಯುವಕನೊಬ್ಬ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ಬುಧವಾರ ನಡೆದಿದೆ.ಮೃತ ವ್ಯಕ್ತಿಯನ್ನು ಸರವಣನ್​ ಎಂದು ಗುರುತಿಸಲಾಗಿದೆ. ಈತ ಓಚೇರಿ ನಿವಾಸಿಯಾಗಿದ್ದು, ಸುಂಗುವಚತಿರಂನಲ್ಲಿರುವ ಸ್ಯಾಮ್​ಸಂಗ್​ ಮೊಬೈಲ್​ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಬಾಲ್ಯದಿಂದಲೇ ಸ್ನೇಹಿತೆಯಾಗಿ ಶ್ವೇತಾ ಎಂಬಾಕೆಯನ್ನು ಕೆಲವು ವರ್ಷಗಳಿಂದ ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು.


ಮದುವೆಯನ್ನು ಎರಡೂ ಕುಟುಂಬದವರು ಅದ್ಧೂರಿಯಾಗಿ ಏರ್ಪಡಿಸಿದ್ದರು. ಮಂಗಳವಾರ (ಸೆ.19) ನವ ದಂಪತಿ ತಮ್ಮ ಮದುವೆಯ ನಂತರ ಮೊದಲ ಬಾರಿಗೆ ದಿಮ್ಮಾವರಂಗೆ ಬಂದರು ಮತ್ತು ಆ ದಿನ ಅವರ ಮೊದಲ ರಾತ್ರಿಯಾಗಿತ್ತು.


ರಾತ್ರಿ 9 ಗಂಟೆಗೆ ದಂಪತಿ ತಮ್ಮ ಕೋಣೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಶ್ವೇತಾಳ ಕಿರುಚಾಟ ಕೇಳಿ ಮನೆಯವರು ಬೆಚ್ಚಿಬಿದ್ದಿದ್ದಾರೆ. ಶ್ವೇತಾ ಕೋಣೆಯಿಂದ ಹೊರಗೆ ಓಡಿ ಪ್ರಜ್ಞೆ ತಪ್ಪಿ ಬಿದ್ದಳು. ಆಕೆಯ ಪಾಲಕರು ಕೊಠಡಿಯೊಳಗೆ ಹೋಗಿ ನೋಡಿದಾಗ ಶ್ವೇತಾಳಮುಹೂರ್ತದ ಸೀರೆಯನ್ನು ಬಳಸಿ ಸರವಣನ್ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.


ಚೆಂಗಲ್ಪಟ್ಟು ತಾಲೂಕು ಪೊಲೀಸರ ತಂಡ ಆತನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಜಿಎಚ್‌ಗೆ ಕಳುಹಿಸಿದೆ.ಮಂಗಳವಾರ ರಾತ್ರಿ ಸರವಣನ್ ತನ್ನ ಪಾಲಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಹನಿಮೂನ್‌ ಪ್ರವಾಸಕ್ಕಾಗಿ ಯೋಜಿಸಿರುವ ಸ್ಥಳಗಳ ಬಗ್ಗೆ ತಿಳಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರದಿಂದಲೇ ಹನಿಮೂನ್​ ಪ್ರವಾಸ ಆರಂಭಿಸಬೇಕಾಗಿತ್ತು. ಅಷ್ಟರಲ್ಲಿ ಈ ದುರ್ಘಟನೆ ನಡೆದಿದೆ. ಮಂಗಳವಾರ ಮೊದಲ ರಾತ್ರಿ ಸರವಣನ್​ ಮುಖದಲ್ಲಿ ಯಾವುದೇ ಆತಂಕ ಅಥವಾ ದುಃಖದ ಲಕ್ಷಣಗಳು ಇರಲಿಲ್ಲ ಎಂದು ಪಾಲಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸರವಣನ್​ ಸಾವು ತುಂಬಾ ನಿಗೂಢವಾಗಿದೆ. ಚೆಂಗಲಪಟ್ಟು ತಾಲೂಕು ಪೊಲೀಸರು ಅನುಮಾನಾಸ್ಪದ ಸಾವಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಶ್ವೇತಾ ಮತ್ತು ಆಕೆಯ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದಾರೆ

Recent News


Leave a Comment: