ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಇಂದು ಪುತ್ತೂರಿನ ಬಹುತೇಕ ಕಡೆ ವಿದ್ಯುತ್‌ ನಿಲುಗಡೆ

Posted by Vidyamaana on 2023-12-07 05:21:44 |

Share: | | | | |


ಇಂದು ಪುತ್ತೂರಿನ ಬಹುತೇಕ ಕಡೆ ವಿದ್ಯುತ್‌ ನಿಲುಗಡೆ

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ, ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಹಾಗೂ 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್‌ನಲ್ಲಿ ಡಿ.7ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 1110/33/1183 ಕೆ ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆ ವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ರ ಸರಬರಾಜಾಗುವ ಹಾರಾಡಿ, ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಎಳ್ಳುಡಿ, ಕೆಎಸ್‌ಆರ್‌ಟಿಸಿ ಬಸ್‌ ಈ ನಿಲ್ದಾಣ ಪರಿಸರ, ಕಲ್ಲಾರೆ, ಕೂರ್ನಡ್ಕ, ದರ್ಬೆ, ಮರೀಲು, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

10ನೇ ತರಗತಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಜವಾನನಿಗೆ ಓದಲೂ, ಬರೆಯಲು ಗೊತ್ತಿಲ್ಲ! ತನಿಖೆ ಆರಂಭ

Posted by Vidyamaana on 2024-05-24 05:44:32 |

Share: | | | | |


10ನೇ ತರಗತಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಜವಾನನಿಗೆ ಓದಲೂ, ಬರೆಯಲು ಗೊತ್ತಿಲ್ಲ! ತನಿಖೆ ಆರಂಭ

ಬೆಂಗಳೂರು :10ನೇ ತರಗತಿ ಪರೀಕ್ಷೆಯಲ್ಲಿ ಶೇ.99.7ರಷ್ಟು ಅಂಕಗಳನ್ನು ಗಳಿಸಿದ್ದ 23 ವರ್ಷದ ಪ್ರಭು ಲಕ್ಷ್ಮೀಕಾಂತ್ ಲೋಕರೆ ಎಂಬ ಜವಾನನಿಗೆ ಓದಲು ಅಥವಾ ಬರೆಯಲು ಬರುವುದಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.ಈ ಬಹಿರಂಗಪಡಿಸುವಿಕೆಯು ಆರೋಪದ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ.

ಹೆಚ್ಚಿನ ಅಂಕಗಳನ್ನು ಗಳಿಸಿದ ನಂತರ, ಲೋಕರೆ ಕೊಪ್ಪಳ ಜಿಲ್ಲೆಯ ಸ್ಥಳೀಯ ನ್ಯಾಯಾಲಯದಲ್ಲಿ ಜವಾನನಾಗಿ ಕೆಲಸ ಪಡೆದರು. ವರದಿಯ ಪ್ರಕಾರ, ಲೋಕರೆ ಅವರ 10 ನೇ ತರಗತಿಯ ಅಂಕಗಳ ಆಧಾರದ ಮೇಲೆ ಜವಾನರ ನೇಮಕಾತಿ ಪರೀಕ್ಷೆಯ ಅಂತಿಮ ಮೆರಿಟ್ ಪಟ್ಟಿಯಲ್ಲಿ ಏಪ್ರಿಲ್ 22, 2024 ರಂದು ಅವರ ಹೆಸರು ಕಾಣಿಸಿಕೊಂಡಾಗ ಅವರನ್ನು ಕೆಲಸಕ್ಕೆ ಆಯ್ಕೆ ಮಾಡಲಾಯಿತು. ಲೋಕರೆ ಅವರ ಶೈಕ್ಷಣಿಕ ದಾಖಲೆಗಳ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ.

ಅರಿಯಡ್ಕ ಗ್ರಾ.ಪಂ. ಸದಸ್ಯ ಶಂಕರ್ ಆತ್ಮಹತ್ಯೆ

Posted by Vidyamaana on 2023-12-03 19:41:12 |

Share: | | | | |


ಅರಿಯಡ್ಕ ಗ್ರಾ.ಪಂ. ಸದಸ್ಯ ಶಂಕರ್ ಆತ್ಮಹತ್ಯೆ

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.


ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಮಾಡಿಕೊಂಡವರು.


ಬಂಗ್ಲೆಗುಡ್ಡೆ ಮನೆಯ ಶಂಕರ ಅವರು ಸುಮಾರು 5 ವರ್ಷಗಳ ಹಿಂದೆ ದೋಳಂತೋಡಿ ಎಂಬಲ್ಲಿ ಜಾಗ ಖರೀದಿ ಮಾಡಿ ಸೊಸೈಟಿ ಮತ್ತು ಇತರ ಸಂಘಗಳಲ್ಲಿ ಸಾಲ ಮಾಡಿದ್ದರು. ಇತ್ತೀಚೆಗೆ ಸಾಲದ ಬಗ್ಗೆ ಹಾಗೂ ಅದನ್ನು ಕಟ್ಟುವ ಬಗ್ಗೆ ಯೋಚನೆ ಮಾಡುತ್ತಿದ್ದು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಡಿ.3ರಂದು ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಬೈರಸನ್ನೇ ನೇಣಾಗಿ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.


ಕ್ಷಮಿಸು ವನಿತಾ:

ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ, ನನ್ನ ಸಾವಿಗೆ ನಾನೇ ಕಾರಣ. ಕ್ಷಮಿಸು ವನಿತಾ. ಮಕ್ಕಳನ್ನು ನೋಡಿಕೋ ಎಂಬುದಾಗಿ ಬರೆದಿದ್ದರು. ಮೃತರ ಪತ್ನಿ ವನಿತಾ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾರ್ಖಂಡ್ ನಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆ ರದ್ದು

Posted by Vidyamaana on 2024-02-14 12:41:32 |

Share: | | | | |


ಜಾರ್ಖಂಡ್ ನಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆ ರದ್ದು

ರಾಂಚಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ 2ನೇ ಹಂತದ ‘ಭಾರತ ಜೋಡೊ ನ್ಯಾಯ ಯಾತ್ರೆ’ಯನ್ನು ಜಾರ್ಖಂಡ್ ನಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ರೈತರು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ರಾಹುಲ್ ತೆರಳಿರುವುದರಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

‘ಮಂಗಳವಾರ ತಡರಾತ್ರಿ ಕೈಗೊಂಡ ನಿರ್ಧಾರದಂತೆ, ಜಾರ್ಖಂಡ್ ನಲ್ಲಿ ನಡೆಯಬೇಕಿದ್ದ ಭಾರತ್ ಜೋಡೊ ನ್ಯಾಯ ಯಾತ್ರೆಯ ಎಲ್ಲ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಕಾಂಗ್ರೆಸ್ ವಕ್ತಾರ ಸೋನಲ್ ಶಾಂತಿ ತಿಳಿಸಿದ್ದಾರೆ.

ಯುದ್ಧ ಪೀಡಿತ ಗಾಜಾಗೆ ನೆರವು ಕಳುಹಿಸಿದ ಭಾರತ: ಈಜಿಪ್ಟ್​ನ ರಫಾ ಗಡಿಯ ಮೂಲಕ ರವಾನೆ

Posted by Vidyamaana on 2023-10-22 11:50:11 |

Share: | | | | |


ಯುದ್ಧ ಪೀಡಿತ ಗಾಜಾಗೆ ನೆರವು ಕಳುಹಿಸಿದ ಭಾರತ: ಈಜಿಪ್ಟ್​ನ ರಫಾ ಗಡಿಯ ಮೂಲಕ ರವಾನೆ

ವದೆಹಲಿ: ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಇಂದು ಭಾರತವು ಮಾನವೀಯ ಆಧಾರದ ಮೇಲೆ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ಕಳುಹಿಸಿಕೊಟ್ಟಿದೆ.. ಯುದ್ಧದ ಪರಿಣಾಮ ಲಕ್ಷಾಂತರ ನಾಗರಿಕರು ನಿರ್ಗತಿಕರಾಗಿದ್ದು, ತನ್ನ ಮಿತ್ರ ಅಮೆರಿಕದ ಮನವಿ ಮೇರೆಗೆ ಅಲ್ಲಿನ ಜನರಿಗೆ ನೆರವು ಒದಗಿಸಲು ಇಸ್ರೇಲ್​ ಒಪ್ಪಿಕೊಂಡಿದೆ.


ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳಲ್ಲಿ ಜೀವ ಉಳಿಸುವ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಚೀಲಗಳು, ಟಾರ್ಪೌಲಿನ್‌ಗಳು, ನೈರ್ಮಲ್ಯ ಉಪಯುಕ್ತತೆಗಳು ಮತ್ತು ಇತರ ಅಗತ್ಯ ವಸ್ತುಗಳ ಜೊತೆಗೆ ನೀರು ಶುದ್ಧೀಕರಣ ಮಾತ್ರೆಗಳನ್ನು ಒಳಗೊಂಡಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್​ ಬಾಗ್ಚಿ ಎಕ್ಸ್​ ಮೂಲಕ ತಿಳಿಸಿದ್ದಾರೆ.


ಗಾಜಾವನ್ನು ಸಂಪೂರ್ಣ ವಶಕ್ಕೆ ಪಡೆದಿರುವುದಾಗಿ ಇಸ್ರೇಲ್​ ಘೋಷಣೆ ಮಾಡಿದ್ದು, ನೀರು, ವಿದ್ಯುತ್​, ಇಂಧನ ಮತ್ತು ಆಹಾರ ಪೂರೈಕೆಯನ್ನು ಸ್ಥಗಿತಗೊಳಿಸಿದ್ದು, ದೀರ್ಘಕಾಲ ಕೊರತೆಯನ್ನು ಸೃಷ್ಟಿಸುತ್ತಿದೆ. ಇಸ್ರೇಲ್​​ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿ ಒಂದೇ ಗಾಜಾಗೆ ಇರುವ ಏಕೈಕ ಮಾರ್ಗವಾಗಿದೆ. ತಮ್ಮ ಮಿತ್ರ ದೇಶವಾಗಿರುವ ಯುನೈಟೆಡ್​ ಸ್ಟೇಟ್ಸ್​ ಮನವಿಯ ಮೇರೆಗೆ ಈಜಿಪ್ಟ್​ನಿಂದ ಗಾಜಾಗೆ ನೆರವು ಸಾಗಿಸಲು ಇಸ್ರೇಲ್​ ಅನುಮತಿಸಿದೆ. ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಗೆ ತಲುಪಲಿದೆ.


ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಗಳಿಂದ ಬಂದ ನೆರವನ್ನು ಗಾಜಾಗೆ ತಲುಪಿಸುವ ಜವಾಬ್ದಾರಿಯನ್ನು ಈಜಿಪ್ಟಿನ ರೆಡ್ ಕ್ರೆಸೆಂಟ್‌ ಕಚೇರಿಯು ಹೊತ್ತಿದೆ. ನಿನ್ನೆ ಇಪ್ಪತ್ತು ಟ್ರಕ್‌ಗಳು ಈಜಿಪ್ಟಿನ ಟರ್ಮಿನಲ್ ಅನ್ನು ಪ್ರವೇಶಿಸಿದ್ದವು. ಪ್ಯಾಲೆಸ್ತೀನ್​ ಕಡೆಯ 36 ಖಾಲಿ ಟ್ರೇಲರ್‌ಗಳು ಟರ್ಮಿನಲ್‌ಗೆ ಪ್ರವೇಶಿಸಿ ಈಜಿಪ್ಟಿನ ಕಡೆಗೆ ಹೋಗಿ, ನೆರವನ್ನು ಲೋಡ್ ಮಾಡಿಕೊಂಡು ರಫಾ ಗಡಿಯ ಮೂಲಕ ಗಾಜಾಗೆ ತೆರಳಿದವು. ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸಹ ಶುಕ್ರವಾರ ಈಜಿಪ್ಟ್ ಕ್ರಾಸಿಂಗ್ ಬದಿಗೆ ಭೇಟಿ ನೀಡಿ ನೆರವು ವಿತರಣೆಯ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಿದರು. ಇವು ಕೇವಲ ಟ್ರಕ್​ಗಳಲ್ಲ, ಜೀವರಕ್ಷಕಗಳು ಎಂದು ಮಾಧ್ಯಮಗಳಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು.


ಅ.7ರ ದಾಳಿಗೆ ಪ್ರತಿಯಾಗಿ ಇಸ್ರೇಲ್​ ನಡೆಸುತ್ತಿರುವ ದಾಳಿಗೆ ಗಾಜಾ ಸಂಪೂರ್ಣ ನಲುಗಿ ಹೋಗಿದೆ. ವೆಸ್ಟ್​ ಬ್ಯಾಂಕ್​ನಲ್ಲೂ ಇಸ್ರೇಲ್​ ರಕ್ಷಣಾ ಪಡೆಗಳು ದಾಳಿ ನಡೆಸುತ್ತಿವೆ. ಇಸ್ರೇಲ್​ ನಡೆಸಿದ ಬಾಂಬ್​ ದಾಳಿಯಲ್ಲಿ ಈವರೆಗೂ 4300ಕ್ಕೂ ಅಧಿಕ ಮಂದಿ ಪ್ಯಾಲೆಸ್ತೀನ್​ನಲ್ಲಿ ಮೃತಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನವರು ನಾಗರಿಕರು ಎಂದು ಹಮಾಸ್ ನಡೆಸುವ ಆರೋಗ್ಯ ಸಚಿವಾಲಯ ತಿಳಿಸಿದೆ.


ಇಸ್ರೇಲ್​ ಮತ್ತು ಹಮಾಸ್​ ನಡುವಿನ ಯುದ್ಧವೂ ಎರಡು ವಾರಗಳನ್ನು ಪೂರೈಸಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಕದನ ಕಾರ್ಮೋಡ ಮಾತ್ರ ತಿಳಿಯಾಗಿಲ್ಲ. ಈಜಿಪ್ಟ್​​ನಲ್ಲಿ ನಡೆದ ಶಾಂತಿ ಶೃಂಗಸಭೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಮಾನವೀಯ ಕದನ ವಿರಾಮಕ್ಕಾಗಿ ಒತ್ತಾಯಿಸಿದ್ದಾರೆ. ಆದರೂ ಇಸ್ರೇಲ್​ ಮಾತ್ರ ಗಾಜಾ ಮೇಲಿನ ತನ್ನ ದಾಳಿಯನ್ನು ಮಾತ್ರ ಮುಂದುವರಿಸಿದೆ

ಬೆಂಗಳೂರಲ್ಲಿ ಒಂದೇ ಮನೆಗೆ 21 ಬ್ಯಾಂಕ್ ಗಳಿಂದ ಸಾಲ ಪಡೆದ ಭೂಪ: ಹರಾಜಿ ಗೆ ಬ್ಯಾಂಕ್ ಗಳಿಂದ ಪೈಪೋಟಿ

Posted by Vidyamaana on 2024-02-18 20:36:42 |

Share: | | | | |


ಬೆಂಗಳೂರಲ್ಲಿ ಒಂದೇ ಮನೆಗೆ 21 ಬ್ಯಾಂಕ್ ಗಳಿಂದ ಸಾಲ ಪಡೆದ ಭೂಪ: ಹರಾಜಿ ಗೆ ಬ್ಯಾಂಕ್ ಗಳಿಂದ ಪೈಪೋಟಿ

ಬೆಂಗಳೂರು : ನಗರದಲ್ಲಿ ಒಂದೇ ಮನೆಗೆ ಒಂದು ಬ್ಯಾಂಕ್ ನಿಂದ ಲೋನ್ ಸಿಗೋದೇ ಕಷ್ಟ. ಹೀಗಿರುವಾಗ ಒಂದೇ ಮನೆಗೆ ಬರೋಬ್ಬರಿ 21 ಬ್ಯಾಂಕ್ ಗಳಿಂದ ಕೋಟ್ಯಂತರ ಸಾಲವನ್ನು ವ್ಯಕ್ತಿಯೊಬ್ಬ ಪಡೆದಿದ್ದಾರೆ. ಆ ಬಳಿಕ ಬ್ಯಾಂಕ್ ಗಳಿಗೆ ಸಾಲ ಕಟ್ಟಲಾಗದೇ, ಪರಾರಿಯಾಗಿದ್ದಾನೆ. ಇಂತಹ ಮನೆಯನ್ನು ಹರಾಜು ಹಾಕೋದಕ್ಕಾಗಿ 21 ಬ್ಯಾಂಕ್ ಗಳು ಪೈಪೋಟಿ ಕೂಡ ನಡೆಸಿರೋ ಘಟನೆ ನಡೆದಿದೆ.ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರಿನ ನಂಜುಂಡಪ್ಪ ಲೇಔಟ್ ನಲ್ಲಿನ ನಂಜುಂಡಯ್ಯ ಎಂಬುವರು ತಮ್ಮ ಒಂದೇ ಮನೆಯ ಮೇಲೆ 21 ಬ್ಯಾಂಕ್ ಗಳಿಂದ 5 ಕೋಟಿಗೂ ಹೆಚ್ಚು ಸಾಲ ಪಡೆದಿದ್ದಾರೆ. ಸಾಲ ಕಟ್ಟದ ಕಾರಣ, ನಂಜುಂಡಯ್ಯ ಮನೆಗೆ 21 ಬ್ಯಾಂಕ್ ಗಳು ಮನೆ ಹರಾಜು ಹಾಕೋ ಬಗ್ಗೆ ನೋಟಿಸ್ ಅಂಟಿಸಿದ್ದಾರೆ.


ಸಾಲ ಕಟ್ಟಲಾಗದೇ ಮನೆಗೆ ಬೀಗ ಹಾಕಿಕೊಂಡು ನಂಜುಂಡಯ್ಯ ಪರಾರಿಯಾಗಿದ್ದು, ಈಗ ನಾ ಮುಂದು, ತಾ ಮುಂದೆ ಎನ್ನುವಂತೆ ಬ್ಯಾಂಕ್ ಗಳು ನಂಜುಂಡಯ್ಯ ಮನೆಯನ್ನು ಹರಾಜು ಮಾಡೋದಕ್ಕೆ ತುದಿಗಾಲಲ್ಲಿ ನಿಂತಿವೆ.


ಒಂದು ಮನೆಗೆ ಒಂದು ಬಾರಿಗೆ ಸಾಲ ಕೊಡುವುದಕ್ಕೆ ವಿವಿಧ ದಾಖಲೆ ಪತ್ರಗಳನ್ನು ಹತ್ತಾರು ಬಾರಿ ಪಡೆದು, ಪರಿಶೀಲಿಸೋ ಬ್ಯಾಂಕ್ ಗಳು ಮಾತ್ರ, ನಂಜುಂಡಯ್ಯಗೆ 21 ಬ್ಯಾಂಕ್ ಗಳು ಸಾಲ ಕೊಟ್ಟಿದ್ದು ಹೇಗೆ ಎಂಬ ಅನುಮಾನ ಈಗ ಕಾಡುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Recent News


Leave a Comment: