ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

Posted by Vidyamaana on 2024-03-22 08:14:00 |

Share: | | | | |


ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಎ.10 ರಿಂದ 20 ರ ತನಕ ನಡೆಯಲಿದ್ದು, ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಚಿತವಾಗಿ ಸೇವಾ ರೂಪದಲ್ಲಿ ನಡೆಸಲು ಇಚ್ಚಿಸುವವರು ದೇವಳದ ಕಚೇರಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ.ಅರ್ಜಿಯಲ್ಲಿ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕಾರ್ಯಕ್ರಮದ ವಿವರ, ತಂಡದಲ್ಲಿ ಭಾಗವಹಿಸುವ ಸದಸ್ಯರ ಸಂಖ್ಯೆಯನ್ನು ನಮೂದಿಸಬೇಕು. ತಂಡಗಳು ನೀಡುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿಯದ್ದಾಗಿದ್ದು, ಪಾಶ್ಚಾತ್ಯ ಶೈಲಿಗೆ ಅವಕಾಶವಿರುವುದಿಲ್ಲ. ಆಸಕ್ತರು ಮಾ.25ರ ಒಳಗೆ ಅರ್ಜಿಯನ್ನು ದೇವಳದ ಕಚೇರಿಗೆ ನೀಡುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448732414 ಅನ್ನು ಸಂಪರ್ಕಿಸುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದೆಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ.ಶ್ರೀನಿವಾಸ ಅವರು ತಿಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Posted by Vidyamaana on 2023-04-28 05:49:18 |

Share: | | | | |


ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿದರು.ಧರ್ಮಸ್ಥಳಕ್ಕೆ ಭೇಟಿ ನೀಡಿದ ಪುತ್ತಿಲ ರವರು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಸುಳ್ಯ ಪೈಚಾರ ನಿವಾಸಿ ಇಸಾಕ್ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2024-03-04 14:42:34 |

Share: | | | | |


ಸುಳ್ಯ ಪೈಚಾರ ನಿವಾಸಿ ಇಸಾಕ್  ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾ :04 ರಂದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ  ಪೈಚಾರ್‌ ಮೂಲದ ನಿವಾಸಿ ಲಾರಿ ಚಾಲಕ ಇಸಾಕ್ ಎಂದು ಗುರುತಿಸಲಾಗಿದೆ.   ಮಾ ೨ ರಂದು ರೆಸಿಡೆನ್ಸಿಗೆ ಬಂದಿದ್ದರು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನ್ಮಾಷ್ಟಮಿ: ಅರ್ಘ್ಯ ಸಮಯದಲ್ಲೇ ಶ್ರೀ ಕೃಷ್ಣ ಮಠಕ್ಕೆ ಸ್ಪೀಕರ್ ಖಾದರ್ ಭೇಟಿ

Posted by Vidyamaana on 2023-09-07 14:22:07 |

Share: | | | | |


ಜನ್ಮಾಷ್ಟಮಿ: ಅರ್ಘ್ಯ ಸಮಯದಲ್ಲೇ ಶ್ರೀ ಕೃಷ್ಣ ಮಠಕ್ಕೆ ಸ್ಪೀಕರ್ ಖಾದರ್ ಭೇಟಿ

ಉಡುಪಿ; ಕೃಷ್ಣ ಜನ್ಮಾಷ್ಟಮಿಯಂದು ಕೃಷ್ಣಮಠಕ್ಕೆ ಭೇಟಿ ಕೊಟ್ಟು ಸ್ಪೀಕರ್ ಯು ಟಿ ಖಾದರ್ ಅಚ್ಚರಿ ಮೂಡಿಸಿದ್ದಾರೆ.ಅದು ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಸ್ಪೀಕರ್ ಸರ್ವಧರ್ಮ ಸಮಾನತೆಯ ಸಂದೇಶ ಸಾರಿದ್ದಾರೆ.


ಇನ್ನೊಂದು ಗಮನಾರ್ಹ ವಿಚಾರವೆಂದರೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ 13 ಶಾಸಕರ ಪೈಕಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉಡುಪಿ ಮಠಕ್ಕೆ ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದ ಏಕೈಕ ಶಾಸಕರಾಗಿದ್ದಾರೆ.


ಇನ್ನು ಖಾದರ್ ಮಠಕ್ಕೆ ಭೇಟಿ ನೀಡುತ್ತಿದ್ದಂತೆ ಮಠದ ಸತ್ಯನಾರಾಯಣ ಭಟ್ ಅವರು ಅವರನ್ನು ಬರಮಾಡಿಕೊಂಡರು. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್ ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ವಿಶೇಷವೆಂದರೆ ಕಾಕತಾಳೀಯವೆಂಬಂತೆ ಭೇಟಿ ನೀಡಿದ ಅದೇ ಗಳಿಗೆಯಲ್ಲಿ ಶ್ರೀಕೃಷ್ಣ ಜನ್ಮ ತಾಳಿದ್ದರು ಎಂದು ಮಠದ ಸತ್ಯನಾರಾಯಣ ಭಟ್ ಉಲ್ಲೇಖಿಸಿದರು. ಈ ಭಾಗ್ಯ ಎಲ್ಲರಿಗೂ ಪ್ರಾಪ್ತವಾಗದು. ಎರಡೂ ಜಿಲ್ಲೆಯ 13 ಶಾಸಕರ ಪೈಕಿ 11 ಮಂದಿ ಬಿಜೆಪಿ ಶಾಸಕರಿದ್ದರೂ ಅವರ್ಯಾರಿಗೂ ಸಿಗದ ಭಾಗ್ಯ ಸ್ಪೀಕರ್ ಖಾದರ್ ಗೆ ಲಭಿಸಿದ್ದು ಕಾಕತಾಳೀಯ.


ಸ್ಪೀಕರ್ ಅವರೊಂದಿಗೆ ಕೌನ್ಸಿಲರ್ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲ ಉದಯಕುಮಾರ್ ಶೆಟ್ಟಿ, ಮುಸ್ತಫ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.

ಬಂಟ್ವಾಳ: ಸರ ಕಳ್ಳರ ಬಂಧನ; ತನಿಖಾ ತಂಡಕ್ಕೆ ಪೊಲೀಸ್‌ ಅಧೀಕ್ಷಕರಿಂದ ನಗದು ಬಹುಮಾನ ಘೋಷಣೆ

Posted by Vidyamaana on 2023-12-23 19:31:54 |

Share: | | | | |


ಬಂಟ್ವಾಳ: ಸರ ಕಳ್ಳರ ಬಂಧನ; ತನಿಖಾ ತಂಡಕ್ಕೆ ಪೊಲೀಸ್‌ ಅಧೀಕ್ಷಕರಿಂದ ನಗದು ಬಹುಮಾನ ಘೋಷಣೆ

ಬಂಟ್ವಾಳ : ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿಯ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ಮಂಗಳೂರು ಬೈಕಂಪಾಡಿಯ ಅಶೋಕ, ಮಂಗಳೂರು ದಂಬೇಲ್ ನಿವಾಸಿ ಸಚಿನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದೂವರೆ ಪವನಿನ ಚಿನ್ನದ ಸರ ಮತ್ತು ಬೈಕನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಡಿ.14 ರಂದು ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿರುವ ಅಂಗಡಿಯೊಂದಕ್ಕೆ ಬಂದ ಆರೋಪಿಗಳು ಅಂಗಡಿ ಮಾಲಕಿ ಸರೋಜಿನಿ ಅವರ ಕುತ್ತಿಗೆಯಿಂದ ಚೈನ್ ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ಅವರ ನಿರ್ದೇಶನದಂತೆ ಇನ್ಸ್‌ ಪೆಕ್ಟರ್ ಅನಂತ ಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಗಳಾದ ರಾಮಕೃಷ್ಣ, ಕಲೈಮಾರ್ ಮತ್ತವರ ಸಿಬ್ಬಂದಿ ಇರ್ಷಾದ್‌, ರಾಜೇಶ್, ಗಣೇಶ್, ಮೋಹನ, ವಿವೇಕ್ ಅವರು ಬೆಂಜನಪದವಿನ ಕರಾವಳಿ ಸೈಟ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ಒಳಪಡಿಸಲಾಗಿದೆ.


ಈ ಕೃತ್ಯಕ್ಕೆ ಸಂಬಂಧಿಸಿ ಅರೋಪಿಗಳ ಯಾವುದೇ ಸುಳಿವು ಇರಲಿಲ್ಲ, ಘಟನಾ ಸ್ಥಳದಲ್ಲಿ ಸಿ.ಸಿ ಕ್ಯಾಮರ ಕೂಡ ಇರದಿದ್ದು, ವಾರದೊಳಗೆ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಹಾಗೂ ತಂಡಕ್ಕೆ ಪೊಲೀಸ್‌ ಅಧೀಕ್ಷಕರು ನಗದು ಬಹುಮಾನ ಘೋಷಿಸಿದ್ದಾರೆ.

ದೇಶದ ಐಸ್‌ಕ್ರೀಂ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ರಘುನಂದನ್ ಕಾಮತ್ ನಿಧನ

Posted by Vidyamaana on 2024-05-18 08:41:54 |

Share: | | | | |


ದೇಶದ ಐಸ್‌ಕ್ರೀಂ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ರಘುನಂದನ್ ಕಾಮತ್ ನಿಧನ

ಮಂಗಳೂರು , ಮೇ 17: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು.ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.



Leave a Comment: