ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


BREAKING :ವಯನಾಡ್ ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ, 2 ದಿನಗಳ ಶೋಕಾಚರಣೆ ಘೋಷಣೆ

Posted by Vidyamaana on 2024-07-30 17:12:16 |

Share: | | | | |


BREAKING :ವಯನಾಡ್ ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ, 2 ದಿನಗಳ ಶೋಕಾಚರಣೆ ಘೋಷಣೆ

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಮತ್ತು 119 ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಗುಡ್ಡಗಾಡು ಪ್ರದೇಶಗಳಿಂದ ಈವರೆಗೆ 250 ಜನರನ್ನು ರಕ್ಷಿಸಲಾಗಿದೆ.ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ಮತ್ತು ನಾಲ್ಕು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡಗಳನ್ನು ನೆಲದಲ್ಲಿ ನಿಯೋಜಿಸಲಾಗಿದೆ.

ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

Posted by Vidyamaana on 2024-01-13 21:27:38 |

Share: | | | | |


ಹಾಲಿ ಶಾಸಕರು ಮಾಜಿ ಶಾಸಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡುವುದು, ಜನತೆಗೆ ಸುಳ್ಳು ಮಾಹಿತಿ ನೀಡುವುದು ಘನತೆಗೆ ತಕ್ಕುದಲ್ಲ’ – ರಾಧಾಕೃಷ್ಣ ಆಳ್ವ

ಪುತ್ತೂರು : ಆರಂಭದ ಒಂದು ಮಳೆಗೆ ಕೊಡೆ ಹರಿದಂತೆ ಎಂಬ ಗಾದೆಯಂತೆ ಶಾಸಕರಾಗಿ ಮೊದಲ ಅರ್ಧ ವರ್ಷದಲ್ಲಿಯೇ ಈ ಹಿಂದಿನ ಶಾಸಕರು ತಂದಿರುವ ಅನುದಾನದ ಕಾಮಗಾರಿಯು ಶಿಲಾನ್ಯಾಸವಾಗಿ ಕೆಲಸ ಪ್ರಗತಿಯಲ್ಲಿರುವಾಗಲೇ ಹಾಲಿ ಶಾಸಕರು ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ ಇರುವುದು ಜನಸಾಮಾನ್ಯರ ನಡುವಿನಲ್ಲಿ ನಗೆಪಾಟಲಿಗೀಡಾಗಿರುವುದಂತು ಸತ್ಯ ಎಂದು ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷರಾದ ರಾಧಕೃಷ್ಣ ಆಳ್ವ ಹೇಳಿದರು.


ಪುತ್ತೂರು ಕ್ಷೇತ್ರಾದ್ಯಂತ ಈಗ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಅದರಲ್ಲಿಯೂ ಉಪ್ಪಿನಂಗಡಿಯ ದ್ವಿಪದ ರಸ್ತೆಯಾಗಿರಲಿ., ಬಿಳಿಯೂರುಕಟ್ಟೆ-ಸಾಜ-ಕುದ್ದುಪದವು ರಸ್ತೆಯ ಕಾಮಗಾರಿಯಾಗಿರಲಿ.., ಎಲ್ಲವೂ ಕೂಡ ಬಿಜೆಪಿ ಸರಕಾರ ಇರುವಾಗ ಬಂದಿರುವಂತ ಅನುದಾನಗಳು ಆದರೆ ಹಾಲಿ ಶಾಸಕರು ಹೋದಲ್ಲಿ ಎಲ್ಲಾ ಮಾಜಿ ಶಾಸಕರನ್ನು ಅವಹೇಳನಕಾರಿಯಾಗಿ ಮಾತಾನಾಡುವುದು ಮತ್ತು ಜನರಿಗೆ ಸುಳ್ಳು ಮಾಹಿತಿಯನ್ನು ನೀಡುವುದು ಘನತೆಗೆ ತಕ್ಕುದಲ್ಲ ಎಂದು ಹೇಳಿದರು.ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಜನವರಿ14ರಿಂದ 21ರವರೆಗೆ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ಸ್ವಚ್ಛತೆಯಲ್ಲಿ ಕಾರ್ಯಕರ್ತರು ,ಪದಾಧಿಕಾರಿಗಳು ಭಾಗವಹಿಸಬೇಕು ಮತ್ತು ಜ.22 ಪ್ರತಿಷ್ಠಾ ದಿನದಂದು ಎಲ್ಲಾ ಹಿಂದೂ ಮನೆಗಳಲ್ಲಿ ಪ್ರಧಾನಿಯವರ ಆಶಯದಂತೆ ದೀಪ ಬೆಳಗಿಸುವಂತೆ ಈ ಸಂದರ್ಭದಲ್ಲಿ ವಿನಂತಿಸಿದರು.


ಮಂಡಲದ ಪ್ರ.ಕಾರ್ಯದರ್ಶಿ ನಿತೀಶ್ ಶಾಂತಿವನ ಸ್ವಾಗತಿಸಿದರು.


ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ , ಮುಕುಂದ ಬಜತ್ತೂರು, ಅರುಣ್ ವಿಟ್ಲ, ಮೀನಾಕ್ಷಿ ಮಂಜುನಾಥ್,ಉಷಾ ಮುಳಿಯ,ವಿಜಯ ಕೋರಂಗ, ಖಜಾಂಜಿ ರಮೇಶ್ ಭಟ್, ಕಾರ್ಯದರ್ಶಿ ರಮಣಿ ಗಾಣಿಗ, ಲೋಹಿತ್ ಅಮ್ಚಿನಡ್ಕ, ವಿವಿಧ ಮೋರ್ಚಾ ಅಧ್ಯಕ್ಷ ಕಾರ್ಯದರ್ಶಿಗಳಾದ ಯಶಸ್ವಿನಿ ಶಾಸ್ತ್ರಿ, ಯಶೋಧ ಗೌಡ, ಸುರೇಶ್ ಕಣ್ಣರಾಯ, ಪುನೀತ್ ಮಾಡತ್ತಾರು, ನವೀನ್ ಪಡ್ನೂರು,ಸುನೀಲ್ ದಡ್ಡು, ಮಹಾಶಕ್ತಿ ಕಾರ್ಯದರ್ಶಿಗಳಾದ ಸುರೇಶ್ ಅತ್ರಮಜಲು, ದಯಾನಂದ ಶೆಟ್ಟಿ ಉಜ್ರೆಮಾರು ಮೊದಲಾದವರು ಉಪಸ್ಥಿತರಿದ್ದರು.ಮಂಡಲ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮಂಗ್ಲಿಮನೆ ಧನ್ಯವಾದ ಸಲ್ಲಿಸಿದರು.

ನಾಳೆ (ಆ.28) ಪುತ್ತೂರು ಶಾಸಕರ ಸುಸಜ್ಜಿತ ಕಚೇರಿ ಲೋಕಾರ್ಪಣೆ

Posted by Vidyamaana on 2023-08-27 15:50:25 |

Share: | | | | |


ನಾಳೆ (ಆ.28)  ಪುತ್ತೂರು ಶಾಸಕರ ಸುಸಜ್ಜಿತ ಕಚೇರಿ ಲೋಕಾರ್ಪಣೆ

ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ ಕಚೇರಿ ಆ.28ರಂದು ಉದ್ಘಾಟನೆಗೊಳ್ಳ ಲಿದೆ.     ಶಾಸಕರ ಅಧಿಕೃತ ಕಚೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಚೇರಿ (ಪುಡಾಕಚೇರಿ)ಯಲ್ಲಿ ಉದ್ಘಾಟನೆ ಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿ ದ್ದಾರೆ.

     ವಿಶಾಲ ಸ್ಥಳಾವಕಾಶವನ್ನು ಹೊಂದಿರುವ ಕಚೇರಿಯಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರಿಗೆ, ಅಥವಾ ಕ ಚೇರಿಗೆ ಬರುವ ಸಾರ್ವಜನಿಕರಿಗೆ ಎಲ್ಲಾ ಸೌಕರ್ಯಗಳ ನ್ನೊಳನ್ನು ಈ ಕಚೇರಿ ಹೊಂದಿದೆ. ಪಾರ್ಕಿಂಗ್ ವ್ಯವಸ್ಥೆ ಯೂ ಸಾಕಷ್ಟಿದೆ. ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾ ಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಚೇರಿ ಉದ್ಘಾಟನೆ ಬಳಿಕ ಸುಮಾರು 160 ಕುಟುಂಬಗ ಳಿಗೆ ಶಾಸಕರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಿಳಿ ದು ಬಂದಿದೆ.ಸಾರ್ವಜನಿಕರಿಗೆ ತ್ವರಿತಗತಿಯ ಸೇವೆ ನೀಡುವುದು ಈ ಕಚೇರಿಯ ಉದ್ದೇಶವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಈ ಕಚೇರಿಗೆ ಬಂದರೆ ಶಾಸಕರನ್ನು ಭೇಟಿಯಾಗಬಹುದು. ಕಚೇರಿಯಲ್ಲಿ ಸಾರ್ವಜನಿಕರಿಗೆ  ಎಲ್ಲಾ ರೀತಿಯ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಯಾವುದೇ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೆ ಇಲಾಖೆಯಲ್ಲಿ ಕೆಲಸ ಕಾರ್ಯಗಳು ನಡೆಯದೆ ಇದ್ದಲ್ಲಿ ಶಾಸಕರ ಕಚೇರಿಯಲ್ಲಿರುವ ಆಯಾ ಇಲಾಖೆಗೆ ಸಂಬಂ ಧಿಸಿದ ಸಿಬಂದಿಗಳನ್ನು ಭೇಟಿಯಾಗಿ ಮಾತನಾಡಬಹುದಾಗಿದೆ.

ನನ್ನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂ ಲವಾಗಲೆಂದು ಮಿನಿ ವಿಧಾನಸೌಧದ ಬಳಿಯೇ ಹೊಸ ಕಚೇರಿಯನ್ನು ತೆರೆದಿದ್ದು ಸಾರ್ವಜನಿಕರ ಸೇವೆಗೆ ಸಿಬಂ ದಿಗಳನ್ನು ನೇಮಕ ಮಾಡಿದ್ದೇನೆ. ಯಾವುದೇ ಸಮಸ್ಯೆಗ ಳಿದ್ದರೂ, ತೊಂದರೆಗೊಳಗಾದವರು ಶಾಸಕರ ಕಚೇರಿಗೆ ಬಂದು ತಿಳಿಸಬಹುದು. ದೂರು, ಮನವಿ ಇದ್ದರೂ ಕೊಡಬಹುದು. ಕ್ಷೇತ್ರದ ಎಲ್ಲರಿಗೂ ನನ್ನ ಕಚೇರಿಗೆ ಮುಕ್ತವಾಗಿ ಬರಲು ಅವಕಾಶ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಕಿನ್ನಿಗೋಳಿ, ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ

Posted by Vidyamaana on 2024-04-17 04:22:35 |

Share: | | | | |


ಕಿನ್ನಿಗೋಳಿ, ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ

ಮಂಗಳೂರು, ಎ.16: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದ್ದಾರೆ. ಅಭ್ಯರ್ಥಿಯಾದ ಬಳಿಕ ಚೌಟ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಸಂಚಾರ ನಡೆಸಿದ್ದು, ಹಳೆಯಂಗಡಿ, ಕಿನ್ನಿಗೋಳಿ ಪೇಟೆ ಮತ್ತು ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಸಂಚರಿಸಿ ಅಂಗಡಿ, ಬೀದಿಗಳಲ್ಲಿ ಜನರ ಬಳಿ ಮತಯಾಚನೆ ಮಾಡಿದ್ದಾರೆ.


ಬೆಳಗ್ಗೆ ತೋಕೂರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಬ್ರಿಜೇಶ್ ಚೌಟ, ಬಿಜೆಪಿ ಕಾರ್ಯಕರ್ತರ ಜೊತೆಗೆ ದೇವರಲ್ಲಿ ಪ್ರಾರ್ಥಿಸಿ ಮತಯಾಚನೆಗೆ ತೊಡಗಿದ್ದಾರೆ. ಬಳಿಕ ಹಳೆಯಂಗಡಿ ಮತ್ತು ಕಿನ್ನಿಗೋಳಿ ಪೇಟೆಯಲ್ಲಿ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಬಿಜೆಪಿ ಪ್ರಮುಖರ ಜೊತೆಗೆ ಸಂಚರಿಸಿದ ಚೌಟರಿಗೆ ಅಪಾರ ಜನಬೆಂಬಲ ವ್ಯಕ್ತವಾಗಿದೆ. ಮತದಾರರು ಕೈಕುಲುಕಿ ಬಿಜೆಪಿ ಮತ್ತು ಮೋದಿಗೆ ಜೈಕಾರ ಕೂಗಿದ್ದಾರೆ. ಇದರ ನಡುವೆ ಬಳ್ಕುಂಜೆ ವಿಠೋಧರ ಮಂದಿರ, ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿಯಿತ್ತು ವಿಶೇಷ ಪ್ರಾರ್ಥನೆ ನೆರವೇರಿಸಿದ್ದಾರೆ.

ಎನ್ ಐಎ ದಾಳಿ ಪ್ರಕರಣ:ಪುತ್ತೂರಿನಲ್ಲಿ ನಾಲ್ವರನ್ನು ವಶಕ್ಕೆ ಪಡದ ಎನ್ ಐಎ ಅಧಿಕಾರಿಗಳು

Posted by Vidyamaana on 2023-05-31 10:23:28 |

Share: | | | | |


ಎನ್ ಐಎ ದಾಳಿ ಪ್ರಕರಣ:ಪುತ್ತೂರಿನಲ್ಲಿ ನಾಲ್ವರನ್ನು ವಶಕ್ಕೆ ಪಡದ ಎನ್ ಐಎ ಅಧಿಕಾರಿಗಳು

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಪುತ್ತೂರಿನಲ್ಲಿ ನಾಲ್ವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್ ಕೋಡಿಂಬಾಡಿ (37), ಫೈಜಲ್ ಅಹಮ್ಮದ್ ತಾರಿಗುಡ್ಡೆ, ಸಂಶುದ್ದೀನ್ ಕೂರ್ನಡ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ಇವರಿಗೆ ಪಿಎಫ್‌ಐ ಲಿಂಕ್ ಸಾಧ್ಯತೆ ಇದೆ ಎನ್ನಲಾಗಿದೆ.

ನಟಿ ನೂರ್ ಮಾಲಾಬಿಕಾ ದಾಸ್ ಆತ್ಮಹತ್ಯೆ

Posted by Vidyamaana on 2024-06-10 19:13:11 |

Share: | | | | |


ನಟಿ ನೂರ್ ಮಾಲಾಬಿಕಾ ದಾಸ್ ಆತ್ಮಹತ್ಯೆ

ಮುಂಬೈ: ಬಾಲಿವುಡ್ ನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅಪಾರ್ಟ್ ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2023ರಲ್ಲಿ ಬಿಡುಗಡೆಗೊಂಡಿದ್ದ ದಿ ಟ್ರಯಲ್ ವೆಬ್ ಸರಣಿಯಲ್ಲಿ ನಟಿ ಕಾಜೋಲ್ ಜತೆ ಮಾಲಾಬಿಕಾ ದಾಸ್ ನಟಿಸಿದ್ದರು.

Recent News


Leave a Comment: