ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


BREAKING : ಅಧಿಕೃತವಾಗಿ ಹೆಸರು ಬದಲಿಸಿದ RCB

Posted by Vidyamaana on 2024-03-19 22:02:50 |

Share: | | | | |


BREAKING : ಅಧಿಕೃತವಾಗಿ ಹೆಸರು ಬದಲಿಸಿದ RCB

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮತ್ತು ಮಹಿಳಾ ಪ್ರೀಮಿಯರ್ ಲೀಗ್ (WPL)ನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂದು ಮರುನಾಮಕರಣ ಮಾಡಲಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ಹೆಸರು ಬದಲಾವಣೆಯನ್ನ ಘೋಷಿಸಲಾಯಿತು.

ನಾವು ಪ್ರೀತಿಸುವ ನಗರ, ನಾವು ಅಪ್ಪಿಕೊಳ್ಳುವ ಪರಂಪರೆ, ಮತ್ತು ಇದು ನಮ್ಮ ಹೊಸ ಅಧ್ಯಾಯದ ಸಮಯ. ನಿಮಗೆ ಪ್ರಸ್ತುತಪಡಿಸುತ್ತಿದ್ದೇವೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು. ನೀವು ತಂಡ, ನೀವು ಆರ್ಸಿಬಿ" ಎಂದು ಬರೆಯಲಾಗಿದೆ.


ಮಂಗಳೂರು: SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

Posted by Vidyamaana on 2023-05-05 08:31:45 |

Share: | | | | |


ಮಂಗಳೂರು:  SDPI ರಾಷ್ಟ್ರೀಯ ಅಧ್ಯಕ್ಷರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು.

ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ  ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು

ಇಂದು ಮತ್ತು ನಾಳೆ ಉಳ್ವಾಲ, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ.ಕೆ ಫೈಝಿಯವರು ಭಾಗವಹಿಸಲಿದ್ದಾರೆ.

ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ತೆರಳುತ್ತಿದ್ದ ಕುಟುಂಬ ಅಪಘಾತಕ್ಕೆ ಬಲಿ

Posted by Vidyamaana on 2024-03-21 14:03:49 |

Share: | | | | |


ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ತೆರಳುತ್ತಿದ್ದ ಕುಟುಂಬ ಅಪಘಾತಕ್ಕೆ ಬಲಿ

ತಾಯಿಫ್: ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿ, 40 ದಿನದ ಹಸುಗೂಸು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದ ತಾಯಿಫ್ ನಲ್ಲಿ ನಡೆದಿದೆ.

ಹಳೆಯಂಗಡಿ ಪಕ್ಷಿಕೆರೆಯ ಮುಹಮ್ಮದ್ ರಮೀಝ್ ಹಾಗೂ ಹಿಬಾ ಮತ್ತು ಅವರ ಇಬ್ಬರು ಮಕ್ಕಳು ನಿಧನರಾಗಿದ್ದಾರೆ.

ಕತಾರ್‌ ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಫಘಾತ ತಾಯಿಫ್ ನಿಂದ ಸುಮಾರು 160 ಕಿಲೋ ಮೀಟರ್ ದೂರಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ

ಶಾಸಕರ ಇಂದಿನ ಕಾರ್ಯಕ್ರಮ (ಜೂ18)

Posted by Vidyamaana on 2023-06-17 23:17:58 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ (ಜೂ18)

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜೂ  18 ರಂದು

ಬೆಳಿಗ್ಗೆ 10.30 ಪುತ್ತೂರು ಬಂಟರ ಭವನದಲ್ಲಿ ಸನ್ಮಾನ ಕಾರ್ಯಕ್ರ‌ಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 3.30 ಜೈನರ ಭವನದಲ್ಲಿ ಹಲಸು ಮೇಳದಲ್ಲಿ ಭಾಗವಹಿಸಲಿದ್ದಾರೆ 

ಸಂಜೆ 6 ಕ್ಕೆ ಕೋಡಿಂಬಾಡಿ ಶ್ರೀಮಹಿಷ ಮರ್ದೀನಿ ದೇವಸ್ಥಾನದಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪುತ್ತೂರು:ತಾಲೂಕಿನಲ್ಲಿ ಸಂಭ್ರಮದ ಈದುಲ್ ಅಝಾ ಆಚರಣೆ

Posted by Vidyamaana on 2023-06-29 06:28:43 |

Share: | | | | |


ಪುತ್ತೂರು:ತಾಲೂಕಿನಲ್ಲಿ ಸಂಭ್ರಮದ ಈದುಲ್ ಅಝಾ ಆಚರಣೆ

ಪುತ್ತೂರು : ತಾಲೂಕಿನಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ ಈದುಲ್ ಅಝಾ (ಬಕ್ರೀದ್ ಹಬ್ಬ) ಆಚರಿಸಲಾಗುತ್ತಿದೆ.


ತಾಲೂಕಿನಲ್ಲಿ ಮುಸ್ಲಿಮರು ಮಸೀದಿ ಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಥಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು.



 ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ನಾನಾ ಬಗೆಯ ತಿಂಡಿ- ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು.ಪುತ್ತೂರು ತಾಲೂಕಿನ ಬದ್ರಿಯಾ ಮಸ್ಜಿದ್, ಜುಮಾ ಮಸ್ಜಿದ್, ಕೂರ್ನಡ್ಕ ಜುಮಾ ಮಸ್ಜಿದ್, ಬನ್ನೂರು ಹಾನಫಿ ಮಸ್ಜಿದ್, ಸಾಲ್ಮರ ಜುಮಾ ಮಸ್ಜಿದ್,ಪಡೀಲ್ ಜುಮಾ ಮಸ್ಜಿದ್,ಬನ್ನೂರು ಜುಮಾ ಮಸ್ಜಿದ್, ಕಲ್ಲೇಗ ಜುಮಾ ಮಸ್ಜಿದ್, ಬಪ್ಪಲಿಗೆ ಜುಮಾ ಮಸ್ಜಿದ್,ಮುಕ್ವೆ ಜುಮಾ ಮಸ್ಜಿದ್, ಕುಂಬ್ರ ಜುಮಾ ಮಸ್ಜಿದ್, ಕೂರ್ನಡ್ಕ ಹಾನಫಿ ಮಸ್ಜಿದ್ ಗಳಲ್ಲಿ ನಮಾಝ್ ಹಾಗೂ ಖುತ್ವಾ ನೆರವೇರಿಸಲಾಯಿತು.

ಈದ್ ನಮಾಝ್-ಖುತ್ಥಾದ ಬಳಿಕ ದಫನ ಭೂಮಿಗೆ ಅಗಲಿದ ಕುಟುಂಬದ ಸದಸ್ಯರ ಮರತ್ತಾಗಿ ಪ್ರಾರ್ಥಿಸಿದರು. ಬಳಿಕ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಇದ್ ಶುಭಾಶಯ ಸಲ್ಲಿಸುತ್ತಿದ್ದಾರೆ.

ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

Posted by Vidyamaana on 2023-12-25 12:55:35 |

Share: | | | | |


ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ. ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ನಿತ್ಯಾ ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿದ್ದು,ನಿತ್ಯಾ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Leave a Comment: