ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಉಡುಪಿ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್

Posted by Vidyamaana on 2023-12-30 22:43:45 |

Share: | | | | |


ಉಡುಪಿ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್

ಉಡುಪಿ, ಡಿ.30: ನಗರದ ಪ್ರಸಿದ್ದ ಬಟ್ಟೆ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ನಲ್ಲಿ ಶನಿವಾರ ಮಧ್ಯಾಹ್ನ ಗನ್ ಮಿಸ್‌ ಫೈರಿಂಗ್‌ ಆಗಿದ್ದು ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.


ಬಟ್ಟೆ ಮಳಿಗೆಯಲ್ಲಿ ಗ್ರಾಹಕರು ಯಾರೋ ಗನ್ ಬಿಟ್ಟು ಹೋಗಿದ್ದಾರೆ ಎನ್ನಲಾಗುತ್ತಿದ್ದು ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್‌ ಯಾರಿಗೆ ಸೇರಿದ್ದು, ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

Posted by Vidyamaana on 2024-09-04 21:19:58 |

Share: | | | | |


ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

ತೀರ್ಥಹಳ್ಳಿ : ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳು ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವ ನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

ಯಶಸ್ವಿಯಾಗಿ ನಡೆದ ದಿವಂಗತ ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಸ್ಮರಣಾರ್ಥ ಪುರುಷರಕಟ್ಟೆಯಲ್ಲಿ ಮಾದರಿ ರಕ್ತದಾನ ಶಿಬಿರ..!

Posted by Vidyamaana on 2024-06-24 18:27:43 |

Share: | | | | |


ಯಶಸ್ವಿಯಾಗಿ ನಡೆದ ದಿವಂಗತ ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಸ್ಮರಣಾರ್ಥ ಪುರುಷರಕಟ್ಟೆಯಲ್ಲಿ ಮಾದರಿ ರಕ್ತದಾನ ಶಿಬಿರ..!

ಪುತ್ತೂರು :ಇಲ್ಲಿನ ಪುರುಷರಕಟ್ಟೆಯ ನಿವಾಸಿಯಾಗಿದ್ದ ದಿ.ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಶಾಂತಿಗೋಡು ಇವರ ಸ್ಮರಣಾರ್ಥ ಟೈ ಬ್ರೇಕರ್ಸ್ ಪುರುಷರಕಟ್ಟೆ ಹಾಗೂ ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಇದರ ಜಂಟಿ ಸಾರಥ್ಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು (ರಿ.) ಸಹಯೋಗದಲ್ಲಿ ರೋಟರಿ ಕ್ಯಾಂಪ್ಕೊ ಪುತ್ತೂರು ಬ್ಲಡ್ ಸೆಂಟರ್ ಸಹಕಾರದೊಂದಿಗೆ ಮಾದರಿ ರಕ್ತದಾನ ಶಿಬಿರವು ಪುರುಷರಕಟ್ಟೆ ಜಂಕ್ಷನ್ ನಲ್ಲಿ ಜೂ 24ರಂದು ಯಶಸ್ವಿಯಾಗಿ ನಡೆಯಿತು.

 60 ಮಂದಿ ಸ್ವಯಂ ಪ್ರೇರಿತರಾಗಿ ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಜೀವದಾನಿಗಳಾದರು.

ಬೆಳ್ಳಾರೆ ಎನ್ಐಎ ದಾಳಿ ಪ್ರಕರಣ ; ಕೇರಳ ಮೂಲದ ಬಿಜು ಅಬ್ರಹಾಂ ನನ್ನು ವಶಕ್ಕೆ ಪಡೆದ ಅಧಿಕಾರಿಗಳು

Posted by Vidyamaana on 2024-03-05 19:50:49 |

Share: | | | | |


ಬೆಳ್ಳಾರೆ ಎನ್ಐಎ ದಾಳಿ ಪ್ರಕರಣ ; ಕೇರಳ ಮೂಲದ ಬಿಜು ಅಬ್ರಹಾಂ ನನ್ನು ವಶಕ್ಕೆ ಪಡೆದ ಅಧಿಕಾರಿಗಳು

ಮಂಗಳೂರು, ಮಾ.5: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಾಹಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.


ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

Posted by Vidyamaana on 2024-04-16 13:37:56 |

Share: | | | | |


ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು.

ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು. ಪುತ್ತೂರು ಪೇಡೆಯಾದ್ಯಂತ ಸಂಚರಿಸಿದ ರೋಡ್ ಶೋ, ವಿಟ್ಲ ಬಸ್ ನಿಲ್ದಾಣದಲ್ಲಿ ಸಮಾಪನಗೊಂಡಿತು. ಬಳಿಕ ವಿಟ್ಲ ಸಂತೆ ಮಾರುಕಟ್ಟೆಗೆ ತೆರಳಿ ಮತ ಯಾಚನೆ ನಡೆಸಿದರು.

ರೋಡ್ ಶೋ ಉದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಭ್ಯರ್ಥಿಗೆ ಸಾಥ್ ನೀಡಿದರು.



ಪುತ್ತೂರು : ಹರೀಶ್ ನಿಧನ

Posted by Vidyamaana on 2024-07-28 16:45:21 |

Share: | | | | |


ಪುತ್ತೂರು : ಹರೀಶ್ ನಿಧನ

ಪುತ್ತೂರು: ಏಳ್ಮುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ವಿ.ಶೆಣೈ ಪೆಟ್ರೋಲ್ ಬಂಕ್ ನಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರೀಶ್ ನಾಯ್ಕ (67) ಅವರು ಜು.27ರಂದು ಹೃದಯಾಘಾತದಿಂದ ನಿಧನರಾದರು.

Recent News


Leave a Comment: