ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಅಬುದಾಬಿ : 33 ಕೋಟಿ ಬಹುಮಾನ ಗೆದ್ದ ಕೇರಳದ ರಾಜೀವ್‌

Posted by Vidyamaana on 2024-02-11 08:46:14 |

Share: | | | | |


ಅಬುದಾಬಿ : 33 ಕೋಟಿ ಬಹುಮಾನ ಗೆದ್ದ ಕೇರಳದ ರಾಜೀವ್‌

ಅಬುಧಾಬಿ: ಯುಎಇ ಯಲ್ಲಿ ನೆಲೆಸಿರುವ ಕೇರಳದ ರಾಜೀವ್‌ ಅರಿಕ್ಕಾಟ್‌ ಅವರಿಗೆ ಅಬುದಾಬಿ ಲಾಟರಿಯಲ್ಲಿ ಬರೋಬ್ಬರಿ 33 ಕೋಟಿ ರೂ.(15 ಮಿಲಿಯನ್‌ ದಿರ್ಹಾಮ್‌) ಬಂಪರ್‌ ಬಹುಮಾನ ಬಂದಿದೆ. ಅವರು ತಮ್ಮ ಮಕ್ಕಳ ಜನ್ಮದಿನಕ್ಕೆ ಹೋಲುವ ನಂಬರಿನ ಲಾಟರಿ ಟಿಕೆಟ್‌ ಖರೀದಿಸಿದ್ದರು. ಇದು ಅವರಿಗೆ ಅದೃಷ್ಟವಾಗಿ ಮೊದಲ ಬಹುಮಾನ ಗಳಿಸುವಂತೆ ಮಾಡಿದೆ. ಅಬುಧಾಬಿಯ ಅರ್ಕಿಟೆಕ್ಚರ್‌ ಸಂಸ್ಥೆ ಅಲ್‌ ಐನ್‌ನಲ್ಲಿ ರಾಜೀವ್‌ ಕೆಲಸ ಮಾಡುತ್ತಿದ್ದಾರೆ. “ನಾನು 3 ವರ್ಷಗಳಿಂದ ಬಿಗ್‌ ಟಿಕೆಟ್‌ ಲಾಟರಿಗಳನ್ನು ಖರೀದಿಸುತ್ತಿದ್ದೇನೆ. ಮೊತ್ತವನ್ನು 19 ಜನರೊಂದಿಗೆ ಸಮಾನವಾಗಿ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.

ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ

Posted by Vidyamaana on 2024-02-25 18:23:41 |

Share: | | | | |


ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಹತ್ಯೆ

ಚೆನ್ನೈ: ಅನ್ಯ ಜಾತಿಯ ಯುವತಿಯನ್ನು ವಿವಾಹವಾಗಿದ್ದ ಯುವಕನ ಮೇಲೆ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಚೆನ್ನೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.


ಹಲ್ಲೆಗೊಳಗಾಗಿ ಮೃತಪಟ್ಟಿರುವ ಯುವಕನನ್ನು ಪ್ರವೀಣ್(26) ಎಂದು ಗುರುತಿಸಲಾಗಿದೆ. ಈತ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ನಗರದ ಪಲ್ಲಿಕರಣೈ ಬಳಿ ಶನಿವಾರ ಈ ಘಟನೆ ನಡೆದಿದೆ.

ನಾಲ್ಕು ತಿಂಗಳ ಹಿಂದಷ್ಟೇ ಪ್ರವೀಣ್‌ ಪ್ರೀತಿಸಿದ ಯುವತಿ ಜೊತೆ ವಿವಾಹವಾಗಿದ್ದ. ಯುವತಿ ಶರ್ಮಿಳಾ ಅನ್ಯ ಜಾತಿಯವಳಾಗಿದ್ದು, ಮನೆಯವರ ವಿರೋಧದ ನಡುವೆಯೂ ವಿವಾಹವಾಗಿದ್ದರು.

ಶನಿವಾರ(ಫೆ.24 ರಂದು‌  )ಪ್ರವೀಣ್ ಆಹಾರ ತರಲು ಹೊಟೇಲ್‌ ಗೆ ತೆರಳಿದ್ದ, ಈ ವೇಳೆ ಶರ್ಮಿಳಾ ಅವರ ಸಹೋದರ ದಿನೇಶ್‌ ಹಾಗೂ ಇತರ ನಾಲ್ವರು ಆರೋಪಿಗಳು ಪ್ರವೀಣ್‌ ನನ್ನು ಸುತ್ತುವರೆದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಈ ಸಂಬಂಧ ಪೊಲೀಸರು ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಿ, ಐವರು ಆರೋಪಿಗಳಾದ ಸ್ಟೀಫನ್ ಕುಮಾರ್, ಜೋತಿಲಿಂಗಂ, ಶ್ರೀರಾಮ್, ಅಶೋಕ್, ವಿಷ್ಣು ರಾಜ್ ಮತ್ತು ದಿನೇಶ್ ನನ್ನು ಬಂಧಿಸಲಾಗಿದೆ.

ಪುತ್ತೂರು ಮೆಸ್ಕಾಂ ತುರ್ತು ಕಾಮಗಾರಿ ಇಂದು (ಆಗಸ್ಟ್ 01) ವಿದ್ಯುತ್ ನಿಲುಗಡೆ

Posted by Vidyamaana on 2023-08-01 03:54:44 |

Share: | | | | |


ಪುತ್ತೂರು  ಮೆಸ್ಕಾಂ ತುರ್ತು  ಕಾಮಗಾರಿ ಇಂದು (ಆಗಸ್ಟ್ 01) ವಿದ್ಯುತ್ ನಿಲುಗಡೆ

ಪುತ್ತೂರು: 33ಕೆಪಿ ಮಾಡಾವು ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆ.ವಿ. ಮಾಡಾವು -ಬೆಳ್ಳಾರೆ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.1ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 5ಗಂಟೆಯವರೆಗೆ 33ಕೆವಿ ಮಾಡಾವು- ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆವಿ ಮಾಡಾವು -ಬೆಳ್ಳಾರೆ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. 33/11 ಕೆವಿ ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಚೇರಿ ಲಾಕರಿಂದ 1.24 ಕೋಟಿ ರೂ. ಕಳವು

Posted by Vidyamaana on 2023-10-25 20:32:04 |

Share: | | | | |


ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಚೇರಿ ಲಾಕರಿಂದ 1.24 ಕೋಟಿ ರೂ. ಕಳವು

ಧಾರವಾಡ: ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ  ಕಚೇರಿಯ ಲಾಕರಿಂದಲೇ ಕಳ್ಳರು  1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ ಘಟನೆ ಜಿಲ್ಲೆಯ ರಾಯಾಪುರ ಬಡಾವಣೆ ನಡೆದಿದೆ. ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನು  ಕದ್ದುಕೊಂಡು ಹೋಗಿದ್ದಾರೆ.


ಸೆಕ್ಯೂರಿಟಿ ಗಾರ್ಡ್‍ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದಲೇ ಬಂದು ಭಾರೀ ಮೊತ್ತದ ಹಣವನ್ನು ಕಳ್ಳತನ ಮಾಡಿದ್ದಾರೆ.


ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್‍ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಇದು ಕಳ್ಳರಿಗೆ ಗೊತ್ತಾಗಿದ್ದು,  ಲಾಕರ್ ನಲ್ಲಿ  ಇದ್ದ ಹಣವನ್ನೆಲ್ಲ ಕದ್ದೊಯ್ದಿದ್ದಾರೆ. ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.

ಲಿಂಗಾಯತರಿಗೆ 7%, ಒಕ್ಕಲಿಗರಿಗೆ 6%, ದಲಿತರಿಗೆ ಒಳ ಮೀಸಲಾತಿ, ಹಿಂದುಳಿದ ವರ್ಗಗಳಿಗೆ ಮುಸ್ಲಿಮರ ಸೇರ್ಪಡೆ:ಸರ್ಕಾರ ಮಹತ್ವದ ಘೋಷಣೆ.

Posted by Vidyamaana on 2023-03-24 14:51:04 |

Share: | | | | |


ಲಿಂಗಾಯತರಿಗೆ 7%, ಒಕ್ಕಲಿಗರಿಗೆ 6%, ದಲಿತರಿಗೆ ಒಳ ಮೀಸಲಾತಿ, ಹಿಂದುಳಿದ ವರ್ಗಗಳಿಗೆ ಮುಸ್ಲಿಮರ ಸೇರ್ಪಡೆ:ಸರ್ಕಾರ ಮಹತ್ವದ ಘೋಷಣೆ.

ಬೆಂಗಳೂರು :ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಲಿಂಗಾಯತ ಸಮುದಾಯಕ್ಕೆ ಶೇ.7ರಷ್ಟು ಹಾಗೂ ದಲಿತರಿಗೆ ಒಳಮೀಸಲಾತಿ ನೀಡುವ ಘೋಷಣೆ ಮಾಡಿದೆ.

ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai, ಆರ್ಟಿಕಲ್ 341 ಅನ್ವಯದಲ್ಲಿ ವರ್ಗೀಕರಣ ಮಾಡಿದ ಹಿಂದುಗಳಿದ ವರ್ಗಗಳಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ ಎಂದರು.

ಪ್ರಮುಖವಾಗಿ ಮುಸ್ಲಿಮರಿಗಿದ್ದ 2ಬಿ ಅಡಿ ಶೇ.4ರಷ್ಟಿದ್ದ ಮೀಸಲಾತಿಯನ್ನು ರದ್ದುಪಡಿಸಲಾಗಿದ್ದು, ಇವರನ್ನು ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿಸಲಾಗಿದೆ. ಇದೇ ವೇಳೆ ದಲಿತ ಸಮುದಾಯದ 102 ಒಳ ಪಂಗಡಗಳಿಗೆ ಮೀಸಲಾತಿ ನೀಡಲಾಗಿದೆ.

ಯಾರಿಗೆ ಎಷ್ಟು ಮೀಸಲಾತಿ?

ಲಿಂಗಾಯತ ಸಮುದಾಯಕ್ಕೆ ಶೇ. 7                  ಒಕ್ಕಲಿಗೆ ಸಮುದಾಯಕ್ಕೆ ಶೇ.6                     ದಲಿತ ಬಲ ಸಮುದಾಯಕ್ಕೆ ಶೇ.5.5               ದಲಿತ ಎಡ ಸಮುದಾಯಕ್ಕೆ ಶೇ.6               ದಲಿತ ಅಲೆಮಾರಿ ಸಮುದಾಯಕ್ಕೆ ಶೇ.1       ಆರ್ಥಿಕ ಹಿಂದುಳಿದ ಸಮುದಾಯಕ್ಕೆ ಶೇ.10 ಆರ್ಥಿಕ ಹಿಂದುಳಿದ ವರ್ಗಗಳಿಗೆ ಮುಸ್ಲಿಮರ ಸೇರ್ಪಡೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

Posted by Vidyamaana on 2024-02-17 21:49:20 |

Share: | | | | |


ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ

Recent News


Leave a Comment: