ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಕುಂದಾಪುರ : ಕಾಲೇಜ್ ಹುಡುಗಿಗೆ ನಜೀರ್ ನಿಂದ ಲೈಂಗಿಕ ಕಿರುಕುಳ - ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿನಿ, ವಿಡಿಯೋ ವೈರಲ್.

Posted by Vidyamaana on 2023-06-09 16:23:41 |

Share: | | | | |


ಕುಂದಾಪುರ : ಕಾಲೇಜ್ ಹುಡುಗಿಗೆ  ನಜೀರ್ ನಿಂದ ಲೈಂಗಿಕ ಕಿರುಕುಳ -  ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿನಿ, ವಿಡಿಯೋ ವೈರಲ್.

ಕುಂದಾಪುರ :ಇಂದು ಮುಂಜಾನೆ ವಿದ್ಯಾರ್ಥಿನಿಯೊಬ್ಬಳು ಬೀಜಾಡಿ - ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆರೋಪಿ ನಜೀರ್ ಆಕೆಗೆ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದು ಆಕೆ ಕೂಗಿಕೊಂಡಿದ್ದಾಳೆ.ಕೂಡಲೇ ಸ್ಥಳೀಯರು ಆಗಮಿಸಿ ಆರೋಪಿಯನ್ನು ಹಿಡಿದುಕೊಂಡಿದ್ದು ವಿಚಾರಿಸಿದಾಗ ವಿದ್ಯಾರ್ಥಿನಿ‌ ನಡೆದ ಘಟನೆ ವಿವರಿಸಿದ್ದಾಳೆ. ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು, ಘಟನೆಯ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.ಬಳಿಕ ಸ್ಥಳೀಯರು ಆರೋಪಿಯನ್ನು ಕುಂದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿದ್ಯಾರ್ಥಿನಿಯಿಂದ ದೂರು ದಾಖಲು ಮಾಡಿಕೊಂಡಿದ್ದು,‌ ಆರೋಪಿಯ ವಿಚಾರಣೆ ನಡೆಸಿದ್ದಾರೆ.

ರಶ್ಮಿಕಾ ಮಂದಣ್ಣ ವೈರಲ್‌ ಡೀಪ್‌ಫೇಕ್‌ ವಿಡಿಯೋ ಅಪಾಯಕಾರಿ ಎಂದ ಕೇಂದ್ರ ಸಚಿವ; ಮೂಲ ವಿಡಿಯೋ ಇಲ್ಲಿದೆ

Posted by Vidyamaana on 2023-11-06 16:37:45 |

Share: | | | | |


ರಶ್ಮಿಕಾ ಮಂದಣ್ಣ ವೈರಲ್‌ ಡೀಪ್‌ಫೇಕ್‌ ವಿಡಿಯೋ ಅಪಾಯಕಾರಿ ಎಂದ ಕೇಂದ್ರ ಸಚಿವ; ಮೂಲ ವಿಡಿಯೋ ಇಲ್ಲಿದೆ

ಹೊಸದಿಲ್ಲಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ (Deepfake video) ಕುರಿತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Union Minister Rajeev Chandrasekhar) ಪ್ರತಿಕ್ರಿಯಿಸಿದ್ದಾರೆ.ʼಇಂಥ ಅಪಾಯಕಾರಿ ಮತ್ತು ಹಾನಿಕಾರಕ ತಪ್ಪು ಮಾಹಿತಿಗಳನ್ನು ಈ ವೇದಿಕೆಗಳ ಮೂಲಕ ಎದುರಿಸಬೇಕಾಗಿದೆʼ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಕ್ಲಿಕ್ ಮಾಡಿ 

ಮೂಲ ವಿಡಿಯೋ ಇಲ್ಲಿದೆ👇


ʼಎಕ್ಸ್‌ʼನಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಇಂಟರ್ನೆಟ್ ಬಳಸುವ ಎಲ್ಲಾ ಡಿಜಿಟಲ್‌ ನಾಗರಿಕರ ಸುರಕ್ಷತೆ ಮತ್ತು ವಿಶ್ವಾಸವನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದಿದ್ದಾರೆ.


2023ರ ಏಪ್ರಿಲ್‌ನಲ್ಲಿ ಸೂಚಿಸಲಾದ ಐಟಿ ನಿಯಮಗಳನ್ನು ತಿಳಿಸುತ್ತಾ ಅವರು, ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಿದೆ. ಯಾವುದೇ ಬಳಕೆದಾರರು ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಬೇಕು. ಮತ್ತು ಯಾವುದೇ ಬಳಕೆದಾರರು ಅಥವಾ ಸರ್ಕಾರ ಈ ಬಗ್ಗೆ ವರದಿ ಮಾಡಿದಾಗ 36 ಗಂಟೆಗಳಲ್ಲಿ ತಪ್ಪು ಮಾಹಿತಿಯನ್ನು ತೆಗೆದುಹಾಕಬೇಕು. ಪ್ಲಾಟ್‌ಫಾರ್ಮ್‌ಗಳು ಇದನ್ನು ಅನುಸರಿಸದಿದ್ದರೆ ನಿಯಮ 7ರ ಪ್ರಕಾರ ಮತ್ತು IPCಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಯು ಆನ್‌ಲೈನ್‌ ವೇದಿಕೆಗಳನ್ನು ನ್ಯಾಯಾಲಯಕ್ಕೆ ಎಳೆಯಬಹುದು. ಡೀಪ್‌ಫೇಕ್‌ಗಳು ಇತ್ತೀಚಿನ ಹೆಚ್ಚು ಅಪಾಯಕಾರಿ ಮತ್ತು ಹಾನಿಕರವಾದ ತಪ್ಪು ಮಾಹಿತಿ ಮೂಲಗಳಾಗಿವೆ ಎಂದಿದ್ದಾರೆ.


ನಟಿ ರಶ್ಮಿ ಮಂದಣ್ಣ ಅವರಂತೆ ತೋರುವ ವೀಡಿಯೊವನ್ನು ಶೇರ್ ಮಾಡಿದ ಅಭಿಷೇಕ್ ಕುಮಾರ್ ಎಂಬ ಪತ್ರಕರ್ತರಿಗೆ ಕೇಂದ್ರ ಸಚಿವರು ಪ್ರತ್ಯುತ್ತರವಾಗಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಡೀಪ್‌ಫೇಕ್ ಘಟನೆಗಳನ್ನು ಎದುರಿಸಲು ಕಾನೂನು ಮತ್ತು ನಿಯಂತ್ರಕ ಚೌಕಟ್ಟಿನ ತುರ್ತು ಅವಶ್ಯಕತೆ ಇದೆʼʼ ಎಂದಿರುವ ಕುಮಾರ್ ಅವರು ಮೂಲ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ನಟಿ ಝರಾ ಪಟೇಲ್ ಅವರ ವೀಡಿಯೊ ಆಗಿದ್ದು, ಅಕ್ಟೋಬರ್ 9ರಂದು ಅಪ್‌ಲೋಡ್ ಮಾಡಲಾಗಿತ್ತು. ಅದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಜೋಡಿಸಿ ವ್ಯತ್ಯಾಸವೇ ಕಾಣದಂತೆ ವಿಡಿಯೋ ಮಾಡಿ ಪೋಸ್ಟ್‌ ಮಾಡಲಾಗಿದೆ. ಝರಾ ಪಟೇಲ್ ಬ್ರಿಟಿಷ್ ಇಂಡಿಯನ್‌ ಪ್ರಜೆಯಾಗಿದ್ದು, Instagramನಲ್ಲಿ 4.15 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.ಗುಡ್ ಬೈ ಚಿತ್ರದಲ್ಲಿ ಮಂದಣ್ಣನ ತಂದೆಯ ಪಾತ್ರದಲ್ಲಿ ನಟಿಸಿದ್ದ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ ಕೂಡ ನಟಿಯ ಬೆಂಬಲಕ್ಕೆ ಬಂದಿದ್ದು, ಈ ಬಗ್ಗೆ ಕಾನೂನು ಕ್ರಮಕ್ಕೆ ಕರೆ ನೀಡಿದ್ದಾರೆ.


ಡೀಪ್‌ಫೇಕ್‌ ಅಂದರೇನು?


ಡೀಪ್‌ಫೇಕ್ ಕೃತಕ ಬುದ್ಧಿಮತ್ತೆಯ ಸಹಾಯದಿಂದ ಮಾಡಿದ ವೀಡಿಯೊಗಳು. ಇವು ನೈಜವಾಗಿಯೇ ಕಾಣಿಸುತ್ತವೆ. ಡೀಪ್‌ಫೇಕ್ ವೀಡಿಯೊದಲ್ಲಿ ಸಾಮಾನ್ಯವಾಗಿ ಬೇರೆ ಬೇರೆ ವ್ಯಕ್ತಿಗಳ ದೇಹ ಮತ್ತು ಮುಖವನ್ನು ಡಿಜಿಟಲ್ ಮ್ಯಾನಿಪುಲೇಟ್ ಮಾಡಿ ಜೋಡಿಸಿ ಒರಿಜಿನಲ್‌ ಆಗಿ ಕಾಣುವಂತೆ ಮಾಡಲಾಗುತ್ತದೆ.

ನೆಟ್ಟಾರು ಪತ್ನಿ ನೇಮಕಾತಿ ರದ್ದು ವಿಚಾರ

Posted by Vidyamaana on 2023-05-27 11:08:30 |

Share: | | | | |


ನೆಟ್ಟಾರು ಪತ್ನಿ ನೇಮಕಾತಿ ರದ್ದು ವಿಚಾರ

ಪುತ್ತೂರು: ಮತಾಂಧರ ಕ್ರೂರ ಕೃತ್ಯಕ್ಕೆ ಬಲಿಯಾದ ದಿ.ಪ್ರವೀಣ್ ನೆಟ್ಟಾರ್ ಪತ್ನಿ ನೂತನರವರು ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದಿದ್ದು, ರಾಜಕೀಯ ಚರ್ಚೆ ಮಾಡುವುದು ಬಿಟ್ಟು ಅವರಿಗೆ ಸರ್ಕಾರ ಅದೇ ಉದ್ಯೋಗ ಮರುನೇಮಕಾತಿ ಮಾಡಬೇಕು ಎಂದು ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.

ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳಿಂದ ಹತ್ಯೆಯಾದ ಬಳಿಕ ರಾಜ್ಯಾದ್ಯಂತ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದರು. ಪರಿಣಾಮ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗಿತ್ತು. ಮೊದಲಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನೀಡಿ ಬಳಿಕ ಮಂಗಳೂರು‌ ಜಿಲ್ಲಾಧಿಕಾರಿ ಕಚೇರಿಯಲ್ಲೇ ಕೆಲಸ ನೀಡಲಾಗಿತ್ತು. ಇದೀಗ ಕೆಲಸದಿಂದ ಬಿಡುಗಡೆ ಮಾಡಿದ್ದು, ಈ ಬಗ್ಗೆ ಅರುಣ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರು ಎಲ್ಲರೂ ಒಂದಿಲ್ಲೊಂದು ಸಮಸ್ಯೆ ಎದುರಿಸಿದವರೆ. ದಯವಿಟ್ಟು ಸರ್ಕಾರ ಅನುಕಂಪದ ಆಧಾರದಲ್ಲಿ ಪಡೆದ ಉದ್ಯೋಗಿಗಳ ಉದ್ಯೋಗದ ನಿಯಮವನ್ನು ಮರುಪರಿಶೀಲಿಸಬೇಕು ಎನ್ನುವುದು ಎಲ್ಲರ ಒತ್ತಾಯ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ 

ಪ್ರವೀಣ್ ನೆಟ್ಟಾರು ಪ್ರಕರಣದಲ್ಲೂ ಸರಕಾರ ಕೀಳು ಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ. ನೂತನ ಕುಮಾರಿ ಅವರಿಗೆ ಮಾನವೀಯತೆ ದೃಷ್ಟಿಯಿಂದ ತಕ್ಷಣ ಮರುನೇಮಕಾತಿ ಆದೇಶ ನೀಡುವಂತೆ 

ಒಂದು ಹೆಣ್ಣು ಮಗಳನ್ನು ಹಠಾತ್ ಆಗಿ ಕೆಲಸದಿಂದ ವಜಾಗೊಳಿಸುವುದು ಸರಿಯಾದ ಕ್ರಮವಲ್ಲ. ಈ ವಿಷಯದಲ್ಲಿ ಕೀಳು ಮಟ್ಟದ ರಾಜಕಾರಣ ಮಾಡಬಾರದು. ಮಾನವೀಯತೆ ದೃಷ್ಟಿಯಿಂದ ತಕ್ಷಣವೇ ನೂತನ ರನ್ನು ಮರು ನೇಮಕಾತಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

Posted by Vidyamaana on 2023-10-01 20:05:52 |

Share: | | | | |


ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಖಾಸಗಿ ಬಸ್ಸೊಂದರ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಮಹೇಶ್ ಬಸ್ ಮಾಲಕ ಪ್ರಕಾಶ್ (40) ಮೃತರು.

ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು, ಜನಮನ್ನಣೆಗಳಿಸಿದ ಖಾಸಗಿ ಬಸ್ ಗಳಲ್ಲಿ ಒಂದಾಗಿದೆ.


ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮೃತರನ್ನು ಮಹೇಶ್ ಬಸ್ ಮಾಲೀಕ ಜಯರಾಮ ಶೇಖ ಎಂಬವರ ಪುತ್ರ ಪ್ರಕಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಕ್ಷೇತ್ರದಲ್ಲಿ ತುಳುನಾಡಿನಲ್ಲಿ ಹೆಸರುವಾಸಿಯಾದ ಮಹೇಶ್ ಬಸ್ ನೂರಾರು ಬಸ್ ಗಳನ್ನು ಹೊಂದಿದೆ.


ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ಪ್ರಕಾಶ್‌ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2024-04-24 04:03:48 |

Share: | | | | |


ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ  ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಶಾಸಕ ಹರೀಶ್ ಕುಮಾರ್ ಒತ್ತಾಯ

Posted by Vidyamaana on 2023-12-20 17:23:38 |

Share: | | | | |


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಶಾಸಕ ಹರೀಶ್ ಕುಮಾರ್ ಒತ್ತಾಯ

ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಈ ಪ್ರಸ್ತಾಪವನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಲಾಗಿದ್ದು, ಸರಕಾರ ಈ ಪ್ರಸ್ತಾವನೆಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕರಾವಳಿಯಲ್ಲಿ ಕೋಟಿ-ಚೆನ್ನಯ ಹೆಸರಿಗೆ ಎಲ್ಲಾ ಸಮುದಾಯಗಳ ಒಲವೂ ಇದೆ‌. ಈ ಕಾರಣಕ್ಕೆ ಸರಕಾರ ಕೇಂದ್ರಕ್ಕೆ ಈ ಹೆಸರೊಂದನ್ನೇ  ಕಳುಹಿಸುವುದು ಸೂಕ್ತ ಎಂದು ಸಲಹೆಯನ್ನೂ ಶಾಸಕ ಹರೀಶ್ ಕುಮಾರ್ ಸರಕಾರಕ್ಕೆ ನೀಡಿದ್ದಾರೆ.  ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯೂ ಹರೀಶ್ ಕುಮಾರ್ ಆಗಿದ್ದಾರೆ ಎನ್ನುವ ಮಾತುಗಳೂ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.

Recent News


Leave a Comment: